Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಕುಶಾಲನಗರ ಪಿ.ಎಂ.ಶ್ರೀ ಶಾಲಾ ಮಕ್ಕಳಿಂದ ಪರಿಸರ ಸ್ನೇಹಿ ಗಣೇಶೋತ್ಸವ ಜಾಗೃತಿ; ಪರಿಸರ ಪೂರಕ ಗಣೇಶೋತ್ಸವ ಆಚರಣೆಗೆ ಟಿ.ಜಿ. ಪ್ರೇಮಕುಮಾರ್ ಮನವಿ; ಪಿ.ಓ.ಪಿ., ರಾಸಾಯನಿಕ ಬಣ್ಣದ ಗಣೇಶ ಮೂರ್ತಿಗಳನ್ನು ತ್ಯಜಿಸಲು ಕರೆ*
  • *ಮಡಿಕೇರಿ ದಸರಾ ಶೋಭಾಯಾತ್ರೆಗೆ ದಿನಾಂಕ ನಿಗದಿ : ಅ.20ರಂದು ದಶಮಂಟಪಗಳ ಮೆರವಣಿಗೆ*
  • *ಗೌರಿ–ಗಣೇಶ ಹಬ್ಬ: 2,400 ವಿಶೇಷ ಬಸ್‌ಗಳ ವ್ಯವಸ್ಥೆ*
  • *ಗೌರಿ ಗಣೇಶೋತ್ಸವ : ಕಾನೂನು ಪಾಲನೆಗೆ ಆದ್ಯತೆ ನೀಡಿ : ಎಸ್‌ಪಿ ಬಿಂದುಮಣಿ ಮನವಿ*
  • *ಇಂಡಿಯಾ ಸ್ಕಿಲ್ : ಹೆಸರು ನೋಂದಣಿಗೆ ಅವಕಾಶ*
  • *ಬೆಳ್ಳುಮಾಡು ಶ್ರೀ ಮಾದೇರಪ್ಪ ದೇವಾಲಯದ ಜೀರ್ಣೋದ್ಧಾರಕ್ಕೆ ರೂ.3 ಲಕ್ಷ ಅನುದಾನ*
  • *ಸೆ.14 ರಂದು ಇತಿಹಾಸ ಪ್ರಸಿದ್ದ ಶ್ರೀಕ್ಷೇತ್ರ ಹೊನ್ನಮ್ಮನ ಕೆರೆಗೆ ಬಾಗಿನ ಅರ್ಪಣೆ*
  • *ಸೆ.15 ರಂದು ಅಂತರರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ : ಅಗತ್ಯ ಸಿದ್ಧತೆಗೆ ಹೆಚ್ಚುವರಿ ಜಿಲ್ಲಾಧಿಕಾರಿ ಸಹನಾ ಎಸ್.ಹಾದಿಮನಿ ಸೂಚನೆ*
  • *ಸೆ.19 ರಂದು ಕೊಡಗು ಮಹಿಳಾ ಸಹಕಾರ ಸಂಘದ 86ನೇ ವಾರ್ಷಿಕ ಮಹಾಸಭೆ*
  • *ಮಡಿಕೇರಿ ನಗರ ವ್ಯಾಪ್ತಿಯಲ್ಲಿ ಬಾಲಕಾರ್ಮಿಕ ತಪಾಸಣೆ : ಕಾನೂನು ಅರಿವು*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*ಕುಶಾಲನಗರ : ಶಸಾಪದಿಂದ ಹಡಪದ ಅಪ್ಪಣ್ಣ ಜಯಂತಿ : ಸಮಾನತೆಗಾಗಿ ದುಡಿದ ಶ್ರೇಷ್ಠ ಶರಣ ಹಡಪದ ಅಪ್ಪಣ್ಣ*
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

*ಕುಶಾಲನಗರ : ಶಸಾಪದಿಂದ ಹಡಪದ ಅಪ್ಪಣ್ಣ ಜಯಂತಿ : ಸಮಾನತೆಗಾಗಿ ದುಡಿದ ಶ್ರೇಷ್ಠ ಶರಣ ಹಡಪದ ಅಪ್ಪಣ್ಣ*

ಜುಲೈ 21, 20241 Min ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link

ಕುಶಾಲನಗರ ಜು.21 NEWS DESK :  ಹನ್ನೆರಡನೇ ಶತಮಾನದಲ್ಲಿ ಇದ್ದಂತಹ ಒಡೆದು ಆಳುವ ನೀತಿಯನ್ನು ಖಂಡಿಸಿ ಸಮಾಜದಲ್ಲಿ ಸಮಾನತೆಗಾಗಿ ಹೋರಾಡಿದ ಶ್ರೇಷ್ಠ ಶರಣ  ಹಡಪದ ಅಪ್ಪಣ್ಣ ಎಂದು ವಾಗ್ಮಿ ಹಾಗೂ  ವಸತಿ ನಿಲಯದ ಮೇಲ್ವಿಚಾರಕ  ಶ್ರೀಕಾಂತ್ ಹೇಳಿದರು.  ಕುಶಾಲನಗರ ತಾಲ್ಲೂಕು   ಶರಣ ಸಾಹಿತ್ಯ ಪರಿಷತ್ತು ವತಿಯಿಂದ ಸ್ಥಳೀಯ ವಿದ್ಯಾರ್ಥಿನಿಯರ ವಸತಿ ನಿಲಯದಲ್ಲಿ ಹಮ್ಮಿಕೊಂಡಿದ್ದ ಹಡಪದ ಅಪ್ಪಣ್ಣ ಜಯಂತಿ ಕಾರ್ಯಕ್ರಮದಲ್ಲಿ  ಪ್ರವಚನ ನೀಡಿದ ಅವರು, ಹನ್ನೆರಡನೇ ಶತಮಾನದಲ್ಲಿ  ಸಮಾಜದಲ್ಲಿದ್ದ  ಮೇಲು ಕೀಳು, ಬಡವ – ಬಲ್ಲಿದ ಎಂಬಿತ್ಯಾದಿ  ತಾರತಮ್ಯ ಧೋರಣೆಗಳ ವಿರುದ್ಧ ಕಟುವಾದ ಶಬ್ಧಗಳಲ್ಲಿ  ಖಂಡಿಸಿದ ಅಪ್ಪಣ್ಣ ಅವರು ಬಸವಣ್ಣನ ಆಪ್ತ ಕಾರ್ಯದರ್ಶಿಯಾಗಿದ್ದರು. ಹಡಪದ ಸಮುದಾಯದ ವಿರುದ್ದ ಅಂದು ಬೇರೂರಿದ್ಧ ಕಂದಾಚಾರದ ವಿರುದ್ಧ ಸಮರ ಸಾರಿದ್ದ ಬಸವಣ್ಣ ತಮ್ಮಲ್ಲಿಗೆ ಬರುವ ಎಲ್ಲರೂ ಮೊದಲು ಹಡಪದ ಅಪ್ಪಣ್ಣ ಅವರನ್ನು ಕಂಡು ಮಾತನಾಡಿ ಬರುವಂತಹ ವಾತಾವರಣವನ್ನು  ಬಸವಣ್ಣನವರು ನಿರ್ಮಾಣ ಮಾಡಿದ್ದರು. ಶರಣರು ನುಡಿದಂತೆಯೇ ನಡೆದವರು. ಅವರ ನಂಬಿಕೆ ಹಾಗೂ ಆಚರಣೆಗಳಲ್ಲಿ ಯಾವುದೇ ಅಂತರವಿರಲಿಲ್ಲ. ಬಸವಾದಿ ಶರಣರು ಸತ್ಯ ಶುದ್ಧ ಕಾಯಕಕ್ಕೆ ನೀಡಿದ ಮಹತ್ವದಷ್ಟೇ ದಾಸೋಹಕ್ಕೂ ನೀಡಿದ್ದರು ಎಂದು ಶ್ರೀಕಾಂತ್ ವಿಮರ್ಶಿಸಿದರು. ಮುಖ್ಯ ಅತಿಥಿ ತೊರೆನೂರು ಸರ್ಕಾರಿ ಪ್ರೌಢಶಾಲೆಯ ಕನ್ನಡ ಅಧ್ಯಾಪಕ ಟಿ.ಬಿ.ಮಂಜುನಾಥ್ ಮಾತನಾಡಿ, ಶರಣರು ತಮ್ಮ ಬದುಕಿನುದ್ದಕ್ಕೂ ಮೌಲ್ಯಾಧಾರಿತ ಚಿಂತನೆಗಳನ್ನು ಅಳವಡಿಸಿಕೊಂಡು ಸಮಾಜದ ಪರಿವರ್ತನೆಗೆ ಜೀವ ಸವೆಸಿದವರು. ಅಂತಹ ಶರಣರು ರಚಿಸಿದ ವಚನಗಳ ಸಾರವನ್ನು ಪ್ರತೀ ವಿದ್ಯಾರ್ಥಿಯೂ ಕೂಡ ಅರಿತು ಅದರಂತೆ ನಡೆಯಬೇಕಿದೆ ಎಂದರು. ಕಾರ್ಯಕ್ರಮವನ್ನು ಉದ್ಘಾಟಿಸಿದ ದೇವರಾಜು ಅರಸು ಹಿಂದುಳಿದ ವರ್ಗಗಳ ಇಲಾಖೆಯ ತಾಲ್ಲೂಕು ಅಧಿಕಾರಿ ಸ್ವಾಮಿ, ಬಸವಣ್ಣ ಸಾರಿ ಹೇಳಿದ ಕಲಬೇಡ ಕೊಲಬೇಡ ಎಂಬ ಸಪ್ತ ಸೂತ್ರವೊಂದನ್ನು ವಿದ್ಯಾರ್ಥಿಗಳು ಹಾಗೂ ಸಮಾಜ ಅರಿತು ಅದರಂತೆ ನಡೆದರೆ ರಾಮರಾಜ್ಯ ನಿರ್ಮಾಣ ವಾಗುತ್ತದೆ  ಎಂದರು. ಕೊಡಗು ಜಿಲ್ಲಾ ಶರಣ ಸಾಹಿತ್ಯ ಪರಿಷತ್ತು ಅಧ್ಯಕ್ಷ ಕೆ.ಎಸ್.ಮೂರ್ತಿ,  ಪ್ರಧಾನ ಕಾರ್ಯದರ್ಶಿ ಬಿ.ನಟರಾಜು, ಕೋಶಾಧಿಕಾರಿ ಪರಮೇಶ್, ಕಾರ್ಯದರ್ಶಿ ಟಿ.ಬಿ.ಮಂಜುನಾಥ್, ಕುಶಾಲನಗರ ತಾಲ್ಲೂಕು ಶರಣ ಸಾಹಿತ್ಯ ಪರಿಷತ್ತು ಅಧ್ಯಕ್ಷ ಎಂ.ಎಸ್.ಶಿವಾನಂದ ಇದ್ದರು. ವಿದ್ಯಾರ್ಥಿನಿಯರಾದ ಸ್ಮಿತಾ ನಿರೂಪಿಸಿ, ಲಕ್ಷಿತಾ ಸ್ವಾಗತಿಸಿ, ರಕ್ಷಿತಾ ವಂದಿಸಿದರು.

Follow us Follow us
Share. WhatsApp Facebook Twitter Email Telegram Copy Link

Website design development company services in Mangalore

Forex Trading Teacher in India

Related Posts

*ಕುಶಾಲನಗರ ಪಿ.ಎಂ.ಶ್ರೀ ಶಾಲಾ ಮಕ್ಕಳಿಂದ ಪರಿಸರ ಸ್ನೇಹಿ ಗಣೇಶೋತ್ಸವ ಜಾಗೃತಿ; ಪರಿಸರ ಪೂರಕ ಗಣೇಶೋತ್ಸವ ಆಚರಣೆಗೆ ಟಿ.ಜಿ. ಪ್ರೇಮಕುಮಾರ್ ಮನವಿ; ಪಿ.ಓ.ಪಿ., ರಾಸಾಯನಿಕ ಬಣ್ಣದ ಗಣೇಶ ಮೂರ್ತಿಗಳನ್ನು ತ್ಯಜಿಸಲು ಕರೆ*

ಸೆಪ್ಟೆಂಬರ್ 13, 2026

*ಮಡಿಕೇರಿ ದಸರಾ ಶೋಭಾಯಾತ್ರೆಗೆ ದಿನಾಂಕ ನಿಗದಿ : ಅ.20ರಂದು ದಶಮಂಟಪಗಳ ಮೆರವಣಿಗೆ*

ಸೆಪ್ಟೆಂಬರ್ 13, 2026

*ಗೌರಿ–ಗಣೇಶ ಹಬ್ಬ: 2,400 ವಿಶೇಷ ಬಸ್‌ಗಳ ವ್ಯವಸ್ಥೆ*

ಸೆಪ್ಟೆಂಬರ್ 13, 2026

*ಮಡಿಕೇರಿ ದಸರಾ ಶೋಭಾಯಾತ್ರೆಗೆ ದಿನಾಂಕ ನಿಗದಿ : ಅ.20ರಂದು ದಶಮಂಟಪಗಳ ಮೆರವಣಿಗೆ*

ಸೆಪ್ಟೆಂಬರ್ 13, 2026 ಇತ್ತೀಚಿನ ಸುದ್ದಿಗಳು ಕರ್ನಾಟಕ ಕೊಡಗು ಜಿಲ್ಲೆ

ಮಡಿಕೇರಿ NEWS DESK ಸೆ.13 : ಮಡಿಕೇರಿ ದಸರಾ ಜನೋತ್ಸವದ ಪ್ರಮುಖ ಆಕರ್ಷಣೆಯಾದ ದಶಮಂಟಪಗಳ ಶೋಭಾಯಾತ್ರೆಯನ್ನು ಅ.20ರಂದು ನಡೆಸಲು ದಸರಾ…

*ಗೌರಿ–ಗಣೇಶ ಹಬ್ಬ: 2,400 ವಿಶೇಷ ಬಸ್‌ಗಳ ವ್ಯವಸ್ಥೆ*

ಸೆಪ್ಟೆಂಬರ್ 13, 2026

*ಗೌರಿ ಗಣೇಶೋತ್ಸವ : ಕಾನೂನು ಪಾಲನೆಗೆ ಆದ್ಯತೆ ನೀಡಿ : ಎಸ್‌ಪಿ ಬಿಂದುಮಣಿ ಮನವಿ*

ಸೆಪ್ಟೆಂಬರ್ 13, 2026

*ಇಂಡಿಯಾ ಸ್ಕಿಲ್ : ಹೆಸರು ನೋಂದಣಿಗೆ ಅವಕಾಶ*

ಸೆಪ್ಟೆಂಬರ್ 12, 2026

*ಬೆಳ್ಳುಮಾಡು ಶ್ರೀ ಮಾದೇರಪ್ಪ ದೇವಾಲಯದ ಜೀರ್ಣೋದ್ಧಾರಕ್ಕೆ ರೂ.3 ಲಕ್ಷ ಅನುದಾನ*

ಸೆಪ್ಟೆಂಬರ್ 12, 2026

*ಸೆ.14 ರಂದು ಇತಿಹಾಸ ಪ್ರಸಿದ್ದ ಶ್ರೀಕ್ಷೇತ್ರ ಹೊನ್ನಮ್ಮನ ಕೆರೆಗೆ ಬಾಗಿನ ಅರ್ಪಣೆ*

ಸೆಪ್ಟೆಂಬರ್ 12, 2026

*ಸೆ.15 ರಂದು ಅಂತರರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ : ಅಗತ್ಯ ಸಿದ್ಧತೆಗೆ ಹೆಚ್ಚುವರಿ ಜಿಲ್ಲಾಧಿಕಾರಿ ಸಹನಾ ಎಸ್.ಹಾದಿಮನಿ ಸೂಚನೆ*

ಸೆಪ್ಟೆಂಬರ್ 12, 2026

*ಸೆ.19 ರಂದು ಕೊಡಗು ಮಹಿಳಾ ಸಹಕಾರ ಸಂಘದ 86ನೇ ವಾರ್ಷಿಕ ಮಹಾಸಭೆ*

ಸೆಪ್ಟೆಂಬರ್ 12, 2026

*ಮಡಿಕೇರಿ ನಗರ ವ್ಯಾಪ್ತಿಯಲ್ಲಿ ಬಾಲಕಾರ್ಮಿಕ ತಪಾಸಣೆ : ಕಾನೂನು ಅರಿವು*

ಸೆಪ್ಟೆಂಬರ್ 12, 2026

*ಅರಣ್ಯ ಪ್ರದೇಶಗಳಿಗೆ ಮಾತ್ರ ಸೀಮಿತಗೊಳಿಸಿ ವರದಿ ಜಾರಿಗೆ ಪ್ರಸ್ತಾವನೆ ಸಲ್ಲಿಸಲಿ : ಸೇವ್ ಕೊಡಗು ಸಂಘಟನೆ ಒತ್ತಾಯ*

ಸೆಪ್ಟೆಂಬರ್ 12, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.