Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ದಿವ್ಯಾಗೆ ಪಿಹೆಚ್‌ಡಿ ಪದವಿ*
  • *ಮಡಿಕೇರಿ ಲಯನ್ಸ್ ಕ್ಲಬ್ ನ ನೂತನ ಪದಾಧಿಕಾರಿಗಳ ಪದಗ್ರಹಣ : ಸಮಾಜಮುಖಿ ಕಾರ್ಯಕ್ಕೆ ಕರೆ*
  • *ರಾಷ್ಟ್ರೀಯ ಪಲ್ಸ್ ಪೋಲಿಯೋ ಕಾರ್ಯಕ್ರಮ : ಪೋಲಿಯೋ ಹನಿ ಹಾಕಿಸಿಕೊಂಡ ಕೊಡಗಿನ ಮಕ್ಕಳು*
  • *ವಿರಾಜಪೇಟೆ : ಕಾವೇರಿ ಪದವಿ ಪೂರ್ವ ಕಾಲೇಜಿನಲ್ಲಿ ಕಾನೂನು ಅರಿವು*
  • *ಮಾಧ್ಯಮ ಸ್ಪಂದನ ತಂಡದ ಕೊಡುಗೆ ಅಪಾರ: ವಿ.ಪಿ.ಶಶಿಧರ್*
  • *ಅತೀ ಶೀಘ್ರದಲ್ಲಿ ಕಾರ್ಡಿಯಾಲಜಿ ಯೂನಿಟ್ ಲಭ್ಯ: ಶಾಸಕ ಡಾ.ಮಂತರ್ ಗೌಡ*
  • *ಕೆ.ಬಾಡಗ : ವಿವಿಧ ರಸ್ತೆ ಉದ್ಘಾಟಿಸಿದ ಶಾಸಕ ಎ.ಎಸ್.ಪೊನ್ನಣ್ಣ*
  • *ಕಾಳ ಅವರ ಆರೋಗ್ಯ ವಿಚಾರಿಸಿದ ಶಾಸಕ ಎ.ಎಸ್.ಪೊನ್ನಣ್ಣ*
  • *ಇನ್ನರ್ ವೀಲ್ ಅಧ್ಯಕ್ಷಯಾಗಿ ರಶ್ಮಿ ಪ್ರವೀಣ್, ಕಾಯ೯ದಶಿ೯ಯಾಗಿ ಮೃಣಾಲಿನಿ ಚಿಣ್ಣಪ್ಪ ಆಯ್ಕೆ*
  • *ಕೊಡಗು ಪತ್ರಕತ೯ರ ಸಂಘದ ವಾಷಿ೯ಕ ಪ್ರಶಸ್ತಿ ಪ್ರಕಟ : ಅತ್ಯುತ್ತಮ ವರದಿಗಳಿಗಾಗಿ  8 ಪತ್ರಕತ೯ರಿಗೆ ಪ್ರಶಸ್ತಿ*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*ಕೊಡಗು : ಗ್ಯಾರಂಟಿ ಯೋಜನೆ ಪ್ರಗತಿಗೆ ಧರ್ಮಜ ಉತ್ತಪ್ಪ ಸೂಚನೆ*
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

*ಕೊಡಗು : ಗ್ಯಾರಂಟಿ ಯೋಜನೆ ಪ್ರಗತಿಗೆ ಧರ್ಮಜ ಉತ್ತಪ್ಪ ಸೂಚನೆ*

ಜುಲೈ 22, 20242 Mins ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link

ಮಡಿಕೇರಿ ಜು.22 NEWS DESK : ಸರ್ಕಾರದ ಪ್ರಮುಖ ಗ್ಯಾರಂಟಿ ಯೋಜನೆಗಳ ಪ್ರಗತಿ ಸಂಬಂಧಿಸಿದಂತೆ ಜಿಲ್ಲಾ ಅನುಷ್ಠಾನ ಸಮಿತಿ ಅಧ್ಯಕ್ಷ ಧರ್ಮಜ ಉತ್ತಪ್ಪ ಅವರ ಅಧ್ಯಕ್ಷತೆಯಲ್ಲಿ ಸಭೆ ನಡೆಯಿತು.
ನಗರದ ಜಿಲ್ಲಾಧಿಕಾರಿ ಅವರ ಕಚೇರಿ ಸಭಾಂಗಣದಲ್ಲಿ ನಡೆದ ಸಭೆಯಲ್ಲಿ ಮಾತನಾಡಿದ ಧರ್ಮಜ ಉತ್ತಪ್ಪ, ಸರ್ಕಾರ ಶಕ್ತಿ, ಗೃಹಲಕ್ಷ್ಮಿ, ಗೃಹಜ್ಯೋತಿ, ಯುವನಿಧಿ ಹಾಗೂ ಅನ್ನಭಾಗ್ಯ ಯೋಜನೆಯನ್ನು ಜಾರಿಗೊಳಿಸಿದ್ದು, ಈ ಯೋಜನೆಗಳನ್ನು ಅರ್ಹರಿಗೆ ತಲುಪಿಸಬೇಕು ಎಂದು ನಿರ್ದೇಶನ ನೀಡಿದರು.
ಗ್ಯಾರಂಟಿ ಯೋಜನೆಗಳಿಂದ ಅರ್ಹರು ವಂಚಿತರಾಗದಂತೆ ಗಮನಹರಿಸುವುದು ಅಧಿಕಾರಿಗಳ ಜವಾಬ್ದಾರಿ ಆಗಿದೆ. ಆ ನಿಟ್ಟಿನಲ್ಲಿ ಸರ್ಕಾರದ ಉದ್ದೇಶ ಮತ್ತು ಆಶಯದಂತೆ ಗ್ಯಾರಂಟಿ ಯೋಜನೆಗಳನ್ನು ತಲುಪಿಸುವಂತೆ ಸಲಹೆ ನೀಡಿದರು.
ಶಕ್ತಿ, ಗೃಹಲಕ್ಷ್ಮಿ, ಗೃಹಜ್ಯೋತಿ, ಯುವನಿಧಿ, ಅನ್ನಭಾಗ್ಯ ಹೀಗೆ ಪಂಚ ಯೋಜನೆಗಳು ತಲುಪಿದಾಗ ಸರ್ಕಾರಕ್ಕೆ ಹೆಸರು ಬರಲಿದೆ. ಆ ನಿಟ್ಟಿನಲ್ಲಿ ಕಾರ್ಯನಿರ್ವಹಿಸಬೇಕು ಎಂದರು.
ಗ್ಯಾರಂಟಿ ಯೋಜನೆಗಳ ಅನುಷ್ಠಾನದಲ್ಲಿ ಸಮಸ್ಯೆಗಳು ಇದ್ದಲ್ಲಿ ಮಾಹಿತಿ ನೀಡುವಂತಾಗಬೇಕು ಎಂದು ಧರ್ಮಜ ಉತ್ತಪ್ಪ ಹೇಳಿದರು.
ಗ್ಯಾರಂಟಿ ಯೋಜನೆಗಳ ಕುಶಾಲನಗರ ತಾಲ್ಲೂಕು ಅನುಷ್ಠಾನ ಸಮಿತಿ ಅಧ್ಯಕ್ಷ ವಿ.ಪಿ.ಶಶಿಧರ್ ಮಾತನಾಡಿ, ಯುವನಿಧಿ ಯೋಜನೆಯಡಿ ಸಲ್ಲಿಕೆ ಆಗಿರುವ ಬಾಕಿ ಅರ್ಜಿಗಳನ್ನು ತ್ವರಿತವಾಗಿ ವಿಲೇವಾರಿ ಮಾಡುವಂತೆ ಹೇಳಿದರು.
ಹೆಚ್ಚುವರಿ ಜಿಲ್ಲಾಧಿಕಾರಿ ಬಿ.ಎನ್.ವೀಣಾ ಮಾತನಾಡಿ, ಗ್ಯಾರಂಟಿ ಯೋಜನೆ ಅನುಷ್ಠಾನದಲ್ಲಿ ವಿಳಂಬ ಮಾಡದೆ, ಕಾಲಮಿತಿಯಲ್ಲಿ ಅರ್ಹರಿಗೆ ಸೌಲಭ್ಯ ಕಲ್ಪಿಸಲು ಪ್ರಯತ್ನಿಸಬೇಕು ಎಂದರು.
ಆಹಾರ ಇಲಾಖೆಯ ಜಂಟಿ ನಿರ್ದೇಶಕರಾದ ಕುಮುದಾ ಶರತ್ ಮಾಹಿತಿ ನೀಡಿ ಜಿಲ್ಲೆಯಲ್ಲಿ 1.30 ಲಕ್ಷ ಗುರಿಯಲ್ಲಿ 97,570 ಜನರಿಗೆ ಅನ್ನಭಾಗ್ಯ ಯೋಜನೆಯಡಿ ಹಣ ಪಾವತಿಯಾಗುತ್ತಿದ್ದು, ಶೇ.98 ರಷ್ಟು ಪ್ರಗತಿ ಸಾಧಿಸಲಾಗಿದೆ ಎಂದು ಮಾಹಿತಿ ನೀಡಿದರು.
ಯುವನಿಧಿ ಯೋಜನೆಯು ಪ್ರತೀ ತಿಂಗಳು 3000 ಮತ್ತು 1500 ನಿರುದ್ಯೋಗಿ ಭತ್ಯೆ ನೀಡುವ ಯೋಜನೆಯಾಗಿದ್ದು, ಅರ್ಹರಿಗೆ ತಲುಪಿಸಲು ಪ್ರಯತ್ನಿಸಲಾಗಿದೆ. ಆ ನಿಟ್ಟಿನಲ್ಲಿ ಜಿಲ್ಲೆಯಲ್ಲಿ 562 ಮಂದಿಗೆ ಯೋಜನೆ ತಲುಪುತ್ತಿದೆ. ಒಟ್ಟಾರೆ ಇದುವರೆಗೆ 1030 ಮಂದಿ ಹೆಸರು ನೋಂದಾಯಿಸಿಕೊಂಡಿದ್ದಾರೆ ಎಂದು ರೇಖಾ ಗಣಪತಿ ತಿಳಿಸಿದರು.
ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪ ನಿರ್ದೇಶಕರಾದ ನಟರಾಜು ಮಾತನಾಡಿ, ಗೃಹಲಕ್ಷ್ಮಿ ಯೋಜನೆ ಸಂಬಂಧಿಸಿದಂತೆ ಮಾಹಿತಿ ನೀಡಿ ಜೂನ್‍ವರೆಗೆ ಹಣ ಪಾವತಿಯಾಗಿದ್ದು, ಜುಲೈ ತಿಂಗಳ ಹಣ ಪಾವತಿಗೆ ಬಾಕಿ ಇದೆ ಎಂದು ತಿಳಿಸಿದರು.
ಜಿಲ್ಲೆಯಲ್ಲಿ ಗೃಹಲಕ್ಷ್ಮಿ ಯೋಜನೆಯಡಿ 1,15,229 ಮಂದಿ ಹೆಸರು ನೋಂದಣಿಯಾಗಿದ್ದು, 1,14,056 ಮಂದಿ ಮಂಜೂರಾಗಿದ್ದು, ಶೇ.98.98 ರಷ್ಟು ಪ್ರಗತಿ ಸಾಧಿಸಲಾಗಿದೆ ಎಂದು ನಟರಾಜು ನೀಡಿದರು.
ಸೆಸ್ಕ್ ಎಇಇ ವಿನಯ್ ಕುಮಾರ್ ಅವರು ಕೊಡಗು ಜಿಲ್ಲೆಯಲ್ಲಿ ಗೃಹಜ್ಯೋತಿ ಯೋಜನೆಯಡಿ 1,53,623 ಕುಟುಂಬಗಳಲ್ಲಿ 1,51,907 ಕುಟುಂಬಗಳು ನೋಂದಣಿಯಾಗಿದ್ದು, ಶೇ.98.88 ರಷ್ಟು ಪ್ರಗತಿ ಸಾಧಿಸಲಾಗಿದ್ದು, ಮೇ, ಅಂತ್ಯದವರೆಗೆ 5905.30 ಲಕ್ಷ ರೂ. ಸಹಾಯಧನ ಕಲ್ಪಿಸಲಾಗಿದೆ ಎಂದರು.
ಶಕ್ತಿ ಯೋಜನೆಯಡಿ ಆರಂಭದಿಂದ ಇದುವರೆಗೆ 62,04,618 ಮಂದಿ ಮಹಿಳೆಯರು ಪ್ರಯಾಣ ಮಾಡಿದ್ದು, 24.65 ಕೋಟಿ ರೂ. ಭರಿಸಲಾಗಿದೆ ಎಂದು ಕೆಎಸ್‍ಆರ್‍ಟಿಸಿ ಮಡಿಕೇರಿ ಘಟಕ ವ್ಯವಸ್ಥಾಪಕರಾದ ಮೆಹಬೂಬ್ ಅಲಿ ಅವರು ತಿಳಿಸಿದ್ದಾರೆ.
ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ತಾಲ್ಲೂಕು ಘಟಕದ ಅಧ್ಯಕ್ಷ ಮೋಹನ್‍ದಾಸ್(ಮಡಿಕೇರಿ), ಜಾನ್ಸನ್(ವಿರಾಜಪೇಟೆ) ಇತರರು ಇದ್ದರು.

Follow us Follow us
Share. WhatsApp Facebook Twitter Email Telegram Copy Link

Website design development company services in Mangalore

Forex Trading Teacher in India

Related Posts

*ದಿವ್ಯಾಗೆ ಪಿಹೆಚ್‌ಡಿ ಪದವಿ*

ಜೂನ್ 28, 2026

*ಮಡಿಕೇರಿ ಲಯನ್ಸ್ ಕ್ಲಬ್ ನ ನೂತನ ಪದಾಧಿಕಾರಿಗಳ ಪದಗ್ರಹಣ : ಸಮಾಜಮುಖಿ ಕಾರ್ಯಕ್ಕೆ ಕರೆ*

ಜೂನ್ 28, 2026

*ರಾಷ್ಟ್ರೀಯ ಪಲ್ಸ್ ಪೋಲಿಯೋ ಕಾರ್ಯಕ್ರಮ : ಪೋಲಿಯೋ ಹನಿ ಹಾಕಿಸಿಕೊಂಡ ಕೊಡಗಿನ ಮಕ್ಕಳು*

ಜೂನ್ 28, 2026

*ಮಡಿಕೇರಿ ಲಯನ್ಸ್ ಕ್ಲಬ್ ನ ನೂತನ ಪದಾಧಿಕಾರಿಗಳ ಪದಗ್ರಹಣ : ಸಮಾಜಮುಖಿ ಕಾರ್ಯಕ್ಕೆ ಕರೆ*

ಜೂನ್ 28, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಮಡಿಕೇರಿ NEWS DESK ಜೂ.28 : ಮಡಿಕೇರಿ ಲಯನ್ಸ್ ಕ್ಲಬ್ ನ 2026-27ನೇ ಸಾಲಿನ ನೂತನ ಅಧ್ಯಕ್ಷರಾಗಿ ಎಲ್.ಮೋಹನ್ ಕುಮಾರ್,…

*ರಾಷ್ಟ್ರೀಯ ಪಲ್ಸ್ ಪೋಲಿಯೋ ಕಾರ್ಯಕ್ರಮ : ಪೋಲಿಯೋ ಹನಿ ಹಾಕಿಸಿಕೊಂಡ ಕೊಡಗಿನ ಮಕ್ಕಳು*

ಜೂನ್ 28, 2026

*ವಿರಾಜಪೇಟೆ : ಕಾವೇರಿ ಪದವಿ ಪೂರ್ವ ಕಾಲೇಜಿನಲ್ಲಿ ಕಾನೂನು ಅರಿವು*

ಜೂನ್ 28, 2026

*ಮಾಧ್ಯಮ ಸ್ಪಂದನ ತಂಡದ ಕೊಡುಗೆ ಅಪಾರ: ವಿ.ಪಿ.ಶಶಿಧರ್*

ಜೂನ್ 28, 2026

*ಅತೀ ಶೀಘ್ರದಲ್ಲಿ ಕಾರ್ಡಿಯಾಲಜಿ ಯೂನಿಟ್ ಲಭ್ಯ: ಶಾಸಕ ಡಾ.ಮಂತರ್ ಗೌಡ*

ಜೂನ್ 28, 2026

*ಕೆ.ಬಾಡಗ : ವಿವಿಧ ರಸ್ತೆ ಉದ್ಘಾಟಿಸಿದ ಶಾಸಕ ಎ.ಎಸ್.ಪೊನ್ನಣ್ಣ*

ಜೂನ್ 27, 2026

*ಕಾಳ ಅವರ ಆರೋಗ್ಯ ವಿಚಾರಿಸಿದ ಶಾಸಕ ಎ.ಎಸ್.ಪೊನ್ನಣ್ಣ*

ಜೂನ್ 27, 2026

*ಇನ್ನರ್ ವೀಲ್ ಅಧ್ಯಕ್ಷಯಾಗಿ ರಶ್ಮಿ ಪ್ರವೀಣ್, ಕಾಯ೯ದಶಿ೯ಯಾಗಿ ಮೃಣಾಲಿನಿ ಚಿಣ್ಣಪ್ಪ ಆಯ್ಕೆ*

ಜೂನ್ 27, 2026

*ಕೊಡಗು ಪತ್ರಕತ೯ರ ಸಂಘದ ವಾಷಿ೯ಕ ಪ್ರಶಸ್ತಿ ಪ್ರಕಟ : ಅತ್ಯುತ್ತಮ ವರದಿಗಳಿಗಾಗಿ  8 ಪತ್ರಕತ೯ರಿಗೆ ಪ್ರಶಸ್ತಿ*

ಜೂನ್ 27, 2026

*ನಾನೂ ನಾಯಕಿ-2026 ಶಿಬಿರ : ಕೊಡಗಿನ ಐವರು ಮಹಿಳಾ ಪ್ರತಿನಿಧಿಗಳು ಭಾಗಿ*

ಜೂನ್ 27, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.

Ad Blocker Enabled!
Ad Blocker Enabled!
Our website is made possible by displaying online advertisements to our visitors. Please support us by disabling your Ad Blocker.