Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಕುಶಾಲನಗರ ಪಿ.ಎಂ.ಶ್ರೀ ಶಾಲಾ ಮಕ್ಕಳಿಂದ ಪರಿಸರ ಸ್ನೇಹಿ ಗಣೇಶೋತ್ಸವ ಜಾಗೃತಿ; ಪರಿಸರ ಪೂರಕ ಗಣೇಶೋತ್ಸವ ಆಚರಣೆಗೆ ಟಿ.ಜಿ. ಪ್ರೇಮಕುಮಾರ್ ಮನವಿ; ಪಿ.ಓ.ಪಿ., ರಾಸಾಯನಿಕ ಬಣ್ಣದ ಗಣೇಶ ಮೂರ್ತಿಗಳನ್ನು ತ್ಯಜಿಸಲು ಕರೆ*
  • *ಮಡಿಕೇರಿ ದಸರಾ ಶೋಭಾಯಾತ್ರೆಗೆ ದಿನಾಂಕ ನಿಗದಿ : ಅ.20ರಂದು ದಶಮಂಟಪಗಳ ಮೆರವಣಿಗೆ*
  • *ಗೌರಿ–ಗಣೇಶ ಹಬ್ಬ: 2,400 ವಿಶೇಷ ಬಸ್‌ಗಳ ವ್ಯವಸ್ಥೆ*
  • *ಗೌರಿ ಗಣೇಶೋತ್ಸವ : ಕಾನೂನು ಪಾಲನೆಗೆ ಆದ್ಯತೆ ನೀಡಿ : ಎಸ್‌ಪಿ ಬಿಂದುಮಣಿ ಮನವಿ*
  • *ಇಂಡಿಯಾ ಸ್ಕಿಲ್ : ಹೆಸರು ನೋಂದಣಿಗೆ ಅವಕಾಶ*
  • *ಬೆಳ್ಳುಮಾಡು ಶ್ರೀ ಮಾದೇರಪ್ಪ ದೇವಾಲಯದ ಜೀರ್ಣೋದ್ಧಾರಕ್ಕೆ ರೂ.3 ಲಕ್ಷ ಅನುದಾನ*
  • *ಸೆ.14 ರಂದು ಇತಿಹಾಸ ಪ್ರಸಿದ್ದ ಶ್ರೀಕ್ಷೇತ್ರ ಹೊನ್ನಮ್ಮನ ಕೆರೆಗೆ ಬಾಗಿನ ಅರ್ಪಣೆ*
  • *ಸೆ.15 ರಂದು ಅಂತರರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ : ಅಗತ್ಯ ಸಿದ್ಧತೆಗೆ ಹೆಚ್ಚುವರಿ ಜಿಲ್ಲಾಧಿಕಾರಿ ಸಹನಾ ಎಸ್.ಹಾದಿಮನಿ ಸೂಚನೆ*
  • *ಸೆ.19 ರಂದು ಕೊಡಗು ಮಹಿಳಾ ಸಹಕಾರ ಸಂಘದ 86ನೇ ವಾರ್ಷಿಕ ಮಹಾಸಭೆ*
  • *ಮಡಿಕೇರಿ ನಗರ ವ್ಯಾಪ್ತಿಯಲ್ಲಿ ಬಾಲಕಾರ್ಮಿಕ ತಪಾಸಣೆ : ಕಾನೂನು ಅರಿವು*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*ಕಾರ್ಗಿಲ್ ವಿಜಯ ದಿನದ ಗೌರವಾರ್ಥ : 2000 ಕಿ.ಮೀ ರ್‍ಯಾಲಿಯಲ್ಲಿ ಪಾಲ್ಗೊಂಡ ಏಕೈಕ ಕನ್ನಡತಿ ಸುಳ್ಯ ತಾಲೂಕಿನ ವೃಷ್ಠಿ ಮಲ್ಕಜೆ*
ಇತ್ತೀಚಿನ ಸುದ್ದಿಗಳು ಕರ್ನಾಟಕ ಕೊಡಗು ಜಿಲ್ಲೆ

*ಕಾರ್ಗಿಲ್ ವಿಜಯ ದಿನದ ಗೌರವಾರ್ಥ : 2000 ಕಿ.ಮೀ ರ್‍ಯಾಲಿಯಲ್ಲಿ ಪಾಲ್ಗೊಂಡ ಏಕೈಕ ಕನ್ನಡತಿ ಸುಳ್ಯ ತಾಲೂಕಿನ ವೃಷ್ಠಿ ಮಲ್ಕಜೆ*

ಜುಲೈ 22, 20242 Mins ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link

ಮಡಿಕೇರಿ ಜು.22 NEWS DESK : ಕಾರ್ಗಿಲ್ ವಿಜಯ ದಿನದ ಗೌರವಾರ್ಥ  ಭಾರತೀಯ ಸೇನೆಯು 25 ಮಹಿಳೆಯರ ಆಲ್‌ವುಮೆನ್ ಬೈಕ್ ರ್‍ಯಾಲಿ ಆಯೋಜಿಸಿದ್ದು, 2000 ಕಿ.ಮೀ.ಮಾರ್ಗದ ಈ ರ್‍ಯಾಲಿಯಲ್ಲಿ ಕರ್ನಾಟಕದಿಂದ ಇಬ್ಬರು ಮಹಿಳೆಯರು ಪಾಲ್ಗೊಂಡಿದ್ದು, ಈ ಪೈಕಿ ಏಕೈಕ ಕನ್ನಡತಿ ಸುಳ್ಯ ತಾಲೂಕಿನ ಪಂಜ ಸಮೀಪದ ವೃಷ್ಠಿ ಮಲ್ಕಜೆ ಅವರಾಗಿದ್ದಾರೆ. ಪುತ್ತೂರು ಹಾಗೂ ಸುಳ್ಯದಲ್ಲಿ ನ್ಯಾಯವಾದಿಯಾಗಿರುವ ಪುರುಷೋತ್ತಮ ಮಲ್ಕಜೆ ಹಾಗೂ ಉಷಾ ಮಲ್ಕಜೆ ದಂಪತಿಯ ಪುತ್ರಿಯಾಗಿರುವ  ವೃಷ್ಠಿ  ಈ ರ್‍ಯಾಲಿಯಲ್ಲಿ ಪಾಲ್ಗೊಂಡು ವಿಶೇಷ ಸಾಧನೆ ಮೆರೆದಿದ್ದಾರೆ. ಕಾರ್ಗಿಲ್ ವಿಜಯ ದಿವಸವು ಭಾರತೀಯ ಸೇನಾ ಇತಿಹಾಸದಲ್ಲಿ ಮರೆಯಲಾಗದ ದಿನವಾಗಿದ್ದು, 25 ವರ್ಷಗಳ ಹಿಂದಿನ ಈ ಯುದ್ಧದಲ್ಲಿ ಹುತಾತ್ಮರಾದವರಿಗೆ ಗೌರವ ಸಲ್ಲಿಸಲು ಭಾರತೀಯ ಸೇನೆ ಇತ್ತೀಚೆಗಷ್ಟೇ ಟಿವಿಎಸ್ ಮೋಟಾರ್ ಕಂಪೆನಿ ಜೊತೆಗೂಡಿ ನಾರಿ ಶಕ್ತಿ ಕಾರ್ಯಕ್ರಮದಡಿ 25 ಮಹಿಳಾ ಬೈಕರ್‌ಗಳ ವಿಶಿಷ್ಠ ರ್‍ಯಾಲಿ ಆಯೋಜಿಸಿತ್ತು. ಸುಮಾರು 2000 ಕಿ.ಮೀ. ಮಾರ್ಗದ ಬೈಕ್ ರ್‍ಯಾಲಿಯಲ್ಲಿ ಭಾರತೀಯ ಸೇನೆಯ ವಿವಿಧ ವಿಭಾಗಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಮಹಿಳೆಯರು ಹಾಗೂ ಅವರ ಸೇನಾ ಕುಟುಂಬದ ಮಹಿಳೆಯರು ಸೇರಿದಂತೆ ಭಾಗವಹಿಸಿದ್ದು, ಸೇನಾ ಕುಟುಂಬದ ಹೊರತಾಗಿ ಭಾಗವಹಿಸಿದವರಲ್ಲಿ ವೃಷ್ಠಿ ಏಕೈಕರಾಗಿದ್ದಾರೆ. ಜುಲೈ 4 ರಂದು ಹಿಮಾಚಲ ಪ್ರದೇಶದ ಲೇಹ್‌ನಿಂದ ಆರಂಭಗೊಂಡ ರ್‍ಯಾಲಿ ಲಡಾಕ್‌ನ ವಿವಿಧ ಸ್ಥಳಗಳ ಮೂಲಕ ಕಾರ್ಗಿಲ್ ಹುತಾತ್ಮರ ಸ್ಮಾರಕಕ್ಕೆ ತಲುಪಿತು. ದುರ್ಗಮ ಹಾದಿಯಲ್ಲಿ ನಡೆದ ಬೈಕ್ ಸವಾರಿಯಲ್ಲಿ ವೃಷ್ಠಿಯವರೂ ಪಾಲ್ಗೊಳ್ಳುವ ಮೂಲಕ ಅಸಾಮಾನ್ಯ ಸಾಧನೆ ಮೆರೆದಿದ್ದಾರೆ. ಪ್ರಪಂಚದ ಅತ್ಯಂತ ಎತ್ತರದ ಬೈಕ್ ಪಾಸಿಂಗ್ ಪ್ರದೇಶಗಳಾದ ಕರದುಂಗ್‌ ಲಾ ಮತ್ತು ಓಮ್ಲಿಂಗ್ ಲಾನಂತಹ ಆಮ್ಲಜನಕದ ಕೊರತೆ ಇರುವ ಪರ್ವತಗಳಲ್ಲೂ ಬೈಕ್‌ನಲ್ಲಿ ಸಂಚರಿಸಿ ಕಡಿದಾದ ರಸ್ತೆ, ಹೊಳೆಗಳನ್ನು ದಾಟಿ ಮುನ್ನುಗ್ಗಿದ ಸಾಹಸಗಾಥೆಗೆ ವೃಷ್ಠಿ ಪಾತ್ರರಾಗಿದ್ದಾರೆ. ಬೆಂಗಳೂರಿನ ಇ.ವೈ. ಕಂಪೆನಿಯಲ್ಲಿ ಉದ್ಯೋಗಿಯಾಗಿರುವ ವೃಷ್ಠಿಯವರು ತನ್ನ ಪ್ರಾಥಮಿಕ ವಿದ್ಯಾಭ್ಯಾಸವನ್ನು ಕಡಬ ಕ್ನಾನಾಯ ಜ್ಯೋತಿ , ಸುಳ್ಯ ಸೈಂಟ್ ಜೋಸೆಫ್ ಸ್ಕೂಲ್  ಹಾಗೂ ಗುತ್ತಿಗಾರಿನ ಕುರಿಯಾಕೋಸ್ ಶಾಲೆಯಲ್ಲಿ ಪಡೆದಿದ್ದು, ಸುಬ್ರಹ್ಮಣ್ಯದ ಕುಮಾರಸ್ವಾಮಿ ವಿದ್ಯಾಲಯದಲ್ಲಿ ಪ್ರೌಢಶಾಲಾ ಶಿಕ್ಷಣ ಪೂರೈಸಿದ್ದರು. ಮಂಗಳೂರಿನ ಶಾರದಾ ಪಿಯು ಕಾಲೇಜಿನಲ್ಲಿ ಪದವಿಪೂರ್ವ ಶಿಕ್ಷಣವನ್ನು ಹಾಗೂ ಬೆಂಗಳೂರಿನ ಜೈನ್ ಯುನಿವರ್ಸಿಟಿಯಲ್ಲಿ ಪದವಿ ಪೂರೈಸಿ ಕ್ಯಾಂಪಸ್ ಸೆಲೆಕ್ಷನ್ ಮೂಲಕ ಇ.ವೈ. ಕಂಪೆನಿಯ ಉದ್ಯೋಗಿಯಾಗಿ ನಿಯುಕ್ತಿಗೊಂಡಿದ್ದರು. ರಾಷ್ಟ್ರೀಯ ಮಟ್ಟದ ಟಿವಿಎಸ್ ರೇಸಿಂಗ್ ಚಾಂಪಿಯನ್‌ಷಿಪ್‌ಗೆ ಆಯ್ಕೆಗೊಂಡಿದ್ದ ವೃಷ್ಠಿ ಅಲ್ಲಿಂದ ಈ ಅಪರೂಪದ ಅವಕಾಶ ಪಡೆದಿದ್ದರು. ವೃಷ್ಠಿ ಅವರ ಸಹೋದರಿ ವೃದ್ಧಿ ಮಲ್ಕಜೆ ಮಂಗಳೂರು ಶಾರದಾ ಕಾಲೇಜಿನಲ್ಲಿ ದ್ವಿತೀಯ ಪಿ.ಯು.ಸಿ. ಓದುತ್ತಿದ್ದಾರೆ. (ಕೃಪೆ : ಒಕ್ಕಲಿಗ ಗೌಡ್ರು ದ.ಕ ಜಿಲ್ಲೆ)

Follow us Follow us
Share. WhatsApp Facebook Twitter Email Telegram Copy Link

Website design development company services in Mangalore

Forex Trading Teacher in India

Related Posts

*ಕುಶಾಲನಗರ ಪಿ.ಎಂ.ಶ್ರೀ ಶಾಲಾ ಮಕ್ಕಳಿಂದ ಪರಿಸರ ಸ್ನೇಹಿ ಗಣೇಶೋತ್ಸವ ಜಾಗೃತಿ; ಪರಿಸರ ಪೂರಕ ಗಣೇಶೋತ್ಸವ ಆಚರಣೆಗೆ ಟಿ.ಜಿ. ಪ್ರೇಮಕುಮಾರ್ ಮನವಿ; ಪಿ.ಓ.ಪಿ., ರಾಸಾಯನಿಕ ಬಣ್ಣದ ಗಣೇಶ ಮೂರ್ತಿಗಳನ್ನು ತ್ಯಜಿಸಲು ಕರೆ*

ಸೆಪ್ಟೆಂಬರ್ 13, 2026

*ಮಡಿಕೇರಿ ದಸರಾ ಶೋಭಾಯಾತ್ರೆಗೆ ದಿನಾಂಕ ನಿಗದಿ : ಅ.20ರಂದು ದಶಮಂಟಪಗಳ ಮೆರವಣಿಗೆ*

ಸೆಪ್ಟೆಂಬರ್ 13, 2026

*ಗೌರಿ–ಗಣೇಶ ಹಬ್ಬ: 2,400 ವಿಶೇಷ ಬಸ್‌ಗಳ ವ್ಯವಸ್ಥೆ*

ಸೆಪ್ಟೆಂಬರ್ 13, 2026

*ಮಡಿಕೇರಿ ದಸರಾ ಶೋಭಾಯಾತ್ರೆಗೆ ದಿನಾಂಕ ನಿಗದಿ : ಅ.20ರಂದು ದಶಮಂಟಪಗಳ ಮೆರವಣಿಗೆ*

ಸೆಪ್ಟೆಂಬರ್ 13, 2026 ಇತ್ತೀಚಿನ ಸುದ್ದಿಗಳು ಕರ್ನಾಟಕ ಕೊಡಗು ಜಿಲ್ಲೆ

ಮಡಿಕೇರಿ NEWS DESK ಸೆ.13 : ಮಡಿಕೇರಿ ದಸರಾ ಜನೋತ್ಸವದ ಪ್ರಮುಖ ಆಕರ್ಷಣೆಯಾದ ದಶಮಂಟಪಗಳ ಶೋಭಾಯಾತ್ರೆಯನ್ನು ಅ.20ರಂದು ನಡೆಸಲು ದಸರಾ…

*ಗೌರಿ–ಗಣೇಶ ಹಬ್ಬ: 2,400 ವಿಶೇಷ ಬಸ್‌ಗಳ ವ್ಯವಸ್ಥೆ*

ಸೆಪ್ಟೆಂಬರ್ 13, 2026

*ಗೌರಿ ಗಣೇಶೋತ್ಸವ : ಕಾನೂನು ಪಾಲನೆಗೆ ಆದ್ಯತೆ ನೀಡಿ : ಎಸ್‌ಪಿ ಬಿಂದುಮಣಿ ಮನವಿ*

ಸೆಪ್ಟೆಂಬರ್ 13, 2026

*ಇಂಡಿಯಾ ಸ್ಕಿಲ್ : ಹೆಸರು ನೋಂದಣಿಗೆ ಅವಕಾಶ*

ಸೆಪ್ಟೆಂಬರ್ 12, 2026

*ಬೆಳ್ಳುಮಾಡು ಶ್ರೀ ಮಾದೇರಪ್ಪ ದೇವಾಲಯದ ಜೀರ್ಣೋದ್ಧಾರಕ್ಕೆ ರೂ.3 ಲಕ್ಷ ಅನುದಾನ*

ಸೆಪ್ಟೆಂಬರ್ 12, 2026

*ಸೆ.14 ರಂದು ಇತಿಹಾಸ ಪ್ರಸಿದ್ದ ಶ್ರೀಕ್ಷೇತ್ರ ಹೊನ್ನಮ್ಮನ ಕೆರೆಗೆ ಬಾಗಿನ ಅರ್ಪಣೆ*

ಸೆಪ್ಟೆಂಬರ್ 12, 2026

*ಸೆ.15 ರಂದು ಅಂತರರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ : ಅಗತ್ಯ ಸಿದ್ಧತೆಗೆ ಹೆಚ್ಚುವರಿ ಜಿಲ್ಲಾಧಿಕಾರಿ ಸಹನಾ ಎಸ್.ಹಾದಿಮನಿ ಸೂಚನೆ*

ಸೆಪ್ಟೆಂಬರ್ 12, 2026

*ಸೆ.19 ರಂದು ಕೊಡಗು ಮಹಿಳಾ ಸಹಕಾರ ಸಂಘದ 86ನೇ ವಾರ್ಷಿಕ ಮಹಾಸಭೆ*

ಸೆಪ್ಟೆಂಬರ್ 12, 2026

*ಮಡಿಕೇರಿ ನಗರ ವ್ಯಾಪ್ತಿಯಲ್ಲಿ ಬಾಲಕಾರ್ಮಿಕ ತಪಾಸಣೆ : ಕಾನೂನು ಅರಿವು*

ಸೆಪ್ಟೆಂಬರ್ 12, 2026

*ಅರಣ್ಯ ಪ್ರದೇಶಗಳಿಗೆ ಮಾತ್ರ ಸೀಮಿತಗೊಳಿಸಿ ವರದಿ ಜಾರಿಗೆ ಪ್ರಸ್ತಾವನೆ ಸಲ್ಲಿಸಲಿ : ಸೇವ್ ಕೊಡಗು ಸಂಘಟನೆ ಒತ್ತಾಯ*

ಸೆಪ್ಟೆಂಬರ್ 12, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.