Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಜಂಬೂರುವಿನಲ್ಲಿ ಶ್ರದ್ಧಾಭಕ್ತಿಯಿಂದ ಜರುಗಿದ ಶ್ರೀ ಮುತ್ತಪ್ಪನ್ ದೇವರ ವೆಳ್ಳಾಟಂ (ಕೋಲ)*
  • *ನೆಲ್ಯಹುದೀಕೇರಿ ಗ್ರಾಮದಲ್ಲಿ ಕಾಡಾನೆಗಳ ಉಪಟಳ* 
  • *ಕೊಡಗು ಜಿಲ್ಲಾ ಪ್ರಥಮ ಶರಣ ಸಾಹಿತ್ಯ ಸಮ್ಮೇಳನ : ಶಾಂತಮಲ್ಲಿಕಾರ್ಜುನ ಶ್ರೀಗಳಿಗೆ ಆಹ್ವಾನ*
  • *ಬೆನೆಡಿಕ್ಟ್ ಆರ್ ಸಲ್ಡಾನ ಅವರಿಗೆ ಬೀಳ್ಕೊಡುಗೆ*
  • *ವಿರಾಜಪೇಟೆ ಕಾವೇರಿ ಕಾಲೇಜಿನ ಪದವಿ ವಿಭಾಗದ ನೂತನ ಪ್ರಾಂಶುಪಾಲರಾಗಿ ಡಾ.ಕುಪ್ಪಂಡ ವೀಣಾ ಅಧಿಕಾರ ಸ್ವೀಕಾರ*
  • *ಸರ್ಕಾರ ಗ್ರಾ.ಪಂ ಅಭಿವೃದ್ಧಿಗೆ ನೀಡಿರುವ ಅಧಿಕಾರ ಚಲಾಯಿಸಿ : ಡಿ.ಆರ್.ಪಾಟೀಲ*
  • *ಮೇ 5 ರಂದು ಕನ್ನಡ ಸಾಹಿತ್ಯ ಪರಿಷತ್ತಿನ 112ನೇ ಸಂಸ್ಥಾಪನಾ ದಿನಾಚರಣೆ*
  • *ಮೇ 16 ಮತ್ತು 17 ರಂದು ಮಡಿಕೇರಿಯಲ್ಲಿ ಕುಲಾಲ-ಕುಂಬಾರ ಬಾಂಧವರ ಕ್ರೀಡೋತ್ಸವ ಮತ್ತು ಸಮ್ಮಿಲನ*
  • *ಗೌಡ ಕುಟುಂಬಗಳ “ಕುಟುಂಬ-2026” ಪಂದ್ಯಾವಳಿ ಆರಂಭ*
  • *ಕೊಡಗು ಬಂಟರ ಭವನ ನಿರ್ಮಾಣಕ್ಕೆ ಶಂಕುಸ್ಥಾಪನೆ : ಸಮುದಾಯ ಬಾಂಧವರ ಒಗ್ಗಟ್ಟಿಗೆ ಗಣ್ಯರ ಕರೆ*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*ಮೊಬೈಲ್ ಯುಗದಲ್ಲಿ ಮಕ್ಕಳ ಒಳಿತು-ಕೆಡುಕುಗಳ ಬಗ್ಗೆ ನಿಗಾವಹಿಸಬೇಕಿದೆ : ಜಿಲ್ಲಾಧಿಕಾರಿ ವೆಂಕಟ್ ರಾಜಾ ಕಿವಿಮಾತು*
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

*ಮೊಬೈಲ್ ಯುಗದಲ್ಲಿ ಮಕ್ಕಳ ಒಳಿತು-ಕೆಡುಕುಗಳ ಬಗ್ಗೆ ನಿಗಾವಹಿಸಬೇಕಿದೆ : ಜಿಲ್ಲಾಧಿಕಾರಿ ವೆಂಕಟ್ ರಾಜಾ ಕಿವಿಮಾತು*

ಜುಲೈ 23, 20242 Mins ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link

ಮಡಿಕೇರಿ ಜು.23 NEWS DESK : ಶಾಲೆಯಲ್ಲಿ ಮಕ್ಕಳಿಗೆ ಕಲಿಕಾ ವಾತಾವರಣ ನಿರ್ಮಾಣ ಮಾಡಬೇಕು. ಜೊತೆಗೆ ಮಕ್ಕಳ ರಕ್ಷಣೆ ಮತ್ತು ಸುರಕ್ಷತೆಗೆ ಹೆಚ್ಚಿನ ಒತ್ತು ನೀಡಬೇಕು ಎಂದು ಜಿಲ್ಲಾಧಿಕಾರಿ ವೆಂಕಟ್ ರಾಜಾ ಅವರು ಕರೆ ನೀಡಿದ್ದಾರೆ.
ನವದೆಹಲಿಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗ ವತಿಯಿಂದ, ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಸಹಕಾರದಲ್ಲಿ ನಗರದ ಗಾಂಧಿ ಭವನದಲ್ಲಿ ಮಂಗಳವಾರ ನಡೆದ ಸೈಬರ್ ಸುರಕ್ಷತೆ ಸೇರಿದಂತೆ ಮಕ್ಕಳ ರಕ್ಷಣೆ ಮತ್ತು ಸುರಕ್ಷತೆ ಕುರಿತು ಜಿಲ್ಲಾ ಮಟ್ಟದ ಕಾರ್ಯಗಾರಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು. ಇಂದಿನ ಅಂತರ್ಜಾಲ ಹಾಗೂ ಮೊಬೈಲ್ ಯುಗದಲ್ಲಿ ಒಳಿತು-ಕೆಡುಕುಗಳ ಬಗ್ಗೆ ನಿಗಾವಹಿಸಬೇಕಿದೆ. ಆದ್ದರಿಂದ ಒಳಿತನ್ನು ಬಳಸಿಕೊಂಡು ಕೆಡುಕುಗಳನ್ನು ನಿರ್ಬಂಧಿಸಲು ಅವಕಾಶವಿದೆ ಎಂದರು. ಶಾಲೆಯಲ್ಲಿ ಪಾಠದ ಜೊತೆಗೆ ಆಟೋಟ, ಸಂಗೀತ, ಕಲೆ, ಸಾಹಿತ್ಯ ಹೀಗೆ ಹಲವು ಉತ್ತಮ ಪರಿಸರವನ್ನು ನಿರ್ಮಾಣ ಮಾಡಬೇಕು ಎಂದು ಜಿಲ್ಲಾಧಿಕಾರಿ ವೆಂಕಟ್ ರಾಜಾ ಅವರು ತಿಳಿಸಿದರು. ಮನೆಯಲ್ಲಿ ಮತ್ತು ಶಾಲೆಯಲ್ಲಿ ಮಕ್ಕಳಿಗೆ ಉತ್ತಮ ವಾತಾವರಣ ಇದ್ದಲ್ಲಿ ಮಕ್ಕಳು ಅದನ್ನು ಅನುಸರಿಸುತ್ತಾರೆ. ಇದರಿಂದ ಕಲಿಕಾ ಚಟುವಟಿಕೆಯಲ್ಲಿ ತೊಡಗಿಸಿಕೊಳ್ಳಲು ಸಹಕಾರಿಯಾಗಲಿದೆ ಎಂದು ಜಿಲ್ಲಾಧಿಕಾರಿ ಅವರು ವಿವರಿಸಿದರು. ಸಮಾಜದಲ್ಲಿ ಮಕ್ಕಳು ಉತ್ತಮ ನಾಗರಿಕರಾಗಿ ಬೆಳೆಯುವಂತಾಗಲು ಸರಿಯಾದ ಮಾಹಿತಿ ಮತ್ತು ಮಾರ್ಗದರ್ಶನ ಅತ್ಯಗತ್ಯ. ಆ ನಿಟ್ಟಿನಲ್ಲಿ ಪ್ರತಿಯೊಬ್ಬರೂ ಉತ್ತಮ ವಾತಾವರಣ ನಿರ್ಮಾಣ ಮಾಡಬೇಕು. ಶಿಕ್ಷಕರು, ಪೋಷಕರು ಸೇರಿದಂತೆ ಎಲ್ಲರೂ ಮಕ್ಕಳಲ್ಲಿ ಸಂವೇದನಾಶೀಲತೆ ಬೆಳೆಸಬೇಕು ಎಂದರು. ರಾಷ್ಟ್ರೀಯ ಮಕ್ಕಳ ಹಕ್ಕುಗಳ ಆಯೋಗದ ಪ್ರತಿನಿಧಿ ಡಾ.ಋಷಿ ತಮನ್ನ ಅವರು ಶಾಲೆಗಳಲ್ಲಿ ಮಕ್ಕಳ ಸುರಕ್ಷತೆ ಮತ್ತು ರಕ್ಷಣೆ ವಹಿಸಬೇಕಾದ ಪಾತ್ರ ಕುರಿತು ಮಾತನಾಡಿ ಮಕ್ಕಳಿಗೆ ಕನಿಷ್ಠ ಮೂಲ ಸೌಲಭ್ಯಗಳನ್ನು ಕಲ್ಪಿಸಬೇಕು. ಶಿಕ್ಷಣಕ್ಕೆ ಪ್ರಥಮ ಆದ್ಯತೆ ನೀಡಬೇಕು ಎಂದು ಸಲಹೆ ಮಾಡಿದರು. ಮಕ್ಕಳಿಗೆ ಯಾವುದೇ ಕಾರಣಕ್ಕೂ ಕಿರುಕುಳ ನೀಡಬಾರದು. ಮಕ್ಕಳನ್ನು ಗೌರವಿಸಬೇಕು. ಮೊಬೈಲ್ ಬಳಕೆಯಿಂದ ಕಾಲಹರಣವಾಗುತ್ತದೆಯೇ ಹೊರತು, ಗುರಿ ಸಾಧನೆ ಮಾಡಲು ಸಾಧ್ಯವಿಲ್ಲ, ಇದರಿಂದ ಗಮನ ಬೇರೆಡೆ ಹೋಗುತ್ತದೆ. ಆದ್ದರಿಂದ ಸೈಬರ್ ಸೇಪ್ಟಿ ಬಗ್ಗೆ ಎಚ್ಚರವಹಿಸಬೇಕು ಎಂದು ಡಾ.ಋಷಿ ತಮನ್ನ ಹೇಳಿದರು.
‘ಕೂಡಿಗೆಯ ಡಯಟ್ ಪ್ರಾಂಶುಪಾಲರಾದ ಎಂ.ಚಂದ್ರಕಾಂತ್ ಅವರು ಮಾತನಾಡಿ ಇಂದಿನ ತಂತ್ರಜ್ಞಾನ ಯುಗದಲ್ಲಿ ಮಕ್ಕಳು ಮಕ್ಕಳಾಗಿರಬೇಕು. ಪೋಷಕರು ಪೋಷಕರಾಗಿರಬೇಕು. ಆದರೆ ಇವರ ಪಾತ್ರ ಬದಲಾಗುತ್ತಿದೆ ಎಂದು ಪ್ರತಿಪಾದಿಸಿದರು.’
ಮಕ್ಕಳು ಯಥೇಚ್ಛವಾಗಿ ಮೊಬೈಲ್ ಬಳಕೆಯಿಂದ ಹಾದಿ ತಪ್ಪುವುದು ಹೆಚ್ಚಾಗುತ್ತಿದೆ. ಈ ಬಗ್ಗೆ ನಿಯಂತ್ರಣ ಇರಬೇಕು. ಇಂದಿನ ಮಕ್ಕಳೇ ಮುಂದಿನ ಪ್ರಜೆಗಳ ಬದಲಾಗಿ, ಇಂದಿನ ಮಕ್ಕಳೇ, ಇಂದಿನ ಪ್ರಜೆಗಳು ಎಂಬಂತಾಗಬೇಕು ಎಂದು ಎಂ.ಚಂದ್ರಕಾಂತ್ ಅವರು ಹೇಳಿದರು. ಬಾಲ್ಯ ವಿವಾಹ, ಬಾಲಾಪರಾಧ ಪ್ರಕರಣಗಳನ್ನು ತಡೆಯಬೇಕು. ಸಮಾಜದ ಅಭಿವೃದ್ಧಿ ಅಥವಾ ರಾಷ್ಟ್ರದ ಅಭಿವೃದ್ಧಿ ಎಂದರೆ ಎಲ್ಲರೂ ಒಳಗೊಳ್ಳುವ, ಎಲ್ಲರೂ ಅಭಿವೃದ್ಧಿಯಾಗುವ ಮನೋಭಾವ ಬರಬೇಕು. ಹಾಗಾದಾಗ ಮಾತ್ರ ಸಮಾಜದ ಅಭಿವೃದ್ಧಿ ಕಾಣಬಹುದು ಎಂದು ಎಂ.ಚಂದ್ರಕಾಂತ್ ಅವರು ವಿವರಿಸಿದರು. ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯ ಉಪ ನಿರ್ದೇಶಕರಾದ ರಂಗಧಾಮಪ್ಪ ಅವರು ಮಾತನಾಡಿ ಮಕ್ಕಳಿಗೆ ಯಾವುದೇ ರೀತಿಯಲ್ಲಿ ತೊಂದರೆಯಾಗದಂತೆ ವಿಶೇಷ ಆಸಕ್ತಿ ವಹಿಸುವುದು ಅತೀಮುಖ್ಯ. ಮಕ್ಕಳಿಗೆ ನೋವಾಗದಂತೆ ನಡೆದುಕೊಳ್ಳುವುದು ಅತ್ಯವಶ್ಯಕವಾಗಿದೆ. ಮಕ್ಕಳಿಗೆ ಒಳ್ಳೆಯ ಮಾರ್ಗದರ್ಶನ ನೀಡಿದಲ್ಲಿ ಭವಿಷ್ಯದಲ್ಲಿ ಒಳ್ಳೆಯ ಪ್ರಜೆಗಳಾಗಿ ರೂಪುಗೊಳ್ಳುತ್ತಾರೆ ಎಂದರು. ಜಿಲ್ಲಾ ಉಪ ಯೋಜನಾ ಸಮನ್ವಯಾಧಿಕಾರಿ ಸೌಮ್ಯ ಪೊನ್ನಪ್ಪ, ಎಂ.ಕೃಷ್ಣಪ್ಪ, ಶಿಕ್ಷಣಾಧಿಕಾರಿ ಎಂ.ಮಹಾದೇವಸ್ವಾಮಿ, ವಿಷಯ ಪರಿವೀಕ್ಷಕರಾದ ಬಿಂಧು, ಪೊಲೀಸ್ ಇಲಾಖೆಯ ಸುಮತಿ ಅವರು ಮಕ್ಕಳ ರಕ್ಷಣೆ ಮತ್ತು ಸುರಕ್ಷತೆ ಕುರಿತು ಮಾತನಾಡಿದರು.

Follow us Follow us
Share. WhatsApp Facebook Twitter Email Telegram Copy Link

Website design development company services in Mangalore

Forex Trading Teacher in India

Related Posts

*ಜಂಬೂರುವಿನಲ್ಲಿ ಶ್ರದ್ಧಾಭಕ್ತಿಯಿಂದ ಜರುಗಿದ ಶ್ರೀ ಮುತ್ತಪ್ಪನ್ ದೇವರ ವೆಳ್ಳಾಟಂ (ಕೋಲ)*

ಮೇ 3, 2026

*ನೆಲ್ಯಹುದೀಕೇರಿ ಗ್ರಾಮದಲ್ಲಿ ಕಾಡಾನೆಗಳ ಉಪಟಳ* 

ಮೇ 3, 2026

*ಕೊಡಗು ಜಿಲ್ಲಾ ಪ್ರಥಮ ಶರಣ ಸಾಹಿತ್ಯ ಸಮ್ಮೇಳನ : ಶಾಂತಮಲ್ಲಿಕಾರ್ಜುನ ಶ್ರೀಗಳಿಗೆ ಆಹ್ವಾನ*

ಮೇ 3, 2026

*ನೆಲ್ಯಹುದೀಕೇರಿ ಗ್ರಾಮದಲ್ಲಿ ಕಾಡಾನೆಗಳ ಉಪಟಳ* 

ಮೇ 3, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಮಡಿಕೇರಿ ಮೇ 3 NEWS DESK : ವಿರಾಜಪೇಟೆ ವ್ಯಾಪ್ತಿಯ ನೆಲ್ಯಹುದಿಕೇರಿ ಭಾಗದಲ್ಲಿ ಕಾಡಾನೆಗಳ ಉಪಟಳ ಮಿತಿ ಮೀರಿದೆ. ತೋಟಗಳಿಗೆ…

*ಕೊಡಗು ಜಿಲ್ಲಾ ಪ್ರಥಮ ಶರಣ ಸಾಹಿತ್ಯ ಸಮ್ಮೇಳನ : ಶಾಂತಮಲ್ಲಿಕಾರ್ಜುನ ಶ್ರೀಗಳಿಗೆ ಆಹ್ವಾನ*

ಮೇ 3, 2026

*ಬೆನೆಡಿಕ್ಟ್ ಆರ್ ಸಲ್ಡಾನ ಅವರಿಗೆ ಬೀಳ್ಕೊಡುಗೆ*

ಮೇ 3, 2026

*ವಿರಾಜಪೇಟೆ ಕಾವೇರಿ ಕಾಲೇಜಿನ ಪದವಿ ವಿಭಾಗದ ನೂತನ ಪ್ರಾಂಶುಪಾಲರಾಗಿ ಡಾ.ಕುಪ್ಪಂಡ ವೀಣಾ ಅಧಿಕಾರ ಸ್ವೀಕಾರ*

ಮೇ 3, 2026

*ಸರ್ಕಾರ ಗ್ರಾ.ಪಂ ಅಭಿವೃದ್ಧಿಗೆ ನೀಡಿರುವ ಅಧಿಕಾರ ಚಲಾಯಿಸಿ : ಡಿ.ಆರ್.ಪಾಟೀಲ*

ಮೇ 3, 2026

*ಮೇ 5 ರಂದು ಕನ್ನಡ ಸಾಹಿತ್ಯ ಪರಿಷತ್ತಿನ 112ನೇ ಸಂಸ್ಥಾಪನಾ ದಿನಾಚರಣೆ*

ಮೇ 3, 2026

*ಮೇ 16 ಮತ್ತು 17 ರಂದು ಮಡಿಕೇರಿಯಲ್ಲಿ ಕುಲಾಲ-ಕುಂಬಾರ ಬಾಂಧವರ ಕ್ರೀಡೋತ್ಸವ ಮತ್ತು ಸಮ್ಮಿಲನ*

ಮೇ 3, 2026

*ಗೌಡ ಕುಟುಂಬಗಳ “ಕುಟುಂಬ-2026” ಪಂದ್ಯಾವಳಿ ಆರಂಭ*

ಮೇ 3, 2026

*ಕೊಡಗು ಬಂಟರ ಭವನ ನಿರ್ಮಾಣಕ್ಕೆ ಶಂಕುಸ್ಥಾಪನೆ : ಸಮುದಾಯ ಬಾಂಧವರ ಒಗ್ಗಟ್ಟಿಗೆ ಗಣ್ಯರ ಕರೆ*

ಮೇ 3, 2026

*ಹಾಕಿ ಕ್ರೀಡೆಗೆ ಕೇಂದ್ರ ಸರಕಾರದಿಂದ ಪ್ರೋತ್ಸಾಹ, ಇದು ಕೊಡುಗೆಯಲ್ಲ, ಸರಕಾರದ ಜವಾಬ್ದಾರಿ : ಕೇಂದ್ರ ಸಚಿವ ಮನ್ ಸುಖ್ ಮಾಂಡವಿಯಾ ಭರವಸೆ*

ಮೇ 2, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.

Ad Blocker Enabled!
Ad Blocker Enabled!
Our website is made possible by displaying online advertisements to our visitors. Please support us by disabling your Ad Blocker.