Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಕುಶಾಲನಗರ ಪಿ.ಎಂ.ಶ್ರೀ ಶಾಲಾ ಮಕ್ಕಳಿಂದ ಪರಿಸರ ಸ್ನೇಹಿ ಗಣೇಶೋತ್ಸವ ಜಾಗೃತಿ; ಪರಿಸರ ಪೂರಕ ಗಣೇಶೋತ್ಸವ ಆಚರಣೆಗೆ ಟಿ.ಜಿ. ಪ್ರೇಮಕುಮಾರ್ ಮನವಿ; ಪಿ.ಓ.ಪಿ., ರಾಸಾಯನಿಕ ಬಣ್ಣದ ಗಣೇಶ ಮೂರ್ತಿಗಳನ್ನು ತ್ಯಜಿಸಲು ಕರೆ*
  • *ಮಡಿಕೇರಿ ದಸರಾ ಶೋಭಾಯಾತ್ರೆಗೆ ದಿನಾಂಕ ನಿಗದಿ : ಅ.20ರಂದು ದಶಮಂಟಪಗಳ ಮೆರವಣಿಗೆ*
  • *ಗೌರಿ–ಗಣೇಶ ಹಬ್ಬ: 2,400 ವಿಶೇಷ ಬಸ್‌ಗಳ ವ್ಯವಸ್ಥೆ*
  • *ಗೌರಿ ಗಣೇಶೋತ್ಸವ : ಕಾನೂನು ಪಾಲನೆಗೆ ಆದ್ಯತೆ ನೀಡಿ : ಎಸ್‌ಪಿ ಬಿಂದುಮಣಿ ಮನವಿ*
  • *ಇಂಡಿಯಾ ಸ್ಕಿಲ್ : ಹೆಸರು ನೋಂದಣಿಗೆ ಅವಕಾಶ*
  • *ಬೆಳ್ಳುಮಾಡು ಶ್ರೀ ಮಾದೇರಪ್ಪ ದೇವಾಲಯದ ಜೀರ್ಣೋದ್ಧಾರಕ್ಕೆ ರೂ.3 ಲಕ್ಷ ಅನುದಾನ*
  • *ಸೆ.14 ರಂದು ಇತಿಹಾಸ ಪ್ರಸಿದ್ದ ಶ್ರೀಕ್ಷೇತ್ರ ಹೊನ್ನಮ್ಮನ ಕೆರೆಗೆ ಬಾಗಿನ ಅರ್ಪಣೆ*
  • *ಸೆ.15 ರಂದು ಅಂತರರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ : ಅಗತ್ಯ ಸಿದ್ಧತೆಗೆ ಹೆಚ್ಚುವರಿ ಜಿಲ್ಲಾಧಿಕಾರಿ ಸಹನಾ ಎಸ್.ಹಾದಿಮನಿ ಸೂಚನೆ*
  • *ಸೆ.19 ರಂದು ಕೊಡಗು ಮಹಿಳಾ ಸಹಕಾರ ಸಂಘದ 86ನೇ ವಾರ್ಷಿಕ ಮಹಾಸಭೆ*
  • *ಮಡಿಕೇರಿ ನಗರ ವ್ಯಾಪ್ತಿಯಲ್ಲಿ ಬಾಲಕಾರ್ಮಿಕ ತಪಾಸಣೆ : ಕಾನೂನು ಅರಿವು*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*ಗಂಗಾ ಆರತಿಯ ಮಾದರಿಯಲ್ಲಿ ಜೀವನದಿ ಕಾವೇರಿಗೆ ಕೊಡಗಿನಲ್ಲೇ ಆರತಿಯಾಗಲಿ*
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

*ಗಂಗಾ ಆರತಿಯ ಮಾದರಿಯಲ್ಲಿ ಜೀವನದಿ ಕಾವೇರಿಗೆ ಕೊಡಗಿನಲ್ಲೇ ಆರತಿಯಾಗಲಿ*

ಜುಲೈ 26, 20242 Mins ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link

ಮಡಿಕೇರಿ ಜು.26 NEWS DESK : ವಾರಣಾಸಿಯ ಗಂಗಾ ಆರತಿಯ ಮಾದರಿಯಲ್ಲಿ ಜೀವನದಿ ಕಾವೇರಿಗೆ ಆರತಿ ಬೆಳಗುವ ಕಾರ್ಯಕ್ರಮ ಮೂಲ ಕಾವೇರಿಯ ನಾಡು ಕೊಡಗಿನಲ್ಲೆ ಆಯೋಜಿಸುವಂತೆ ಕಾವೇರಿ ರಿವರ್ ಟ್ರಸ್ಟ್ ಮತ್ತು ಕಾವೇರಿ ಮಹಾ ಆರತಿ ಬಳಗ ಸರ್ಕಾರವನ್ನು ಆಗ್ರಹಿಸಿದೆ.
ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಕಾವೇರಿ ರಿವರ್ ಸೇವಾ ಟ್ರಸ್ಟ್ ಅಧ್ಯಕ್ಷ ಎಂ.ಎನ್.ಚ0ದ್ರಮೋಹನ್ ಅವರು, ರಾಜ್ಯದ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ಇತ್ತೀಚೆಗೆ ಕಾವೇರಿ ಆರತಿ ಕಾರ್ಯಕ್ರಮವನ್ನು ಆಯೋಜಿಸಲು ಉದ್ದೇಶಿಸಿರುವುದು ಅತ್ಯಂತ ಶ್ಲಾಘನೀಯ ವಿಚಾರ. ಇಂತಹ ಮಹತ್ವದ ಕಾರ್ಯವನ್ನು ಬೇರೆಲ್ಲೋ ನಡೆಸುವುದಕ್ಕಿಂತ ಕಾವೇರಿಯ ನಾಡು ಕೊಡಗಿನಲ್ಲಿ ನಡೆಸಿದಲ್ಲಿ ಅದಕ್ಕೊಂದು ಐತಿಹಾಸಿಕ, ಧಾರ್ಮಿಕ ಹಿನ್ನೆಲೆ ಇರುತ್ತದೆ ಎಂದರು.
ಕಾವೇರಿ ಆರತಿ ಕಾರ್ಯಕ್ರಮವನ್ನು ಕಾವೇರಿಯ ಉಗಮ ಸ್ಥಾನವಾದ ತಲಕಾವೇರಿ, ಸಂಗಮ ಕ್ಷೇತ್ರವಾದ ಭಾಗಮಂಡಲ, ನದಿ ಪಾತ್ರದ ಪವಿತ್ರ ಸ್ಥಳವಾದ ಕಣಿವೆ, ಬಲಮುರಿ, ಗುಹ್ಯ ಕ್ಷೇತ್ರಗಳಲ್ಲಿಯೂ ನಡೆಸಬಹುದಾಗಿದೆ. ಇಂತಹ ಸ್ಥಳಗಳಲ್ಲಿ ಕಾವೇರಿ ಆರತಿಯನ್ನು ನಡೆಸಿದಲ್ಲಿ ಧಾರ್ಮಿಕ ಮತ್ತು ಸಾಂಸ್ಕೃತಿಕ ಮೌಲ್ಯಗಳನ್ನು ಉತ್ತೇಜಿಸಿದಂತೆ ಆಗುತ್ತದಲ್ಲದೆ, ಮೇಲ್ಪಂಕ್ತಿಯನ್ನು ಹಾಕಿಕೊಟ್ಟಂತಾಗುತ್ತದೆ ಎಂದು ತಿಳಿಸಿದರು.
ವಾರಣಾಸಿಯಲ್ಲಿ ಆಯೋಜಿತವಾಗುವ ಗಂಗಾ ಆರತಿಯಲ್ಲಿ ಸಹಸ್ರಾರು ಸಂಖ್ಯೆಯಲ್ಲಿ ಭಕ್ತಾದಿಗಳೊಂದಿಗೆ ಪ್ರವಾಸಿಗಳು ಪಾಲ್ಗೊಳ್ಳುತ್ತಿರಬಹುದು. ಆದರೆ, ಆ ಸ್ಥಳದ ಇತಿಹಾಸ ಮತ್ತು ಪೌರಾಣಿಕ ಹಿನ್ನೆಲೆಗಳು ಗಂಗಾ ಆರತಿಗೆ ವಿಶೇಷವಾದ ಸ್ಥಾನವನ್ನು ಕಲ್ಪಿಸಿದೆ. ಇದೇ ರೀತಿಯಲ್ಲಿ ಕಾವೇರಿಯ ನಾಡಿನಲ್ಲಿ ಕಾವೇರಿ ಆರತಿ ಕಾರ್ಯಕ್ರಮ ನಡೆಸುವುದು ಅತ್ಯಂತ ಸೂಕ್ತ ಮತ್ತು ಸಮಂಜಸವಾಗುತ್ತದೆ ಎಂದರು.
ಕಾವೇರಿ ಆರತಿಯನ್ನು ಕೊಡಗಿನಲ್ಲಿ ಆಯೋಜಿಸುವುದಕ್ಕೆ ಸಂಬ0ಧಿಸಿದ0ತೆ ಜಿಲ್ಲೆಯ ಇಬ್ಬರು ಶಾಸಕರು, ಎಂಎಲ್‌ಸಿ ಅವರೊಂದಿಗೆ ಸಮಾಲೋಚಿಸಿ ಮುಖ್ಯ ಮಂತ್ರಿಗಳು ಮತ್ತು ಉಪ ಮುಖ್ಯಮಂತ್ರಿಗಳನ್ನು ಸಂಪರ್ಕಿಸಿ, ಕೊಡಗಿನಲ್ಲಿ ಕಾವೇರಿ ಆರತಿ ಆಯೋಜನೆಗೆ ಅವಕಾಶ ಕಲ್ಪಿಸುವಂತೆ ಮನವಿ ಮಾಡಲಾಗುವುದೆಂದು ಚಂದ್ರಮೋಹನ್ ತಿಳಿಸಿದರು.
::: ವಿವಿಧೆಡೆ ಆರತಿ :::
ಕಾವೇರಿ ಮಹಾ ಆರತಿ ಬಳಗದಿಂದ ಕಳೆದ 14 ವರ್ಷಗಳ ಅವಧಿಯಲ್ಲಿ 161 ಬಾರಿ ಕಾವೇರಿಗೆ ಮಹಾ ಆರತಿಯನ್ನು ಬೆಳಗಲಾಗಿದೆ. ಆ ಮೂಲಕ ಕಾವೇರಿಯ ಸಂರಕ್ಷಣೆೆಯ ಮಹತ್ವ, ನದಿ ನೀರಿನ ಸ್ವಚ್ಛತೆಯ ಸಂದೇಶವನ್ನು ಪಸರಿಸುವ ಪ್ರಯತ್ನಗಳನ್ನು ನಡೆಸಲಾಗಿದೆ. ಕಳೆದ ಎರಡು ತಿಂಗಳಿನಿ0ದ ಭಾಗಮಂಡಲದಿ0ದ ರಾಮನಾಥಪುರದವರೆಗೆ 20 ಕಡೆಗಳಲ್ಲಿ ಏಕ ಕಾಲಕ್ಕೆ ಕಾವೇರಿಗೆ ಮಹಾ ಆರತಿಯನ್ನು ಬೆಳಗುವ ಕಾರ್ಯಕ್ರಮ ನಡೆಯುತ್ತಿದೆಯೆಂದು ತಿಳಿಸಿ, ನಮ್ಮ ಈ ಪ್ರಯತ್ನಕ್ಕೆ ಪೂರಕವಾಗಿ ಧರ್ಮಸ್ಥಳದ ಹೆಗಡೆಯವರು ಶ್ರೀ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಮೂಲಕ ಕಾವೇರಿ ಮಹಾ ಆರತಿಯ ತಂಡಗಳನ್ನು ರಚಿಸಲು ಮುಂದಾಗಿದ್ದು, ಈಗಾಗಲೆ 25 ತಂಡಗಳ ರಚನೆಯಾಗಿರುವುದಾಗಿ ಮಾಹಿತಿಯನ್ನಿತ್ತರು.
ಕಾವೇರಿ ರಿವರ್ ಸೇವಾ ಟ್ರಸ್ಟ್ನ ಕಾರ್ಯದರ್ಶಿಗಳಾದ ಮಂಡೇಪ0ಡ ಬೋಸ್ ಮಂದಣ್ಣ ಮಾತನಾಡಿ, ರಾಜ್ಯ ಸರ್ಕಾರ ಕಾವೇರಿ ಆರತಿ ಕಾರ್ಯಕ್ರಮವನ್ನು ಕೊಡಗಿನಲ್ಲೆ ನಡೆಸಬೇಕೆಂದು ಮನವಿ ಮಾಡಿದರು.
ಕಾವೇರಿ ಮಹಾ ಆರತಿ ಬಳಗದ ಸಂಚಾಲಕಿ ವನಿತಾ ಚಂದ್ರಮೋಹನ್ ಮಾತನಾಡಿ, ಕೊಡಗಿನಲ್ಲಿ ಕಾವೇರಿ ಆರತಿ ಕಾರ್ಯಕ್ರಮ ಆಯೋಜಿಸಿದಲ್ಲಿ ಧಾರ್ಮಿಕ ಕ್ಷೇತ್ರಗಳ ಅಭಿವೃದ್ಧಿ, ಸಂರಕ್ಷಣೆಯೊ0ದಿಗೆ ಪ್ರವಾಸೋದ್ಯಮಕ್ಕೂ ಒತ್ತು ನೀಡಿದಂತಾಗುತ್ತದೆ0ದು ತಿಳಿಸಿದರು.
ಸುದ್ದಿಗೋಷ್ಠಿಯಲ್ಲಿ ಕುಶಾಲನಗರ ಗೌಡ ಸಮಾಜದ ಅಧ್ಯಕ್ಷರಾದ ಕೂರನ ಪ್ರಕಾಶ್ ಹಾಗೂ ಕಾವೇರಿ ರಿವರ್ ಸೇವಾ ಟ್ರಸ್ಟ್ ಉಪಾಧ್ಯಕ್ಷ ಡಿ.ಆರ್.ಸೋಮಶೇಖರ್ ಉಪಸ್ಥಿತರಿದ್ದರು.

Follow us Follow us
Share. WhatsApp Facebook Twitter Email Telegram Copy Link

Website design development company services in Mangalore

Forex Trading Teacher in India

Related Posts

*ಕುಶಾಲನಗರ ಪಿ.ಎಂ.ಶ್ರೀ ಶಾಲಾ ಮಕ್ಕಳಿಂದ ಪರಿಸರ ಸ್ನೇಹಿ ಗಣೇಶೋತ್ಸವ ಜಾಗೃತಿ; ಪರಿಸರ ಪೂರಕ ಗಣೇಶೋತ್ಸವ ಆಚರಣೆಗೆ ಟಿ.ಜಿ. ಪ್ರೇಮಕುಮಾರ್ ಮನವಿ; ಪಿ.ಓ.ಪಿ., ರಾಸಾಯನಿಕ ಬಣ್ಣದ ಗಣೇಶ ಮೂರ್ತಿಗಳನ್ನು ತ್ಯಜಿಸಲು ಕರೆ*

ಸೆಪ್ಟೆಂಬರ್ 13, 2026

*ಮಡಿಕೇರಿ ದಸರಾ ಶೋಭಾಯಾತ್ರೆಗೆ ದಿನಾಂಕ ನಿಗದಿ : ಅ.20ರಂದು ದಶಮಂಟಪಗಳ ಮೆರವಣಿಗೆ*

ಸೆಪ್ಟೆಂಬರ್ 13, 2026

*ಗೌರಿ–ಗಣೇಶ ಹಬ್ಬ: 2,400 ವಿಶೇಷ ಬಸ್‌ಗಳ ವ್ಯವಸ್ಥೆ*

ಸೆಪ್ಟೆಂಬರ್ 13, 2026

*ಮಡಿಕೇರಿ ದಸರಾ ಶೋಭಾಯಾತ್ರೆಗೆ ದಿನಾಂಕ ನಿಗದಿ : ಅ.20ರಂದು ದಶಮಂಟಪಗಳ ಮೆರವಣಿಗೆ*

ಸೆಪ್ಟೆಂಬರ್ 13, 2026 ಇತ್ತೀಚಿನ ಸುದ್ದಿಗಳು ಕರ್ನಾಟಕ ಕೊಡಗು ಜಿಲ್ಲೆ

ಮಡಿಕೇರಿ NEWS DESK ಸೆ.13 : ಮಡಿಕೇರಿ ದಸರಾ ಜನೋತ್ಸವದ ಪ್ರಮುಖ ಆಕರ್ಷಣೆಯಾದ ದಶಮಂಟಪಗಳ ಶೋಭಾಯಾತ್ರೆಯನ್ನು ಅ.20ರಂದು ನಡೆಸಲು ದಸರಾ…

*ಗೌರಿ–ಗಣೇಶ ಹಬ್ಬ: 2,400 ವಿಶೇಷ ಬಸ್‌ಗಳ ವ್ಯವಸ್ಥೆ*

ಸೆಪ್ಟೆಂಬರ್ 13, 2026

*ಗೌರಿ ಗಣೇಶೋತ್ಸವ : ಕಾನೂನು ಪಾಲನೆಗೆ ಆದ್ಯತೆ ನೀಡಿ : ಎಸ್‌ಪಿ ಬಿಂದುಮಣಿ ಮನವಿ*

ಸೆಪ್ಟೆಂಬರ್ 13, 2026

*ಇಂಡಿಯಾ ಸ್ಕಿಲ್ : ಹೆಸರು ನೋಂದಣಿಗೆ ಅವಕಾಶ*

ಸೆಪ್ಟೆಂಬರ್ 12, 2026

*ಬೆಳ್ಳುಮಾಡು ಶ್ರೀ ಮಾದೇರಪ್ಪ ದೇವಾಲಯದ ಜೀರ್ಣೋದ್ಧಾರಕ್ಕೆ ರೂ.3 ಲಕ್ಷ ಅನುದಾನ*

ಸೆಪ್ಟೆಂಬರ್ 12, 2026

*ಸೆ.14 ರಂದು ಇತಿಹಾಸ ಪ್ರಸಿದ್ದ ಶ್ರೀಕ್ಷೇತ್ರ ಹೊನ್ನಮ್ಮನ ಕೆರೆಗೆ ಬಾಗಿನ ಅರ್ಪಣೆ*

ಸೆಪ್ಟೆಂಬರ್ 12, 2026

*ಸೆ.15 ರಂದು ಅಂತರರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ : ಅಗತ್ಯ ಸಿದ್ಧತೆಗೆ ಹೆಚ್ಚುವರಿ ಜಿಲ್ಲಾಧಿಕಾರಿ ಸಹನಾ ಎಸ್.ಹಾದಿಮನಿ ಸೂಚನೆ*

ಸೆಪ್ಟೆಂಬರ್ 12, 2026

*ಸೆ.19 ರಂದು ಕೊಡಗು ಮಹಿಳಾ ಸಹಕಾರ ಸಂಘದ 86ನೇ ವಾರ್ಷಿಕ ಮಹಾಸಭೆ*

ಸೆಪ್ಟೆಂಬರ್ 12, 2026

*ಮಡಿಕೇರಿ ನಗರ ವ್ಯಾಪ್ತಿಯಲ್ಲಿ ಬಾಲಕಾರ್ಮಿಕ ತಪಾಸಣೆ : ಕಾನೂನು ಅರಿವು*

ಸೆಪ್ಟೆಂಬರ್ 12, 2026

*ಅರಣ್ಯ ಪ್ರದೇಶಗಳಿಗೆ ಮಾತ್ರ ಸೀಮಿತಗೊಳಿಸಿ ವರದಿ ಜಾರಿಗೆ ಪ್ರಸ್ತಾವನೆ ಸಲ್ಲಿಸಲಿ : ಸೇವ್ ಕೊಡಗು ಸಂಘಟನೆ ಒತ್ತಾಯ*

ಸೆಪ್ಟೆಂಬರ್ 12, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.