
ಮಡಿಕೇರಿ ಜು.27 NEWS DESK : ರಸ್ತೆ ಬದಿಯಲ್ಲಿ ನಿಲ್ಲಿಸಿದ ಆಟೋ ಮೇಲೆ ವಿದ್ಯುತ್ ಕಂಬ ಬಿದ್ದು ಹಾನಿಯಾಗಿರುವ ಘಟನೆ ಸೋಮವಾರಪೇಟೆ ತಾಲೂಕಿನ ಗೌಡಳ್ಳಿ ಗ್ರಾಮದಲ್ಲಿ ನಡೆದಿದೆ.
ಜಯಪ್ಪ ಎಂಬುವರ ಆಟೋದ ಮೇಲೆ ವಿದ್ಯುತ್ ಕಂಬ ಬಿದ್ದಿದ್ದು, ಆಟೋ ಸಂಪೂರ್ಣ ಜಖಂ ಗೊಂಡಿದೆ. ವಿದ್ಯುತ್ ಇಲಾಖೆ ಆಟೋ ಚಾಲಕನಿಗೆ ಪರಿಹಾರ ನೀಡುವಂತೆ ಕರ್ನಾಟಕ ರಕ್ಷಣಾ ವೇದಿಕೆ ಒತ್ತಾಯಿಸಿದೆ.








