
ಸಿದ್ದಾಪುರ ಜು.27 NEWS DESK : ಮಾಧ್ಯಮ ಕ್ಷೇತ್ರದ ಸಾಧನೆಗಾಗಿ ಹಿರಿಯ ಪತ್ರಕರ್ತ ಅಂಚೆಮನೆ ಸುಧಿ ಕುಮಾರ್ ಅವರು ಕಾವೇರಿ ರತ್ನ ಪ್ರಶಸ್ತಿಗೆ ಭಾಜನರಾಗಿದ್ದಾರೆ.
ಕರ್ನಾಟಕ ಕಾರ್ಯನಿರತ ಪತ್ರಕರ್ತರ ಧ್ವನಿ ಜಿಲ್ಲಾ ಘಟಕ, ಕುಶಾಲನಗರ ಪ್ರೆಸ್ ಕ್ಲಬ್ ಟ್ರಸ್ಟ್, ಸಂಗಮ ಟಿ.ವಿ ಹಾಗೂ ವಂಶಿ ನ್ಯೂಸ್ ಸಹಯೋಗದೊಂದಿಗೆ ಜು.31ರಂದು ಕುಶಾಲನಗರ ಗಾಯಿತ್ರಿ ಕಲ್ಯಾಣ ಮಂಟಪ ಸಭಾಂಗಣದಲ್ಲಿ ನಡೆಯುವ ಪತ್ರಿಕಾ ದಿನಾಚರಣೆಯಲ್ಲಿ ಸುಧಿ ಕುಮಾರ್ ಅವರಿಗೆ ಕಾವೇರಿ ರತ್ನ ಪ್ರಶಸ್ತಿ ನೀಡಿ ಗೌರವಿಸಲಾಗುವುದು. ಸಿದ್ದಾಪುರ ಸಮೀಪದ ಅಭ್ಯತ್ ಮಂಗಲ ಗ್ರಾಮದ ಅಂಚೆಮನೆ ದಿ.ನಂಜುಂಡ ಹಾಗೂ ಜಯಮ್ಮ ದಂಪತಿಗಳ ಪುತ್ರ ಅಂಚೆಮನೆ ಸುಧಿ ಕುಮಾರ್ ಅವರು ಕಳೆದ 25 ವರ್ಷಗಳಿಂದ ವಿವಿಧ ಪತ್ರಿಕೆಗಳಲ್ಲಿ ಸೇವೆ ಸಲ್ಲಿಸಿ ರಾಜ್ಯ ಹಾಗೂ ಜಿಲ್ಲಾ ಮಟ್ಟದ ಹಲವು ಪ್ರಶಸ್ತಿಗಳನ್ನು ಪಡೆದಿದ್ದಾರೆ. 







