Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಜಂಬೂರುವಿನಲ್ಲಿ ಶ್ರದ್ಧಾಭಕ್ತಿಯಿಂದ ಜರುಗಿದ ಶ್ರೀ ಮುತ್ತಪ್ಪನ್ ದೇವರ ವೆಳ್ಳಾಟಂ (ಕೋಲ)*
  • *ನೆಲ್ಯಹುದೀಕೇರಿ ಗ್ರಾಮದಲ್ಲಿ ಕಾಡಾನೆಗಳ ಉಪಟಳ* 
  • *ಕೊಡಗು ಜಿಲ್ಲಾ ಪ್ರಥಮ ಶರಣ ಸಾಹಿತ್ಯ ಸಮ್ಮೇಳನ : ಶಾಂತಮಲ್ಲಿಕಾರ್ಜುನ ಶ್ರೀಗಳಿಗೆ ಆಹ್ವಾನ*
  • *ಬೆನೆಡಿಕ್ಟ್ ಆರ್ ಸಲ್ಡಾನ ಅವರಿಗೆ ಬೀಳ್ಕೊಡುಗೆ*
  • *ವಿರಾಜಪೇಟೆ ಕಾವೇರಿ ಕಾಲೇಜಿನ ಪದವಿ ವಿಭಾಗದ ನೂತನ ಪ್ರಾಂಶುಪಾಲರಾಗಿ ಡಾ.ಕುಪ್ಪಂಡ ವೀಣಾ ಅಧಿಕಾರ ಸ್ವೀಕಾರ*
  • *ಸರ್ಕಾರ ಗ್ರಾ.ಪಂ ಅಭಿವೃದ್ಧಿಗೆ ನೀಡಿರುವ ಅಧಿಕಾರ ಚಲಾಯಿಸಿ : ಡಿ.ಆರ್.ಪಾಟೀಲ*
  • *ಮೇ 5 ರಂದು ಕನ್ನಡ ಸಾಹಿತ್ಯ ಪರಿಷತ್ತಿನ 112ನೇ ಸಂಸ್ಥಾಪನಾ ದಿನಾಚರಣೆ*
  • *ಮೇ 16 ಮತ್ತು 17 ರಂದು ಮಡಿಕೇರಿಯಲ್ಲಿ ಕುಲಾಲ-ಕುಂಬಾರ ಬಾಂಧವರ ಕ್ರೀಡೋತ್ಸವ ಮತ್ತು ಸಮ್ಮಿಲನ*
  • *ಗೌಡ ಕುಟುಂಬಗಳ “ಕುಟುಂಬ-2026” ಪಂದ್ಯಾವಳಿ ಆರಂಭ*
  • *ಕೊಡಗು ಬಂಟರ ಭವನ ನಿರ್ಮಾಣಕ್ಕೆ ಶಂಕುಸ್ಥಾಪನೆ : ಸಮುದಾಯ ಬಾಂಧವರ ಒಗ್ಗಟ್ಟಿಗೆ ಗಣ್ಯರ ಕರೆ*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*ಆರೋಗ್ಯ ಸೌಲಭ್ಯಗಳು ನೂತನ ಕಟ್ಟಡಕ್ಕೆ ಸ್ಥಳಾಂತರ : ರೋಗಿಗಳ ಆರೋಗ್ಯ ತಪಾಸಣೆ ಮಾಡಿದ ಶಾಸಕ ಡಾ.ಮಂತರ್ ಗೌಡ*
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

*ಆರೋಗ್ಯ ಸೌಲಭ್ಯಗಳು ನೂತನ ಕಟ್ಟಡಕ್ಕೆ ಸ್ಥಳಾಂತರ : ರೋಗಿಗಳ ಆರೋಗ್ಯ ತಪಾಸಣೆ ಮಾಡಿದ ಶಾಸಕ ಡಾ.ಮಂತರ್ ಗೌಡ*

ಜುಲೈ 28, 20242 Mins ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link

ಮಡಿಕೇರಿ ಜು.28 NEWS DESK : ನಗರದ ಕೊಡಗು ವೈದ್ಯಕೀಯ ವಿಜ್ಞಾನ ಸಂಸ್ಥೆ ಆಸ್ಪತ್ರೆಯ ಹೊರ ರೋಗಿಗಳ ವಿಭಾಗದ ಆರೋಗ್ಯ ಸೌಲಭ್ಯಗಳನ್ನು ಆಸ್ಪತ್ರೆಯ ಹಳೆಯ ಕಟ್ಟಡದಿಂದ ನೂತನ ಕಟ್ಟಡಕ್ಕೆ ಭಾನುವಾರ ಸ್ಥಳಾಂತರಿಸಲಾಯಿತು.
ಮಡಿಕೇರಿ ವಿಧಾನಸಭಾ ಕ್ಷೇತ್ರದ ಶಾಸಕ ಡಾ|| ಮಂತರ್‌ಗೌಡ, ವಿಧಾನ ಪರಿಷತ್ ಸದಸ್ಯ ಎಂ.ಪಿ.ಸುಜಾ ಕುಶಾಲಪ್ಪ ಮತ್ತಿತರರು ಪೂಜಾ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಹೊರ ರೋಗಿಗಳ ವಿಭಾಗದ ಸ್ಥಳಾಂತರಕ್ಕೆ ಚಾಲನೆ ನೀಡಿದರು. ನೂತನ ಆಸ್ಪತ್ರೆ ಕಟ್ಟಡ ಪೂರ್ಣಗೊಳಿಸಲು ಸರ್ಕಾರದಿಂದ 60 ಕೋಟಿ ರೂ. ಬಿಡುಗಡೆಯಾಗಲಿದೆ ಎಂದು ಮಡಿಕೇರಿ ಶಾಸಕರು ಇದೇ ಸಂದರ್ಭ ತಿಳಿಸಿದರು. ನೂತನ ಕಟ್ಟಡಕ್ಕೆ ಸ್ಥಳಾಂತರವಾಗಿರುವ ಹೊರ ರೋಗಿಗಳ ವಿಭಾಗದ ಜನರಲ್ ಮೆಡಿಸನ್, ಕಣ್ಣು, ಕಿವಿ-ಮೂಗು-ಗಂಟಲು, ಕೀಲು ಮತ್ತು ಮೂಳೆ, ಮಾನಸಿಕ ರೋಗ, ಶ್ವಾಸಕೋಶ ಮತ್ತು ಚರ್ಮ ರೋಗ ವಿಭಾಗಗಳಿಗೆ ಶಾಸಕ ಡಾ|| ಮಂತರ್‌ಗೌಡ ಹಾಗೂ ವಿಧಾನ ಪರಿಷತ್ ಸದಸ್ಯ ಎಂ.ಪಿ.ಸುಜಾ ಕುಶಾಲಪ್ಪ ಅವರು ಪ್ರತ್ಯೇಕವಾಗಿ ಭೇಟಿ ನೀಡಿ ವೀಕ್ಷಿಸಿದರು.
ಅಲ್ಲಿನ ‘ಡಿ’ ದರ್ಜೆ ನೌಕರರು, ಶೂಶ್ರುಷಕರು, ಸಿಬ್ಬಂದಿಗಳು, ವೈದ್ಯರ ಜೊತೆ ಸಮಲೋಚಿಸಿದ ಡಾ|| ಮಂತರ್‌ಗೌಡ ಹಾಗೂ ಎಂ.ಪಿ.ಸುಜಾ ಕುಶಾಲಪ್ಪ ಅವರು ಕೊಡಗು ವೈದ್ಯಕೀಯ ವಿಜ್ಞಾನ ಸಂಸ್ಥೆಗೆ ಒಳ್ಳೆಯ ಹೆಸರು ತರಬೇಕು, ಸ್ವಚ್ಚತೆಗೆ ಹೆಚ್ಚು ಒತ್ತು ನೀಡಬೇಕು, ರೋಗಿಗಳನ್ನು ಕುಟುಂಬದವರಂತೆ ಕಾಣಬೇಕು ಎಂದು ಸಲಹೆ ಮಾಡಿದರು.
ಕೊಡಗು ವೈದ್ಯಕೀಯ ವಿಜ್ಞಾನ ಸಂಸ್ಥೆಯ ಪ್ರತಿಯೊಬ್ಬರೂ ತಂಡವಾಗಿ ಕಾರ್ಯನಿರ್ವಹಿಸುವಲ್ಲಿ ಉತ್ತಮ ಹೆಸರು ಪಡೆಯಬಹುದು. ಅ ನಿಟ್ಟಿನಲ್ಲಿ ಎಲ್ಲರೂ ಶ್ರಮಿಸಬೇಕು ಎಂದರು. ಶಾಸಕ ಡಾ|| ಮಂತರ್‌ಗೌಡ ಅವರು ಸ್ಕ್ಯಾನಿಂಗ್ ಕೇಂದ್ರಕ್ಕೆ ಭೇಟಿ ನೀಡಿ ರೋಗಿಗಳ ಆರೋಗ್ಯ ವಿಚಾರಿಸಿದರು. ಸ್ವತಃ ವೈದ್ಯರಾದ ಡಾ|| ಮಂತರ್‌ಗೌಡ ಅವರು ಹೊರ ರೋಗಿಗಳ ಆರೋಗ್ಯ ತಪಾಸಣೆ ಮಾಡಿದ್ದು ವಿಶೇಷವಾಗಿತ್ತು. ನಂತರ ಸುದ್ದಿಗಾರರ ಜೊತೆ ಮಾತನಾಡಿದ ಡಾ|| ಮಂತರ್‌ಗೌಡ ಅವರು ಇತ್ತೀಚೆಗೆ ವೈದ್ಯಕೀಯ ಶಿಕ್ಷಣ ಸಚಿವರಾದ ಡಾ|| ಶರಣ ಪ್ರಕಾಶ ಪಾಟೀಲ ಅವರು ಕೊಡಗು ಜಿಲ್ಲೆಗೆ ಭೇಟಿ ನೀಡಿದ ಸಂದರ್ಭದಲ್ಲಿ ಒ.ಪಿ.ಡಿ ಅನ್ನು ನೂತನ ಕಟ್ಟಡಕ್ಕೆ ಸ್ಥಳಾಂತರಿಸಿರುವಂತೆ ನಿರ್ದೇಶನ ನೀಡಿದ್ದರು, ಅದರಂತೆ ಭಾನುವಾರ ಸ್ಥಳಾಂತರಿಸಲಾಗಿದೆ ಎಂದು ಹೇಳಿದರು.
ಕೊಡಗು ವೈದ್ಯಕೀಯ ವಿಜ್ಞಾನ ಸಂಸ್ಥೆಯು 300 ಹಾಸಿಗೆಯ ಆಸ್ಪತ್ರೆ ಒಳಗೊಂಡಿದೆ. ಈ ಕಟ್ಟಡದಲ್ಲಿ ಎರಡು ಮಹಡಿ ಪೂರ್ಣಗೊಳ್ಳಬೇಕಿದೆ, ಆ ನಿಟ್ಟಿನಲ್ಲಿ ಸರ್ಕಾರದಿಂದ 60 ಕೋಟಿ ರೂ. ಬಿಡುಗಡೆಯಾಗಲಿದ್ದು, ಒಳ್ಳೆಯ ಆಸ್ಪತ್ರೆ ನಿರ್ಮಾಣವಾಗಲಿದೆ ಎಂದು ಶಾಸಕರು ಹೇಳಿದರು. ಹೊಸ ಕಟ್ಟಡದಲ್ಲಿ ಈ ವರ್ಷವೇ ಹೃದ್ರೋಗ ವಿಭಾಗ ಆರಂಭವಾಗಲಿದೆ, ಈ ಸಂಬAಧ ನೂತನ ಕಟ್ಟಡದಲ್ಲಿ ಜಾಗ ಕಾಯ್ದಿರಿಸಲಾಗಿದ್ದು, ಎಲ್ಲಾ ರೀತಿಯ ಸಿದ್ಧತೆಗಳು ನಡೆದಿವೆ ಎಂದು ಶಾಸಕರಾದ ಡಾ.ಮಂತರ್ ಗೌಡ ಅವರು ವಿವರಿಸಿದರು. ಕೊಡಗು ವೈದ್ಯಕೀಯ ವಿಜ್ಞಾನ ಸಂಸ್ಥೆಯಲ್ಲಿ ತಜ್ಞ ವೈದ್ಯರಿದ್ದು ಎಲ್ಲಾ ರೀತಿಯ ಆರೋಗ್ಯ ಸೌಲಭ್ಯಗಳು ದೊರೆಯಲಿವೆ ಎಂದು ಶಾಸಕರು ತಿಳಿಸಿದರು. ಕೊಡಗು ವೈದ್ಯಕೀಯ ವಿಜ್ಞಾನ ಸಂಸ್ಥೆಯ ಡೀನ್ ಮತ್ತು ನಿರ್ದೇಶಕರಾದ ಡಾ|| ವಿಶಾಲ್ ಕುಮಾರ್, ಜಿಲ್ಲಾ ಸರ್ಜನ್ ಡಾ|| ನಂಜುಂಡಯ್ಯ ಸ್ಥಾನಿಕ ವೈದ್ಯಾಧೀಕಾರಿ ಡಾ|| ಸತೀಶ್, ಡಾ|| ರೂಪೇಶ್ ಗೋಪಾಲ್, ಮಡಿಕೇರಿ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಬಿ.ವೈ.ರಾಜೇಶ್ ಯಲ್ಲಪ್ಪ, ಸದಸ್ಯರುಗಳಾದ ಕಾನೆಹಿತ್ಲು ಮೊಣ್ಣಪ್ಪ, ಆರ್.ಪಿ.ಚಂದ್ರಶೇಖರ್, ಪ್ರಮುಖರಾದ ಚುಮ್ಮಿ ದೇವಯ್ಯ, ಗ್ರಾ.ಪಂ ಸದಸ್ಯ ಜಾನ್ಸನ್ ಪಿಂಟೋ, ನಗರಸಭಾ ಮಾಜಿ ಅಧ್ಯಕ್ಷೆ ಜುಲೇಕಾಬಿ, ಮಾಜಿ ಉಪಾಧ್ಯಕ್ಷೆ ಲೀಲಾ ಶೇಷಮ್ಮ ಮತ್ತಿತರರು ಇದ್ದರು.

Follow us Follow us
Share. WhatsApp Facebook Twitter Email Telegram Copy Link

Website design development company services in Mangalore

Forex Trading Teacher in India

Related Posts

*ಜಂಬೂರುವಿನಲ್ಲಿ ಶ್ರದ್ಧಾಭಕ್ತಿಯಿಂದ ಜರುಗಿದ ಶ್ರೀ ಮುತ್ತಪ್ಪನ್ ದೇವರ ವೆಳ್ಳಾಟಂ (ಕೋಲ)*

ಮೇ 3, 2026

*ನೆಲ್ಯಹುದೀಕೇರಿ ಗ್ರಾಮದಲ್ಲಿ ಕಾಡಾನೆಗಳ ಉಪಟಳ* 

ಮೇ 3, 2026

*ಕೊಡಗು ಜಿಲ್ಲಾ ಪ್ರಥಮ ಶರಣ ಸಾಹಿತ್ಯ ಸಮ್ಮೇಳನ : ಶಾಂತಮಲ್ಲಿಕಾರ್ಜುನ ಶ್ರೀಗಳಿಗೆ ಆಹ್ವಾನ*

ಮೇ 3, 2026

*ನೆಲ್ಯಹುದೀಕೇರಿ ಗ್ರಾಮದಲ್ಲಿ ಕಾಡಾನೆಗಳ ಉಪಟಳ* 

ಮೇ 3, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಮಡಿಕೇರಿ ಮೇ 3 NEWS DESK : ವಿರಾಜಪೇಟೆ ವ್ಯಾಪ್ತಿಯ ನೆಲ್ಯಹುದಿಕೇರಿ ಭಾಗದಲ್ಲಿ ಕಾಡಾನೆಗಳ ಉಪಟಳ ಮಿತಿ ಮೀರಿದೆ. ತೋಟಗಳಿಗೆ…

*ಕೊಡಗು ಜಿಲ್ಲಾ ಪ್ರಥಮ ಶರಣ ಸಾಹಿತ್ಯ ಸಮ್ಮೇಳನ : ಶಾಂತಮಲ್ಲಿಕಾರ್ಜುನ ಶ್ರೀಗಳಿಗೆ ಆಹ್ವಾನ*

ಮೇ 3, 2026

*ಬೆನೆಡಿಕ್ಟ್ ಆರ್ ಸಲ್ಡಾನ ಅವರಿಗೆ ಬೀಳ್ಕೊಡುಗೆ*

ಮೇ 3, 2026

*ವಿರಾಜಪೇಟೆ ಕಾವೇರಿ ಕಾಲೇಜಿನ ಪದವಿ ವಿಭಾಗದ ನೂತನ ಪ್ರಾಂಶುಪಾಲರಾಗಿ ಡಾ.ಕುಪ್ಪಂಡ ವೀಣಾ ಅಧಿಕಾರ ಸ್ವೀಕಾರ*

ಮೇ 3, 2026

*ಸರ್ಕಾರ ಗ್ರಾ.ಪಂ ಅಭಿವೃದ್ಧಿಗೆ ನೀಡಿರುವ ಅಧಿಕಾರ ಚಲಾಯಿಸಿ : ಡಿ.ಆರ್.ಪಾಟೀಲ*

ಮೇ 3, 2026

*ಮೇ 5 ರಂದು ಕನ್ನಡ ಸಾಹಿತ್ಯ ಪರಿಷತ್ತಿನ 112ನೇ ಸಂಸ್ಥಾಪನಾ ದಿನಾಚರಣೆ*

ಮೇ 3, 2026

*ಮೇ 16 ಮತ್ತು 17 ರಂದು ಮಡಿಕೇರಿಯಲ್ಲಿ ಕುಲಾಲ-ಕುಂಬಾರ ಬಾಂಧವರ ಕ್ರೀಡೋತ್ಸವ ಮತ್ತು ಸಮ್ಮಿಲನ*

ಮೇ 3, 2026

*ಗೌಡ ಕುಟುಂಬಗಳ “ಕುಟುಂಬ-2026” ಪಂದ್ಯಾವಳಿ ಆರಂಭ*

ಮೇ 3, 2026

*ಕೊಡಗು ಬಂಟರ ಭವನ ನಿರ್ಮಾಣಕ್ಕೆ ಶಂಕುಸ್ಥಾಪನೆ : ಸಮುದಾಯ ಬಾಂಧವರ ಒಗ್ಗಟ್ಟಿಗೆ ಗಣ್ಯರ ಕರೆ*

ಮೇ 3, 2026

*ಹಾಕಿ ಕ್ರೀಡೆಗೆ ಕೇಂದ್ರ ಸರಕಾರದಿಂದ ಪ್ರೋತ್ಸಾಹ, ಇದು ಕೊಡುಗೆಯಲ್ಲ, ಸರಕಾರದ ಜವಾಬ್ದಾರಿ : ಕೇಂದ್ರ ಸಚಿವ ಮನ್ ಸುಖ್ ಮಾಂಡವಿಯಾ ಭರವಸೆ*

ಮೇ 2, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.

Ad Blocker Enabled!
Ad Blocker Enabled!
Our website is made possible by displaying online advertisements to our visitors. Please support us by disabling your Ad Blocker.