Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಶ್ರೀಮಂಗಲದಲ್ಲಿ ಪ್ರಜಾಸೇವೆ ಅಭಿಯಾನ; 134ಕ್ಕೂ ಹೆಚ್ಚು ಅರ್ಜಿ ಸಲ್ಲಿಕೆ*
  • *ಶ್ರದ್ಧಾಭಕ್ತಿಯಿಂದ ಜರುಗಿದ ಕುಂದುರುಮೊಟ್ಟೆ ಶ್ರೀ ಚೌಟಿ ಮಾರಿಯಮ್ಮ ದೇವಾಲಯದ ಪುನರ್ ಪ್ರತಿಷ್ಠಾಪನಾ ವಾರ್ಷಿಕೋತ್ಸವ*
  • *ಈದ್ ಮಿಲಾದ್ ಪ್ರಬಂಧ ಸ್ಪರ್ಧಾ ವಿಜೇತರಿಗೆ ಬಹುಮಾನ ವಿತರಣೆ; ಧರ್ಮವನ್ನು ಪ್ರೀತಿಸಿ, ಇತರ ಧರ್ಮಗಳನ್ನು ಗೌರವಿಸಿ: ರಫೀಕ್ ಮಾಸ್ಟರ್*
  • *ಕೊಡಗಿನ ಶಿಕ್ಷಕರಿಗೆ ಪ್ರತಿಷ್ಠಿತ ‘ವಿದ್ಯಾರತ್ನ’ ರಾಜ್ಯ ಪ್ರಶಸ್ತಿ*
  • *ಶಿಕ್ಷಕರು ನೈತಿಕತೆ, ಮಾನವೀಯ ಮೌಲ್ಯ ಬೆಳೆಸಬೇಕು: ಮದನ್ ಮಾದಯ್ಯ; ಸುಂಟಿಕೊಪ್ಪ ಲಯನ್ಸ್ ಕ್ಲಬ್ ವತಿಯಿಂದ ಶಿಕ್ಷಕರ ದಿನಾಚರಣೆ; ನಿವೃತ್ತ ಮುಖ್ಯ ಶಿಕ್ಷಕ ಟಿ.ಜಿ.ಪ್ರೇಮಕುಮಾರ್ ದಂಪತಿಗೆ ಸನ್ಮಾನ*
  • *ಕ್ರೀಡಾ ಕ್ಷೇತ್ರದಲ್ಲಿ ಆಂಜೆಲಾ ವಿದ್ಯಾನಿಕೇತನದ ವಿದ್ಯಾರ್ಥಿಗಳ ಅದ್ವಿತೀಯ ಸಾಧನೆ; ಸಾಧಕ ವಿದ್ಯಾರ್ಥಿಗಳಿಗೆ ಬಹುಮಾನ ವಿತರಣೆ*
  • *2030ಕ್ಕೆ ಭಾರತವನ್ನು ಮಲೇರಿಯಾ ಮುಕ್ತಗೊಳಿಸುವ ಗುರಿ: ಕೊಡಗಿಗೆ ಕೇಂದ್ರ ತನಿಖಾ ತಂಡ ಭೇಟಿ*
  • *ಶ್ರೀಮಂಗಲ-ನಾಲ್ಕೇರಿ ರಸ್ತೆ ಅಭಿವೃದ್ಧಿಗೆ ಭೂಮಿಪೂಜೆ*
  • *ಮಾಸ್ಟರ್ಸ್ ಅಥ್ಲೆಟಿಕ್ಸ್ ಮೀಟ್ 2026ರಲ್ಲಿ ಕೊಡಗಿನ ಕ್ರೀಡಾಪಟುಗಳ ಮಿಂಚಿನ ಸಾಧನೆ*
  • *ಮಹಿಳಾ ಸ್ವಾವಲಂಬನೆಗೆ ‘ಆತ್ಮ’ ಯೋಜನೆ ಆಸರೆ: ನಾಪೋಕ್ಲು ಮಹಿಳಾ ಸಮಾಜದಿಂದ ಅಣಬೆ ಕಟಾವು*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*ಕೊಡಗು : ಹಲವು ಕುಟುಂಬಗಳ ಸ್ಥಳಾಂತರ*
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

*ಕೊಡಗು : ಹಲವು ಕುಟುಂಬಗಳ ಸ್ಥಳಾಂತರ*

ಜುಲೈ 31, 20242 Mins ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link

ಮಡಿಕೇರಿ NEWS DESK ಜು.31 : ಭಾರೀ ಗಾಳಿ ಮಳೆಯ ಹಿನ್ನೆಲೆ ಕೊಡಗು ಜಿಲ್ಲೆಯ ವಿವಿಧ ಭಾಗಗಳ ಹಲವು ಕುಟುಂಬಗಳನ್ನು ಮುನ್ನೆಚ್ಚರಿಕಾ ಕ್ರಮವಾಗಿ ಕಾಳಜಿ ಕೇಂದ್ರಗಳಿಗೆ ಸ್ಥಳಾಂತರಿಸಲಾಗಿದೆ.
ಭಾಗಮಂಡಲ ಹೋಬಳಿಯ ಭಾಗಮಂಡಲ ಗ್ರಾಮದ ಕಾಶಿ ಮಠದಲ್ಲಿ ಕಾಳಜಿ ಕೇಂದ್ರ ತೆರೆಯಲಾಗಿದ್ದು, ಎರಡು ಕುಟುಂಬಗಳ ಏಳು ಸದಸ್ಯರು ಆಶ್ರಯ ಪಡೆದಿದ್ದಾರೆ. ವಿರಾಜಪೇಟೆ ತಾಲ್ಲೂಕು ಕರಡಿಗೋಡು ಗ್ರಾಮದ ಕಾವೇರಿ ನದಿ ದಡ ವ್ಯಾಪ್ತಿಯ ಹೊಳೆ ಕೆರೆ ಪೈಸಾರಿಯ ಪ್ರವಾಹದ ಅಪಾಯದ ಭೀತಿಯಲ್ಲಿರುವ ಕುಟುಂಬಗಳನ್ನು ಸಿದ್ದಾಪುರ ಸ್ವರ್ಣ ಮಾಲ ಕಲ್ಯಾಣ ಮಂಟಪಕ್ಕೆ ಭಾಗಶಃ ಸ್ಥಳಾಂತರಿಸಲಾಗಿದೆ. ವಿರಾಜಪೇಟೆ ಹೋಬಳಿ ತೋರ ಗ್ರಾಮದ ಭೂಕುಸಿತ ಪ್ರದೇಶದಲ್ಲಿರುವ ಕುಟುಂಬಗಳನ್ನು ಕಾಳಜಿ ಕೇಂದ್ರಕ್ಕೆ ಸ್ಥಳಾಂತರಿಸಲಾಗಿದೆ. ಮಡಿಕೇರಿಯ ಇಂದಿರಾ ನಗರದಲ್ಲಿ ಎರಡು ಮನೆಗಳು ಅಪಾಯ ಸ್ಥಿತಿಯಲ್ಲಿದ್ದು, ಸದ್ರಿ ಮನೆಗಳಲ್ಲಿ ವಾಸಿಸುವವರಿಗೆ ಈಗಾಗಲೇ ನೋಟಿಸ್ ನೀಡಲಾಗಿದ್ದು, ಸುರಕ್ಷಿತ ಸ್ಥಳಕ್ಕೆ ಸ್ಥಳಾಂತರಗೊಳ್ಳಲು ತಿಳಿಸಲಾಗಿದೆ ಹಾಗೂ ಇಂದಿರಾ ನಗರದಲ್ಲಿರುವ ಸಮುದಾಯ ಭವನದಲ್ಲಿ ತಾತ್ಕಾಲಿಕವಾಗಿ ಇರುವಂತೆ ತಿಳಿಸಲಾಗಿದೆ. ಸಮುದಾಯ ಭವನದ ಸಮಿತಿಗೂ ಈ ಮಾಹಿತಿ ನೀಡಿ ಎರಡು ಕುಟುಂಬಗಳು ತಾತ್ಕಾಲಿಕವಾಗಿ ಇರುವಂತೆ ವ್ಯವಸ್ಥೆ ಮಾಡಲಾಗಿದೆ. ಕುಶಾಲನಗರ ತಾಲ್ಲೂಕಿನ ಕುಶಾಲನಗರ ಹೋಬಳಿಯ ವಾಲ್ನೂರು ತ್ಯಾಗತ್ತೂರು ಗ್ರಾಮದ ಹೊಳೆ ಪಕ್ಕದ ಕುಟುಂಬದವರನ್ನು ಸ.ಹಿ.ಪ್ರಾ ಶಾಲೆಯ ಕಾಳಜಿ ಕೇಂದ್ರಕ್ಕೆ ಸ್ಥಳಾಂತರಿಸಲಾಗಿದೆ. 6 ಕುಟುಂಬಗಳ ಒಟ್ಟು 23 ಸದಸ್ಯರು ಕಾಳಜಿ ಆಶ್ರಯ ಪಡೆದಿದ್ದಾರೆ. ಕುಶಾಲನಗರ ಪಟ್ಟಣದ ಸಾಯಿ ಲೇಔಟ್ ನಲ್ಲಿ ಪ್ರವಾಹದ ನೀರು ಬಂದ ಕಾರಣ ಮನೆಯೊಳಗೆ ಸಿಲುಕಿದ್ದ 19 ಮಂದಿಯನ್ನು ಸುರಕ್ಷಿತವಾಗಿ ರಕ್ಷಿಸಲಾಗಿದೆ. ದೋಣಿಗಳ ಮೂಲಕ ಸುರಕ್ಷಿತ ಸ್ಥಳಕ್ಕೆ ಸ್ಥಳಾಂತರಿಸಲಾಗಿದೆ. ಜಿಲ್ಲಾ ಅಗ್ನಿಶಾಮಕ ಅಧಿಕಾರಿ ನೇತೃತ್ವದಲ್ಲಿ ಅಗ್ನಿಶಾಮಕ ದಳದ ತಂಡ ಕಾರ್ಯಾಚರಣೆ ನಡೆಸಿತು. ಮಡಿಕೇರಿ ಹೋಬಳಿ ಎಸ್ ಕಟ್ಟೆಮಾಡು ಗ್ರಾಮದ ಪರಂಬು ಪೈಸಾರಿಯ ಮನೆಗಳು ಕಾವೇರಿ ಹೊಳೆಯ ಪ್ರವಾಹಕ್ಕೆ ಸಿಲುಕುವ ಸಂಭವ ಇರುವ ಕಾರಣ ಮುಂಜಾಗೃತಾ ಕ್ರಮವಾಗಿ ಇಲ್ಲಿನ ನಿವಾಸಿಗಳನ್ನು ಸುರಕ್ಷಿತ ಸ್ಥಳಕ್ಕೆ ಸ್ಥಳಾಂತರಿಸಲಾಗಿದೆ. ವಿರಾಜಪೇಟೆ ತಾಲೂಕು ಅಮ್ಮತಿ ಹೋಬಳಿ ಹಚ್ಚಿನಾಡು ಗ್ರಾಮದ ಕಾವೇರಿ ಹೊಳೆ ದಡದ ಪಕ್ಕದಲ್ಲಿ ವಾಸವಿರುವ 10 ಮನೆಗಳಿಗೆ ಪ್ರವಾಹ ಭೀತಿ ಇರುವುದರಿಂದ 10 ಕುಟುಂಬದ 44 ಸದಸ್ಯರನ್ನು ಹಚ್ಚಿನಾಡು ಸರಕಾರಿ ಕಿರಿಯ ಪ್ರಾಥಮಿಕ ಶಾಲೆಯಲ್ಲಿ ಸ್ಥಾಪಿಸಿರುವ ಕಾಳಜಿ ಕೇಂದ್ರಕ್ಕೆ ಸ್ಥಳಾಂತರಿಸಲಾಗಿದೆ. ಕುಶಾಲನಗರ ತಾಲ್ಲೂಕು ನೆಲ್ಲಿಹುದಿಕೇರಿ ಗ್ರಾಮದ ಶಾಲೆಯಲ್ಲಿ ಕಾಳಜಿ ಕೇಂದ್ರವನ್ನು ತೆರೆಯಲಾಗಿದೆ. ತಹಶೀಲ್ದಾರ್ ಅವರು ಭೇಟಿ ನೀಡಿ ಅಗತ್ಯ ಸೌಲಭ್ಯ ಕಲ್ಪಿಸಿದ್ದಾರೆ. ವಾಲ್ನೂರು ತ್ಯಾಗತ್ತೂರು ಗ್ರಾಮದ ಹೊಳೆ ಪಕ್ಕದ 8 ಕುಟುಂಬಗಳ 26 ಸದಸ್ಯರನ್ನು ಸ.ಹಿ.ಪ್ರಾ ಶಾಲೆ ಕಾಳಜಿ ಕೇಂದ್ರಕ್ಕೆ ಸ್ಥಳಾಂತರಿಸಲಾಗಿದೆ.

Follow us Follow us
Share. WhatsApp Facebook Twitter Email Telegram Copy Link

Related Posts

*ಶ್ರೀಮಂಗಲದಲ್ಲಿ ಪ್ರಜಾಸೇವೆ ಅಭಿಯಾನ; 134ಕ್ಕೂ ಹೆಚ್ಚು ಅರ್ಜಿ ಸಲ್ಲಿಕೆ*

ಸೆಪ್ಟೆಂಬರ್ 26, 2026

*ಶ್ರದ್ಧಾಭಕ್ತಿಯಿಂದ ಜರುಗಿದ ಕುಂದುರುಮೊಟ್ಟೆ ಶ್ರೀ ಚೌಟಿ ಮಾರಿಯಮ್ಮ ದೇವಾಲಯದ ಪುನರ್ ಪ್ರತಿಷ್ಠಾಪನಾ ವಾರ್ಷಿಕೋತ್ಸವ*

ಸೆಪ್ಟೆಂಬರ್ 26, 2026

*ಈದ್ ಮಿಲಾದ್ ಪ್ರಬಂಧ ಸ್ಪರ್ಧಾ ವಿಜೇತರಿಗೆ ಬಹುಮಾನ ವಿತರಣೆ; ಧರ್ಮವನ್ನು ಪ್ರೀತಿಸಿ, ಇತರ ಧರ್ಮಗಳನ್ನು ಗೌರವಿಸಿ: ರಫೀಕ್ ಮಾಸ್ಟರ್*

ಸೆಪ್ಟೆಂಬರ್ 26, 2026

*ಶ್ರದ್ಧಾಭಕ್ತಿಯಿಂದ ಜರುಗಿದ ಕುಂದುರುಮೊಟ್ಟೆ ಶ್ರೀ ಚೌಟಿ ಮಾರಿಯಮ್ಮ ದೇವಾಲಯದ ಪುನರ್ ಪ್ರತಿಷ್ಠಾಪನಾ ವಾರ್ಷಿಕೋತ್ಸವ*

ಸೆಪ್ಟೆಂಬರ್ 26, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಮಡಿಕೇರಿ, NEWS DESK ಸೆ.26: ನಗರದ ನಾಲ್ಕು ಶಕ್ತಿ ದೇವತೆಗಳಲ್ಲಿ ಒಂದಾದ ಕುಂದುರುಮೊಟ್ಟೆ ಶ್ರೀ ಚೌಟಿ ಮಾರಿಯಮ್ಮ ದೇವಾಲಯದ ಪುನರ್…

*ಈದ್ ಮಿಲಾದ್ ಪ್ರಬಂಧ ಸ್ಪರ್ಧಾ ವಿಜೇತರಿಗೆ ಬಹುಮಾನ ವಿತರಣೆ; ಧರ್ಮವನ್ನು ಪ್ರೀತಿಸಿ, ಇತರ ಧರ್ಮಗಳನ್ನು ಗೌರವಿಸಿ: ರಫೀಕ್ ಮಾಸ್ಟರ್*

ಸೆಪ್ಟೆಂಬರ್ 26, 2026

*ಕೊಡಗಿನ ಶಿಕ್ಷಕರಿಗೆ ಪ್ರತಿಷ್ಠಿತ ‘ವಿದ್ಯಾರತ್ನ’ ರಾಜ್ಯ ಪ್ರಶಸ್ತಿ*

ಸೆಪ್ಟೆಂಬರ್ 26, 2026

*ಶಿಕ್ಷಕರು ನೈತಿಕತೆ, ಮಾನವೀಯ ಮೌಲ್ಯ ಬೆಳೆಸಬೇಕು: ಮದನ್ ಮಾದಯ್ಯ; ಸುಂಟಿಕೊಪ್ಪ ಲಯನ್ಸ್ ಕ್ಲಬ್ ವತಿಯಿಂದ ಶಿಕ್ಷಕರ ದಿನಾಚರಣೆ; ನಿವೃತ್ತ ಮುಖ್ಯ ಶಿಕ್ಷಕ ಟಿ.ಜಿ.ಪ್ರೇಮಕುಮಾರ್ ದಂಪತಿಗೆ ಸನ್ಮಾನ*

ಸೆಪ್ಟೆಂಬರ್ 26, 2026

*ಕ್ರೀಡಾ ಕ್ಷೇತ್ರದಲ್ಲಿ ಆಂಜೆಲಾ ವಿದ್ಯಾನಿಕೇತನದ ವಿದ್ಯಾರ್ಥಿಗಳ ಅದ್ವಿತೀಯ ಸಾಧನೆ; ಸಾಧಕ ವಿದ್ಯಾರ್ಥಿಗಳಿಗೆ ಬಹುಮಾನ ವಿತರಣೆ*

ಸೆಪ್ಟೆಂಬರ್ 26, 2026

*2030ಕ್ಕೆ ಭಾರತವನ್ನು ಮಲೇರಿಯಾ ಮುಕ್ತಗೊಳಿಸುವ ಗುರಿ: ಕೊಡಗಿಗೆ ಕೇಂದ್ರ ತನಿಖಾ ತಂಡ ಭೇಟಿ*

ಸೆಪ್ಟೆಂಬರ್ 26, 2026

*ಶ್ರೀಮಂಗಲ-ನಾಲ್ಕೇರಿ ರಸ್ತೆ ಅಭಿವೃದ್ಧಿಗೆ ಭೂಮಿಪೂಜೆ*

ಸೆಪ್ಟೆಂಬರ್ 26, 2026

*ಮಾಸ್ಟರ್ಸ್ ಅಥ್ಲೆಟಿಕ್ಸ್ ಮೀಟ್ 2026ರಲ್ಲಿ ಕೊಡಗಿನ ಕ್ರೀಡಾಪಟುಗಳ ಮಿಂಚಿನ ಸಾಧನೆ*

ಸೆಪ್ಟೆಂಬರ್ 26, 2026

*ಮಹಿಳಾ ಸ್ವಾವಲಂಬನೆಗೆ ‘ಆತ್ಮ’ ಯೋಜನೆ ಆಸರೆ: ನಾಪೋಕ್ಲು ಮಹಿಳಾ ಸಮಾಜದಿಂದ ಅಣಬೆ ಕಟಾವು*

ಸೆಪ್ಟೆಂಬರ್ 26, 2026

*36 ವರ್ಷ ಸೇವೆ ಸಲ್ಲಿಸಿದ ಅಂಗನವಾಡಿ ಕಾರ್ಯಕರ್ತೆ ದೇವಮಾಜಿ, ಶಿಕ್ಷಕಿ ಭೋಜಮ್ಮಗೆ ಆತ್ಮೀಯ ಬೀಳ್ಕೊಡುಗೆ*

ಸೆಪ್ಟೆಂಬರ್ 26, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.