ಮಡಿಕೇರಿ ಆ.1 NEWS DESK : ಕೊಡಗು ಜಿಲ್ಲಾ ಸಹಕಾರ ಯೂನಿಯನ್ ವರ್ಷಂಪ್ರತೀ ಜಿಲ್ಲೆಯ ಪ್ರೌಢಶಾಲಾ ವಿದ್ಯಾರ್ಥಿಗಳಿಗೆ ಆ.6 ರಂದು ಪ್ರಬಂಧ ಸ್ಪರ್ಧೆ ಮತ್ತು ಪದವಿಪೂರ್ವ ಕಾಲೇಜು ವಿದ್ಯಾರ್ಥಿಗಳಿಗೆ ಚರ್ಚಾ ಸ್ಪರ್ಧೆ ನಡೆಯಲಿದೆ. ಕೊಡಗು ಜಿಲ್ಲಾ ಸಹಕಾರ ಯೂನಿಯನ್ ಸಭಾಂಗಣ, ಪೆನ್‌ಶನ್ ಲೇನ್, ಮಡಿಕೇರಿಯಲ್ಲಿ ಪ್ರೌಢಶಾಲಾ ವಿದ್ಯಾರ್ಥಿಗಳಿಗೆ ‘ಶಾಲಾ ಕಾಲೇಜುಗಳ ಪಠ್ಯ ವಿಷಯಗಳಲ್ಲಿ “ಸಹಕಾರ” ವಿಷಯ ಅಳವಡಿಕೆ’ ‘Introduction of subject on Co operation in the syllabus of schools and colleges’ ವಿಷಯದ ಕುರಿತು ಪ್ರಬಂಧ ಸ್ಪರ್ಧೆಯನ್ನು ಪೂರ್ವಾಹ್ನ 10.30 ಗಂಟೆಗೆ ಏರ್ಪಡಿಸಲಾಗಿದೆ.ಅಲ್ಲದೆ ಪದವಿಪೂರ್ವ ಕಾಲೇಜು ವಿದ್ಯಾರ್ಥಿಗಳಿಗೆ ‘ಮಾಹಿತಿ ತಂತ್ರಜ್ಞಾನ ಬಳಕೆ ಮತ್ತು ತಾಂತ್ರಿಕತೆ ಅಳವಡಿಕೆಯಿಂದ ಮಾತ್ರವೇ ಸಹಕಾರಿ ಚಳುವಳಿ ಬಲಾಡ್ಯಗೊಳ್ಳಬಲ್ಲದು’‘Co operative movement will be strengthened only when information technology and adoption of technology is accepted’ ವಿಷಯದ ಕುರಿತು ಚರ್ಚಾ ಸ್ಪರ್ಧೆಯನ್ನು ಅದೇ ದಿನ ಪೂರ್ವಾಹ್ನ 11 ಗಂಟೆಯಿ0ದ ಯೂನಿಯನ್ ಸಭಾಂಗಣದಲ್ಲಿ ಏರ್ಪಡಿಸಲಾಗಿದೆ.
ಪ್ರಬಂದ ಸ್ಪರ್ಧೆಗೆ ಒಂದು ಶಾಲೆಯಿಂದ ಒಬ್ಬ ವಿದ್ಯಾರ್ಥಿಯನ್ನು ಹಾಗೂ ಚರ್ಚಾ ಸ್ಪರ್ಧೆಗೆ ಒಂದು ಶಾಲೆಯಿಂದ ವಿಷಯದ ಪರವಾಗಿ ಒಬ್ಬರು ಮತ್ತು ವಿರುದ್ಧವಾಗಿ ಒಬ್ಬರನ್ನು ಆಯ್ಕೆ ಮಾಡಿ ಕಳುಹಿಸತಕ್ಕದ್ದು. ಹಾಜರಾಗುವ ವಿದ್ಯಾರ್ಥಿಗಳಿಗೆ ಮಾತ್ರ ಪ್ರಯಾಣ ದರ ಪಾವತಿಸಲಾಗುವುದು.








