Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಬ್ಯಾಡಗೊಟ್ಟದಲ್ಲಿ ಎಸ್‌ಐಆರ್ ಪ್ರಕ್ರಿಯೆಯಲ್ಲಿ ಅಕ್ರಮ ಶಂಕೆ : ಶಾಸಕ ಡಾ.ಮಂತರ್ ಗೌಡ ಅಸಮಾಧಾನ*
  • *ಬ್ಯಾಡಗೊಟ್ಟ: 64 ಅಲ್ಪಸಂಖ್ಯಾತ ಮತದಾರರ ಹೆಸರು ಅಳಿಸಲು ಯತ್ನ ಆರೋಪ; ಕಾನೂನು ಕ್ರಮಕ್ಕೆ ಆಗ್ರಹಿಸಿ ಪ್ರತಿಭಟನೆ*
  • *ಹರದೂರಿನಲ್ಲಿ ಗಾಂಧಿ ಜಯಂತಿ ಕಾರ್ಯಕ್ರಮ*
  • *ಶ್ರೀ ಸಾಯಿ ಈವೆಂಟ್ಸ್; ಮಡಿಕೇರಿಯಲ್ಲಿ ಮೂರು ದಿನಗಳ ಬೃಹತ್ ಫುಡ್ ಫೆಸ್ಟಿವಲ್ : ಒಂದು ಸೀರೆ ಕೊಂಡರೆ ಒಂದು ಸೀರೆ ಉಚಿತ*
  • *ನಿಧನ ಸುದ್ದಿ*
  • *ಸುಂಟಿಕೊಪ್ಪದಲ್ಲಿ ಜನ ಜಾಗೃತಿ ಆಂದೋಲನ ರಥಕ್ಕೆ ಅದ್ಧೂರಿ ಸ್ವಾಗತ*
  • *ಪೊನ್ನಂಪೇಟೆ ಕೊಡವ ಸಮಾಜದ ಮಹಾಸಭೆ: ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಪ್ರೋತ್ಸಾಹ ಧನ ವಿತರಣೆ*
  • *ಎಸ್‌ಐಆರ್ ಅಕ್ರಮ ಆರೋಪ : ಕ್ರಿಮಿನಲ್ ಪ್ರಕರಣ ದಾಖಲಿಸಿ ತನಿಖೆ ನಡೆಸಲು ಆಗ್ರಹ : ಅ.3 ರಂದು ಮಡಿಕೇರಿಯಲ್ಲಿ ಎಸ್‌ಡಿಪಿಐ ಪ್ರತಿಭಟನೆ*
  • *ಮೂರು ರಾಷ್ಟ್ರೀಯ ಹಾಗೂ ಒಂದು ರಾಜ್ಯಮಟ್ಟದ ಪ್ರಶಸ್ತಿ ಪುರಸ್ಕೃತರಾದ ಕಡ್ಲೇರ ತುಳಸಿ ಮೋಹನ್ ಅವರಿಗೆ ಸನ್ಮಾನ*
  • *ಅಂಡರ್-19 ರಾಷ್ಟ್ರೀಯ ವಾಲಿಬಾಲ್ ಚಾಂಪಿಯನ್‌ಶಿಪ್‌ನಲ್ಲಿ ಕರ್ನಾಟಕಕ್ಕೆ ಚಿನ್ನ*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*ಆ.10 ರಂದು ಕಗ್ಗೋಡ್ಲುವಿನಲ್ಲಿ ರಾಜ್ಯಮಟ್ಟದ ಕೆಸರು ಗದ್ದೆ ಕ್ರೀಡಾಕೂಟ*
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

*ಆ.10 ರಂದು ಕಗ್ಗೋಡ್ಲುವಿನಲ್ಲಿ ರಾಜ್ಯಮಟ್ಟದ ಕೆಸರು ಗದ್ದೆ ಕ್ರೀಡಾಕೂಟ*

ಆಗಷ್ಟ್ 2, 20242 Mins ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link

ಮಡಿಕೇರಿ ಆ.2 NEWS DESK : 2024-25ನೇ ಸಾಲಿನ 32ನೇ ರಾಜ್ಯಮಟ್ಟದ ಮುಕ್ತ ಕೆಸರು ಗದ್ದೆ ಕ್ರೀಡಾಕೂಟ ಮತ್ತು ಆಟೋಟ ಸ್ಪರ್ಧೆಗಳು ಆ.10 ರಂದು ಕಗ್ಗೋಡ್ಲು ಗ್ರಾಮದ ದಿ.ಸಿ.ಡಿ.ದೇವಯ್ಯ ಅವರ ಗದ್ದೆಯಲ್ಲಿ ನಡೆಯಲಿದೆ ಎಂದು ಕೊಡಗು ಜಿಲ್ಲಾ ಯುವ ಒಕ್ಕೂಟದ ಅಧ್ಯಕ್ಷ ಪಿ.ಪಿ.ಸುಕುಮಾರ್ ತಿಳಿಸಿದ್ದಾರೆ.
ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕೊಡಗು ಜಿಲ್ಲಾ ಪಂಚಾಯತ್, ಜಿಲ್ಲಾಡಳಿತ, ಜಿಲ್ಲಾ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ಯೂತ್ ಹಾಸ್ಟೇಲ್ ಅಸೋಸಿಯೇಶನ್ ಆಫ್ ಇಂಡಿಯಾದ ಮಡಿಕೇರಿ ಘಟಕ, ಕೊಡಗು ಜಿಲ್ಲಾ ಯುವ ಒಕ್ಕೂಟ, ಮಡಿಕೇರಿ, ವಿರಾಜಪೇಟೆ ಮತ್ತು ಸೋಮವಾರಪೇಟೆ ತಾಲ್ಲೂಕು ಯುವ ಒಕ್ಕೂಟ ಹಾಗೂ ಕಗ್ಗೊಡ್ಲು ಕಾವೇರಿ ಯುವಕ ಸಂಘದ ಸಂಯುಕ್ತಾಶ್ರಯದಲ್ಲಿ ಅಂದು ಬೆಳಗ್ಗೆ 9.30 ರಿಂದ ಸ್ಪರ್ಧೆಗಳು ನಡೆಯಲಿದೆಯೆಂದು ಹೇಳಿದರು.
ಕೆಸರು ಗದ್ದೆ ಕ್ರೀಡಾಕೂಟದಲ್ಲಿ ಸಾರ್ವಜನಿಕ ಪುರುಷ ಮತ್ತು ಮಹಿಳೆಯರ ಹಗ್ಗ ಜಗ್ಗಾಟ (7 ಸದಸ್ಯರ ತಂಡ), ಸಾರ್ವಜನಿಕ ಪುರುಷರ ವಾಲಿಬಾಲ್ (7 ಸದಸ್ಯರ ಜನರ ತಂಡ), ಸಾರ್ವಜನಿಕ ಮಹಿಳೆಯರು ಸೇರಿದಂತೆ ಪ್ರೌಢ ಶಾಲಾ ಬಾಲಕಿಯರ ವಿಭಾಗದಲ್ಲಿ ಥ್ರೋಬಾಲ್ ಪಂದ್ಯಾವಳಿ (6 ಜನರ ತಂಡ), ಬಾಲಕರ ಹಗ್ಗಜಗ್ಗಟ ಪಂದ್ಯಾವಳಿ (7 ಜನರ ತಂಡ) ಸ್ಪರ್ಧೆಯನ್ನು ಏರ್ಪಡಿಸಲಾಗಿದೆ. ಮಧ್ಯಾಹ್ನ 1 ಗಂಟೆಗೆ ಕೆಸರು ಗದ್ದೆ ಓಟದ ಸ್ಪರ್ಧೆಗಳು ನಡೆಯಲಿದ್ದು, ಕಿರಿಯ ಪಾಥಮಿಕ ಶಾಲಾ ಬಾಲಕ, ಬಾಲಕಿಯರಿಗೆ 50ಮೀ ಓಟ, ಹಿರಿಯರ ಪ್ರಾಥಮಿಕ ಶಾಲಾ ಬಾಲಕ, ಬಾಲಕಿಯರಿಗೆ 100ಮೀ ಓಟ, ಪ್ರೌಢಶಾಲಾ ಬಾಲಕ, ಬಾಲಕಿಯರಿಗೆ 200 ಮೀ. ಓಟ, ಪದವಿ ಪೂರ್ವ ಕಾಲೇಜು ಬಾಲಕ, ಬಾಲಕಿಯರಿಗೆ 400 ಮೀ. ಓಟ, ಪದವಿ ಪೂರ್ವ ಕಾಲೇಜು, ಪದವಿ ಕಾಲೇಜು ಯುವಕ, ಯುವತಿಯರಿಗೆ, ಸಾರ್ವಜನಿಕ ಪುರುಷ ಹಾಗೂ ಮಹಿಳೆಯರಿಗೆ 400 ಮೀ. ಓಟದ ಸ್ಪರ್ಧೆ ನಡೆಯಲಿದೆ. ದಂಪತಿಗಳ ಓಟದ ಸ್ಪರ್ಧೆ- ಕ್ರೀಡಾಕೂಟದಲ್ಲಿ ವಿಶೇಷವಾಗಿ ದಂಪತಿಗಳ ಓಟದ ಸ್ಪರ್ಧೆ ಹಾಗೂ ಕಾರ್ಯಕ್ರಮದ ಆಯೋಜಕರಿಗೆ 200 ಮೀ. ಓಟ, ಕಗ್ಗೋಡ್ಲು ಗ್ರಾಮಸ್ಥರಿಗೆ ಸಾಂಪ್ರದಾಯಿಕ ನಾಟಿ ಓಟ ನಡೆಯಲಿದೆ.
ಹಗ್ಗ-ಜಗ್ಗಾಟ ಸಾರ್ವಜನಿಕ ಪುರುಷರ ಹಾಗೂ ಮಹಿಳೆಯರ ವಿಭಾಗಕ್ಕೆ, ವಾಲಿಬಾಲ್ ಮತ್ತು ಥ್ರೋಬಾಲ್ ತಂಡಗಳಿಗೆ ತಲಾ 1ಸಾವಿರ ರೂ. ಮೈದಾನ ಶುಲ್ಕ ನಿಗದಿಪಡಿಸಲಾಗಿದ್ದು, ಆಸಕ್ತರು ಆ.5 ರ ಅಪರಾಹ್ನ 5 ಗಂಟೆಯೊಳಗೆ ತಂಡದ ಹೆಸರು ನೋಂದಾಯಿಸಿಕೊಳ್ಳಬಹುದಾಗಿದೆ ಎಂದು ಸುಕುಮಾರ್ ತಿಳಿಸಿದರು. ಬಹುಮಾನ – ಪುರುಷರ ಹಗ್ಗಜಗ್ಗಾಟ ಸ್ಪರ್ಧೆಯಲ್ಲಿ ಪ್ರಥಮ ಬಹುಮಾನವಾಗಿ 15 ಸಾವಿರ ನಗದ, ದ್ವಿತೀಯ 10 ಸಾವಿರ ನಗದು ಹಾಗೂ ಟ್ರೋಫಿಗಳನ್ನು ನೀಡಲಾಗುವುದು. ಮಹಿಳೆಯರ ಹಗ್ಗಜಗ್ಗಾಟ ಸ್ಪರ್ಧೆಯಲ್ಲಿ ಪ್ರಥಮ ಬಹುಮಾನವಾಗಿ 8 ಸಾವಿರ ನಗದ ಮತ್ತು ದ್ವಿತೀಯ 6 ಸಾವಿರ ನಗದು ಮತ್ತು ಟ್ರೋಫಿ, ಸಾರ್ವಜನಿಕ ಪುರುಷರ ವಾಲಿಬಾಲ್‌ನಲ್ಲಿ ಪ್ರಥಮ ಬಹುಮಾನ 10 ಸಾವಿರ ಮತ್ತು ದ್ವಿತೀಯ 6 ಸಾವಿರ ಮತ್ತು ಟ್ರೋಫಿ, ಮಹಿಳೆಯರು ಮತ್ತು ಪ್ರೌಢಶಾಲಾ ಬಾಲಕಿಯರ ವಿಭಾಗದ ಥ್ರೋಬಾಲ್‌ನಲ್ಲಿ ಪ್ರಥಮ 6 ಸಾವಿರ ಮತ್ತು ದ್ವಿತೀಯ 4ಸಾವಿರ ನಗದು ಮತ್ತು ಟ್ರೋಫಿ ನೀಡಲಾಗುತ್ತದೆ. ಪುರುಷರು ಮತ್ತು ಮಹಿಳೆಯರ ಮುಕ್ತ ಓಟದ ಸ್ಪರ್ಧೆಯಲ್ಲಿ ಪ್ರಥಮ 3 ಸಾವಿರ , ದ್ವಿತೀಯ 2500 ಮತ್ತು ತೃತೀಯ 2 ಸಾವಿರ ನಗದು ಬಹುಮಾನ ನೀಡಲಾಗುತ್ತದೆಂದು ವಿವರಗಳನ್ನಿತ್ತರು.
ಪಂದ್ಯಾವಳಿಯ ನೋಂದಾವಣೆಗಾಗಿ ನವೀನ್ ದೇರಳ- 9740404520 (ಹಗ್ಗ ಜಗ್ಗಾಟ), ಕೆ.ಎಂ.ಮೋಹನ್- 9483008381 (ವಾಲಿಬಾಲ್), ಹೆಚ್ಚಿನ ಮಾಹಿತಿಗಾಗಿ ಪಿ.ಪಿ.ಸುಕುಮಾರ್-94812 13920, ಬಾಳಾಡಿ ದಿಲೀಪ್-8618568173, ಕುಂಜಿಲನ ಎಂ.ಮೋಹನ್-9480646382, ಜಯಕುಮಾರ್-9741845950 ಸಂಪರ್ಕಿಸಬಹುದಾಗಿದೆ. ಉದ್ಘಾಟನೆ- ಮಡಿಕೇರಿ ತಾಲ್ಲೂಕು ಯುವ ಒಕ್ಕೂಟದ ಅಧ್ಯಕ್ಷರಾದ ದಿಲೀಪ್ ಕುಮಾರ್ ಮಾತನಾಡಿ, ಕೆಸರು ಗದ್ದೆ ಕ್ರೀಡಾ ಕೂಟವನ್ನು ಬೆಳಗ್ಗೆ 9 ಗಂಟರಗೆ ಜಿಲ್ಲಾ ಉಸ್ತುವಾರಿ ಸಚಿವರಾದ ಎನ್.ಎಸ್. ಭೋಸರಾಜು ಉದ್ಘಾಟಿಸಲಿದ್ದು, ಅಧ್ಯಕ್ಷತೆಯನ್ನು ಶಾಸಕರಾದ ಡಾ.ಮಂತರ್ ಗೌಡ ವಹಿಸಲಿದ್ದಾರೆ. ಮುಖ್ಯ ಅತಿಥಿಗಳಾಗಿ ಎಂಎಲ್‌ಸಿ ಸುಜಾ ಕುಶಾಲಪ್ಪ ಸೇರಿದಂತೆ ಹಲ ಗಣ್ಯರು ಪಾಲ್ಗೊಳ್ಳಲಿದ್ದಾರೆ. ಸಮಾರೋಪ ಸಮಾರಂಭ ಸಂಜೆ 6.30 ಗಂಟೆಗೆ ನಡೆಯಲಿದ್ದು, ಅಧ್ಯಕ್ಷತೆಯನ್ನು ಶಾಸಕ ಎ.ಎಸ್. ಪೊನ್ನಣ್ಣ ವಹಿಸಲಿದ್ದಾರೆ.ಮುಖ್ಯ ಅತಿಥಿಗಳಾಗಿ ಸಂಸದ ಯದುವೀರ್ ಸೇರಿದಂತೆ ಹಲ ಗಣ್ಯರು ಪಾಲ್ಗೊಳ್ಳಲಿದ್ದಾರೆಂದು ತಿಳಸಿದರು. ಸುದ್ದಿಗೋಷ್ಠಿಯಲ್ಲಿ ಮಡಕೇರಿ ತಾಲ್ಲೂಕು ಯುವ ಒಕ್ಕೂಟದ ಮಾಜಿ ಅಧ್ಯಕ್ಷರಾದ ನವೀನ್ ದೇರಳ, ಕಗ್ಗೋಡ್ಲುವಿನ ಕಾವೇರಿ ಯುವಕ ಸಂಘದ ಉಪಾಧ್ಯಕ್ಷರಾದ ಲೋಕೇಶ್, ಸದಸ್ಯ ಸಜನ್ ಹಾಗೂ ಯೂತ್ ಹಾಸ್ಟೆಲ್ ಅಸೋಸಿಯೇಶನ್ ಆಫ್ ಇಂಡಿಯಾದ ಮಡಿಕೇರಿ ಘಟಕದ ಅಧ್ಯಕ್ಷ ಅಯ್ಯಣ್ಣ ಉಪಸ್ಥಿತರಿದ್ದರು.

Follow us Follow us
Share. WhatsApp Facebook Twitter Email Telegram Copy Link

Related Posts

*ಬ್ಯಾಡಗೊಟ್ಟದಲ್ಲಿ ಎಸ್‌ಐಆರ್ ಪ್ರಕ್ರಿಯೆಯಲ್ಲಿ ಅಕ್ರಮ ಶಂಕೆ : ಶಾಸಕ ಡಾ.ಮಂತರ್ ಗೌಡ ಅಸಮಾಧಾನ*

ಅಕ್ಟೋಬರ್ 2, 2026

*ಬ್ಯಾಡಗೊಟ್ಟ: 64 ಅಲ್ಪಸಂಖ್ಯಾತ ಮತದಾರರ ಹೆಸರು ಅಳಿಸಲು ಯತ್ನ ಆರೋಪ; ಕಾನೂನು ಕ್ರಮಕ್ಕೆ ಆಗ್ರಹಿಸಿ ಪ್ರತಿಭಟನೆ*

ಅಕ್ಟೋಬರ್ 2, 2026

*ಹರದೂರಿನಲ್ಲಿ ಗಾಂಧಿ ಜಯಂತಿ ಕಾರ್ಯಕ್ರಮ*

ಅಕ್ಟೋಬರ್ 2, 2026

*ಬ್ಯಾಡಗೊಟ್ಟ: 64 ಅಲ್ಪಸಂಖ್ಯಾತ ಮತದಾರರ ಹೆಸರು ಅಳಿಸಲು ಯತ್ನ ಆರೋಪ; ಕಾನೂನು ಕ್ರಮಕ್ಕೆ ಆಗ್ರಹಿಸಿ ಪ್ರತಿಭಟನೆ*

ಅಕ್ಟೋಬರ್ 2, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಮಡಿಕೇರಿ, NEWS DESK ಅ.2: ಕೊಡ್ಲಿಪೇಟೆ ಸಮೀಪದ ಬ್ಯಾಡಗೊಟ್ಟ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ 64 ಅಲ್ಪಸಂಖ್ಯಾತ ಮತದಾರರ ಹೆಸರುಗಳನ್ನು ಮತದಾರರ…

*ಹರದೂರಿನಲ್ಲಿ ಗಾಂಧಿ ಜಯಂತಿ ಕಾರ್ಯಕ್ರಮ*

ಅಕ್ಟೋಬರ್ 2, 2026

*ಶ್ರೀ ಸಾಯಿ ಈವೆಂಟ್ಸ್; ಮಡಿಕೇರಿಯಲ್ಲಿ ಮೂರು ದಿನಗಳ ಬೃಹತ್ ಫುಡ್ ಫೆಸ್ಟಿವಲ್ : ಒಂದು ಸೀರೆ ಕೊಂಡರೆ ಒಂದು ಸೀರೆ ಉಚಿತ*

ಅಕ್ಟೋಬರ್ 2, 2026

*ನಿಧನ ಸುದ್ದಿ*

ಅಕ್ಟೋಬರ್ 2, 2026

*ಸುಂಟಿಕೊಪ್ಪದಲ್ಲಿ ಜನ ಜಾಗೃತಿ ಆಂದೋಲನ ರಥಕ್ಕೆ ಅದ್ಧೂರಿ ಸ್ವಾಗತ*

ಅಕ್ಟೋಬರ್ 2, 2026

*ಪೊನ್ನಂಪೇಟೆ ಕೊಡವ ಸಮಾಜದ ಮಹಾಸಭೆ: ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಪ್ರೋತ್ಸಾಹ ಧನ ವಿತರಣೆ*

ಅಕ್ಟೋಬರ್ 2, 2026

*ಎಸ್‌ಐಆರ್ ಅಕ್ರಮ ಆರೋಪ : ಕ್ರಿಮಿನಲ್ ಪ್ರಕರಣ ದಾಖಲಿಸಿ ತನಿಖೆ ನಡೆಸಲು ಆಗ್ರಹ : ಅ.3 ರಂದು ಮಡಿಕೇರಿಯಲ್ಲಿ ಎಸ್‌ಡಿಪಿಐ ಪ್ರತಿಭಟನೆ*

ಅಕ್ಟೋಬರ್ 2, 2026

*ಮೂರು ರಾಷ್ಟ್ರೀಯ ಹಾಗೂ ಒಂದು ರಾಜ್ಯಮಟ್ಟದ ಪ್ರಶಸ್ತಿ ಪುರಸ್ಕೃತರಾದ ಕಡ್ಲೇರ ತುಳಸಿ ಮೋಹನ್ ಅವರಿಗೆ ಸನ್ಮಾನ*

ಅಕ್ಟೋಬರ್ 2, 2026

*ಅಂಡರ್-19 ರಾಷ್ಟ್ರೀಯ ವಾಲಿಬಾಲ್ ಚಾಂಪಿಯನ್‌ಶಿಪ್‌ನಲ್ಲಿ ಕರ್ನಾಟಕಕ್ಕೆ ಚಿನ್ನ*

ಅಕ್ಟೋಬರ್ 1, 2026

*ಪೊನ್ನಂಪೇಟೆಯಲ್ಲಿ ಸ್ವಚ್ಛತಾ ಹೀ ಸೇವಾ ಅಭಿಯಾನಕ್ಕೆ ಚಾಲನೆ*

ಅಕ್ಟೋಬರ್ 1, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.