Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada
Home»ಇತ್ತೀಚಿನ ಸುದ್ದಿಗಳು»ವಯನಾಡ್ ದುರಂತ : ಪಶ್ಚಿಮ ಘಟ್ಟಗಳ 57,000 ಚದರ ಕಿಲೋಮೀಟರ್ ಪರಿಸರ-ಸೂಕ್ಷ್ಮ ಎಂದು ಘೋಷಿಸಲು ಮತ್ತೆ  ಕರಡು ಆಧಿಸೂಚನೆ ಹೊರಡಿಸಿದ ಕೇಂದ್ರ
ಇತ್ತೀಚಿನ ಸುದ್ದಿಗಳು ಕರ್ನಾಟಕ ಭಾರತ

ವಯನಾಡ್ ದುರಂತ : ಪಶ್ಚಿಮ ಘಟ್ಟಗಳ 57,000 ಚದರ ಕಿಲೋಮೀಟರ್ ಪರಿಸರ-ಸೂಕ್ಷ್ಮ ಎಂದು ಘೋಷಿಸಲು ಮತ್ತೆ  ಕರಡು ಆಧಿಸೂಚನೆ ಹೊರಡಿಸಿದ ಕೇಂದ್ರ

ಆಗಷ್ಟ್ 4, 20242 Mins ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement

ನವದೆಹಲಿ NEWS DESK ಆ.4 : (ಕೋವರ್‌ ಕೊಲ್ಲಿ ಇಂದ್ರೇಶ್‌) ಕೇರಳದ ವಯನಾಡ್ ಜಿಲ್ಲೆಯ ಮೆಪ್ಪಾಡಿ ಬಳಿಯ ಗುಡ್ಡಗಾಡು ಪ್ರದೇಶಗಳಲ್ಲಿ ಭಾರೀ ಭೂಕುಸಿತದ ನಂತರ  ಕೇಂದ್ರ ಸರ್ಕಾರ ಜುಲೈ 31 ರಂದು ವಿವರವಾದ ಕರಡು ಅಧಿಸೂಚನೆಯನ್ನು ಹೊರಡಿಸಿದ್ದು , ಇದು ಸುಮಾರು ಶೇ.36 ಪಶ್ಚಿಮ ಘಟ್ಟಗಳನ್ನು ಪರಿಸರ ಸೂಕ್ಷ್ಮ ಎಂದು ಘೋಷಿಸಲು ಪ್ರಸ್ತಾಪಿಸಿದೆ. ಈ ಪ್ರದೇಶವು ವಯನಾಡಿನ 13 ಹಳ್ಳಿಗಳನ್ನು ಮತ್ತು ಕೇರಳ ರಾಜ್ಯದಲ್ಲಿ ಸುಮಾರು 10,000 ಚದರ ಕಿ.ಮೀ. ಪ್ರದೇಶವನ್ನು ಸೂಕ್ಷ್ಮ ವ್ಯಾಪ್ತಿಗೆ ತರಲಾಗುತ್ತಿದೆ.  ಆ ಪ್ರಕಾರ ಪಶ್ಚಿಮ ಘಟ್ಟಗಳ ಸುಮಾರು 57,000 ಚದರ ಕಿಲೋಮೀಟರ್   ಪ್ರದೇಶವನ್ನು ‘ಪರಿಸರ ಸೂಕ್ಷ್ಮ ಪ್ರದೇಶ’ ಎಂದು ಘೋಷಿಸಲು  ನಿರ್ಧರಿಸಿದೆ.  ಈ ಕುರಿತು ಕೇಂದ್ರಕ್ಕೆ ತಮ್ಮ ಅಭಿಪ್ರಾಯಗಳನ್ನು ನೀಡಲು ನಾಗರಿಕರಿಗೆ 60 ದಿನಗಳ ಕಾಲಾವಕಾಶ ನೀಡಲಾಗಿದೆ, ನಂತರ ಅಂತಿಮ ಅಧಿಸೂಚನೆಯನ್ನು ರಾಜ್ಯವಾರು ಅಥವಾ ಸಂಯೋಜಿತ ಆದೇಶವನ್ನು ಪ್ರಕಟಿಸಲಾಗುವುದು ಎಂದು ಕರಡು ಅಧಿಸೂಚನೆಯಲ್ಲಿ ಹೇಳಲಾಗಿದೆ. ಮಹಾರಾಷ್ಟ್ರ, ಕರ್ನಾಟಕ, ಕೇರಳ, ತಮಿಳುನಾಡು, ಗೋವಾ ಮತ್ತು ಗುಜರಾತ್ – ಆರು ರಾಜ್ಯಗಳಲ್ಲಿ 56,826 ಚದರ ಕಿ.ಮೀ ಪ್ರದೇಶವನ್ನು ‘ಪರಿಸರ ಸೂಕ್ಷ್ಮ’ ಎಂದು ಘೋಷಿಸಲು ಉದ್ದೇಶಿಸಲಾಗಿದೆ,  ಈ ಅಧಿಸೂಚನೆ ಜಾರಿಗೆ ಬಂದರೆ ಈ ಪ್ರದೇಶಗಳಲ್ಲಿ  ವಾಣಿಜ್ಯ ಚಟುವಟಿಕೆಯ ಮೇಲೆ ಹಲವಾರು ನಿರ್ಬಂಧಗಳನ್ನು  ವಿಧಿಸಲಾಗುತ್ತದೆ. ಕೇಂದ್ರದಿಂದ ಕರಡು ಅಧಿಸೂಚನೆ ಹೊರಡಿಸಿರುವುದು ಇದು ಆರನೇ ಬಾರಿ ಆಗಿದ್ದು  ಕೊನೆಯ ಕರಡನ್ನು ಜುಲೈ 2022 ರಲ್ಲಿ  ಹೊರಡಿಸಲಾಗಿತ್ತು. ಮತ್ತು ರಾಜ್ಯ ಸರ್ಕಾರಗಳೊಂದಿಗೆ ಸಮಾಲೋಚಿಸಿ ಅಧಿಸೂಚನೆಯನ್ನು ಅಂತಿಮಗೊಳಿಸಲು ಸಮಿತಿಯನ್ನು ಸಹ ರಚಿಸಲಾಯಿತು. ಅತಿರೇಕದ ವ್ಯಾಪಾರೀಕರಣ ಮತ್ತು ‘ಪರಿಸರ ಸೂಕ್ಷ್ಮ ಪ್ರದೇಶ’  ಎಂದು ಪಟ್ಟಿ ಮಾಡದಿರುವುದು  ವಯನಾಡ್ ದುರಂತದ ಹಿಂದಿನ ಪ್ರಮುಖ ಕಾರಣಗಳೆಂದು ಗುರುತಿಸಲಾಗಿದೆ,  ಈ ದುರಂತದಲ್ಲಿ ಸುಮಾರು 300 ಕ್ಕೂ ಅಧಿಕ ಜನರು ಪ್ರಾಣ ಕಳೆದುಕೊಂಡಿದ್ದಾರೆ. ಕೇಂದ್ರದ ಕರಡು ಅಧಿಸೂಚನೆಯ ಪ್ರಕಾರ ವಯನಾಡಿನಲ್ಲಿ ಪರಿಸರ ಸೂಕ್ಷ್ಮ ವಲಯ ಎಂದು ಘೋಷಿಸಲು ಉದ್ದೇಶಿಸಿರುವ ಗ್ರಾಮಗಳೆಂದರೆ ಪೆರಿಯ, ತಿರುನೆಲ್ಲಿ, ತೊಂಡರ್‌ನಾಡ್, ತ್ರಿಸಿಲೇರಿ, ಕಿಡಂಗನಾಡ್, ನೂಲ್‌ಪುಳ, ಅಚೂರಾನಂ, ಚುಂಡೇಲ್, ಕೊಟ್ಟಪ್ಪಾಡಿ, ಕುನ್ನತ್ತಿದವಕ, ಪೊಝುತಾನ, ತಾರಿಯೋಡ್ ಮತ್ತು ವೆಳ್ಳರಿಮಲ ಆಗಿವೆ.  ಕರ್ನಾಟಕದ  ನಾಗರಹೊಳೆ ಹುಲಿ ಸಂರಕ್ಷಿತ ಪ್ರದೇಶ ಸೇರಿದಂತೆ ರಾಜ್ಯದ ಆರು ಅರಣ್ಯ ಪ್ರದೇಶಗಳಲ್ಲಿ ಪರಿಸರ ಸೂಕ್ಷ್ಮ ವಲಯಗಳನ್ನು (ESZ) ಗುರುತಿಸಿ ಘೋಷಿಸುವ ಅರಣ್ಯ ಇಲಾಖೆಯ ಪ್ರಸ್ತಾವನೆಗೆ ಅನುಮೋದನೆ ನೀಡಿದೆ.   ರಾಜ್ಯದ  ಗದಗ ಜಿಲ್ಲೆಯ  ಕಪ್ಪತಗುಡ್ಡ ವನ್ಯಜೀವಿ ಅಭಯಾರಣ್ಯ, ತುಮಕೂರಿನ ಬುಕ್ಕಾಪಟ್ಟಣದ ಚಿಂಕಾರ ವನ್ಯಜೀವಿ ಅಭಯಾರಣ್ಯ, ಕೋಲಾರದ ಕಾಮಸಂದ್ರ ವನ್ಯಜೀವಿ ಅಭಯಾರಣ್ಯ, ಅಣಶಿ ರಾಷ್ಟ್ರೀಯ ಉದ್ಯಾನವನ ಮತ್ತು ದಾಂಡೇಲಿ ವನ್ಯಜೀವಿ ಸಂರಕ್ಷಿತ ಪ್ರದೇಶ ಮತ್ತು  ನಾಗರಹೊಳೆ ಅಭಯಾರಣ್ಯ ಸೂಕ್ಷ್ಮ ವಲಯಕ್ಕೆ ಸೇರಿವೆ.  “ಇಎಸ್‌ಜೆಡ್  ಎಂದು ಘೋಷಣೆಯಾದರೆ ಅರಣ್ಯದಿಂದ  10 ಕಿಮೀ  ವರೆಗೆ   ವಾಣಿಜ್ಯ ಕಟ್ಟಡ ಮತ್ತು ಚಟುವಟಿಕೆಗಳಿಗೆ ಸರ್ಕಾರ ನಿರ್ಬಂಧ ವಿಧಿಸಲಿದೆ.  ಈ ಪ್ರದೇಶದಲ್ಲಿ ಗಣಿಗಾರಿಕೆ, ಕಲ್ಲುಗಣಿಗಾರಿಕೆ ಮತ್ತು ಮರಳು ಗಣಿಗಾರಿಕೆ ಮೇಲೆ ಸಂಪೂರ್ಣ ನಿಷೇಧ ವಿಧಿಸಲಾಗುತ್ತದೆ, ಅಸ್ತಿತ್ವದಲ್ಲಿರುವ ಗಣಿಗಳನ್ನು ಅಂತಿಮ ಅಧಿಸೂಚನೆ ದಿನಾಂಕದಿಂದ ಅಥವಾ ಗುತ್ತಿಗೆಯ ಮುಕ್ತಾಯದವರೆಗೆ ಹಂತಹಂತವಾಗಿ ಮುಚ್ಚಲಾಗುವುದು. ಹೊಸ ಉಷ್ಣ ವಿದ್ಯುತ್ ಯೋಜನೆಗಳನ್ನು ನಿಷೇಧಿಸುತ್ತದೆ. ಅಸ್ತಿತ್ವದಲ್ಲಿರುವ ಯೋಜನೆಗಳು ಕಾರ್ಯನಿರ್ವಹಿಸುವುದನ್ನು ಮುಂದುವರಿಸಬಹುದು. ಆದರೆ, ಯಾವುದೇ ವಿಸ್ತರಣೆಗೆ ಅವಕಾಶವಿಲ್ಲ ಎಂದು ಹೇಳುತ್ತದೆ. ಅಸ್ತಿತ್ವದಲ್ಲಿರುವ ಕಟ್ಟಡಗಳ ದುರಸ್ತಿ ಮತ್ತು ನವೀಕರಣ ಹೊರತುಪಡಿಸಿ, ದೊಡ್ಡ ಪ್ರಮಾಣದ ನಿರ್ಮಾಣ ಯೋಜನೆಗಳು ಮತ್ತು ಟೌನ್‌ಶಿಪ್‌ಗಳನ್ನು ಸಹ ನಿಷೇಧಿಸಲು ಪ್ರಸ್ತಾಪಿಸಲಾಗಿದೆ. 20,000 ಚದರ ಮೀಟರ್ ಮತ್ತು ಅದಕ್ಕಿಂತ ಹೆಚ್ಚಿನ ನಿರ್ಮಾಣ ಪ್ರದೇಶಗಳು, ಹೊಸ ಮತ್ತು ವಿಸ್ತರಣೆ ಟೌನ್‌ಶಿಪ್‌ಗಳು ಮತ್ತು 50 ಹೆಕ್ಟೇರ್ ಮತ್ತು ಅದಕ್ಕಿಂತ ಹೆಚ್ಚಿನ ವಿಸ್ತೀರ್ಣ ಅಥವಾ 1,50,000 ಚದರ ಮೀಟರ್‌ ನಿರ್ಮಾಣ ಪ್ರದೇಶವಿರುವ ಅಭಿವೃದ್ಧಿ ಯೋಜನೆಗಳನ್ನು ನಿಷೇಧಿಸುವ ಪ್ರಸ್ತಾಪವಿದೆ.

Follow us Follow us
Share. WhatsApp Facebook Twitter Email Telegram Copy Link

Related Posts

ಕಡಗದಾಳಿನಲ್ಲಿ ಎನ್‌ಎಸ್‌ಎಸ್ ಶಿಬಿರದ ಸಮಾರೋಪ : ಸಮಾಜದ ಅಭಿವೃದ್ಧಿಗೆ ವಿದ್ಯಾರ್ಥಿಗಳು ಕೊಡುಗೆ ನೀಡಲಿ : ಮೇಜರ್ ಪ್ರೊ. ರಾಘವ ಬಿ.

ಅಕ್ಟೋಬರ್ 15, 2026

ಅ.17 ರಂದು ಉಸ್ತುವಾರಿ ಸಚಿವ ಪಿ.ಎಂ.ನರೇಂದ್ರ ಸ್ವಾಮಿ ಕೊಡಗಿಗೆ ಭೇಟಿ

ಅಕ್ಟೋಬರ್ 15, 2026

ಸಾಂತ್ವನ ಮಹಿಳಾ ಸಹಾಯವಾಣಿ : ಕೊಡಗಿನಲ್ಲಿ 5860 ಪ್ರಕರಣಗಳು ಇತ್ಯರ್ಥ

ಅಕ್ಟೋಬರ್ 15, 2026

ಅ.17 ರಂದು ಉಸ್ತುವಾರಿ ಸಚಿವ ಪಿ.ಎಂ.ನರೇಂದ್ರ ಸ್ವಾಮಿ ಕೊಡಗಿಗೆ ಭೇಟಿ

ಅಕ್ಟೋಬರ್ 15, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಮಡಿಕೇರಿ ಅ.15 NEWS DESK  : ಕೃಷಿ ಹಾಗೂ ಉಸ್ತುವಾರಿ ಸಚಿವರಾದ ಪಿ.ಎಂ.ನರೇಂದ್ರ ಸ್ವಾಮಿ ಅವರು ಅಕ್ಟೋಬರ್, 17 ರಂದು…

ಸಾಂತ್ವನ ಮಹಿಳಾ ಸಹಾಯವಾಣಿ : ಕೊಡಗಿನಲ್ಲಿ 5860 ಪ್ರಕರಣಗಳು ಇತ್ಯರ್ಥ

ಅಕ್ಟೋಬರ್ 15, 2026

ಅ.16 ರಂದು ಮಕ್ಕಳ ದಸರಾ ಸಂಭ್ರಮ: ಮಕ್ಕಳಿಂದ ವೈವಿದ್ಯಮಯ ಸ್ಪರ್ಧೆಗಳು

ಅಕ್ಟೋಬರ್ 15, 2026

ಗೋಣಿಕೊಪ್ಪಲು : ಅ.16 ರಂದು ವಿದ್ಯುತ್ ವ್ಯತ್ಯಯ

ಅಕ್ಟೋಬರ್ 15, 2026

ಮಡಿಕೇರಿ ನಗರ ದಸರಾ ಬಹುಭಾಷಾ ಕವಿಗೋಷ್ಠಿ : ಭಾವನೆ ಕಟ್ಟಿಕೊಡುವಲ್ಲಿ ಕಥೆ, ಕವನ, ಕವಿತೆ ಸಹಕಾರಿ : ಡಾ.ಎನ್.ಕೆ.ಲೋಲಾಕ್ಷಿ

ಅಕ್ಟೋಬರ್ 15, 2026

ಕುಶಾಲನಗರದಲ್ಲಿ ಮಾಜಿ ಸೈನಿಕರ 84ನೇ ಇಎಂಇ ಕಾರ್ಪ್ಸ್ ದಿನಾಚರಣೆ ಸಂಭ್ರಮ

ಅಕ್ಟೋಬರ್ 15, 2026

ಕೊಡವಲ್ಯಾಂಡ್ ಸ್ವಾಯತ್ತತೆಗಾಗಿ 100 ವರ್ಷಗಳಾದರೂ ಹೋರಾಟ ನಿಲ್ಲದು: ಎನ್.ಯು. ನಾಚಪ್ಪ

ಅಕ್ಟೋಬರ್ 15, 2026

ಗೋಣಿಕೊಪ್ಪಲು ದಸರಾ ಜನೋತ್ಸವದಲ್ಲಿ ಅ.16ರಂದು ರಾಜ್ಯಮಟ್ಟದ ಬಹುಭಾಷಾ ಕವಿಗೋಷ್ಠಿ; 118 ಕವಿಗಳಿಂದ ಕವನ ವಾಚನ; ಜೆನ್ ಜಿ ಹಾಗೂ ಮಕ್ಕಳ ಕವಿಗೋಷ್ಠಿ ವಿಶೇಷ ಆಕರ್ಷಣೆ

ಅಕ್ಟೋಬರ್ 15, 2026

ಕೊಡಗಿನಲ್ಲಿ ಪ್ರತಿಭಟನೆಯ ಹೆಸರಿನಲ್ಲಿ ಅಶಾಂತಿಗೆ ಅವಕಾಶ ನೀಡಬಾರದು: ರಾಕೇಶ್ ದೇವಯ್ಯ ; ಎಸ್‌ಐಆರ್ ಪರಿಷ್ಕರಣೆ ವಿರುದ್ಧದ ಪ್ರತಿಭಟನೆಗೆ ಶಾಸಕರ ಬೆಂಬಲವಿದೆಯೇ ಎಂಬುದನ್ನು ಸ್ಪಷ್ಟಪಡಿಸಲು ಆಗ್ರಹ

ಅಕ್ಟೋಬರ್ 15, 2026

ಕಡಗದಾಳು ಎನ್‌ಎಸ್‌ಎಸ್ ಶಿಬಿರದ ಸಮಾರೋಪ ಸಮಾರಂಭ

ಅಕ್ಟೋಬರ್ 15, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.