
ಮಡಿಕೇರಿ NEWS DESK ಆ.4 : ಕ್ರೋಧಿ ಸಂವತ್ಸರದ ಗ್ರೀಷ್ಮ ಋತುವಿನ ದಕ್ಷಿಣಾಯನ ಕರ್ಕಾಟಕ ಮಾಸ ಆಷಾಢ ಕೃಷ್ಣಪಕ್ಷದ ಅಮಾವಾಸ್ಯೆಯ ದಿನವಾದ ಇಂದು ಭಾಗಮಂಡಲದ ಶ್ರೀ ಭಗಂಡೇಶ್ವರ ದೇವಾಲಯದಲ್ಲಿ “ಪೊಲಿಂಕಾನ ಉತ್ಸವ” ವನ್ನು ಶ್ರದ್ಧಾಭಕ್ತಿಯಿಂದ ಆಚರಿಸಲಾಯಿತು. ಶ್ರೀ ಭಗಂಡೇಶ್ವರ ದೇವಾಲಯದ ಪ್ರಧಾನ ಅರ್ಚಕರಾದ ಎಸ್.ರವಿಕುಮಾರ್ ಅವರ ನೇತೃತ್ವದಲ್ಲಿ “ಪೊಲಿಂಕಾನ ಉತ್ಸವ” ಮತ್ತು ಮಹಾಪೂಜೆ ನಡೆಯಿತು. ತುಂಬಿ ಹರಿಯುತ್ತಿರುವ ಕಾವೇರಿಗೆ ತ್ರಿವೇಣಿ ಸಂಗಮದಲ್ಲಿ ಬಾಗಿನ ಅರ್ಪಿಸಲಾಯಿತು. ದೇವಾಲಯದ ಕಾರ್ಯನಿರ್ವಾಹಣಾಧಿಕಾರಿಗಳಾದ ಚಂದ್ರಶೇಖರ್ ಎನ್.ಜಿ, ತಕ್ಕಮುಖ್ಯಸ್ಥರಾದ ಬಳ್ಳಡ್ಕ ಬಿ.ಸಿ.ಅಪ್ಪಾಜಿ, ಶ್ರೀ ತಲಕಾವೇರಿ ದೇವಾಲಯದ ತಕ್ಕಮುಖ್ಯಸ್ಥರಾದ ಕೋಡಿ ಯು.ಮೋಟಯ್ಯ, ಸಿಬ್ಬಂದಿ ವರ್ಗ ಹಾಗೂ ಭಕ್ತಾದಿಗಳು ಉತ್ಸವದಲ್ಲಿ ಪಾಲ್ಗೊಂಡಿದ್ದರು.









