Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಗಾಂಧಿ ಜಯಂತಿ ಪ್ರಯುಕ್ತ ಬೇಟೋಳಿ ರಾಮನಗರದಲ್ಲಿ ಸ್ವಚ್ಛತಾ ಅಭಿಯಾನ*
  • *ಸಂತ ಅನ್ನಮ್ಮ ಪ್ರೌಢಶಾಲೆಯಲ್ಲಿ ಗಾಂಧಿ ಜಯಂತಿ ಆಚರಣೆ*
  • *ಸೆಂಟ್ ಆನ್ಸ್ ಪದವಿ ಕಾಲೇಜಿನ ಎನ್‌ಎಸ್‌ಎಸ್ ವಿದ್ಯಾರ್ಥಿಗಳಿಂದ ಸ್ವಚ್ಛತಾ ಶ್ರಮದಾನ*
  • *ಬಕ್ಕದಲ್ಲಿ ಸಮುದಾಯ ಭವನ ನಿರ್ಮಾಣಕ್ಕೆ ಸ್ಥಳ ಪರಿಶೀಲನೆ*
  • *ಮಡಿಕೇರಿಯಲ್ಲಿ 72ನೇ ವನ್ಯಜೀವಿ ಸಪ್ತಾಹ : ವನ್ಯಜೀವಿಗಳ ಸಂರಕ್ಷಣೆ ಜಾಗೃತಿಗಾಗಿ ಬೈಸಿಕಲ್, ಬೈಕ್ ಜಾಥಾ*
  • *ಭಾಗ್ಯವತಿ ಸಿ.ಜೆ. ಅವರಿಗೆ ರಾಷ್ಟ್ರಮಟ್ಟದ ‘ಕಾಯಕ ಕಣ್ಣಮಣಿ’ ಪ್ರಶಸ್ತಿ*
  • *ಸ್ವಸ್ಥ ಸಂಸ್ಥೆಯಲ್ಲಿ ಅಂತರರಾಷ್ಟ್ರೀಯ ಕಾಫಿ ದಿನಾಚರಣೆ*
  • *ಬಾಳೆಲೆ ವಿಜಯಲಕ್ಷ್ಮಿ ಸಂಯುಕ್ತ ಪದವಿ ಪೂರ್ವ ಕಾಲೇಜಿನಲ್ಲಿ ಗಾಂಧಿ ಜಯಂತಿ ಆಚರಣೆ*
  • *ಗೋಣಿಕೊಪ್ಪದಲ್ಲಿ ಗಾಂಧೀಜಿ, ಶಾಸ್ತ್ರಿ ಜಯಂತಿ ಆಚರಣೆ*
  • *ಮಡಿಕೇರಿ ಕಾಫಿ ದಸರಾದಲ್ಲಿ ಕಾಫಿ ಖಾದ್ಯ ಸ್ಪರ್ಧೆ*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*ಬೇಗೂರು : ಪಟ್ಟಕೇರಿ ಅಂಬಲ ಬೇಲ್ ನಮ್ಮೆ : ಕೊಡವ ಭೂಮಿ ಮತ್ತು ಭಾಷೆ ಉಳಿದರೆ ಮಾತ್ರ ಕೊಡವಾಮೆಗೆ ಭವಿಷ್ಯ : ಚಾಮೆರ ದಿನೇಶ್ ಬೆಳ್ಯಪ್ಪ ಅಭಿಮತ* 
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

*ಬೇಗೂರು : ಪಟ್ಟಕೇರಿ ಅಂಬಲ ಬೇಲ್ ನಮ್ಮೆ : ಕೊಡವ ಭೂಮಿ ಮತ್ತು ಭಾಷೆ ಉಳಿದರೆ ಮಾತ್ರ ಕೊಡವಾಮೆಗೆ ಭವಿಷ್ಯ : ಚಾಮೆರ ದಿನೇಶ್ ಬೆಳ್ಯಪ್ಪ ಅಭಿಮತ* 

ಆಗಷ್ಟ್ 4, 20242 Mins ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link

ಮಡಿಕೇರಿ NEWS DESK  ಆ.4 : ಕೊಡವ ಜನಾಂಗವೂ ಈ ಮಣ್ಣಿನ ಮೂಲದಿಂದ ಬೆಳೆದು ಬಂದಿದೆ. ಭೂಮಿಯೆ ನಮ್ಮ ಎಲ್ಲಾ ಸಂಸ್ಕೃತಿ ಮತ್ತು ಬದುಕಿನ ಮೂಲ, ಹಾಗೇ ಒಂದು ಜಾನಾಂಗದ ಹೆಗ್ಗುರುತೇ ಆ ಜನಾಂಗದ ಭಾಷೆ. ಭಾಷೆ ಮತ್ತು ಮಣ್ಣಿನ ಮೂಲತನ ಉಳಿದರೆ ಮಾತ್ರ ಕೊಡವಾಮೆ ಬೆಳೆಯಲಿದೆ ಎಂದು ಕೊಡವಾಮೆರ ಕೊಂಡಾಟ ಸಂಘಟನೆಯ ಅಧ್ಯಕ್ಷ ಚಾಮೆರ ದಿನೇಶ್ ಬೆಳ್ಯಪ್ಪ ಅಭಿಪ್ರಾಯಪಟ್ಟಿದ್ದಾರೆ.  ಪೊನ್ನಂಪೇಟೆ ತಾಲ್ಲೂಕು ಬೇಗೂರಿನ ಪಟ್ಟಕೇರಿ ಅಂಬಲ ಸಂಘಟನೆಯ ಎಂಟನೇ ವರ್ಷದ ಬೇಲ್ ನಮ್ಮೆಯನ್ನು ಉದ್ಘಾಟಿಸಿ ಮಾತನಾಡಿದ ಅವರು, ಭೂಮಿ ಮತ್ತು ಭಾಷೆಯನ್ನು ಉಳಿಸುವಂತೆ ಕರೆ ನೀಡಿದರು. ಕೊಡವರ ಹುಟ್ಟಿನಿಂದ ಸಾವಿನವರೆಗೆ, ಪ್ರತೀ ಹಬ್ಬ ಹಾಗೂ ಆಚರಣೆಗಳು ಭೂಮಿ ಮತ್ತು ಗದ್ದೆಯ ಸುತ್ತಲೇ ನಿಂತಿದೆ. ಪ್ರತಿಯೊಂದು ಆಚರಣೆಗಳು ಕೂಡ ಕೃಷಿ ಆಧಾರಿತವಾಗಿಯೇ ಇದೆ. ನಮ್ಮ ಸಂಪ್ರದಾಯ ಆಚರಣೆಯ ಮೂಲ ಹೆಗ್ಗುರತೇ ಭಾಷೆ. ನಾವೆಷ್ಟೇ ಮುಂದುವರೆದು ಏನೇ ಸಾಧನೆಗಳನ್ನು ಮಾಡಿದರೂ ನಮ್ಮ ಭಾಷೆಯನ್ನು ಕಡೆಗಣಿಸಿದರೆ ನಾವು ಇದ್ದೂ ಇಲ್ಲದಂತೆ. ಆದ್ದರಿಂದ ಈ ಕೊಡಗಿನ ಪವಿತ್ರ ಮಣ್ಣು ಮತ್ತು ನಮ್ಮ ತಾಯಿಭಾಷೆಯ ಉಳಿವಿಗೆ ನಾವೆಲ್ಲರು ಕಟೀಬದ್ದರಾಗಿರಬೇಕು ಎಂದರು.      ಮುಖ್ಯ ಅತಿಥಿಗಳಾಗಿ ಪಾಲ್ಗೊಂಡು ಮಾತನಾಡಿದ ಪೊನ್ನಂಪೇಟೆ ಅರಣ್ಯ ಮಹಾ ವಿದ್ಯಾಲಯದ ಉಪನ್ಯಾಸಕ ಡಾ.ಜಡೇಗೌಡ  ಕೊಡಗಿನ ಅದರಲ್ಲೂ ಕೊಡವ ಸಂಪ್ರದಾಯ ಅತ್ಯಂತ ಶ್ರೀಮಂತವಾಗಿದೆ. ಇಲ್ಲಿನ ಪ್ರಾಕೃತಿಕ ಹಿನ್ನೆಲೆಯೇ ಅತ್ಯಂತ ಸೊಬಗಿನಿಂದ ಕೂಡಿದೆ. ಹಿರಿಯರು ಆಚರಿಸಿಕೊಂಡು ಬಂದಿರುವ ಸಂಪ್ರದಾಯವನ್ನು ಮುಂದಿನ ಪೀಳಿಗೆಯೂ ಪಾಲಿಸುವಂತೆ ಪ್ರೇರೇಪಿಸಬೇಕಿದೆ ಎಂದರು. ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದ ಪಟ್ಟಕೇರಿ ಅಂಬಲ ಸಂಘದ ಅಧ್ಯಕ್ಷ ಮತ್ರಂಡ ರಾಜ ಮುತ್ತಪ್ಪ ಅವರು, ಪಟ್ಟಕೇರಿ ಅಂಬಲ ಸಂಘಟನೆ ಕಳೆದ ಹನ್ನೊಂದು ವರ್ಷಗಳಿಂದ ಗ್ರಾಮದಲ್ಲಿ ನಿರಂತರ ಜಾಗೃತಿ ಮೂಡಿಸುತ್ತಿದ್ದು, ಹೆಚ್ಚಿನ ಸಂಖ್ಯೆಯಲ್ಲಿ ಭತ್ತ ಬೆಳೆಯಲು ಪ್ರೇರೇಪಿಸಲಾಗುತ್ತಿದೆ. ಲಾಭ ನಷ್ಟದಿಂದಾಚೆಗೆ ನಮಗೆ ಗದ್ದೆಯೊಂದಿಗಿರುವ ಭಾವನಾತ್ಮಕ ಸಂಬಂಧದ ಕುರುಹಾಗಿ ಯುವ ಸಮೂಹ ಕೂಡ ಭತ್ತ ಬೆಳೆಯುವತ್ತ ಆಕರ್ಷಿತರಾಗಿರುವುದು ಹೆಮ್ಮೆ ತಂದಿದೆ ಎಂದರು.     ಗ್ರಾಮದ ಪ್ರಗತಿ ಪರ ಕೃಷಿಕರಾದ ಕೇಚಿಟ್ಟಿರ ಪೊನ್ನಪ್ಪ ಅವರನ್ನು ಸನ್ಮಾನಿಸಲಾಯಿತು. ಪಟ್ಟಕೇರಿ ಅಂಬಲ ಸಂಘದ ಕಾರ್ಯದರ್ಶಿ ಚೋಡುಮಾಡ ಸುಬ್ಬಯ್ಯ, ಸಲಹೆಗಾರ ಮತ್ರಂಡ ಗಣೇಶ್ ಅವರು ಉಪಸ್ಥಿತರಿದ್ದರು. ಕುಮಾರಿ ಮತ್ರಂಡ ಗಾನವಿ ದೇಚಮ್ಮ ಪ್ರಾರ್ಥಿಸಿ, ಮತ್ರಂಡ ಬೋಪಣ್ಣ ನಿರೂಪಿಸಿ ವಂದಿಸಿದರು.

Follow us Follow us
Share. WhatsApp Facebook Twitter Email Telegram Copy Link

Related Posts

*ಗಾಂಧಿ ಜಯಂತಿ ಪ್ರಯುಕ್ತ ಬೇಟೋಳಿ ರಾಮನಗರದಲ್ಲಿ ಸ್ವಚ್ಛತಾ ಅಭಿಯಾನ*

ಅಕ್ಟೋಬರ್ 2, 2026

*ಸಂತ ಅನ್ನಮ್ಮ ಪ್ರೌಢಶಾಲೆಯಲ್ಲಿ ಗಾಂಧಿ ಜಯಂತಿ ಆಚರಣೆ*

ಅಕ್ಟೋಬರ್ 2, 2026

*ಸೆಂಟ್ ಆನ್ಸ್ ಪದವಿ ಕಾಲೇಜಿನ ಎನ್‌ಎಸ್‌ಎಸ್ ವಿದ್ಯಾರ್ಥಿಗಳಿಂದ ಸ್ವಚ್ಛತಾ ಶ್ರಮದಾನ*

ಅಕ್ಟೋಬರ್ 2, 2026

*ಸಂತ ಅನ್ನಮ್ಮ ಪ್ರೌಢಶಾಲೆಯಲ್ಲಿ ಗಾಂಧಿ ಜಯಂತಿ ಆಚರಣೆ*

ಅಕ್ಟೋಬರ್ 2, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ವಿರಾಜಪೇಟೆ, NEWS DESK ಅ.02: ಪಟ್ಟಣದ ಸಂತ ಅನ್ನಮ್ಮ ಪ್ರೌಢಶಾಲೆಯಲ್ಲಿ ಎನ್‌ಸಿಸಿ ಘಟಕದ ವತಿಯಿಂದ ರಾಷ್ಟ್ರಪಿತ ಮಹಾತ್ಮ ಗಾಂಧೀಜಿ ಹಾಗೂ…

*ಸೆಂಟ್ ಆನ್ಸ್ ಪದವಿ ಕಾಲೇಜಿನ ಎನ್‌ಎಸ್‌ಎಸ್ ವಿದ್ಯಾರ್ಥಿಗಳಿಂದ ಸ್ವಚ್ಛತಾ ಶ್ರಮದಾನ*

ಅಕ್ಟೋಬರ್ 2, 2026

*ಬಕ್ಕದಲ್ಲಿ ಸಮುದಾಯ ಭವನ ನಿರ್ಮಾಣಕ್ಕೆ ಸ್ಥಳ ಪರಿಶೀಲನೆ*

ಅಕ್ಟೋಬರ್ 2, 2026

*ಮಡಿಕೇರಿಯಲ್ಲಿ 72ನೇ ವನ್ಯಜೀವಿ ಸಪ್ತಾಹ : ವನ್ಯಜೀವಿಗಳ ಸಂರಕ್ಷಣೆ ಜಾಗೃತಿಗಾಗಿ ಬೈಸಿಕಲ್, ಬೈಕ್ ಜಾಥಾ*

ಅಕ್ಟೋಬರ್ 2, 2026

*ಭಾಗ್ಯವತಿ ಸಿ.ಜೆ. ಅವರಿಗೆ ರಾಷ್ಟ್ರಮಟ್ಟದ ‘ಕಾಯಕ ಕಣ್ಣಮಣಿ’ ಪ್ರಶಸ್ತಿ*

ಅಕ್ಟೋಬರ್ 2, 2026

*ಸ್ವಸ್ಥ ಸಂಸ್ಥೆಯಲ್ಲಿ ಅಂತರರಾಷ್ಟ್ರೀಯ ಕಾಫಿ ದಿನಾಚರಣೆ*

ಅಕ್ಟೋಬರ್ 2, 2026

*ಬಾಳೆಲೆ ವಿಜಯಲಕ್ಷ್ಮಿ ಸಂಯುಕ್ತ ಪದವಿ ಪೂರ್ವ ಕಾಲೇಜಿನಲ್ಲಿ ಗಾಂಧಿ ಜಯಂತಿ ಆಚರಣೆ*

ಅಕ್ಟೋಬರ್ 2, 2026

*ಗೋಣಿಕೊಪ್ಪದಲ್ಲಿ ಗಾಂಧೀಜಿ, ಶಾಸ್ತ್ರಿ ಜಯಂತಿ ಆಚರಣೆ*

ಅಕ್ಟೋಬರ್ 2, 2026

*ಮಡಿಕೇರಿ ಕಾಫಿ ದಸರಾದಲ್ಲಿ ಕಾಫಿ ಖಾದ್ಯ ಸ್ಪರ್ಧೆ*

ಅಕ್ಟೋಬರ್ 2, 2026

*2018ರ ಸಂಕಷ್ಟದ ಚಿತ್ರಣ : ‘ಮುತ್ತು ನಾಡ್’ ಕಿರುಚಿತ್ರಕ್ಕೆ ಚಿಕಾಗೋ ಸ್ಕ್ರಿಪ್ಟ್ ಅವಾರ್ಡ್*

ಅಕ್ಟೋಬರ್ 2, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.