Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada
Home»ಇತ್ತೀಚಿನ ಸುದ್ದಿಗಳು»ಕ್ರೀಡಾಪಟುಗಳಿಗೆ ರಾಜ್ಯ ಸರ್ಕಾರದ ಇಲಾಖೆಗಳಲ್ಲಿ ಗ್ರೂಪ್ ಎ, ಬಿ ಮತ್ತು ಇತರ ಹುದ್ದೆಗಳಿಗೆ ನೇಮಕಾತಿಗೆ ಆಫರ್ ಲೆಟರ್
ಇತ್ತೀಚಿನ ಸುದ್ದಿಗಳು ಕರ್ನಾಟಕ

ಕ್ರೀಡಾಪಟುಗಳಿಗೆ ರಾಜ್ಯ ಸರ್ಕಾರದ ಇಲಾಖೆಗಳಲ್ಲಿ ಗ್ರೂಪ್ ಎ, ಬಿ ಮತ್ತು ಇತರ ಹುದ್ದೆಗಳಿಗೆ ನೇಮಕಾತಿಗೆ ಆಫರ್ ಲೆಟರ್

ಆಗಷ್ಟ್ 4, 20242 Mins ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement

ಬೆಂಗಳೂರು NEWS DESK ಆ.4: ಕ್ರೀಡಾ ಸಾಧಕರನ್ನು ಗುರುತಿಸಿ ಪ್ರೋತ್ಸಾಹ ನೀಡುವ ಮೂಲಕ ಕ್ರೀಡಾ ಚಟುವಟಿಕೆಗಳಿಗೆ ರಾಜ್ಯ ಸರ್ಕಾರ ಎಲ್ಲಾ ರೀತಿಯ ನೆರವು ಒದಗಿಸಲು ಬದ್ಧವಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಹೇಳಿದರು. ಅವರು ಭಾನುವಾರ ಕೃಷ್ಣಾದಲ್ಲಿ ಭಾನುವಾರ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ವತಿಯಿoದ ಒಲoಪಿಕ್ಸ್, ಪ್ಯಾರಾಲಿoಪಿಕ್ಸ್, ಏಷಿಯನ್ ಗೇಮ್ಸ್, ಪ್ಯಾರಾ ಏಷಿಯನ್ ಗೇಮ್ಸ್, ಕಾಮನ್ವೆಲ್ತ್ ಗೇಮ್ ಗಳಲ್ಲಿ ಪದಕ ವಿಜೇತ 12ಮಂದಿ  ಸಾಧಕ ಕ್ರೀಡಾಪಟುಗಳಿಗೆ ರಾಜ್ಯ ಸರ್ಕಾರದ ಇಲಾಖೆಗಳಲ್ಲಿ ಗ್ರೂಪ್ ಎ, ಬಿ ಮತ್ತು ಇತರ ಹುದ್ದೆಗಳಿಗೆ ನೇಮಕಾತಿಗೆ ಆಫರ್ ಲೆಟರ್ ವಿತರಿಸಿ ಮಾತನಾಡಿದರು. ಈ ಹಿಂದೆ ಮುಖ್ಯಮಂತ್ರಿಯಾಗಿದ್ದಾಗ 2016-17ರ ಅವಧಿಯಲ್ಲಿ ಹುಬ್ಬಳ್ಳಿಯಲ್ಲಿ ಒಲಂಪಿಕ್ಸ್‌ ಅಸೋಸಿಯೇಶನ್‌ ವತಿಯಿಂದ ಆಯೋಜಿಸಲಾಗಿದ್ದ ಕ್ರೀಡಾಕೂಟದ ಸಂದರ್ಭದಲ್ಲಿ, ಒಲಂಪಿಕ್ಸ್‌, ಏಶ್ಯಾಡ್‌ ಮತ್ತು ಕಾಮನ್‌ವೆಲ್ತ್‌ನಂತಹ ಕ್ರೀಡಾಕೂಟಗಳಲ್ಲಿ ಸಾಧನೆ ಮಾಡುವ ಕ್ರೀಡಾಳುಗಳಿಗೆ ಸರ್ಕಾರಿ ನೌಕರಿ ಒದಗಿಸುವುದಾಗಿ ಘೋಷಣೆ ಮಾಡಿದ್ದೆ. ಸರ್ಕಾರ ಬದಲಾದ ಬಳಿಕ ಇದು ನೆನೆಗುದಿಗೆ ಬಿದ್ದಿತ್ತು. ಇದೀಗ ಈ ಕಾರ್ಯಕ್ಕೆ ಚಾಲನೆ ನೀಡಲಾಗಿದೆ ಎಂದು ಹೇಳಿದರು. ಈ ಹಿಂದೆ ಪೊಲೀಸ್‌ ಇಲಾಖೆಯಲ್ಲಿ ಮಾತ್ರ ಕ್ರೀಡಾ ಸಾಧಕರಿಗೆ ಉದ್ಯೋಗದಲ್ಲಿ ಶೇ.2ರಷ್ಟು ಹುದ್ದೆಗಳನ್ನು ಮೀಸಲಿಡಲಾಗಿತ್ತು. ಇದೀಗ ಪೊಲೀಸ್‌ ಮತ್ತು ಅರಣ್ಯ ಇಲಾಖೆಗಳಲ್ಲಿ ಶೇ.3ರಷ್ಟು ಹುದ್ದೆಗಳನ್ನು ಹಾಗೂ ರಾಜ್ಯ ಸರ್ಕಾರದ ಎಲ್ಲಾ ಇಲಾಖೆಗಳಲ್ಲಿ ಸಾಧಕ ಕ್ರೀಡಾಪಟುಗಳಿಗೆ ಶೇ.2ರಷ್ಟು ಹುದ್ದೆಗಳನ್ನು ಮೀಸಲಿಡುವ ಕುರಿತು ಕರಡು ಅಧಿಸೂಚನೆ ಹೊರಡಿಸಲಾಗಿದೆ. ಶೀಘ್ರವೇ ಈ ಕುರಿತು ಅಂತಿಮ ಅಧಿಸೂಚನೆ ಹೊರಡಿಸಲಾಗುವುದು ಎಂದು ಹೇಳಿದರು. ಯುವ ಸಬಲೀಕರಣ ಇಲಾಖೆಯಲ್ಲಿ ಸಾಧಕ ಕ್ರೀಡಾಪಟುಗಳು ಹಾಗೂ ಅವರನ್ನು ರೂಪಿಸಿದ ತರಬೇತುದಾರರು ಮತ್ತು ದೈಹಿಕ ಶಿಕ್ಷಣ ಪರಿಣಿತರಿಗೂ ನೇಮಕಾತಿಗೆ ಅವಕಾಶ ಕಲ್ಪಿಸಿ ಭರ್ತಿ ವೃಂದ ಮತ್ತು ನೇಮಕಾತಿ ನಿಯಮ ರೂಪಿಸಲಾಗಿದೆ ಎಂದರು. ನೇಮಕಾತಿಗಾಗಿ ಕ್ರೀಡಾ ಸಾಧಕರಿಂದ ಆನ್‌ಲೈನ್‌ ಮೂಲಕ ಅರ್ಜಿ ಕರೆಯಲಾಗಿತ್ತು. ಸರ್ಕಾರದ ಮುಖ್ಯ ಕಾರ್ಯದರ್ಶಿಯವರ ಅಧ್ಯಕ್ಷತೆಯ ಸಮಿತಿಯು ಆಯ್ಕೆ  ಮಾಡಿದೆ. ಕ್ರೀಡೆಗಳಲ್ಲಿ ಸಾಧನೆ ಮಾಡುವ ಮೂಲಕ ನೀವೆಲ್ಲರೂ ದೇಶಕ್ಕೆ ಕೀರ್ತಿ ತಂದಿದ್ದೀರಿ. ನಿಮ್ಮ ಸಾಧನೆ ಗುರುತಿಸಿ, ಪ್ರೋತ್ಸಾಹ ನೀಡುವುದು ಸರ್ಕಾರದ ಜವಾಬ್ದಾರಿಯಾಗಿದೆ. ವಿಶ್ವದಲ್ಲೇ ಅತ್ಯಂತ ಹೆಚ್ಚು ಜನಸಂಖ್ಯೆ ಹೊಂದಿರುವ ದೇಶ ನಮ್ಮದು. ಒಲಂಪಿಕ್ಸ್‌ ನಂತಹ ಕ್ರೀಡಾಕೂಟಗಳಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಜನರು ಸ್ಪರ್ಧಿಸಬೇಕೆಂಬುವುದು ನಮ್ಮ ಉದ್ದೇಶ. ಇದಕ್ಕೆ ಪೂರಕವಾದ ವಾತಾವರಣವನ್ನು, ನೆರವನ್ನು ಸರ್ಕಾರ ಒದಗಿಸಲಿದೆ ಎಂದು ಅವರು ಹೇಳಿದರು. ::: ಅವಕಾಶ ಪತ್ರ ಪಡೆದ ಕ್ರಿಡಾ ಸಾಧಕರ ವಿವರ ::: ಗಿರೀಶ್‌ ಎಚ್.ಎನ್‌ (ಪ್ಯಾರಾ ಅಥ್ಲೆಟಿಕ್ಸ್)‌, ದಿವ್ಯಾ ಟಿ.ಎಸ್.‌ (ಶೂಟಿಂಗ್)‌, ಉಷಾರಾಣಿ ಎನ್.‌ (ಕಬಡ್ಡಿ), ಸುಷ್ಮಿತಾ ಪವಾರ್‌ (ಕಬಡ್ಡಿ), ನಿಕ್ಕಿನ್‌ ತಿಮ್ಮಯ್ಯ (ಹಾಕಿ), ಎಸ್.ವಿ.ಸುನೀಲ್‌ (ಹಾಕಿ), ಕಿಶನ್‌ ಗಂಗೊಳ್ಳಿ (ಚೆಸ್)‌, ರಾಘವೇಂದ್ರ ರತ್ನಾಕರ ಅಣ್ವೇಕರ್‌ (ಈಜು), ರಾಧಾ ವಿ. (ಪ್ಯಾರಾ ಅಥ್ಲೆಟಿಕ್ಸ್)‌, ಶರತ್‌ ಎಂ.ಎಸ್‌ (ಪ್ಯಾರಾ ಅಥ್ಲೆಟಿಕ್ಸ್)‌, ಗುರುರಾಜ (ವೇಯ್ಟ್‌ ಲಿಫ್ಟಿಂಗ್)‌ ಮತ್ತು ಮಲಪ್ರಭಾ ಯಲ್ಲಪ್ಪ ಜಾಧವ (ಕುರಾಶ್)‌ ಇವರಿಗೆ ನೇಮಕಾತಿ ಆಫರ್‌ ಲೆಟರ್‌ ನೀಡಿದರು. ಮುಖ್ಯಮoತ್ರಿ ಅವರ ರಾಜಕೀಯ ಕಾರ್ಯದರ್ಶಿ ಕೆ. ಗೋವಿoದ ರಾಜು, ಯುವ ಸಬಲೀಕರಣ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿ ಎನ್. ಮoಜುನಾಥ ಪ್ರಸಾದ್ ಮತ್ತಿತರರು ಉಪಸ್ಥಿತರಿದ್ದರು.

Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
Follow us Follow us
Share. WhatsApp Facebook Twitter Email Telegram Copy Link

Related Posts

ಮಡಿಕೇರಿಯಲ್ಲಿ ಮಕ್ಕಳ ದಸರಾ ಸಂಭ್ರಮ : ವಿದ್ಯಾರ್ಥಿಗಳ ಪ್ರತಿಭೆಗೆ ಪೋಷಕರ ಪ್ರೋತ್ಸಾಹ ಅಗತ್ಯ : ಜಿಲ್ಲಾಧಿಕಾರಿ ಎಸ್.ಜೆ.ಸೋಮಶೇಖರ್

ಅಕ್ಟೋಬರ್ 16, 2026

ತಲಕಾವೇರಿಯಲ್ಲಿ ಪವಿತ್ರ ತೀರ್ಥೋದ್ಭವ : ಜಿಲ್ಲಾಡಳಿತದಿಂದ ಅಗತ್ಯ ಸಿದ್ಧತೆ

ಅಕ್ಟೋಬರ್ 16, 2026

ಶಿರಂಗಾಲದಲ್ಲಿ ಎಸ್.ವಿ. ನಂಜುಂಡಪ್ಪ ಅವರಿಗೆ ನುಡಿನಮನ; ನಿಸ್ವಾರ್ಥ ಸಾಮಾಜಿಕ ಸೇವೆ ಮತ್ತು ಅಭಿವೃದ್ಧಿ ಕಾರ್ಯಗಳಿಗೆ ಸಮಾಜ ಮನ್ನಣೆ ನೀಡಲಿ: ಅರಮೇರಿ ಸ್ವಾಮೀಜಿ

ಅಕ್ಟೋಬರ್ 16, 2026

ತಲಕಾವೇರಿಯಲ್ಲಿ ಪವಿತ್ರ ತೀರ್ಥೋದ್ಭವ : ಜಿಲ್ಲಾಡಳಿತದಿಂದ ಅಗತ್ಯ ಸಿದ್ಧತೆ

ಅಕ್ಟೋಬರ್ 16, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಮಡಿಕೇರಿ ಅ.16 NEWS DESK : ತಲಕಾವೇರಿಯಲ್ಲಿ ಶ್ರೀ ಕಾವೇರಿ ತುಲಾ ಸಂಕ್ರಮಣ ಪವಿತ್ರ ತೀರ್ಥೋದ್ಭವಕ್ಕೆ ಕ್ಷಣಗಣನೆ ಆರಂಭವಾಗಿದ್ದು, ಸಿದ್ಧತೆಗಳು…

ಶಿರಂಗಾಲದಲ್ಲಿ ಎಸ್.ವಿ. ನಂಜುಂಡಪ್ಪ ಅವರಿಗೆ ನುಡಿನಮನ; ನಿಸ್ವಾರ್ಥ ಸಾಮಾಜಿಕ ಸೇವೆ ಮತ್ತು ಅಭಿವೃದ್ಧಿ ಕಾರ್ಯಗಳಿಗೆ ಸಮಾಜ ಮನ್ನಣೆ ನೀಡಲಿ: ಅರಮೇರಿ ಸ್ವಾಮೀಜಿ

ಅಕ್ಟೋಬರ್ 16, 2026

ರೋಟರಿ ಮಿಸ್ಟಿ ಹಿಲ್ಸ್‌ನ 13ನೇ ವರ್ಷದ ಮಕ್ಕಳ ದಸರಾ ಯಶಸ್ವಿ; ಮಂಟಪ ನಿರ್ಮಾಣ ಸ್ಪರ್ಧೆಯಲ್ಲಿ ಟೀಮ್ ಅಗ್ನಿಗೆ ಪ್ರಥಮ ಬಹುಮಾನ; ಸತತ ಮೂರು ವರ್ಷಗಳ ಹ್ಯಾಟ್ರಿಕ್ ಸಾಧನೆ

ಅಕ್ಟೋಬರ್ 16, 2026

ಅ.17 ರಂದು ಕೊಡಗು ಜಿಲ್ಲೆಯಲ್ಲಿ ಕಾವೇರಿ ತುಲಾ ಸಂಕ್ರಮಣದ ರಜೆ

ಅಕ್ಟೋಬರ್ 16, 2026

ಅ.17ಕ್ಕೆ ಕೊಡಗು ಜಿಲ್ಲೆಯಲ್ಲಿ ತುಲಾ ಸಂಕ್ರಮಣದ ರಜೆ

ಅಕ್ಟೋಬರ್ 16, 2026

ಕಡಗದಾಳಿನಲ್ಲಿ ಎನ್‌ಎಸ್‌ಎಸ್ ಶಿಬಿರದ ಸಮಾರೋಪ : ಸಮಾಜದ ಅಭಿವೃದ್ಧಿಗೆ ವಿದ್ಯಾರ್ಥಿಗಳು ಕೊಡುಗೆ ನೀಡಲಿ : ಮೇಜರ್ ಪ್ರೊ. ರಾಘವ ಬಿ.

ಅಕ್ಟೋಬರ್ 15, 2026

ಅ.17 ರಂದು ಉಸ್ತುವಾರಿ ಸಚಿವ ಪಿ.ಎಂ.ನರೇಂದ್ರ ಸ್ವಾಮಿ ಕೊಡಗಿಗೆ ಭೇಟಿ

ಅಕ್ಟೋಬರ್ 15, 2026

ಸಾಂತ್ವನ ಮಹಿಳಾ ಸಹಾಯವಾಣಿ : ಕೊಡಗಿನಲ್ಲಿ 5860 ಪ್ರಕರಣಗಳು ಇತ್ಯರ್ಥ

ಅಕ್ಟೋಬರ್ 15, 2026

ಅ.16 ರಂದು ಮಕ್ಕಳ ದಸರಾ ಸಂಭ್ರಮ: ಮಕ್ಕಳಿಂದ ವೈವಿದ್ಯಮಯ ಸ್ಪರ್ಧೆಗಳು

ಅಕ್ಟೋಬರ್ 15, 2026

ಗೋಣಿಕೊಪ್ಪಲು : ಅ.16 ರಂದು ವಿದ್ಯುತ್ ವ್ಯತ್ಯಯ

ಅಕ್ಟೋಬರ್ 15, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.