Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ರಾಷ್ಟ್ರೀಯ ಮಟ್ಟದ ಹಾಕಿ ಪಂದ್ಯಾವಳಿಗೆ ಆಯ್ಕೆಯಾದ ಕೊಡಗು ವಿದ್ಯಾಲಯದ ಬಾಲಕಿಯರ ತಂಡ*
  • *ಸಂಪಾಜೆ: ಪ್ರಪಂಚಕ್ಕೆ ತಾಯಿ, ಮಗುವಿಗೆ ತಾಯಿಯೇ ಪ್ರಪಂಚ : ಜಯಲಕ್ಷ್ಮಿ ಅಭಿಮತ*
  • *ಸುಂಟಿಕೊಪ್ಪದಲ್ಲಿ ಕರವೇ ಸ್ವಾಭಿಮಾನಿ ಸೇನೆ ಹೋಬಳಿ ಘಟಕ ಉದ್ಘಾಟನೆ; ಹೊಸ ಸದಸ್ಯರ ಸೇರ್ಪಡೆ ಬಳಿಕ ಮಾದಾಪುರ ರಸ್ತೆಯ ಗುಂಡಿ ಮುಚ್ಚಿ ಸಮಾಜಮುಖಿ ಕಾರ್ಯ*
  • *ಕ.ಸಾ.ಪ. ವತಿಯಿಂದ ಕುಶಾಲನಗರ ಸರ್ಕಾರಿ ಪ್ರೌಢಶಾಲೆಯಲ್ಲಿ ಕೆ.ಟಿ. ಸುಬ್ಬರಾವ್ ದತ್ತಿ ಕಾರ್ಯಕ್ರಮ; ಕನ್ನಡ ಸಾಹಿತ್ಯ ಕ್ಷೇತ್ರಕ್ಕೆ ಕೊಡಗಿನ ಕೊಡುಗೆ ಅಪಾರ: ಉ.ರಾ. ನಾಗೇಶ್*
  • *ಪ್ರಮುಖ ಪ್ರವಾಸಿ ತಾಣಗಳಲ್ಲಿ ಮೂಲ ಸೌಕರ್ಯ ಕಲ್ಪಿಸಿ : ಜಿಲ್ಲಾಧಿಕಾರಿ ಎಸ್.ಜೆ.ಸೋಮಶೇಖರ್*
  • *ಕೊಡಗು : ಪರಿಸರ ಸ್ನೇಹಿ ಪ್ರವಾಸೋದ್ಯಮಕ್ಕೆ ಉತ್ತೇಜನ ನೀಡಿ : ಜಿಲ್ಲಾಧಿಕಾರಿ ಎಸ್.ಜೆ.ಸೋಮಶೇಖರ್*
  • *ಮಡಿಕೇರಿಯಲ್ಲಿ ಅರಣ್ಯ ಹುತಾತ್ಮರ ಸ್ಮಾರಕಕ್ಕೆ ಗಣ್ಯರಿಂದ ಗೌರವ ನಮನ*
  • *ರಾಷ್ಟ್ರೀಯ ಅರಣ್ಯ ಹುತಾತ್ಮರ ದಿನಾಚರಣೆ :  ಅರಣ್ಯ ಮತ್ತು ಪರಿಸರ ಸಂರಕ್ಷಣೆಗೆ ಹೆಚ್ಚಿನ ಒತ್ತು ನೀಡಿ: ಜಿಲ್ಲಾಧಿಕಾರಿ ಸೋಮಖಶೇಖರ್*
  • *ತಾಲೂಕು ಮಟ್ಟದ ಕ್ರೀಡಾಕೂಟದಲ್ಲಿ ಕಾವೇರಿ ಶಾಲೆಯ ತ್ರೋಬಾಲ್ ತಂಡ ರನ್ನರ್ಸ್*
  • ಸೋಮವಾರಪೇಟೆ ಹೋಮ್‌ಸ್ಟೇ ಅಸೋಸಿಯೇಷನ್‌ನಿಂದ ಕಾಸರಗೋಡು–ಕಣ್ಣೂರು ಅಧ್ಯಯನ ಪ್ರವಾಸ*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*ಕೊಡಗು : ಭೂಕುಸಿತ ಹಾಗೂ ಪ್ರವಾಹ ಪೀಡಿತ ಸೂಕ್ಷ್ಮ ಪ್ರದೇಶಗಳಲ್ಲಿ ಮತ್ತಷ್ಟು ಕಟ್ಟೆಚ್ಚರ ವಹಿಸಿ : ಜಿಲ್ಲಾಧಿಕಾರಿ ವೆಂಕಟ್ ರಾಜಾ ಸೂಚನೆ*
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

*ಕೊಡಗು : ಭೂಕುಸಿತ ಹಾಗೂ ಪ್ರವಾಹ ಪೀಡಿತ ಸೂಕ್ಷ್ಮ ಪ್ರದೇಶಗಳಲ್ಲಿ ಮತ್ತಷ್ಟು ಕಟ್ಟೆಚ್ಚರ ವಹಿಸಿ : ಜಿಲ್ಲಾಧಿಕಾರಿ ವೆಂಕಟ್ ರಾಜಾ ಸೂಚನೆ*

ಆಗಷ್ಟ್ 5, 20242 Mins ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link

ಮಡಿಕೇರಿ ಆ.5 NEWS DESK : ಕೊಡಗು ಜಿಲ್ಲೆಯಲ್ಲಿ ಕಳೆದ ಎರಡು-ಮೂರು ದಿನಗಳಿಂದ ಮಳೆ ಕಡಿಮೆಯಾಗಿದೆ ಎಂದು ಅಧಿಕಾರಿಗಳು ಮೈಮರೆಯಬಾರದು. ಮುಂದಿನ ಮೂರು-ನಾಲ್ಕು ದಿನಗಳ ನಂತರ ಹೆಚ್ಚಿನ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಆದ್ದರಿಂದ ಭೂಕುಸಿತ ಹಾಗೂ ಪ್ರವಾಹ ಪೀಡಿತ ಸೂಕ್ಷ್ಮ ಪ್ರದೇಶಗಳಲ್ಲಿ ಅಗತ್ಯ ಕಟ್ಟೆಚ್ಚರ ವಹಿಸುವಂತೆ ಸಂಬಂಧಪಟ್ಟ ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ವೆಂಕಟ್ ರಾಜಾ ನಿರ್ದೇಶನ ನೀಡಿದ್ದಾರೆ. ವಿಡಿಯೋ ಸಂವಾದ ಮೂಲಕ ಅಧಿಕಾರಿಗಳ ಜೊತೆ ಸಭೆ ನಡೆಸಿದ ಜಿಲ್ಲಾಧಿಕಾರಿ ಅವರು ಮುಂದಿನ 10 ರಿಂದ 15 ದಿನಗಳ ಕಾಲ ಸಾಕಷ್ಟು ಎಚ್ಚರವಹಿಸಬೇಕಿದೆ. ಆ ನಿಟ್ಟಿನಲ್ಲಿ ಭೂಕುಸಿತ ಹಾಗೂ ಪ್ರವಾಹ ಪೀಡಿತ ಪ್ರದೇಶಕ್ಕೆ ಭೇಟಿ ನೀಡಿ, ಅಲ್ಲಿನ ಜನರಿಗೆ ಮಾಹಿತಿ ನೀಡುವಂತಾಗಬೇಕು ಎಂದು ಜಿಲ್ಲಾಧಿಕಾರಿ ಸಲಹೆ ಮಾಡಿದರು. ಹತ್ತಿರದ ವಯನಾಡು ಜಿಲ್ಲೆಯಲ್ಲಿ ಸಂಭವಿಸಿ ಪ್ರಾಕೃತಿಕ ವಿಕೋಪದ ದುರಂತ ಎಲ್ಲಿಯೂ ಮರುಕಳುಹಿಸಬಾರದು. ಜನ ಜಾನುವಾರುಗಳ ರಕ್ಷಣೆ ಅತೀ ಮುಖ್ಯವಾಗಿದೆ. ಆ ನಿಟ್ಟಿನಲ್ಲಿ ಯಾವುದೇ ರೀತಿಯ ಪ್ರಾಣ ಹಾನಿ ಉಂಟಾಗದಂತೆ ಮುನ್ನೆಚ್ಚರವಹಿಸುವುದು ಅತ್ಯಗತ್ಯವಾಗಿದೆ ಎಂದು ಅವರು ತಿಳಿಸಿದರು. ಜುಲೈ ತಿಂಗಳಲ್ಲಿ ಸುರಿದ ಧಾರಾಕಾರ ಮಳೆಯಿಂದ ನದಿ, ಜಲಾಶಯ, ತೊರೆ, ಹಳ್ಳ-ಕೊಳ್ಳಗಳು ತುಂಬಿ ಹರಿದವು. ಇದರಿಂದ ಅಂತರ್ಜಲ ಮಟ್ಟವು ಹೆಚ್ಚಾಗಿದೆ. ಆದ್ದರಿಂದ ಸೂಕ್ಷ್ಮ ಪ್ರದೇಶಗಳಲ್ಲಿ ಹೆಚ್ಚಿನ ಎಚ್ಚರವಹಿಸಬೇಕಿದೆ ಎಂದರು. ಕಾಳಜಿ/ ಪರಿಹಾರ ಕೇಂದ್ರಗಳಲ್ಲಿ ಅಗತ್ಯ ಮೂಲ ಸೌಲಭ್ಯಗಳನ್ನು ಒದಗಿಸಬೇಕು. ಯಾವುದೇ ದೂರು ಬರದಂತೆ ಗಮನಹರಿಸುವುದು ಅತ್ಯಂತ ಹೆಚ್ಚಿನ ಅಗತ್ಯ ಎಂದು ತಹಶೀಲ್ದಾರರಿಗೆ ನಿರ್ದೇಶನ ನೀಡಿದರು. ಮಳೆ ಹಾನಿ ತಕ್ಷಣದ ಕಾರ್ಯಗಳಿಗೆ ಗ್ರಾ.ಪಂ ನಿಂದ ಹಣ ಬಿಡುಗಡೆ ಮಾಡಲಾಗುವುದು. ಸರ್ಕಾರದ ಮಾರ್ಗಸೂಚಿಯಂತೆ ಕಾರ್ಯನಿರ್ವಹಿಸುವಂತೆ ತಾ.ಪಂ.ಇಒಗಳಿಗೆ ಜಿಲ್ಲಾಧಿಕಾರಿ ಅವರು ನಿರ್ದೇಶನ ನೀಡಿದರು. ಲೋಕೋಪಯೋಗಿ, ಪಂಚಾಯತ್ ರಾಜ್, ಸೆಸ್ಕ್, ಶಾಲೆಗಳು, ಅಂಗನವಾಡಿ ಕಟ್ಟಡಗಳು, ಸರ್ಕಾರಿ ಕಟ್ಟಡಗಳು ಹೀಗೆ ಮಳೆ ಹಾನಿ ಸಂಬಂಧ ನಿಖರ ಮಾಹಿತಿ ಒದಗಿಸುವಂತೆ ಸಂಬಂಧಪಟ್ಟ ಎಂಜಿನಿಯರ್‍ಗಳಿಗೆ ಜಿಲ್ಲಾಧಿಕಾರಿ ಸೂಚಿಸಿದರು. ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ.ರಾಮರಾಜನ್ ಅವರು ಪ್ರಾಕೃತಿಕ ವಿಕೋಪ ಎದುರಿಸುವ ನಿಟ್ಟಿನಲ್ಲಿ ಪೊಲೀಸ್ ಇಲಾಖೆ ಜಿಲ್ಲಾಡಳಿತಕ್ಕೆ ಸದಾ ಕೈಜೋಡಿಸಲಿದೆ. ಆ ನಿಟ್ಟಿನಲ್ಲಿ ತಳಮಟ್ಟದಲ್ಲಿ ಪೊಲೀಸ್ ಇಲಾಖೆಯು ಕಂದಾಯ ಇಲಾಖೆ ಸೇರಿದಂತೆ ವಿವಿಧ ಇಲಾಖೆಗಳ ಜತೆ ಸಹಕರಿಸಲಿದೆ ಎಂದರು. ಜಿ.ಪಂ.ಸಿಇಒ ಆನಂದ ಪ್ರಕಾಶ್ ಮೀನಾ ಅವರು ತಾ.ಪಂ.ಮತ್ತು ಗ್ರಾ.ಪಂ.ಮಟ್ಟದಲ್ಲಿ ಪ್ರಾಕೃತಿಕ ವಿಕೋಪ ನಿರ್ವಹಣೆ ಸಂಬಂಧ ಜಿಲ್ಲಾಡಳಿತದ ನಿರ್ದೇಶನದಂತೆ ಎಲ್ಲಾ ರೀತಿಯ ಕ್ರಮ ಕೈಗೊಳ್ಳಲಾಗುವುದು ಎಂದು ಹೇಳಿದರು. ತಹಶೀಲ್ದಾರರು, ಎಂಜಿನಿಯರ್, ವಿವಿಧ ಇಲಾಖೆ ಅಧಿಕಾರಿಗಳು ಇತರರು ವಿಡಿಯೋ ಸಂವಾದಲ್ಲಿ ಪಾಲ್ಗೊಂಡಿದ್ದರು.

Follow us Follow us
Share. WhatsApp Facebook Twitter Email Telegram Copy Link

Website design development company services in Mangalore

Forex Trading Teacher in India

Related Posts

*ರಾಷ್ಟ್ರೀಯ ಮಟ್ಟದ ಹಾಕಿ ಪಂದ್ಯಾವಳಿಗೆ ಆಯ್ಕೆಯಾದ ಕೊಡಗು ವಿದ್ಯಾಲಯದ ಬಾಲಕಿಯರ ತಂಡ*

ಸೆಪ್ಟೆಂಬರ್ 12, 2026

*ಸಂಪಾಜೆ: ಪ್ರಪಂಚಕ್ಕೆ ತಾಯಿ, ಮಗುವಿಗೆ ತಾಯಿಯೇ ಪ್ರಪಂಚ : ಜಯಲಕ್ಷ್ಮಿ ಅಭಿಮತ*

ಸೆಪ್ಟೆಂಬರ್ 11, 2026

*ಸುಂಟಿಕೊಪ್ಪದಲ್ಲಿ ಕರವೇ ಸ್ವಾಭಿಮಾನಿ ಸೇನೆ ಹೋಬಳಿ ಘಟಕ ಉದ್ಘಾಟನೆ; ಹೊಸ ಸದಸ್ಯರ ಸೇರ್ಪಡೆ ಬಳಿಕ ಮಾದಾಪುರ ರಸ್ತೆಯ ಗುಂಡಿ ಮುಚ್ಚಿ ಸಮಾಜಮುಖಿ ಕಾರ್ಯ*

ಸೆಪ್ಟೆಂಬರ್ 11, 2026

*ಸಂಪಾಜೆ: ಪ್ರಪಂಚಕ್ಕೆ ತಾಯಿ, ಮಗುವಿಗೆ ತಾಯಿಯೇ ಪ್ರಪಂಚ : ಜಯಲಕ್ಷ್ಮಿ ಅಭಿಮತ*

ಸೆಪ್ಟೆಂಬರ್ 11, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಸಂಪಾಜೆ, NEWS DESK ಸೆ.11: ಮಗುವಿನ ಭವಿಷ್ಯಕ್ಕೆ ಭೂಮಿಕೆ ಸಿದ್ಧವಾಗುವುದು ಅಮ್ಮನ ಮಡಿಲಿನಲ್ಲಿಯೇ. ಮಕ್ಕಳಿಗೆ ತಾಯಿ ನೀಡುವ ಸಮಯ ಮತ್ತು…

*ಸುಂಟಿಕೊಪ್ಪದಲ್ಲಿ ಕರವೇ ಸ್ವಾಭಿಮಾನಿ ಸೇನೆ ಹೋಬಳಿ ಘಟಕ ಉದ್ಘಾಟನೆ; ಹೊಸ ಸದಸ್ಯರ ಸೇರ್ಪಡೆ ಬಳಿಕ ಮಾದಾಪುರ ರಸ್ತೆಯ ಗುಂಡಿ ಮುಚ್ಚಿ ಸಮಾಜಮುಖಿ ಕಾರ್ಯ*

ಸೆಪ್ಟೆಂಬರ್ 11, 2026

*ಕ.ಸಾ.ಪ. ವತಿಯಿಂದ ಕುಶಾಲನಗರ ಸರ್ಕಾರಿ ಪ್ರೌಢಶಾಲೆಯಲ್ಲಿ ಕೆ.ಟಿ. ಸುಬ್ಬರಾವ್ ದತ್ತಿ ಕಾರ್ಯಕ್ರಮ; ಕನ್ನಡ ಸಾಹಿತ್ಯ ಕ್ಷೇತ್ರಕ್ಕೆ ಕೊಡಗಿನ ಕೊಡುಗೆ ಅಪಾರ: ಉ.ರಾ. ನಾಗೇಶ್*

ಸೆಪ್ಟೆಂಬರ್ 11, 2026

*ಪ್ರಮುಖ ಪ್ರವಾಸಿ ತಾಣಗಳಲ್ಲಿ ಮೂಲ ಸೌಕರ್ಯ ಕಲ್ಪಿಸಿ : ಜಿಲ್ಲಾಧಿಕಾರಿ ಎಸ್.ಜೆ.ಸೋಮಶೇಖರ್*

ಸೆಪ್ಟೆಂಬರ್ 11, 2026

*ಕೊಡಗು : ಪರಿಸರ ಸ್ನೇಹಿ ಪ್ರವಾಸೋದ್ಯಮಕ್ಕೆ ಉತ್ತೇಜನ ನೀಡಿ : ಜಿಲ್ಲಾಧಿಕಾರಿ ಎಸ್.ಜೆ.ಸೋಮಶೇಖರ್*

ಸೆಪ್ಟೆಂಬರ್ 11, 2026

*ಮಡಿಕೇರಿಯಲ್ಲಿ ಅರಣ್ಯ ಹುತಾತ್ಮರ ಸ್ಮಾರಕಕ್ಕೆ ಗಣ್ಯರಿಂದ ಗೌರವ ನಮನ*

ಸೆಪ್ಟೆಂಬರ್ 11, 2026

*ರಾಷ್ಟ್ರೀಯ ಅರಣ್ಯ ಹುತಾತ್ಮರ ದಿನಾಚರಣೆ :  ಅರಣ್ಯ ಮತ್ತು ಪರಿಸರ ಸಂರಕ್ಷಣೆಗೆ ಹೆಚ್ಚಿನ ಒತ್ತು ನೀಡಿ: ಜಿಲ್ಲಾಧಿಕಾರಿ ಸೋಮಖಶೇಖರ್*

ಸೆಪ್ಟೆಂಬರ್ 11, 2026

*ತಾಲೂಕು ಮಟ್ಟದ ಕ್ರೀಡಾಕೂಟದಲ್ಲಿ ಕಾವೇರಿ ಶಾಲೆಯ ತ್ರೋಬಾಲ್ ತಂಡ ರನ್ನರ್ಸ್*

ಸೆಪ್ಟೆಂಬರ್ 11, 2026

ಸೋಮವಾರಪೇಟೆ ಹೋಮ್‌ಸ್ಟೇ ಅಸೋಸಿಯೇಷನ್‌ನಿಂದ ಕಾಸರಗೋಡು–ಕಣ್ಣೂರು ಅಧ್ಯಯನ ಪ್ರವಾಸ*

ಸೆಪ್ಟೆಂಬರ್ 11, 2026

*ಕಸ್ತೂರಿ ರಂಗನ್ ವರದಿ ವಿರೋಧಿಸಿ ಮಡಿಕೇರಿಯಲ್ಲಿ ಬೃಹತ್ ರೈತ ಪ್ರತಿಭಟನೆ*

ಸೆಪ್ಟೆಂಬರ್ 11, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.