Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ರಾಜ್ಯದ 87 ಗಾಂಧಿ ಹೆಜ್ಜೆಗುರುತಿನ ಸ್ಥಳಗಳಲ್ಲಿ ಸ್ಮಾರಕ ಸ್ತಂಭ ನಿರ್ಮಾಣ: ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯಿಂದ ಅನುಷ್ಠಾನ*
  • ರಾಜ್ಯದ 87 ಗಾಂಧಿ ಹೆಜ್ಜೆಗುರುತಿನ ಸ್ಥಳಗಳಲ್ಲಿ ಸ್ಮಾರಕ ಸ್ತಂಭ ನಿರ್ಮಾಣ: ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯಿಂದ ಅನುಷ್ಠಾನ
  • *ಗಾಂಧಿ ಜಯಂತಿ ಪ್ರಯುಕ್ತ ಬೇಟೋಳಿ ರಾಮನಗರದಲ್ಲಿ ಸ್ವಚ್ಛತಾ ಅಭಿಯಾನ*
  • *ಸಂತ ಅನ್ನಮ್ಮ ಪ್ರೌಢಶಾಲೆಯಲ್ಲಿ ಗಾಂಧಿ ಜಯಂತಿ ಆಚರಣೆ*
  • *ಸೆಂಟ್ ಆನ್ಸ್ ಪದವಿ ಕಾಲೇಜಿನ ಎನ್‌ಎಸ್‌ಎಸ್ ವಿದ್ಯಾರ್ಥಿಗಳಿಂದ ಸ್ವಚ್ಛತಾ ಶ್ರಮದಾನ*
  • *ಬಕ್ಕದಲ್ಲಿ ಸಮುದಾಯ ಭವನ ನಿರ್ಮಾಣಕ್ಕೆ ಸ್ಥಳ ಪರಿಶೀಲನೆ*
  • *ಮಡಿಕೇರಿಯಲ್ಲಿ 72ನೇ ವನ್ಯಜೀವಿ ಸಪ್ತಾಹ : ವನ್ಯಜೀವಿಗಳ ಸಂರಕ್ಷಣೆ ಜಾಗೃತಿಗಾಗಿ ಬೈಸಿಕಲ್, ಬೈಕ್ ಜಾಥಾ*
  • *ಭಾಗ್ಯವತಿ ಸಿ.ಜೆ. ಅವರಿಗೆ ರಾಷ್ಟ್ರಮಟ್ಟದ ‘ಕಾಯಕ ಕಣ್ಣಮಣಿ’ ಪ್ರಶಸ್ತಿ*
  • *ಸ್ವಸ್ಥ ಸಂಸ್ಥೆಯಲ್ಲಿ ಅಂತರರಾಷ್ಟ್ರೀಯ ಕಾಫಿ ದಿನಾಚರಣೆ*
  • *ಬಾಳೆಲೆ ವಿಜಯಲಕ್ಷ್ಮಿ ಸಂಯುಕ್ತ ಪದವಿ ಪೂರ್ವ ಕಾಲೇಜಿನಲ್ಲಿ ಗಾಂಧಿ ಜಯಂತಿ ಆಚರಣೆ*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*ಮಡಿಕೇರಿಯಲ್ಲಿ ಕಕ್ಕಡ ನಮ್ಮೆಯ ಸಂಭ್ರಮ : ಘಮಘಮಿಸಿದ ಮದ್ದು ಸೊಪ್ಪಿನ ಪಾಯಸ*
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

*ಮಡಿಕೇರಿಯಲ್ಲಿ ಕಕ್ಕಡ ನಮ್ಮೆಯ ಸಂಭ್ರಮ : ಘಮಘಮಿಸಿದ ಮದ್ದು ಸೊಪ್ಪಿನ ಪಾಯಸ*

ಆಗಷ್ಟ್ 6, 20242 Mins ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link

ಮಡಿಕೇರಿ ಆ.6 NEWS DESK : ಕರ್ನಾಟಕ ಕೊಡವ ಸಾಹಿತ್ಯ ಅಕಾಡೆಮಿ ಹಾಗೂ ಮಡಿಕೇರಿಯ ಪೊಮ್ಮಕ್ಕಡ ಒಕ್ಕೂಟದ ಸಹಯೋಗದಲ್ಲಿ ಕಕ್ಕಡ ನಮ್ಮೆಯನ್ನು ಸಂಭ್ರಮದಿಂದ ಆಚರಿಸಲಾಯಿತು.  ಕೊಡವ ಸಮಾಜದ ಸಭಾಂಗಣದಲ್ಲಿ ನಡೆದ ಕಾರ್ಯಕ್ರಮದ ಕಾರ್ಯಕ್ರಮವನ್ನು ಮಡಿಕೇರಿ ಕೊಡವ ಸಮಾಜದ ಅಧ್ಯಕ್ಷ ಮಂಡುವಂಡ ಪಿ.ಮುತ್ತಪ್ಪ ಉದ್ಘಾಟಿಸಿ ಮಾತನಾಡಿ, ಕರ್ನಾಟಕ ಕೊಡವ ಸಾಹಿತ್ಯ ಅಕಾಡೆಮಿಯ ಮೊದಲ ಕಾರ್ಯಕ್ರಮವಾದ ಕಕ್ಕಡ ನಮ್ಮೆಯನ್ನು ಆಚರಿಸುತಿವುದು ಹೆಮ್ಮೆಯ ವಿಷಯ ಎಂದರು. ಸಾಹಿತ್ಯದ ಬೆಳವಣಿಗೆಗೆ ಅಕಾಡೆಮಿಯು ಇನ್ನಷ್ಟು ಕಾರ್ಯವನ್ನು ಮಾಡುವಂತಾಗಲಿ ಎಂದು ಆಶಿಸಿದರು. ಕೊಡವ ಭಾ಼ಷಿಕ ಜನಾಂಗವನ್ನು ಒಗ್ಗೂಡುಸುವ ಮೂಲಕ ಕೊಡವ ಸಂಸ್ಕೃತಿಯನ್ನು ಉಳಿಸಿ ಬೆಳೆಸುವಂತಾಗಬೇಕೆಂದರು. ಕಕ್ಕಡ ತೀನಿ ಪ್ರದರ್ಶನವನ್ನು ಉದ್ಘಾಟಿಸಿ ಮಾತನಾಡಿದ ಉದ್ಯಮಿ ಕುಪ್ಪಂಡ ಛಾಯಾನಂಜಪ್ಪ, ಸಮಾಜದಲ್ಲಿ ಮಹಿಳೆಯ ಸಾಧನೆಯ ಹಿಂದಿನ ಶ್ರಮದ ಬಗ್ಗೆ ವಿವರಿಸದಲ್ಲದೆ ಮಡಿಕೇರಿಯ ಪೊಮ್ಮಕ್ಕಡ ಕೂಟದ ಸಾಧನೆ ಬಗ್ಗೆ ಪ್ರಶಂಸಿಸಿದರು. ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದ ಕರ್ನಾಟಕ ಕೊಡವ ಸಾಹಿತ್ಯ ಅಕಾಡೆಮಿಯ ಅಧ್ಯಕ್ಷ ಅಜ್ಜಿನೀಕಂಡ ಮಹೇಶ್ ನಾಚಯ್ಯ, ಕೊಡವ ಜನಾಂಗದ ಕೃಷಿ ಬದುಕಿನ ವಿಶೇಷತೆಯ ಬಗ್ಗೆ ವಿವರಿಸಿದರು. ಅಂದಿನ ಕೃಷಿ ಬದುಕಿನ ಚಿತ್ರಣವೇ ಬೇರೆ ಇಂದಿನ ಕೃಷಿ ಬದುಕಿನ ಚಿತ್ರಣವೇ ಬೇರೆ ಎಂದರು. ಕೊಡವರು ವಿವಿಧ ಕ್ಷೇತಗಳಲ್ಲಿ ಸಾಧನೆ ಗೈಯುತ್ತಿರುವುದು ಪ್ರಶಂಸನೀಯವೆಂದರು. ಕೊಡವರ ಜನಾಂಗದ ಮೂಲನೆಲೆಯಾದ ಐನ್ ಮನೆ, ಕೈಮಡ, ಗುರು ನೆಲೆಗಳ ರಕ್ಷಣೆಯ ಜವಾಬ್ದಾರಿ ಹೊರಬೇಕಿದೆ. ವಿಶ್ವದಲ್ಲಿ ಅತೀ ಸಣ್ಣದಾದ ಕೊಡವ ಜನಾಂಗವಾದರೂ‌ ಜನಾಂಗದ ಕೀರ್ತಿ ಮುಗಿಲೆತ್ತರಕ್ಕೆ ತಲುಪಿದೆಂದರು. ಕನ್ನಡದಲ್ಲಿ ಬಳಸುತ್ತಿರುವ ಕೊಡವ ಲಿಪಿಯನ್ನು ಬದಲಾಗಬೇಕೆಂದರು. ಕೊಡವ ಜನಾಂಗದ ಉಳಿವಿಗಾಗಿ ಎಲ್ಲರು ಕೈಜೋಡಿಸ ಬೇಕೆಂದರು. ಪೊಮ್ಮಕ್ಕಡ ಒಕ್ಕೂಟದ ಅಧ್ಕಕ್ಷರಾದ ಕನ್ನಂಡ ಕವಿತ ಬೊಳ್ಳಪ್ಪ ಮಾತನಾಡಿ, ಕೊಡವಾಮೆ ಹಾಗೂ ಜನಾಂಗದ ಉಳಿವಿಗಾಗಿ ಪೊಮ್ಮಕ್ಕಡ ಒಕ್ಕೂಟವು ಹಲವು ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುತ್ತಿದೆಂದರು. ಹಿರಿಯ ಲೇಖಕಿ ಮೊಣ್ಣಂಡ ಶೋಭಾ ಸುಬ್ಬಯ್ಯ  ಕಕ್ಕಡ ತಿಂಗತ್ ನೈಪು- ಪೈಪು- ತೀನಿ ಎಂಬ ಬಗ್ಗೆ ವಿಚಾರಮಂಡಣೆ ಮಾಡುವ ಮೂಲಕ‌ ಹಿಂದಿನ‌ ಕೃಷಿ ಚಟುವಟಿಕೆಯ ಬದುಕಿನ‌ ಚಿತ್ರಣವನ್ನು ವಿವರಿಸಿದರು.

ಘಮಘಮಿಸಿದ ಮದ್ದು ಸೊಪ್ಪಿನ ಖಾದ್ಯ:: ಮಹಿಳೆಯರು ತಯಾರಿಸಿದ ಮಳೆಗಾಲದ ಕಕ್ಕಡ ತಿಂಗಳಲ್ಲಿ ಕಾಡುಮೇಡುಗಳಲ್ಲಿ ಸಿಗುವ ಸೊಪ್ಪಿನ ಪಾಯಸ, ತೋಡುತೊರೆಗಳಲ್ಲಿ ಸಿಗುವ ಏಡಿ(ಞಂಡ್) ಕಣಿಲೆ, ಕೊಯಿಲೆ ಮೀನು, ತಾತೆ ಸೊಪ್ಪಿನ‌ ಪಲ್ಯ, ಕೊಲೇಪುಟ್ಟ್, ಹಲಸಿನ ಬೀಜದಿಂದ ತಯಾರಿಸಿದ ಚೆಕ್ಕೆಕುರು ಪಜ್ಜಿ,ನಾಟಿಕೋಳಿ ಸಾರು, ಪಂದಿಕರಿ, ಬೈಂಬಳೆ ಕರಿ, ಕಾಡ್ ಮಾಂಗೆ ಕರಿ, ಬಾಳೆ ನುರ್ ಕ್.. ಸ್ಪರ್ಧೆಯಲ್ಲಿ ಆಕರ್ಶಣೀಯವಾಯಿತಲ್ಲದೆ ವಿವಿಧ ತಂಡಗಳ ಕೊಡವ ನೃತ್ಯ ಎಲ್ಲರ ಗಮನ ಸೆಳೆಯಿತು.

ಸನ್ಮಾನ:  ಕಾರ್ಯಕ್ರಮದಲ್ಲಿ ಮಹಿಳಾ ಉದ್ಯಮಿ ಕುಪ್ಪಂಡ ಛಾಯಾನಂಜಪ್ಪ ಹಾಗೂ ಕೊಡವ ಸಾಹಿತ್ಯ‌ ಅಕಾಡೆಮಿಯ ಅಧ್ಯಕ್ಷ ಅಜ್ಜಿನೀಕಂಡ ಮಹೇಶ್ ನಾಚಯ್ಯ, ಪತ್ನಿ ಪ್ರಮೀಳಾ‌ ನಾಚಯ್ಯ, ಮಗ ಡಾನ್ ನಾಚಯ್ಯ ಅವರನ್ನು ಸನ್ಮಾನಿಸಿ ಗೌರವಿಸಲಾಯಿತು. ಬಾಳೆಯಂಡ ಸವಿತಾ ಪೂವಯ್ಯ, ಪಾಲೇಯಂಡ‌ ರೂಪ ಅತಿಥಿಗಳ ಪರಿಚಯಿಸಿದರು. ಕರ್ನಾಟಕ ಕೊಡವ ಸಾಹಿತ್ಯ ಅಕಾಡೆಮಿ ವತಿಯಿಂದ ಪುಸ್ತಕ‌ ಪ್ರದರ್ಶನ ಹಾಗೂ ಮಾರಾಟ ನಡೆಯಿತು.
ಬೊಪ್ಪಂಡ ಸರಳ ಕರುಂಬಯ್ಯ ಪ್ರಾರ್ಥಿಸಿದರೆ, ಅಕಾಡೆಮಿಯ ರಿಜಿಸ್ಟ್ರಾರ್ ಅಜ್ಜಿಕುಟ್ಟೀರ ಗಿರೀಶ್ ಸ್ವಾಗತಿಸಿದರು. ಚೋಕೀರ ಅನಿತಾ ದೇವಯ್ಯ ನಿರೂಪಿಸಿದರು. ಉಳ್ಳಿಯಡ ಸಚಿತಾ ಗಂಗಮ್ಮ ವಂದಿಸಿದರು. ಕಾರ್ಯಕ್ರಮದ ಸಂಚಾಲಕರಾಗಿ ಕಂಬೆಯಂಡ ಡೀನಾ ಬೋಜಣ್ಣ, ಚೊಟ್ಟೆಯಂಡ ಎ.ಸಂಜು ಕಾವೇರಪ್ಪ ಕಾರ್ಯನಿರ್ವಹಿಸಿದರು. ಅಕಾಡೆಮಿಯ ನಿರ್ದೇಶಕರಾದ ಪುತ್ತರಿರ ಪಪ್ಪುತಿಮ್ಮಯ್ಯ, ಮೊಳ್ಳೆ ಕುಟ್ಟಂಡ ದಿನು ಬೋಜಪ್ಪ, ಕೊಂಡಿಜಮ್ಮಂಡ ಎಂ.ಬಾಲಕೃಷ್ಣ, ಪೊನ್ನಿರ ಯು.ಗಗನ್, ಕುಡಿಯರ ಕಾವೇರಪ್ಪ, ನಾಯಂದಿರ ಆರ್.ಶಿವಾಜಿ, ಚೆಪ್ಪುಡೀರ ಎಸ್.ಉತ್ತಪ್ಪ, ನಾಯಕಂಡ ಬೇಬಿ ಚಿಣ್ಣಪ್ಪ, ನಾಪಂಡ ಗಣೇಶ್ ಹಾಜರಿದ್ದರು. ಪೊಮ್ಮಕ್ಕಡ ಒಕ್ಕೂಟದಿಂದ ವಿವಿಧ  ಸಾಂಸ್ಕೃತಿಕ ಕಾರ್ಯಕ್ರಮ ನಡೆಯಿತು.

ವರದಿ : ಪುತ್ತರಿರ ಕರುಣ್ ಕಾಳಯ್ಯ

 

 

 

 

 

 

Follow us Follow us
Share. WhatsApp Facebook Twitter Email Telegram Copy Link

Related Posts

*ರಾಜ್ಯದ 87 ಗಾಂಧಿ ಹೆಜ್ಜೆಗುರುತಿನ ಸ್ಥಳಗಳಲ್ಲಿ ಸ್ಮಾರಕ ಸ್ತಂಭ ನಿರ್ಮಾಣ: ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯಿಂದ ಅನುಷ್ಠಾನ*

ಅಕ್ಟೋಬರ್ 2, 2026

ರಾಜ್ಯದ 87 ಗಾಂಧಿ ಹೆಜ್ಜೆಗುರುತಿನ ಸ್ಥಳಗಳಲ್ಲಿ ಸ್ಮಾರಕ ಸ್ತಂಭ ನಿರ್ಮಾಣ: ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯಿಂದ ಅನುಷ್ಠಾನ

ಅಕ್ಟೋಬರ್ 2, 2026

*ಗಾಂಧಿ ಜಯಂತಿ ಪ್ರಯುಕ್ತ ಬೇಟೋಳಿ ರಾಮನಗರದಲ್ಲಿ ಸ್ವಚ್ಛತಾ ಅಭಿಯಾನ*

ಅಕ್ಟೋಬರ್ 2, 2026

ರಾಜ್ಯದ 87 ಗಾಂಧಿ ಹೆಜ್ಜೆಗುರುತಿನ ಸ್ಥಳಗಳಲ್ಲಿ ಸ್ಮಾರಕ ಸ್ತಂಭ ನಿರ್ಮಾಣ: ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯಿಂದ ಅನುಷ್ಠಾನ

ಅಕ್ಟೋಬರ್ 2, 2026 ಇತ್ತೀಚಿನ ಸುದ್ದಿಗಳು ಕರ್ನಾಟಕ ಕೊಡಗು ಜಿಲ್ಲೆ

ಬೆಂಗಳೂರು, ಅ.2 NEWS DESK :: ಮಹಾತ್ಮ ಗಾಂಧೀಜಿಯವರು ಕರ್ನಾಟಕದಲ್ಲಿ ಭೇಟಿ ನೀಡಿದ್ದ ವಿವಿಧ 87 ಐತಿಹಾಸಿಕ ಸ್ಥಳಗಳಲ್ಲಿ ‘ಗಾಂಧಿ…

*ಗಾಂಧಿ ಜಯಂತಿ ಪ್ರಯುಕ್ತ ಬೇಟೋಳಿ ರಾಮನಗರದಲ್ಲಿ ಸ್ವಚ್ಛತಾ ಅಭಿಯಾನ*

ಅಕ್ಟೋಬರ್ 2, 2026

*ಸಂತ ಅನ್ನಮ್ಮ ಪ್ರೌಢಶಾಲೆಯಲ್ಲಿ ಗಾಂಧಿ ಜಯಂತಿ ಆಚರಣೆ*

ಅಕ್ಟೋಬರ್ 2, 2026

*ಸೆಂಟ್ ಆನ್ಸ್ ಪದವಿ ಕಾಲೇಜಿನ ಎನ್‌ಎಸ್‌ಎಸ್ ವಿದ್ಯಾರ್ಥಿಗಳಿಂದ ಸ್ವಚ್ಛತಾ ಶ್ರಮದಾನ*

ಅಕ್ಟೋಬರ್ 2, 2026

*ಬಕ್ಕದಲ್ಲಿ ಸಮುದಾಯ ಭವನ ನಿರ್ಮಾಣಕ್ಕೆ ಸ್ಥಳ ಪರಿಶೀಲನೆ*

ಅಕ್ಟೋಬರ್ 2, 2026

*ಮಡಿಕೇರಿಯಲ್ಲಿ 72ನೇ ವನ್ಯಜೀವಿ ಸಪ್ತಾಹ : ವನ್ಯಜೀವಿಗಳ ಸಂರಕ್ಷಣೆ ಜಾಗೃತಿಗಾಗಿ ಬೈಸಿಕಲ್, ಬೈಕ್ ಜಾಥಾ*

ಅಕ್ಟೋಬರ್ 2, 2026

*ಭಾಗ್ಯವತಿ ಸಿ.ಜೆ. ಅವರಿಗೆ ರಾಷ್ಟ್ರಮಟ್ಟದ ‘ಕಾಯಕ ಕಣ್ಣಮಣಿ’ ಪ್ರಶಸ್ತಿ*

ಅಕ್ಟೋಬರ್ 2, 2026

*ಸ್ವಸ್ಥ ಸಂಸ್ಥೆಯಲ್ಲಿ ಅಂತರರಾಷ್ಟ್ರೀಯ ಕಾಫಿ ದಿನಾಚರಣೆ*

ಅಕ್ಟೋಬರ್ 2, 2026

*ಬಾಳೆಲೆ ವಿಜಯಲಕ್ಷ್ಮಿ ಸಂಯುಕ್ತ ಪದವಿ ಪೂರ್ವ ಕಾಲೇಜಿನಲ್ಲಿ ಗಾಂಧಿ ಜಯಂತಿ ಆಚರಣೆ*

ಅಕ್ಟೋಬರ್ 2, 2026

*ಗೋಣಿಕೊಪ್ಪದಲ್ಲಿ ಗಾಂಧೀಜಿ, ಶಾಸ್ತ್ರಿ ಜಯಂತಿ ಆಚರಣೆ*

ಅಕ್ಟೋಬರ್ 2, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.