Close Menu
News-Desk-KannadaNews-Desk-Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಭಾರತ vs ಪಾಕಿಸ್ತಾನ ಪಂದ್ಯಕ್ಕೆ ಮಳೆ ಭೀತಿ! ಶ್ರೀಲಂಕಾ ಹವಾಮಾನ ಇಲಾಖೆ ನೀಡಿದ ಆ ಒಂದು ಎಚ್ಚರಿಕೆ ಅಭಿಮಾನಿಗಳಿಗೆ ಬಿಗ್ ಶಾಕ್!*
  • *ವಾಯುಪಡೆ ಸೇರಲು 10th ಪಾಸ್ ಸಾಕು! ತಿಂಗಳಿಗೆ ಭರ್ಜರಿ ಸಂಬಳ; ನಿಮ್ಮ ಜಿಲ್ಲೆಯಲ್ಲೂ ನೇಮಕಾತಿ ಇದೆಯೇ? ಚೆಕ್ ಮಾಡಿ!*
  • *ಬೆಂಗಳೂರು ಐಪಿಎಲ್ ಪಂದ್ಯಗಳಿಗೆ ಷರತ್ತುಬದ್ಧ ಒಪ್ಪಿಗೆ! ಸಂಭ್ರಮಾಚರಣೆ ಮಾಡಿದ್ರೆ ಬೀಳುತ್ತೆ ದಂಡ? ಗೃಹ ಸಚಿವರು ಹೇಳಿದ್ದೇನು?*
  • *ಗಂಡಸರಿಗೂ ಬಸ್ ಪ್ರಯಾಣ ಉಚಿತ! ಮಹಿಳೆಯರಿಗೆ 25,000 ರೂ. ನಗದು; ಕರ್ನಾಟಕದ ಪಕ್ಕದ ರಾಜ್ಯದಲ್ಲಿ ಭರ್ಜರಿ ಗಿಫ್ಟ್ ಘೋಷಣೆ!*
  • *ಫ್ರೀ.. ಫ್ರೀ.. ಫ್ರೀ! ಪಿಯುಸಿ ಪರೀಕ್ಷೆ ಬರೆಯುವವರಿಗೆ ಸಾರಿಗೆ ಇಲಾಖೆಯಿಂದ ಸಿಹಿಸುದ್ದಿ: ಕಂಡಕ್ಟರ್‌ಗೆ ಈ ಒಂದು ಕಾರ್ಡ್ ತೋರಿಸಿದ್ರೆ ಸಾಕು!*
  • *ಮದೆನಾಡು ಗ್ರಾ.ಪಂ.ವ್ಯಾಪ್ತಿಯಲ್ಲಿ 100 ಕೋಟಿ ರೂ ವೆಚ್ಚದ ವಿವಿಧ ಅಭಿವೃದ್ಧಿ ಕಾಮಗಾರಿಗೆ ಎ.ಎಸ್.ಪೊನ್ನಣ್ಣ ಚಾಲನೆ*
  • *ಮಾ.2ರಂದು “ಕುಂಬ್ಯಾರ್ ಕಲಾಡ್ಚ” ವಾರ್ಷಿಕೋತ್ಸವ*
  • *16ನೇ ಅಂತರಾಷ್ಟ್ರೀಯ ಮಟ್ಟದ ಆನ್‌ಲೈನ್ ಬ್ರೈನೋಬ್ರೈನ್ ಸ್ಪರ್ಧೆಯಲ್ಲಿ ಮಡಿಕೇರಿ ಮಕ್ಕಳ ಸಾಧನೆ*
  • *ಫೆ. 15ರಂದು ಚೆಟ್ಟಳ್ಳಿಯಲ್ಲಿ ಮಹಾಶಿವರಾತ್ರಿ ಆಚರಣೆ*
  • *ಲಂಡನ್‌ನಿಂದ ನೇರವಾಗಿ ಜೈಲಿಗೆ? ವಿಜಯ್ ಮಲ್ಯಗೆ ಸುಪ್ರೀಂ ಕೋರ್ಟ್ ನೀಡಿದ ಅಂತಿಮ ವಾರ್ನಿಂಗ್‌ನ ಸಾರಾಂಶ ಇಲ್ಲಿದೆ!*
News-Desk-KannadaNews-Desk-Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News-Desk-KannadaNews-Desk-Kannada





Home » *ಭೂಮಿಯನ್ನು ರಕ್ಷಿತಾರಣ್ಯ ವ್ಯಾಪ್ತಿಗೆ ತಂದರೆ ಹೋರಾಟ : ಕೊಡಗು ಬಿಜೆಪಿ ಎಚ್ಚರಿಕೆ*
ಇತ್ತೀಚಿನ ಸುದ್ದಿಗಳು

*ಭೂಮಿಯನ್ನು ರಕ್ಷಿತಾರಣ್ಯ ವ್ಯಾಪ್ತಿಗೆ ತಂದರೆ ಹೋರಾಟ : ಕೊಡಗು ಬಿಜೆಪಿ ಎಚ್ಚರಿಕೆ*

August 9, 20242 Mins Read
Facebook WhatsApp Twitter Telegram Copy Link Threads Email LinkedIn Pinterest
Facebook Twitter WhatsApp Email Telegram Copy Link

ಮಡಿಕೇರಿ NEWS DESK ಆ.9 : ಕೊಡಗು ಜಿಲ್ಲಾ ವ್ಯಾಪ್ತಿಯಲ್ಲಿ ಆರ್ಥಿಕವಾಗಿ ಹಿಂದುಳಿದ ಬಡವರ್ಗದ ಮಂದಿ ಬದುಕು ಕಟ್ಟಿಕೊಂಡಿರುವ ಸಿ ಮತ್ತು ಡಿ ದರ್ಜೆಯ ಭೂಮಿಯನ್ನು ರಕ್ಷಿತಾರಣ್ಯ ವ್ಯಾಪ್ತಿಗೆ ತರುವ ರಾಜ್ಯ ಸರ್ಕಾರದ ಪ್ರಸ್ತಾಪವನ್ನು ತೀವ್ರವಾಗಿ ವಿರೋಧಿಸುವುದಾಗಿ ತಿಳಿಸಿರುವ ಕೊಡಗು ಜಿಲ್ಲಾ ಬಿಜೆಪಿ ಅಧ್ಯಕ್ಷ ನಾಪಂಡ ರವಿ ಕಾಳಪ್ಪ ಹೋರಾಟವನ್ನು ರೂಪಿಸುವ ಎಚ್ಚರಿಕೆ ನೀಡಿದ್ದಾರೆ. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಅರಣ್ಯ ಸಂರಕ್ಷಣಾ ಸಮಿತಿಯ ಅಧ್ಯಕ್ಷರು ಗ್ರಾಮ ಪಂಚಾಯ್ತಿ ಪಿಡಿಒಗಳಿಗೆ ಆದೇಶ ಹೊರಡಿಸಿ, ಅವರ ವ್ಯಾಪ್ತಿಯಲ್ಲಿನ ರಕ್ಷಿತಾರಣ್ಯ ಮತ್ತು ಅವುಗಳ ಒತ್ತುವರಿಗಳ ಬಗ್ಗೆ ಮಾಹಿತಿಯನ್ನು ಕೇಳಿರುವ ಕ್ರಮ ಸರಿಯಲ್ಲ. ಗ್ರಾಮೀಣ ಭಾಗಗಳಲ್ಲಿ ಅಲ್ಪಸ್ವಲ್ಪ ಸಿ ಮತ್ತು ಡಿ ದರ್ಜೆಯ ಜಾಗವನ್ನು ಒತ್ತುವರಿ ಮಾಡಿ ಅವುಗಳಲ್ಲಿ ಬದುಕು ಕಟ್ಟಿಕೊಂಡ ದುರ್ಬಲ ವರ್ಗದವರನ್ನು ಅಲ್ಲಿಂದ ತೆರವುಗೊಳಿಸುವ ಪ್ರಯತ್ನ ನಡೆಸಿದರೆ ಪ್ರತಿಭಟನೆ ಅನಿವಾರ್ಯವಾಗುತ್ತದೆ ಎಂದರು. ಜಿಲ್ಲೆಯ ಬಹುತೇಕ ಗ್ರಾಮಿಣ ಭಾಗಗಳಲ್ಲಿ ಇರುವ ದೇವರಕಾಡುಗಳನ್ನು ಸ್ಥಳೀಯರು ಸಂರಕ್ಷಿಕೊAಡು ಬಂದಿದ್ದಾರೆ. ಸಾಕಷ್ಟು ಬಡ ಮಂದಿ ಒಂದಷ್ಟು ಸಿ ಮತ್ತು ಡಿ ದರ್ಜೆಯ ಜಮೀನನ್ನು ಒತ್ತುವರಿ ಮಾಡಿಕೊಂಡು ಕೃಷಿ ಚಟುವಟಿಕೆಗಳನ್ನು ನಡೆಸುವ ಮೂಲಕ ಬದುಕು ಕಟ್ಟಿಕೊಂಡಿದ್ದಾರೆ. ಇದೀಗ ರಾಜ್ಯ ಸರ್ಕಾರದ ನಿರ್ದೇಶನದಂತೆ ಸಿ ಮತ್ತು ಡಿ ದರ್ಜೆಯ ಜಮೀನನ್ನು ಅರಣ್ಯವೆಂದು ಪರಿಗಣಿಸುವ ಪ್ರಯತ್ನಗಳು ನಡೆಯುತ್ತಿದೆ ಎಂದು ಅಸಮಾಧಾನ ವ್ಯಕ್ತಪಡಿಸಿದರು.
ಪ್ರಸ್ತುತ ಅರಣ್ಯೀಕರಣದ ಹೆಸರಿನಲ್ಲಿ ಅರಣ್ಯ ಇಲಾಖೆ ಕೋಟ್ಯಾಂತರ ಹಣವನ್ನು ಮತ್ತೆ ಅರಣ್ಯ ವ್ಯಾಪ್ತಿಯಲ್ಲೆ ಗಿಡ ನೆಡುವ ಕಾರ್ಯಗಳಿಗೆ ವಿನಿಯೋಗಿಸುತ್ತಿರುವುದು ಸರಿಯಾದ ಕ್ರಮವಲ್ಲ. ಜಿಲ್ಲೆಯಲ್ಲಿ ಹಸಿರ ಪರಿಸರ ಸಂರಕ್ಷಣೆೆಯಾಗುತ್ತಿರುವುದಕ್ಕೆ ಗ್ರಾಮ ವ್ಯಾಪ್ತಿಗಳಲ್ಲಿ ವನ್ಯಜೀವಿಗಳ ಹಾವಳಿ ಹೆಚ್ಚುತ್ತಿರುವುದೇ ಸಾಕ್ಷಿಯಾಗಿದೆ. ಅರಣ್ಯ ಪರಿಸರವನ್ನು ಹೆಚ್ಚಿಸುವುದೇ ಆದಲ್ಲಿ ಹಸಿರ ಪರಿಸರ ಕಡಿಮೆ ಇರುವ ಬಯಲು ಪ್ರದೇಶಗಳಲ್ಲಿ ಮರಗಿಡಗಳನ್ನು ಬೆಳೆಸಲಿ ಎಂದರು.
::: ಭ್ರಷ್ಟಾಚಾರದ ಸರ್ಕಾರ :::
ಹಿಂದಿನ ಬಿಜೆಪಿ ಸರ್ಕಾರವನ್ನು ಶೇ.40ರಷ್ಟು ಕಮಿಷನ್ ಪಡೆಯುವ ಸರ್ಕಾರ ಎಂದು ಆರೋಪಿಸುತ್ತಲೆ ಕಾಂಗ್ರೆಸ್ ಅಧಿಕಾರಕ್ಕೆ ಬಂದಿದೆ. ಆದರೆ, ಇಂದು ವಾಲ್ಮೀಕಿ ನಿಗಮದ ಹಗರಣ, ಮುಖ್ಯಮಂತ್ರಿಗಳ ಪತ್ನಿಗೆ ಮುಡಾ ನಿವೇಶನ ಹಂಚಿಕೆ ಹಗರಣ ಸೇರಿದಂತೆ ವಿವಿಧ ಭ್ರಷ್ಟಾಚಾರದ ಪ್ರಕರಣಗಳಿಂದ ಕಾಂಗ್ರೆಸ್ ಸರ್ಕಾರ ಶೇ.100ರಷ್ಟು ಭ್ರಷ್ಟಾಚಾರ ನಡೆಸುತ್ತಿರುವ ಸರ್ಕಾರವಾಗಿದೆ ಎಂದು ರವಿ ಕಾಳಪ್ಪ ಲೇವಡಿ ಮಾಡಿದರು. ರಾಜ್ಯ ಸರ್ಕಾರದ ವಿರುದ್ಧ ಬಿಜೆಪಿ ಮತ್ತು ಮೈತ್ರಿ ಪಕ್ಷ ಜೆಡಿಎಸ್‌ನಿಂದ ನಡೆಯುತ್ತಿರುವ ಪಾದಯಾತ್ರೆಯ ಸಮಾರೋಪ ಸಮಾವೇಶ ಆ.10 ರಂದು ಮೈಸೂರಿನಲ್ಲಿ ನಡೆಯಲಿದೆ. ಕೊಡಗು ಜಿಲೆಯಿಂದ 3 ಸಾವಿರ ಕಾರ್ಯಕರ್ತರು ಸಮಾವೇಶದಲ್ಲಿ ಪಾಲ್ಗೊಳ್ಳಲಿದ್ದಾರೆ ಎಂದು ತಿಳಿಸಿದರು.

Share. Facebook Twitter Pinterest LinkedIn Tumblr Email WhatsApp
Previous Article*ಅಖಂಡ ಭಾರತ ಸಂಕಲ್ಪ : ಮಡಿಕೇರಿಯಲ್ಲಿ ಪಂಜಿನ ಮೆರವಣಿಗೆ*
Next Article *ಕೊಡಗು ಬಿಜೆಪಿಯಿಂದ ರಾಷ್ಟ್ರಭಕ್ತಿಯನ್ನು ಪ್ರೇರೇಪಿಸುವ ಕಾರ್ಯಕ್ರಮ*

Website design development company services in Mangalore

Forex Trading Teacher in India

Related Posts

*ವಾಯುಪಡೆ ಸೇರಲು 10th ಪಾಸ್ ಸಾಕು! ತಿಂಗಳಿಗೆ ಭರ್ಜರಿ ಸಂಬಳ; ನಿಮ್ಮ ಜಿಲ್ಲೆಯಲ್ಲೂ ನೇಮಕಾತಿ ಇದೆಯೇ? ಚೆಕ್ ಮಾಡಿ!*

February 14, 2026

*ಬೆಂಗಳೂರು ಐಪಿಎಲ್ ಪಂದ್ಯಗಳಿಗೆ ಷರತ್ತುಬದ್ಧ ಒಪ್ಪಿಗೆ! ಸಂಭ್ರಮಾಚರಣೆ ಮಾಡಿದ್ರೆ ಬೀಳುತ್ತೆ ದಂಡ? ಗೃಹ ಸಚಿವರು ಹೇಳಿದ್ದೇನು?*

February 14, 2026

*ಗಂಡಸರಿಗೂ ಬಸ್ ಪ್ರಯಾಣ ಉಚಿತ! ಮಹಿಳೆಯರಿಗೆ 25,000 ರೂ. ನಗದು; ಕರ್ನಾಟಕದ ಪಕ್ಕದ ರಾಜ್ಯದಲ್ಲಿ ಭರ್ಜರಿ ಗಿಫ್ಟ್ ಘೋಷಣೆ!*

February 13, 2026

*ಬೆಂಗಳೂರು ಐಪಿಎಲ್ ಪಂದ್ಯಗಳಿಗೆ ಷರತ್ತುಬದ್ಧ ಒಪ್ಪಿಗೆ! ಸಂಭ್ರಮಾಚರಣೆ ಮಾಡಿದ್ರೆ ಬೀಳುತ್ತೆ ದಂಡ? ಗೃಹ ಸಚಿವರು ಹೇಳಿದ್ದೇನು?*

February 14, 2026

ಬೆಂಗಳೂರು: ಸಿಲಿಕಾನ್ ಸಿಟಿಯ ಕ್ರಿಕೆಟ್ ಅಭಿಮಾನಿಗಳಿಗೆ ಸಿಹಿಸುದ್ದಿ ಸಿಕ್ಕಿದೆ. ಬೆಂಗಳೂರಿನ ಎಂ. ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ 2026ರ ಐಪಿಎಲ್ (IPL) ಪಂದ್ಯಗಳನ್ನು…

*ಗಂಡಸರಿಗೂ ಬಸ್ ಪ್ರಯಾಣ ಉಚಿತ! ಮಹಿಳೆಯರಿಗೆ 25,000 ರೂ. ನಗದು; ಕರ್ನಾಟಕದ ಪಕ್ಕದ ರಾಜ್ಯದಲ್ಲಿ ಭರ್ಜರಿ ಗಿಫ್ಟ್ ಘೋಷಣೆ!*

February 13, 2026

*ಫ್ರೀ.. ಫ್ರೀ.. ಫ್ರೀ! ಪಿಯುಸಿ ಪರೀಕ್ಷೆ ಬರೆಯುವವರಿಗೆ ಸಾರಿಗೆ ಇಲಾಖೆಯಿಂದ ಸಿಹಿಸುದ್ದಿ: ಕಂಡಕ್ಟರ್‌ಗೆ ಈ ಒಂದು ಕಾರ್ಡ್ ತೋರಿಸಿದ್ರೆ ಸಾಕು!*

February 13, 2026

*ಮದೆನಾಡು ಗ್ರಾ.ಪಂ.ವ್ಯಾಪ್ತಿಯಲ್ಲಿ 100 ಕೋಟಿ ರೂ ವೆಚ್ಚದ ವಿವಿಧ ಅಭಿವೃದ್ಧಿ ಕಾಮಗಾರಿಗೆ ಎ.ಎಸ್.ಪೊನ್ನಣ್ಣ ಚಾಲನೆ*

February 13, 2026

*ಮಾ.2ರಂದು “ಕುಂಬ್ಯಾರ್ ಕಲಾಡ್ಚ” ವಾರ್ಷಿಕೋತ್ಸವ*

February 13, 2026

*16ನೇ ಅಂತರಾಷ್ಟ್ರೀಯ ಮಟ್ಟದ ಆನ್‌ಲೈನ್ ಬ್ರೈನೋಬ್ರೈನ್ ಸ್ಪರ್ಧೆಯಲ್ಲಿ ಮಡಿಕೇರಿ ಮಕ್ಕಳ ಸಾಧನೆ*

February 13, 2026

*ಫೆ. 15ರಂದು ಚೆಟ್ಟಳ್ಳಿಯಲ್ಲಿ ಮಹಾಶಿವರಾತ್ರಿ ಆಚರಣೆ*

February 13, 2026

*ಲಂಡನ್‌ನಿಂದ ನೇರವಾಗಿ ಜೈಲಿಗೆ? ವಿಜಯ್ ಮಲ್ಯಗೆ ಸುಪ್ರೀಂ ಕೋರ್ಟ್ ನೀಡಿದ ಅಂತಿಮ ವಾರ್ನಿಂಗ್‌ನ ಸಾರಾಂಶ ಇಲ್ಲಿದೆ!*

February 13, 2026

*ಸಂಭ್ರಮದಿಂದ ಜರುಗಿದ ವಿರಾಜಪೇಟೆಯ ಸಂತ ಅನ್ನಮ್ಮ ಚರ್ಚ್ ನ ವಾರ್ಷಿಕ ಮಹೋತ್ಸವ. ಮೈಸೂರು ಧರ್ಮಾಧ್ಯಕ್ಷರಾದ ಬಿಷಪ್ ಫ್ರಾನ್ಸಿಸ್ ಸೆರಾವೋ ರವರ ನೇತೃತ್ವದಲ್ಲಿ ಜರುಗಿದ ದಿವ್ಯ ಬಲಿಪೂಜೆ*

February 13, 2026

*ಫೆ.15 ರಂದು ಶ್ರೀ ಓಂಕಾರೇಶ್ವರ ದೇವಾಲಯದಲ್ಲಿ ಶಿವರಾತ್ರಿ ಹಬ್ಬದ ಪ್ರಯುಕ್ತ ವಿಶೇಷ ಪೂಜೆ*

February 13, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.