
ಮಡಿಕೇರಿ NEWS DESK ಆ.9 : ಸ್ವಾತಂತ್ರ್ಯೋತ್ಸವದ ಹಿನ್ನೆಲೆಯಲ್ಲಿ ಕೊಡಗು ಜಿಲ್ಲಾ ಬಿಜೆಪಿ ವತಿಯಿಂದ ಯುವ ಸಮೂಹದಲ್ಲಿ ರಾಷ್ಟ್ರಭಕ್ತಿಯನ್ನು ಪ್ರೇರೇಪಿಸುವ ಉದ್ದೇಶದಿಂದ ವೈವಿಧ್ಯಮಯ ಕಾರ್ಯಕ್ರಮಗಳನ್ನು ಆ.11 ರಿಂದ 15ರವರೆಗೆ ಜಿಲ್ಲಾ ವ್ಯಾಪ್ತಿಯಲ್ಲಿ ಆಯೋಜಿಸಲಾಗಿದೆ ಎಂದು ಬಿಜೆಪಿ ಜಿಲ್ಲಾಧ್ಯಕ್ಷ ನಾಪಂಡ ರವಿ ಕಾಳಪ್ಪ ಹೇಳಿದರು. ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ರವರೆಗೆ ಜಿಲ್ಲೆಯ ಸೋಮವಾರಪೇಟೆ, ವಿರಾಜಪೇಟೆ, ಮಡಿಕೇರಿ ಗ್ರಾಮಾಂತರ ಮತ್ತು ಮಡಿಕೇರಿ ನಗರ ಮಂಡಲಗಳಲ್ಲಿ ಸ್ವಾತಂತ್ರ್ಯೋತ್ಸವದ ‘ಬೈಕ್ ಜಾಥ’ವನ್ನು ಹಮ್ಮಿಕೊಳ್ಳಲಾಗಿದೆ ಎಂದರು. ಆ.12 ರಿಂದ 14 ರವರೆಗೆ ಕೊಡಗು ಜಿಲ್ಲಾ ವ್ಯಾಪ್ತಿಯಲ್ಲಿ ಇರಬಹುದಾದ ಸ್ವಾತಂತ್ರ್ಯ ಹೋರಾಟಗಾರರನ್ನು ಗುರುತಿಸಿ ಸನ್ಮಾನಿಸಲಾಗುತ್ತದೆ. ಸ್ವಾತಂತ್ರ್ಯೋತ್ಸವ ಹೋರಾಟಗಾರರು ಇಲ್ಲವೆಂದಾದಲ್ಲಿ ಸ್ವಾತಂತ್ರ್ಯ ಹೋರಾಟಗಾರರ ಕುಟುಂಬಸ್ಥರನ್ನು ಗುರುತಿಸಿ, ಅವರ ಮನೆಗಳಿಗೆ ತೆರಳಿ ಗೌರವಿಸುವ ಮಹತ್ವದ ಕಾರ್ಯವನ್ನು ಪಕ್ಷ ಹಮ್ಮಿಕೊಂಡಿದೆ ಎಂದು ಹೇಳಿದರು.
::: “ಕರಾಳ ದಿನ” ಆಚರಣೆ :::
ಅಖಂಡವಾಗಿದ್ದ ಭಾರತ ವಿಭಜನೆಯಾದ ಆ.14ನ್ನು ‘ಕರಾಳ ದಿನ’ವನ್ನಾಗಿ ಆಚರಿಸಲು ಉದ್ದೇಶಿಸಲಾಗಿದೆ. ಅಂದು ದೇಶ ವಿಭಜನೆಗೆ ಕಾರಣವಾದ ಅಂಶಗಳು, ಅಂದು ನಡೆದ ಘಟನಾವಳಿಗಳ ಬಗ್ಗೆ ಯುವ ಸಮೂಹಕ್ಕೆ ಮನವರಿಕೆ ಮಾಡಿಕೊಡುವ ನಿಟ್ಟಿನಲ್ಲಿ ಸಂವಾದ, ವಿಚಾರ ಸಂಕಿರಣ ಮೊದಲಾದ ಕಾರ್ಯಕ್ರಮಗಳನ್ನು ಆಯೋಜಿಸಲಾಗುತ್ತದೆ ಎಂದರು.
ರಾಷ್ಟçಭಕ್ತಿಯನ್ನು ಪ್ರೇರೇಪಿಸುವ ಚಿಂತನೆಯಡಿ ಆ.13 ರಿಂದ 15 ರವರೆಗೆ ಜಿಲ್ಲೆಯ ಮನೆ ಮನೆಗಳಲ್ಲಿ ತ್ರಿವರ್ಣ ಧ್ವಜಾರೋಹಣಕ್ಕೆ ಸಾರ್ವಜನಿಕರಿಗೆ ಪ್ರೇರೆಪಿಸಲಾಗುತ್ತಿದೆ. ಈ ನೀಡುವ ನಿಟ್ಟಿನಲ್ಲಿ, ಪಕ್ಷದ ಪ್ರತಿ ಬೂತ್ ಮಟ್ಟದ ಕಾರ್ಯಕರ್ತರು ಮನೆ ಮನೆಗಳಿಗೆ ತೆರಳಲಿದ್ದಾರೆ ಎಂದು ತಿಳಿಸಿದರು. ಸುದ್ದಿಗೋಷ್ಠಿಯಲ್ಲಿ ಜಿಲ್ಲಾ ಬಿಜೆಪಿ ಉಪಾಧ್ಯಕ್ಷ ಕಿಲನ್ ಗಣಪತಿ, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಮಹೇಶ್ ಜೈನಿ, ಮಡಿಕೇರಿ ನಗರ ಮಂಡಲ ಪ್ರಧಾನ ಕಾರ್ಯದರ್ಶಿಗಳಾದ ಕವನ್ ಕಾವೇರಪ್ಪ ಹಾಗೂ ಬಿ.ಕೆ.ಜಗದೀಶ್ ಉಪಸ್ಥಿತರಿದ್ದರು. ಗೂ ಬಿ.ಕೆ.ಜಗದೀಶ್ ಉಪಸ್ಥಿತರಿದ್ದರು.








