
ಮಡಿಕೇರಿ ಆ.12 NEWS DESK : ವಿರಾಜಪೇಟೆ ಸಾರ್ವಜನಿಕ ಗ್ರಂಥಾಲಯದಲ್ಲಿ ಭಾರತದ ಗ್ರಂಥಾಲಯ ಮತ್ತು ಮಾಹಿತಿ ವಿಜ್ಞಾನ ಕೇಂದ್ರದ ಪಿತಾಮಹ ಪದ್ಮಶ್ರೀ ಎಸ್.ಆರ್.ರಂಗನಾಥನ್ ಅವರ ಜನ್ಮದಿನದ ಅಂಗವಾಗಿ ಗ್ರಂಥ ಪಾಲಕರ ದಿನಾಚರಣೆ ಆಚರಿಸಲಾಯಿತು. ಇದರ ಅಂಗವಾಗಿ ಶಾಲಾ ವಿದ್ಯಾರ್ಥಿಗಳಿಗೆ ಪ್ರಬಂಧ ಸ್ಪರ್ಧೆ ನಡೆಸಿ ವಿಜೇತ ವಿದ್ಯಾರ್ಥಿಗಳಿಗೆ ಬಹುಮಾನ ವಿತರಿಸಲಾಯಿತು. ವಿರಾಜಪೇಟೆ ಆರಕ್ಷಕ ಠಾಣೆ ಸಿಬ್ಬಂದಿ ಪ್ರವೀಣ್ ಅತಿಥಿಗಳಾಗಿ ಆಗಮಿಸಿ ವಿಜೇತ ಮಕ್ಕಳಿಗೆ ಬಹುಮಾನ ವಿತರಿಸಿದರು. ಈ ಸಂದರ್ಭ ರೋಟರಿ ಶಾಲೆಯ ದೈಹಿಕ ಶಿಕ್ಷಕ ಮಿಥುನ್, ಗ್ರಂಥಾಲಯ ಸಿಬ್ಬಂದಿಗಳಾದ ಸುಮಿತ್ರ, ನಿಮಿತ್ತ ಮತ್ತು ಶಾಲಾ ವಿದ್ಯಾರ್ಥಿಗಳು ಹಾಜರಿದ್ದರು.








