ಮಡಿಕೇರಿ ಆ.14 NEWS DESK : ಸ್ವಾತಂತ್ರ್ಯ ದಿನಾಚಾರಣೆಯ ಪ್ರಯುಕ್ತ ಹರ್ ಘರ್ ತಿರಂಗ ಅಭಿಯಾನದ ಅಂಗವಾಗಿ ಬಿಜೆಪಿ ಯುವಮೋರ್ಚಾ ಮಡಿಕೇರಿ ಮಂಡಲ ಹಾಗೂ ಗ್ರಾಮಾಂತರ ಮಂಡಲದ ವತಿಯಿಂದ ಮಡಿಕೇರಿಯಲ್ಲಿ ಬೈಕ್ ಜಾಥಾ ನಡೆಯಿತು. ಮಂಡಲ ಯುವಮೋರ್ಚಾ ಅಧ್ಯಕ್ಷ ಸಜನ್ ಪೂಣಚ್ಚ ಹಾಗೂ ಚೇತನ್ ಬಂಗೇರ ಅವರ ನೇತೃತ್ವದಲ್ಲಿ ನಗರದ ಬನ್ನಿ ಮಂಟಪದಿಂದ ಆರಂಭಗೊಂಡ ಜಾಥಾವು ಸುದರ್ಶನ ವೃತ್ತ ಮಾರ್ಗವಾಗಿ ಬಂದು ಜಿಲ್ಲಾ ಬಿಜೆಪಿ ಕಚೇರಿಯಲ್ಲಿ ಕೊನೆಗೊಂಡಿತು.ಬೈಕ್ ಜಾಥಾಕ್ಕೆ ಮಾಜಿ ಶಾಸಕರುಗಳಾದ ಕೆ.ಜಿ.ಬೋಪಯ್ಯ ಹಾಗೂ ಅಪ್ಪಚ್ಚು ರಂಜನ್, ಜಿಲ್ಲಾಧ್ಯಕ್ಷ ರವಿ ಕಾಳಪ್ಪ ಚಾಲನೆ ನೀಡಿ ಮಾತನಾಡಿದರು. ಈ ಸಂದರ್ಭ ಪ್ರಧಾನ ಕಾರ್ಯದರ್ಶಿಗಳಾದ ಮಹೇಶ್ ಜೈನಿ, ಜಿಲ್ಲಾ ಉಪಾಧ್ಯಕ್ಷ ಮನು ಮಂಜುನಾಥ್, ಜಿಲ್ಲಾ ಎಸ್.ಸಿ.ಮೋರ್ಚಾದ ಅಧ್ಯಕ್ಷ ರವಿ ಮೊಗೇರ, ಜಿಲ್ಲಾ ಮಹಿಳಾ ಮೋರ್ಚಾದ ಅಧ್ಯಕ್ಷರಾದ ಅನಿತಾ ಪೂವಯ್ಯ, ಜಿಲ್ಲಾ ಕಾರ್ಯದರ್ಶಿಗಳಾದ ಪ್ರಶಾಂತ್ ಭೀಮಯ್ಯ ಹಾಗೂ ಕನ್ನಿಕೆ, ಜಿಲ್ಲಾ ವಕ್ತರ ಅರುಣ್ ಕುಮಾರ್, ನಗರ ಮಂಡಲದ ಅಧ್ಯಕ್ಷ ಉಮೇಶ್ ಸುಬ್ರಮಣಿ, ಉಪಾಧ್ಯಕ್ಷ ಡಿಶು, ನಗರ ಮಂಡಲದ ಪ್ರಧಾನ ಕಾರ್ಯದರ್ಶಿಗಳಾದ ಜಗದೀಶ್. ಬಿ.ಕೆ ಹಾಗೂ ಕವನ್ ಕಾವೇರಪ್ಪ, ಯುವ ಮೋರ್ಚಾದ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಪೊನ್ನಚ್ಚೆಟಿರ ವಿನೋದ್, ನಗರ ಕಾರ್ಯದರ್ಶಿಗಳಾದ ಮನು ರೈ ಹಾಗೂ ವಿಗ್ನೇಶ್, ಗ್ರಾಮಾಂತರ ಮಂಡಲ ಪ್ರಧಾನ ಕಾರ್ಯದರ್ಶಿ ದರ್ಶನ್ ದಂಬೆಕೋಡಿ ಹಾಗೂ ವಿವಿಧ ಮೋರ್ಚಾಗಳ ಅಧ್ಯಕ್ಷರು, ಪದಾಧಿಕಾರಿಗಳು, ಚುನಾಯಿತ ಜನ ಪ್ರತಿನಿಧಿಗಳು, ಬೂತ್ ಮಟ್ಟದ ಅಧ್ಯಕ್ಷರು ಹಾಗೂ ಪಕ್ಷದ ಎಲ್ಲಾ ಹಿರಿಯ ಕಿರಿಯ ಕಾರ್ಯಕರ್ತರು ಹಾಜರಿದ್ದರು. ಪಕ್ಷದ ಕಚೇರಿ ಮುಂಭಾಗ ನಡೆದ ಜಾಥಾದ ಸಮಾರೋಪದಲ್ಲಿ ಗ್ರಾಮಾಂತರ ಮಂಡಲ ಯುವಮೋರ್ಚಾ ಅಧ್ಯಕ್ಷ ಚೇತನ್ ಬಂಗೇರ ವಂದಿಸಿದರು.








