Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಭಾಗಮಂಡಲ : ಕಾಡಂಚಿನ ಗ್ರಾಮಸ್ಥರಿಗೆ ಉಚಿತ ಆರೋಗ್ಯ ತಪಾಸಣೆ*
  • *ಏ.02 ರಂದು ಸಾಮೂಹಿಕ ಸತ್ಯನಾರಾಯಣ ಪೂಜೆ*
  • *ರೈತರ ಮಕ್ಕಳಿಂದ ತೋಟಗಾರಿಕೆ ತರಬೇತಿಗೆ ಅರ್ಜಿ ಆಹ್ವಾನ*
  • *ಸಾರ್ವಜನಿಕರ ಗಮನಕ್ಕೆ*
  • *ನಿವೃತ್ತಿ ಹೊಂದಿದ ಪೊಲೀಸ್ ಅಧಿಕಾರಿಗಳಿಗೆ ಬೀಳ್ಕೊಡುಗೆ*
  • *ವಿರಾಜಪೇಟೆಯ ಕೊಡವ ಪೊಮ್ಮಕ್ಕಡ ಒಕ್ಕೂಟದ ವತಿಯಿಂದ ಅಂತರಾಷ್ಟ್ರೀಯ ಮಹಿಳಾ ದಿನಾಚರಣೆ*
  • *ನಮ್ಮ ಗಣತಿ ನಮ್ಮ ಅಭಿವೃದ್ಧಿ ಏ.1 ರಿಂದ 2027ರ ಜನಗಣತಿಯ ಮೊದಲ ಹಂತ ಆರಂಭ*
  • *ತನಲ್ ಕೂರ್ಗ್ ಆಶ್ರಮದಲ್ಲಿ ಎಫ್‌ಎಂಸಿ ಮತ್ತು ಜಿಟಿ ಫೌಂಡೇಶನ್ ವತಿಯಿಂದ ಜನರಲ್ ತಿಮ್ಮಯ್ಯ ಅವರ ಹುಟ್ಟು ಹಬ್ಬ ಆಚರಣೆ*
  • *ಜಿಲ್ಲಾಡಳಿತದಿಂದ ಜನರಲ್ ಕೆ.ಎಸ್.ತಿಮ್ಮಯ್ಯ ಅವರ ಜನ್ಮ ದಿನಾಚರಣೆ : ಸೇನಾ ಕ್ಷೇತ್ರದಲ್ಲಿ ಜನರಲ್ ತಿಮ್ಮಯ್ಯ ಅವರ ಸಾಹಸ, ಸಾಧನೆ ಅಪಾರ : ಶಾಸಕ ಎ.ಎಸ್.ಪೊನ್ನಣ್ಣ ಶ್ಲಾಘನೆ*
  • *ಮಡಿಕೇರಿ ಕೊಡವ ಸಮಾಜದಿಂದ ಜನರಲ್ ತಿಮ್ಮಯ್ಯ ಅವರ ಜನ್ಮ ದಿನಾಚರಣೆ : ಫೀಲ್ಡ್ ಮಾರ್ಷಲ್ ಕಾರ್ಯಪ್ಪ ಮತ್ತು ಜನರಲ್ ತಿಮ್ಮಯ್ಯ ಭಾರತೀಯ ಸೇನಾ ಕ್ಷೇತ್ರದಲ್ಲಿನ ಕಣ್ಮಣಿಗಳು : ಶಾಸಕ ಡಾ.ಮಂತರ್ ಗೌಡ*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*ಗುಡ್ಡೆಹೊಸೂರುವಿನಲ್ಲಿ ವಿಶ್ವ ಛಾಯಾಗ್ರಹಣ ದಿನಾಚರಣೆ : ಛಾಯಾಚಿತ್ರವಿಲ್ಲದೆ ಸುದ್ದಿ ಅಪೂರ್ಣ : ಅನಿಲ್ ಎಚ್.ಟಿ*
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

*ಗುಡ್ಡೆಹೊಸೂರುವಿನಲ್ಲಿ ವಿಶ್ವ ಛಾಯಾಗ್ರಹಣ ದಿನಾಚರಣೆ : ಛಾಯಾಚಿತ್ರವಿಲ್ಲದೆ ಸುದ್ದಿ ಅಪೂರ್ಣ : ಅನಿಲ್ ಎಚ್.ಟಿ*

ಆಗಷ್ಟ್ 19, 20242 Mins ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link


ಗುಡ್ಡೆಹೊಸೂರು ಆ.19 NEWS DESK : ಪತ್ರಿಕೆಗಳಲ್ಲಿ ಛಾಯಾಚಿತ್ರವಿಲ್ಲದೆ ಸುದ್ದಿ ಅಪೂರ್ಣ. ಛಾಯಾಚಿತ್ರ ಮುದ್ರಣ ಮಾಧ್ಯಮದ ಅವಿಭಾಜ್ಯ ಅಂಗ. ಯಾವುದೇ ವರದಿ ಇದ್ದರೂ ಛಾಯಾಚಿತ್ರ ಇದ್ದರೆ ಮಾತ್ರ ಅದು ಪರಿಣಾಮಕಾರಿಯಾಗಿರುತ್ತದೆ ಎಂದು ಹಿರಿಯ ಪತ್ರಕರ್ತ ಅನಿಲ್ ಎಚ್.ಟಿ. ಹೇಳಿದ್ದಾರೆ. ಕೊಡಗು ಪತ್ರಕರ್ತರ ಸಂಘದ ಕುಶಾಲನಗರ ತಾಲೂಕು ಘಟಕದಿಂದ ಗುಡ್ಡೆಹೊಸೂರು ಗ್ರಾಮ ಪಂಚಾಯಿತಿಯ ಸಮುದಾಯ ಭವನದಲ್ಲಿ ಸೋಮವಾರ ನಡೆದ ವಿಶ್ವ ಛಾಯಾಗ್ರಹಣ ದಿನಾಚರಣೆ ಕಾರ್ಯಕ್ರಮದಲ್ಲಿ ಕ್ಯಾಮೆರಾದಲ್ಲಿ ಫೋಟೋ ಕ್ಲಿಕ್ಕಿಸುವ ಮೂಲಕ ಉದ್ಘಾಟಿಸಿ ಅವರು ಮಾತನಾಡಿದರು. ಪತ್ರಿಕೆಗಳಲ್ಲಿ ಸುದ್ದಿಗಳು ಮಾತ್ರವೇ ಇದ್ದರೆ ಅದು ನೀರಸವಾಗುತ್ತದೆ. ಛಾಯಾಚಿತ್ರ ಇದ್ದರೆ ಮಾತ್ರ ಆ ಸುದ್ದಿಗೆ ಹೆಚ್ಚಿನ ಮಹತ್ವ ಇರುತ್ತದೆ. ಒಂದು ಛಾಯಾಚಿತ್ರ ಸಾವಿರ ಪದಗಳಿಗೆ ಸಮಾನ ಎಂಬುದು ಸತ್ಯ. ಒಂದು ಚಿತ್ರ ಹಲವು ಭಾವನೆಗಳನ್ನು ಹುಟ್ಟುಹಾಕುತ್ತದೆ. ಇಂದು ಸುದ್ದಿ ಛಾಯಾಗ್ರಾಹಕರು ಹಲವು ಸವಾಲುಗಳನ್ನು ಎದುರಿಸುವಂತಾಗಿದೆ. ಛಾಯಾಗ್ರಾಹಕರ ಕಷ್ಟ ಸಾಕಷ್ಟಿದೆ ಎಂದರು. 20ನೇ ಶತಮಾನದಲ್ಲಿ ಪ್ರಿಂಟ್ ಫೋಟೋಗ್ರಾಪಿ ಇತ್ತು. ನಂತರ ಡಿಜಿಟಲ್ ಫೋಟೋಗ್ರಫಿ ಆರಂಭವಾಗಿ ಇಂದು ಛಾಯಾಚಿತ್ರ ಕ್ಷೇತ್ರದಲ್ಲಿ ಕ್ರಾಂತಿಕಾರಿ ಬದಲಾವಣೆಯಾಗಿದೆ. ಇಂದು ಮೊಬೈಲ್ ಕ್ಯಾಮೆರಾ ಇರುವುರೆಲ್ಲರೂ ಛಾಯಾಗ್ರಾಹಕರಾಗಲು ಹೊರಟಿರುವುದರಿಂದ ನೈಜ ವೃತ್ತಿಪರ ಛಾಯಾಗ್ರಾಹಕರಿಗೆ ಹೊಡೆತಬಿದ್ದಿದೆ. ಛಾಯಾಗ್ರಾಹಕರಿಗೆ ಸವಾಲು ಹುಟ್ಟುಹಾಕಿದಂತಾಗಿದೆ. ಮುಂದಿನ ದಿನಗಳಲ್ಲಿ ವೃತ್ತಿ ಉಳಿಯುತ್ತದೆಯೋ ಎಂಬ ಆತಂಕ ಉಂಟಾಗಿದೆ ಎಂದು ಹೇಳಿದರು. ಮಡಿಕೇರಿಯ ಛಾಯಾಗ್ರಾಹಕ ಹರ್ಷಿತ್ ಮಾತನಾಡಿ ಇಂದು ಆಧುನಿಕ ತಂತ್ರಜ್ಞಾನ ವೇಗವಾಗಿ ಬೆಳೆಯುತ್ತಿದೆ. ಆದ್ದರಿಂದ ನಾವು ಕೂಡ ಆ ವೇಗಕ್ಕೆ ಹೊಂದಿಕೊಂಡು ಕೆಲಸ ಮಾಡಬೇಕು. ಇದರಿಂದ ಮಾತ್ರ ನಾವು ಯಶಸ್ಸು ಗಳಿಸಲು ಸಾಧ್ಯ. ಛಾಯಾಗ್ರಹಣ ಕ್ಷೇತ್ರದಲ್ಲಿ ಸಾಕಷ್ಟು ಹೊಸ ತಂತ್ರಜ್ಞಾನ ಬರುತ್ತಿದೆ. ಅದನ್ನು ನಾವು ಅಳವಡಿಕೆ ಮಾಡಬೇಕು. ವೃತ್ತಪರ ಕ್ಯಾಮೆರಾ ಬೆಲೆ ಸಾಕಷ್ಟಿದೆ. ಈ ಕ್ಷೇತ್ರದಲ್ಲಿ ನಾವು ಕಲಿತಷ್ಟು ಕ್ರೀಯಾಶೀಲರಾಗಿ ಕೆಲಸ ಮಾಡಲು ಸಾಧ್ಯ ಎಂದು ತಿಳಿಸಿದರು. ಕೊಡಗು ಪತ್ರಕರ್ತರ ಸಂಘದ ಅಧ್ಯಕ್ಷ ಎಸ್.ಎ. ಮುರುಳೀಧರ್ ಮಾತನಾಡಿ ಎಲ್ಲರಿಗೂ ಅತ್ಯುತ್ತಮವಾಗಿ ಛಾಯಾಗ್ರಹಣ ಮಾಡಲು ಸಾಧ್ಯವಿಲ್ಲ. ಇದೊಂದು ಕಲೆ ಇದ್ದಂತೆ. ಚಿತ್ರಗಳನ್ನು ತಮ್ಮದೇ ಆದ ಶೈಲಿಯಲ್ಲಿ ಕ್ಲಿಕ್ಕಿಸುವ ಮೂಲಕ ಛಾಯಾಚಿತ್ರಗಾರರು ಚಿತ್ರಗಳಿಗೆ ಜೀವಂತಿಕೆ ತುಂಬುತ್ತಾರೆ ಎಂದು ಹೇಳಿದರು. ಕಾರ್ಯಕ್ರಮದಲ್ಲಿ ಕುಶಾಲನಗರ ತಾಲೂಕು ಪತ್ರಕರ್ತರ ಸಂಘದ ಉಪಾಧ್ಯಕ್ಷ ಬಿ.ಸಿ. ದಿನೇಶ್ ಮಾತನಾಡಿ ಫೋಟೋ ತೆಗೆದರೆ ಮನುಷ್ಯನ ಆಯಸ್ಸು ಕಡಿಮೆಯಾಗುತ್ತದೆ ಎಂಬ ಕಾಲ ಇತ್ತು. ಆದರೆ ಇಂದು ಫೋಟೋ ತೆಗೆದರೆ ಇದು ನಾವೇನಾ ಎಂಬಷ್ಟರ ಮಟ್ಟಿಗೆ ಈ ಕ್ಷೇತ್ರ ಸಾಕಷ್ಟು ಬೆಳವಣಿಗೆಯಾಗಿದೆ ಎಂದರು. ವಿಶ್ವ ಛಾಯಾಗ್ರಹಣ ದಿನದ ಅಂಗವಾಗಿ ಪತ್ರಕರ್ತ ಹಾಗೂ ಹವ್ಯಾಸಿ ಛಾಯಾಗ್ರಾಹಕರಾದ ವಿಘ್ನೇಶ್ ಭೂತನಕಾಡು ಅವರನ್ನು ಕಾರ್ಯಕ್ರಮದಲ್ಲಿ ಸನ್ಮಾನಿಸಿ ಗೌರವಿಸಲಾಯಿತು. ಕಾರ್ಯಕ್ರಮದಲ್ಲಿ ಕೊಡಗು ಪತ್ರಕರ್ತರ ಸಂಘದ ಉಪಾಧ್ಯಕ್ಷ ರವಿಕುಮಾರ್, ಸಂಘದ ಪದಾಧಿಕಾರಿಗಳಾದ ಟಿ.ಕೆ. ಸಂತೋಷ್, ಸುರೇಶ್ ಬಿಳಿಗೇರಿ, ಡಿ.ಪಿ. ಲೋಕೇಶ್, ಎಂ.ಎಸ್. ಸುನಿಲ್, ಜಿ.ಕೆ. ಬಾಲಕೃಷ್ಣ, ಚುಟುಕು ಸಾಹಿತಿ ಹಾ.ತಿ. ಜಯಪ್ರಕಾಶ್ ಮತ್ತಿತರರು ಪಾಲ್ಗೊಂಡಿದ್ದರು. ಕುಶಾಲನಗರ ತಾಲೂಕು ಪತ್ರಕರ್ತರ ಸಂಘದ ಗೌರವಾಧ್ಯಕ್ಷ ಕೆ.ತಿಮ್ಮಪ್ಪ ನಿರೂಪಿಸಿದರು. ಸಂಘದ ಖಜಾಂಚಿ ನವೀನ್ ಚಿನ್ನಪ್ಪ ಸ್ವಾಗತಿಸಿ, ಬಿ.ಎನ್. ರವಿಕುಮಾರ್ ವಂದಿಸಿದರು.
 

Follow us Follow us
Share. WhatsApp Facebook Twitter Email Telegram Copy Link

Website design development company services in Mangalore

Forex Trading Teacher in India

Related Posts

*ಭಾಗಮಂಡಲ : ಕಾಡಂಚಿನ ಗ್ರಾಮಸ್ಥರಿಗೆ ಉಚಿತ ಆರೋಗ್ಯ ತಪಾಸಣೆ*

ಮಾರ್ಚ್ 31, 2026

*ಏ.02 ರಂದು ಸಾಮೂಹಿಕ ಸತ್ಯನಾರಾಯಣ ಪೂಜೆ*

ಮಾರ್ಚ್ 31, 2026

*ರೈತರ ಮಕ್ಕಳಿಂದ ತೋಟಗಾರಿಕೆ ತರಬೇತಿಗೆ ಅರ್ಜಿ ಆಹ್ವಾನ*

ಮಾರ್ಚ್ 31, 2026

*ಏ.02 ರಂದು ಸಾಮೂಹಿಕ ಸತ್ಯನಾರಾಯಣ ಪೂಜೆ*

ಮಾರ್ಚ್ 31, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಮಡಿಕೇರಿ, NEWS DESK ಮಾ.31:-ಭಾಗಮಂಡಲದ ಶ್ರೀ ಭಗಂಡೇಶ್ವರ ದೇವಾಲಯದಲ್ಲಿ ಏಪ್ರಿಲ್, 02 ರಂದು ಸಂಜೆ 4 ಗಂಟೆಯಿಂದ “ಸಾಮೂಹಿಕ ಸತ್ಯನಾರಾಯಣ”…

*ರೈತರ ಮಕ್ಕಳಿಂದ ತೋಟಗಾರಿಕೆ ತರಬೇತಿಗೆ ಅರ್ಜಿ ಆಹ್ವಾನ*

ಮಾರ್ಚ್ 31, 2026

*ಸಾರ್ವಜನಿಕರ ಗಮನಕ್ಕೆ*

ಮಾರ್ಚ್ 31, 2026

*ನಿವೃತ್ತಿ ಹೊಂದಿದ ಪೊಲೀಸ್ ಅಧಿಕಾರಿಗಳಿಗೆ ಬೀಳ್ಕೊಡುಗೆ*

ಮಾರ್ಚ್ 31, 2026

*ವಿರಾಜಪೇಟೆಯ ಕೊಡವ ಪೊಮ್ಮಕ್ಕಡ ಒಕ್ಕೂಟದ ವತಿಯಿಂದ ಅಂತರಾಷ್ಟ್ರೀಯ ಮಹಿಳಾ ದಿನಾಚರಣೆ*

ಮಾರ್ಚ್ 31, 2026

*ನಮ್ಮ ಗಣತಿ ನಮ್ಮ ಅಭಿವೃದ್ಧಿ ಏ.1 ರಿಂದ 2027ರ ಜನಗಣತಿಯ ಮೊದಲ ಹಂತ ಆರಂಭ*

ಮಾರ್ಚ್ 31, 2026

*ತನಲ್ ಕೂರ್ಗ್ ಆಶ್ರಮದಲ್ಲಿ ಎಫ್‌ಎಂಸಿ ಮತ್ತು ಜಿಟಿ ಫೌಂಡೇಶನ್ ವತಿಯಿಂದ ಜನರಲ್ ತಿಮ್ಮಯ್ಯ ಅವರ ಹುಟ್ಟು ಹಬ್ಬ ಆಚರಣೆ*

ಮಾರ್ಚ್ 31, 2026

*ಜಿಲ್ಲಾಡಳಿತದಿಂದ ಜನರಲ್ ಕೆ.ಎಸ್.ತಿಮ್ಮಯ್ಯ ಅವರ ಜನ್ಮ ದಿನಾಚರಣೆ : ಸೇನಾ ಕ್ಷೇತ್ರದಲ್ಲಿ ಜನರಲ್ ತಿಮ್ಮಯ್ಯ ಅವರ ಸಾಹಸ, ಸಾಧನೆ ಅಪಾರ : ಶಾಸಕ ಎ.ಎಸ್.ಪೊನ್ನಣ್ಣ ಶ್ಲಾಘನೆ*

ಮಾರ್ಚ್ 31, 2026

*ಮಡಿಕೇರಿ ಕೊಡವ ಸಮಾಜದಿಂದ ಜನರಲ್ ತಿಮ್ಮಯ್ಯ ಅವರ ಜನ್ಮ ದಿನಾಚರಣೆ : ಫೀಲ್ಡ್ ಮಾರ್ಷಲ್ ಕಾರ್ಯಪ್ಪ ಮತ್ತು ಜನರಲ್ ತಿಮ್ಮಯ್ಯ ಭಾರತೀಯ ಸೇನಾ ಕ್ಷೇತ್ರದಲ್ಲಿನ ಕಣ್ಮಣಿಗಳು : ಶಾಸಕ ಡಾ.ಮಂತರ್ ಗೌಡ*

ಮಾರ್ಚ್ 31, 2026

*ಮಡಿಕೇರಿಯಲ್ಲಿ ಬಾಲಗೋಕುಲ ಬೇಸಿಗೆ ಶಿಬಿರ: ಏಪ್ರಿಲ್ 4ರಿಂದ ಆರಂಭ*

ಮಾರ್ಚ್ 31, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.

Ad Blocker Enabled!
Ad Blocker Enabled!
Our website is made possible by displaying online advertisements to our visitors. Please support us by disabling your Ad Blocker.