
ಸೋಮವಾರಪೇಟೆ ಆ.20 NEWS DESK : ತಾಲ್ಲೂಕು ಕಾನೂನು ಸೇವಾ ಪ್ರಾಧಿಕಾರ, ತಾಲ್ಲೂಕು ಆಡಳಿತ, ಕಾರ್ಮಿಕ ಇಲಾಖೆ, ಶಿಕ್ಷಣ ಇಲಾಖೆ, ತಾಲ್ಲೂಕು ಪಂಚಾಯಿತಿ, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ, ಸಮಾಜ ಕಲ್ಯಾಣ ಇಲಾಖೆ, ತಾಲ್ಲೂಕು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಆರೋಗ್ಯ ಇಲಾಖೆ ಮತ್ತು ಪೋಲೀಸ್ ಇಲಾಖೆ ಸಹಯೋಗದೊಂದಿಗೆ ಬಾಲಕಾರ್ಮಿಕ ನಿರ್ಮೂಲನಾ ಅಭಿಯಾನ ಜಾಥಾ ಕಾರ್ಯಕ್ರಮ ಪಟ್ಟಣದಲ್ಲಿ ನಡೆಯಿತು. ತಾಲ್ಲೂಕು ಆಡಳಿತ ಸೌಧದ ಮುಂಭಾಗದಲ್ಲಿ ಜಾಥಕ್ಕೆ ತಾಲ್ಲೂಕು ಕಾನೂನು ಸೇವಾ ಸಮಿತಿ ಕಾರ್ಯದರ್ಶಿಗಳು ಹಾಗೂ ಪ್ರಧಾನ ಸಿವಿಲ್ ನ್ಯಾಯಾಧೀಶ ಗೋಪಾಲಕೃಷ್ಣ ಚಾಲನೆ ನೀಡಿದರು. ರಾಷ್ಟ್ರೀಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ನಿರ್ದೇಶನದಂತೆ ಅಂಗಡಿ ಮತ್ತು ವಾಣಿಜ್ಯ ಸಂಸ್ಥೆಗಳಲ್ಲಿ ಬಾಲಕಾರ್ಮಿಕರ ತಪಾಸಣೆಯನ್ನು ನಡೆಸಲಾಯಿತು. ತಹಶೀಲ್ದಾರ್ ಶ್ರೀಧರ್ ಕಂಕನವಾಡಿ, ವಕೀಲರ ಸಂಘದ ಅಧ್ಯಕ್ಷ ಕೆ.ಎಚ್ ವಿಠಲ್, ಹಿರಿಯ ಕಾರ್ಮಿಕ ಅಧಿಕಾರಿ ಶಶಿಧರ್, ತಾಲ್ಲೂಕು ಹಿಂದುಳಿದ ವರ್ಗಗಳ ಕಲ್ಯಾಣಾಧಿಕಾರಿ ಸ್ವಾಮಿ, ಕ್ಷೇತ್ರ ಸಮನ್ವಯಧಿಕಾರಿಗಳಾದ ಮಂಜೇಶ್ ಇದ್ದರು.








