
ಮಡಿಕೇರಿ ಆ.22 NEWS DESK : ಆಗಸ್ಟ್, 29 ರಂದು ರಾಷ್ಟ್ರೀಯ ಕ್ರೀಡಾ ದಿನಾಚರಣೆಯ ಅಂಗವಾಗಿ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ವತಿಯಿಂದ ವಿವಿಧ ಕ್ರೀಡೆಗಳನ್ನು ಆಯೋಜಿಸಲಾಗಿದ್ದು, ಕೊಡಗಿನ ಕ್ರೀಡಾಪಟುಗಳು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಲು ಕೋರಿದೆ. ಆಗಸ್ಟ್, 25 ರಂದು ಬೆಳಗ್ಗೆ 7 ಗಂಟೆಗೆ ಗುಡ್ಡಗಾಡು ಓಟವನ್ನು ಮಡಿಕೇರಿಯ ಜನರಲ್ ತಿಮ್ಮಯ್ಯ ಜಿಲ್ಲಾ ಕ್ರೀಡಾಂಗಣದಲ್ಲಿ ಏರ್ಪಡಿಸಲಾಗಿದೆ. ಭಾಗವಹಿಸುವ ಕ್ರೀಡಾಪಟುಗಳಿಗೆ ಯಾವುದೇ ರೀತಿಯ ಪ್ರವೇಶ ಶುಲ್ಕ ಇರುವುದಿಲ್ಲ. 14 ವರ್ಷದೊಳಗಿನ ಬಾಲಕ ಹಾಗೂ ಬಾಲಕಿಯರಿಗೆ 1 ಕಿ.ಮೀ. ಓಟ ಆಗಸ್ಟ್, 25 ರಂದು ಬೆಳಗ್ಗೆ 9.30 ಗಂಟೆಗೆ ಮಡಿಕೇರಿಯ ಜನರಲ್ ತಿಮ್ಮಯ್ಯ ಜಿಲ್ಲಾ ಒಳಾಂಗಣ ಕ್ರೀಡಾಂಗಣದಲ್ಲಿ ನಡೆಯಲಿದೆ. 16 ವರ್ಷದೊಳಗಿನ ಬಾಲಕ ಹಾಗೂ ಬಾಲಕಿಯರಿಗೆ ಷಟಲ್ ಬ್ಯಾಡ್ಮಿಂಟನ್ ಸಿಂಗಲ್ಸ್/ಡಬಲ್ಸ್, 16 ವರ್ಷದೊಳಗಿನ ಬಾಲಕ ಹಾಗೂ ಬಾಲಕಿಯರಿಗೆ ಟೇಬಲ್ ಟೆನ್ನಿಸ್ ಸಿಂಗಲ್ಸ್ ಮತ್ತು ಡಬಲ್ಸ್. ಷಟಲ್ ಬ್ಯಾಡ್ಮಿಂಟನ್, ಆಟಗಾರರು ರಾಕೇಟ್‍ನ್ನು ತಾವೇ ತರಬೇಕು. ಭಾಗವಹಿಸುವ ಕ್ರೀಡಾಪಟುಗಳಿಗೆ ಯಾವುದೇ ರೀತಿಯ ಪ್ರವೇಶ ಶುಲ್ಕ ಇರುವುದಿಲ್ಲ. ಈ ಪಂದ್ಯಾವಳಿಗಳಲ್ಲಿ ಭಾಗವಹಿಸುವ ಕ್ರೀಡಾಪಟುಗಳು ಹೆಚ್ಚಿನ ಮಾಹಿತಿಗೆ ಕಚೇರಿಯ ದೂ.ಸಂ. 08272-220986, ಗುಡ್ಡಗಾಡು ಓಟ 9480032712 ನ್ನು ಸಂಪರ್ಕಿಸಬಹುದು ಎಂದು ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕರಾದ ವಿ.ಟಿ.ವಿಸ್ಮಯಿ ತಿಳಿಸಿದ್ದಾರೆ.








