Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಇಸ್ಮಾಯಿಲ್ ಕಂಡಕರೆಗೆ ಕರ್ನಾಟಕ ಕಾರ್ಯನಿರತ ಪತ್ರಕರ್ತ ಸಂಘದ ವಾರ್ಷಿಕ ಪ್ರಶಸ್ತಿ*
  • *ಯಶಸ್ವೀ ಕಾರ್ಯಾಚರಣೆ : ಅರಣ್ಯಕ್ಕೆ ಮರಳಿದ ಕಾಡಾನೆ ಹಿಂಡು*
  • *ಚೇನಂಡ ಐನ್ ಮನೆಗೆ ಶಾಸಕ ಎ.ಎಸ್.ಪೊನ್ನಣ್ಣ ಭೇಟಿ : ಕೊಡವ ಹಾಕಿ ಉತ್ಸವಕ್ಕೆ ಅಗತ್ಯ ಸಹಕಾರದ ಭರವಸೆ*
  • *ವಿರಾಜಪೇಟೆಯಲ್ಲಿ ಜಾಗೃತಿಗಾಗಿ ಪೊಲೀಸರ ಪಥ ಸಂಚಲನ*
  • *ಹಿಂದೂ ಜನ ಜಾಗೃತಿ ಸಭೆ : ನಾಪೋಕ್ಲುವಿನಲ್ಲಿ ಶಾಂತಿ ಸಭೆ*
  • *ಏ.2 ರಿಂದ ಕಾರ್ಕಳ ಕ್ರಿಯೇಟಿವ್ ಗ್ಲೋಬಲ್ ಸ್ಕೂಲ್ ನಲ್ಲಿ ಚಿಲಿಪಿಲಿ ಮಕ್ಕಳ ವಿಶೇಷ ಶಿಬಿರ*
  • *ಭಾಗಮಂಡಲ : ಕಾಡಂಚಿನ ಗ್ರಾಮಸ್ಥರಿಗೆ ಉಚಿತ ಆರೋಗ್ಯ ತಪಾಸಣೆ*
  • *ಏ.02 ರಂದು ಸಾಮೂಹಿಕ ಸತ್ಯನಾರಾಯಣ ಪೂಜೆ*
  • *ರೈತರ ಮಕ್ಕಳಿಂದ ತೋಟಗಾರಿಕೆ ತರಬೇತಿಗೆ ಅರ್ಜಿ ಆಹ್ವಾನ*
  • *ಸಾರ್ವಜನಿಕರ ಗಮನಕ್ಕೆ*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*ವೇತನ ತಾರತಮ್ಯ ಸರಿಪಡಿಸಲು ನಿವೃತ್ತ ನೌಕರರ ವೇದಿಕೆ ಒತ್ತಾಯ*
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

*ವೇತನ ತಾರತಮ್ಯ ಸರಿಪಡಿಸಲು ನಿವೃತ್ತ ನೌಕರರ ವೇದಿಕೆ ಒತ್ತಾಯ*

ಆಗಷ್ಟ್ 22, 20242 Mins ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link


ಮಡಿಕೇರಿ ಆ.22 NEWS DESK : ಎಲ್ಲಾ ಸರ್ಕಾರಿ ನೌಕರರು ಹಾಗೂ ನಿವೃತ್ತ ಸರ್ಕಾರಿ ನೌಕರರಿಗಾಗಿ ಪರಿಷ್ಕೃತ 7ನೇ ವೇತನ ಜಾರಿಯ ಸಂದರ್ಭ ಉಂಟಾಗಿರುವ ವೇತನ ತಾರತಮ್ಯವನ್ನು ಸರ್ಕಾರ ತಕ್ಷಣ ಸರಿಪಡಿಸಬೇಕೆಂದು ಕರ್ನಾಟಕ ನಿವೃತ್ತ ನೌಕರರ ವೇದಿಕೆಯ ಕೊಡಗು ಜಿಲ್ಲಾ ಘಟಕ ಒತ್ತಾಯಿಸಿದೆ. ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸಂಘದ ಜಿಲ್ಲಾಧ್ಯಕ್ಷ ಪಿ.ಎಸ್.ಜನಾರ್ಧನ್, 7ನೇ ವೇತನ ಜಾರಿ ಸ್ವಾಗತಾರ್ಹ ಕ್ರಮವಾಗಿದೆ. ಆದರೆ ನಿವೃತ್ತ ನೌಕರರಿಗೆ ಕೆಲವು ಸೌಲಭ್ಯಗಳು ಸಿಗದ ಪರಿಸ್ಥಿತಿ ನಿರ್ಮಾಣವಾಗಿದೆ. ಆದ್ದರಿಂದ ಸೇವೆಯಲ್ಲಿರುವ ನೌಕರರಿಗೆ ನೀಡುವ ಸೌಲಭ್ಯಗಳನ್ನೇ ನಿವೃತ್ತರಿಗೂ ನೀಡಬೇಕೆಂದು ಆಗ್ರಹಿಸಿದರು. ಪರಿಷ್ಕೃತ ವೇತನ ಶ್ರೇಣಿಗಳಲ್ಲಿ ನಿದಧಿಪಡಿಸಲಾದ ಕಾಲ್ಪನಿಕ ವೇತನವನ್ನು ನಿವೃತ್ತಿ ವೇತನ, ಕುಟುಂಬ ನಿವೃತ್ತಿ ವೇತನದ ಪುನರ್ ನಿಗಧಿಯ ಆರ್ಥಿಕ ಲಾಭವು ನಿವೃತ್ತಿ ಹೊಂದಿದ ಸರ್ಕಾರಿ ನೌಕರನಿಗೆ ಅಥವಾ ಮರಣ ಹೊಂದಿದ ಸರ್ಕಾರಿ ನೌಕರನ ಪಲಾನುಭವಿಗಳಿಗೆ 2024 ಆ.1 ರಿಂದ ಲಭಿಸಬೇಕು. ಆದರೆ 2022 ಜು.1ರಿಂದ 2024 ಜು.31ರವರೆಗೆ ಅಂದರೆ ಕಳೆದ 25 ತಿಂಗಳ ಅವಧಿಯಲ್ಲಿ ನಿವೃತ್ತರಾದ, ನಿಧನ ಹೊಂದಿದ ಅಧಿಕಾರಿ ಹಾಗೂ ನೌಕರನಿಗೆ ಪರಿಷ್ಕೃತ ವೇತನದನ್ವಯ ಡಿ.ಸಿ.ಆರ್.ಜಿ, ಕಮ್ಯೂಟೇಷನ್, ರಜೆ ನಗದೀಕರಣ ಲೆಕ್ಕಚಾರ ಮಾಡದೆ ಹಳೆಯ ವೇತನ ಶ್ರೇಣಿಯ ಮೇಲೆಯೇ ಪರಿಗಣಿಸುತ್ತಿರುವುದು ನಮಗೆ ಆಘಾತವನ್ನು ಉಂಟುಮಾಡಿದೆಯೆಂದು ಹೇಳಿದರು. 2022 ಜು.1ರಿಂದ ನಿವೃತ್ತಿ ವೇತನದ ಸೌಲಭ್ಯ ನೀಡಿದಂತೆ 7ನೇ ವೇತನ ಆಯೋಗದ ವರದಿಯಂತೆ ಪರಿಷ್ಕೃತ ವೇತನದಲ್ಲಿ ನಿವೃತ್ತಿಯ ಆರ್ಥಿಕ ಉಪ ದಾನಗಳ ಸೌಲಭ್ಯಗಳನ್ನು ಪಡೆಯುವ ಅರ್ಹತೆ ಹೊಂದಿದ್ದೇವೆ. ನಿವೃತ್ತಿ ವೇತನದ ವ್ಯತ್ಯಾಸದ ಬಾಕಿಯನ್ನು ನಾವು ಕೇಳುತ್ತಿಲ್ಲ. ಬದಲಿಗೆ 7ನೇ ವೇತನ ಆಯೋಗದ ವರದಿ ಪ್ರಕಾರ ಪರಿಷ್ಕೃತ ವೇತನದ ಮೇಲೆ ನಿವೃತ್ತಿ ಆರ್ಥಿಕ ಸೌಲಭ್ಯಗಳಾದ ಡಿ.ಸಿ.ಆರ್.ಜಿ, ಕಮ್ಯೂಟೇಷನ್ ಮತ್ತು ರಜೆ ನಗದೀಕರಣ ನೀಡಬೇಕು ಎಂದರು. 2022ರ ಜು.1 ರಿಮದ 2024 ರ ಜು.31 ರವರೆಗಿನ ಸೀಮಿತ ಅವಧಿಯಲ್ಲಿ ರಾಜ್ಯವ್ಯಾಪಿ 5 ರಿಂದ 6 ಸಾವಿರ ಮಂದಿ ನಿವೃತ್ತರಾಗಿದ್ದಾರೆ. ಜಿಲ್ಲೆಯಲ್ಲಿ ಈ ಅವಧಿಯಲ್ಲಿ ಸುಮಾರು 300 ಮಂದಿ ನಿವೃತ್ತರಾಗಿದ್ದು, ಇವರು ಏಳನೇ ವೇತನ ಆಯೋಗದ ವೇತನ ಸೌಲಭ್ಯಗಳಿಂದ ವಂಚಿತರಾಗಿದ್ದಾರೆ. ಇದರಿಂದ ನಿವೃತ್ತರು ಸರಾಸರಿ 10 ಲಕ್ಷದಿಂದ 20 ಲಕ್ಷ ರೂ.ಗಳವರೆಗೆ ನಷ್ಟಕ್ಕೆ ಒಳಗಾಗಿರುವುದಾಗಿ ಮಾಹಿತಿಯನ್ನಿತ್ತರು. ಸರ್ಕಾರ ನಿವೃತ್ತ ನೌಕರರಿಗೆ ಆಗುತ್ತಿರುವ ಆರ್ಥಿಕ ನಷ್ಟವನ್ನು ಅರ್ಥ ಮಾಡಿಕೊಂಡು ಪರಿಷ್ಕೃತ ಮೂಲ ವೇತನದ ಮೇಲೆ ಡಿ.ಸಿ.ಆರ್.ಜಿ, ಕಮ್ಯೂಟೇಷನ್ ಮತ್ತು ರಜೆ ನಗದೀಕರಣ ಲೆಕ್ಕಾಚಾರ ಮಾಡಿ ನ್ಯಾಯೋಚಿತವಾಗಿ ಲಭ್ಯವಾಗುವ ಆರ್ಥಿಕ ಸೌಲಭ್ಯವನ್ನು ಮಂಜೂರು ಮಾಡಬೇಕೆಂದು ಪಿ.ಎಸ್.ಜನಾರ್ಧನ್ ಒತ್ತಾಯಿಸಿದರು. ಸುದ್ದಿಗೋಷ್ಠಿಯಲ್ಲಿ ಉಪಾಧ್ಯಕ್ಷ ಜಿ.ಎಂ.ಚಿನ್ನಯ್ಯ, ಪ್ರಧಾನ ಕಾರ್ಯದರ್ಶಿ ಸುಕ್ರು ದೇವು ಗೌಡ, ಸೋಮವಾರಪೇಟೆ ತಾಲ್ಲೂಕು ಸಂಚಾಲಕರುಗಳಾದ ಎ.ಎಂ.ಆನಂದ ಹಾಗೂ ಚಾವಡಿ ಶಿವಕುಮಾರ್ ಉಪಸ್ಥಿತರಿದ್ದರು. 

Follow us Follow us
Share. WhatsApp Facebook Twitter Email Telegram Copy Link

Website design development company services in Mangalore

Forex Trading Teacher in India

Related Posts

*ಇಸ್ಮಾಯಿಲ್ ಕಂಡಕರೆಗೆ ಕರ್ನಾಟಕ ಕಾರ್ಯನಿರತ ಪತ್ರಕರ್ತ ಸಂಘದ ವಾರ್ಷಿಕ ಪ್ರಶಸ್ತಿ*

ಮಾರ್ಚ್ 31, 2026

*ಯಶಸ್ವೀ ಕಾರ್ಯಾಚರಣೆ : ಅರಣ್ಯಕ್ಕೆ ಮರಳಿದ ಕಾಡಾನೆ ಹಿಂಡು*

ಮಾರ್ಚ್ 31, 2026

*ಚೇನಂಡ ಐನ್ ಮನೆಗೆ ಶಾಸಕ ಎ.ಎಸ್.ಪೊನ್ನಣ್ಣ ಭೇಟಿ : ಕೊಡವ ಹಾಕಿ ಉತ್ಸವಕ್ಕೆ ಅಗತ್ಯ ಸಹಕಾರದ ಭರವಸೆ*

ಮಾರ್ಚ್ 31, 2026

*ಯಶಸ್ವೀ ಕಾರ್ಯಾಚರಣೆ : ಅರಣ್ಯಕ್ಕೆ ಮರಳಿದ ಕಾಡಾನೆ ಹಿಂಡು*

ಮಾರ್ಚ್ 31, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಮಡಿಕೇರಿ, NEWS DESK ಮಾ.31 : ತಿತಿಮತಿ ಅರಣ್ಯ ವಲಯಕ್ಕೆ ಒಳಪಡುವ ತೋಟಗಳಲ್ಲಿ ಬೀಡುಬಿಟ್ಟಿದ್ದ ಕಾಡಾನೆ ಹಿಂಡನ್ನು ಮರಳಿ ಅರಣ್ಯಕ್ಕೆ…

*ಚೇನಂಡ ಐನ್ ಮನೆಗೆ ಶಾಸಕ ಎ.ಎಸ್.ಪೊನ್ನಣ್ಣ ಭೇಟಿ : ಕೊಡವ ಹಾಕಿ ಉತ್ಸವಕ್ಕೆ ಅಗತ್ಯ ಸಹಕಾರದ ಭರವಸೆ*

ಮಾರ್ಚ್ 31, 2026

*ವಿರಾಜಪೇಟೆಯಲ್ಲಿ ಜಾಗೃತಿಗಾಗಿ ಪೊಲೀಸರ ಪಥ ಸಂಚಲನ*

ಮಾರ್ಚ್ 31, 2026

*ಹಿಂದೂ ಜನ ಜಾಗೃತಿ ಸಭೆ : ನಾಪೋಕ್ಲುವಿನಲ್ಲಿ ಶಾಂತಿ ಸಭೆ*

ಮಾರ್ಚ್ 31, 2026

*ಏ.2 ರಿಂದ ಕಾರ್ಕಳ ಕ್ರಿಯೇಟಿವ್ ಗ್ಲೋಬಲ್ ಸ್ಕೂಲ್ ನಲ್ಲಿ ಚಿಲಿಪಿಲಿ ಮಕ್ಕಳ ವಿಶೇಷ ಶಿಬಿರ*

ಮಾರ್ಚ್ 31, 2026

*ಭಾಗಮಂಡಲ : ಕಾಡಂಚಿನ ಗ್ರಾಮಸ್ಥರಿಗೆ ಉಚಿತ ಆರೋಗ್ಯ ತಪಾಸಣೆ*

ಮಾರ್ಚ್ 31, 2026

*ಏ.02 ರಂದು ಸಾಮೂಹಿಕ ಸತ್ಯನಾರಾಯಣ ಪೂಜೆ*

ಮಾರ್ಚ್ 31, 2026

*ರೈತರ ಮಕ್ಕಳಿಂದ ತೋಟಗಾರಿಕೆ ತರಬೇತಿಗೆ ಅರ್ಜಿ ಆಹ್ವಾನ*

ಮಾರ್ಚ್ 31, 2026

*ಸಾರ್ವಜನಿಕರ ಗಮನಕ್ಕೆ*

ಮಾರ್ಚ್ 31, 2026

*ನಿವೃತ್ತಿ ಹೊಂದಿದ ಪೊಲೀಸ್ ಅಧಿಕಾರಿಗಳಿಗೆ ಬೀಳ್ಕೊಡುಗೆ*

ಮಾರ್ಚ್ 31, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.

Ad Blocker Enabled!
Ad Blocker Enabled!
Our website is made possible by displaying online advertisements to our visitors. Please support us by disabling your Ad Blocker.