
ಸುಂಟಿಕೊಪ್ಪ ಆ.22 NEWS DESK : ಪ್ರತಿಯೊಬ್ಬ ಚಾಲಕರು ವಾಹನಗಳನ್ನು ಚಲಾಯಿಸುವಾಗ ಸಂಚಾರ ನಿಯಮಗಳನ್ನು ಪಾಲಿಸುವಂತೆ ಜಿಲ್ಲಾ ರಸ್ತೆ ಸಾರಿಗೆ ಇಲಾಖೆ ಅಧಿಕಾರಿ ಶಿವರಾಮ್ ತಿಳಿಸಿದರು. ಜಿಲ್ಲಾ ರಸ್ತೆ ಸಾರಿಗೆ ಇಲಾಖೆ ಅಧಿಕಾರಿ ಶಿವರಾಮ್ ಸುಂಟಿಕೊಪ್ಪ ಆಟೋ ಚಾಲಕರ ನಿಲ್ದಾಣಕ್ಕೆ ದಿಡೀರ್ ಭೇಟಿ ನೀಡಿ ಪರಿಶೀಲನೆ ನಡೆಸಿ ಮಾತನಾಡಿದ ಅವರು, ಸುಂಟಿಕೊಪ್ಪ ಪಂಚಾಯಿತಿ ವ್ಯಾಪ್ತಿಯಲ್ಲಿ 250ಕ್ಕೂ ಮಿಕ್ಕಿ ಆಟೋಗಳು ಸಂಚರಿಸುತ್ತಿವೆ. ರಸ್ತೆ ಸುರಕ್ಷತಾ ನಿಯಮಗಳನ್ನು ಪಾಲಿಸುವ ಬಗ್ಗೆ ಮಾಹಿತಿ ನೀಡಿದರು. ಪ್ರತಿಯೊಬ್ಬರೂ ರಸ್ತೆ ಸಂಚಾರ ನಿಯಮಗಳನ್ನು ಕಡ್ಡಾಯವಾಗಿ ಪಾಲಿಸುವಂತೆ ತಿಳಿಸಿದರು. ಪಟ್ಟಣದಲ್ಲಿ ಸಂಚರಿಸುತ್ತಿರುವ ಕೆಲವು ಆಟೋರಿಕ್ಷಾ ಮಾಲೀಕರು ತಮಗೆ ಬೇಕಾದಂತೆ ಆಟೋಗಳನ್ನು ವಿಸ್ಯಾಸಗೊಳಿಸಿಕೊಂಡಿದ್ದಾರೆ. ಅಂತಹುಗಳನ್ನು ತೆರವುಗೊಳಿಸುವಂತೆ ಸೂಚಿಸಿದರು. ವಾಹನ ಚಾಲನೆ ಮಾಡುವಾಗ ಚಾಲಕರು ಚಾಲನಾ ಪರವಾನಿಗೆ, ದಾಖಲಾತಿ ಹಾಗೂ ಸಮವಸ್ತ್ರ ಕಡ್ಡಾಯವಾಗಿ ಹೊಂದಿರಬೇಕು ಎಂದು ಸೂಚಿಸಿದರು. ಈ ಸಂದರ್ಭ ಸಾರಿಗೆ ಇಲಾಖೆ ಸಿಬ್ಬಂದಿ, ಆಟೋ ಚಾಲಕರ ಸಂಘದ ಅಧ್ಯಕ್ಷ ಸುನೀಲ್ ಇತರು ಹಾಜರಿದ್ದರು.







