Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಇಸ್ಮಾಯಿಲ್ ಕಂಡಕರೆಗೆ ಕರ್ನಾಟಕ ಕಾರ್ಯನಿರತ ಪತ್ರಕರ್ತ ಸಂಘದ ವಾರ್ಷಿಕ ಪ್ರಶಸ್ತಿ*
  • *ಯಶಸ್ವೀ ಕಾರ್ಯಾಚರಣೆ : ಅರಣ್ಯಕ್ಕೆ ಮರಳಿದ ಕಾಡಾನೆ ಹಿಂಡು*
  • *ಚೇನಂಡ ಐನ್ ಮನೆಗೆ ಶಾಸಕ ಎ.ಎಸ್.ಪೊನ್ನಣ್ಣ ಭೇಟಿ : ಕೊಡವ ಹಾಕಿ ಉತ್ಸವಕ್ಕೆ ಅಗತ್ಯ ಸಹಕಾರದ ಭರವಸೆ*
  • *ವಿರಾಜಪೇಟೆಯಲ್ಲಿ ಜಾಗೃತಿಗಾಗಿ ಪೊಲೀಸರ ಪಥ ಸಂಚಲನ*
  • *ಹಿಂದೂ ಜನ ಜಾಗೃತಿ ಸಭೆ : ನಾಪೋಕ್ಲುವಿನಲ್ಲಿ ಶಾಂತಿ ಸಭೆ*
  • *ಏ.2 ರಿಂದ ಕಾರ್ಕಳ ಕ್ರಿಯೇಟಿವ್ ಗ್ಲೋಬಲ್ ಸ್ಕೂಲ್ ನಲ್ಲಿ ಚಿಲಿಪಿಲಿ ಮಕ್ಕಳ ವಿಶೇಷ ಶಿಬಿರ*
  • *ಭಾಗಮಂಡಲ : ಕಾಡಂಚಿನ ಗ್ರಾಮಸ್ಥರಿಗೆ ಉಚಿತ ಆರೋಗ್ಯ ತಪಾಸಣೆ*
  • *ಏ.02 ರಂದು ಸಾಮೂಹಿಕ ಸತ್ಯನಾರಾಯಣ ಪೂಜೆ*
  • *ರೈತರ ಮಕ್ಕಳಿಂದ ತೋಟಗಾರಿಕೆ ತರಬೇತಿಗೆ ಅರ್ಜಿ ಆಹ್ವಾನ*
  • *ಸಾರ್ವಜನಿಕರ ಗಮನಕ್ಕೆ*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*ಮಹಾತ್ಮ ಗಾಂಧೀಜಿ 155ನೇ ಜಯಂತಿ : ಶಾಲಾ-ಕಾಲೇಜು ಹಂತದಲ್ಲಿ ಬಾಪೂಜಿ ಪ್ರಬಂಧ ಸ್ಪರ್ಧೆ*
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

*ಮಹಾತ್ಮ ಗಾಂಧೀಜಿ 155ನೇ ಜಯಂತಿ : ಶಾಲಾ-ಕಾಲೇಜು ಹಂತದಲ್ಲಿ ಬಾಪೂಜಿ ಪ್ರಬಂಧ ಸ್ಪರ್ಧೆ*

ಆಗಷ್ಟ್ 23, 20242 Mins ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link


ಮಡಿಕೇರಿ ಆ.23 NEWS DESK : ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ವತಿಯಿಂದ ನಗರಸಭೆ, ಶಾಲಾ ಶಿಕ್ಷಣ ಮತ್ತು ಸಾಕ್ಷರತೆ, ಪದವಿ ಪೂರ್ವ ಶಿಕ್ಷಣ, ಕಾಲೇಜು ಶಿಕ್ಷಣ ಇಲಾಖೆ ಹಾಗೂ ಸರ್ವೋದಯ ಸಮಿತಿ ಇವರ ಸಹಕಾರದಲ್ಲಿ ಆಚರಿಸುತ್ತಿರುವ ರಾಷ್ಟ್ರಪಿತ ಮಹಾತ್ಮ ಗಾಂಧೀಜಿಯವರ 155 ನೇ ಜಯಂತಿಯ ದಿನಾಚರಣೆ ಅಂಗವಾಗಿ ವಿದ್ಯಾರ್ಥಿ ಹಾಗೂ ಯುವಜನರಲ್ಲಿ ಮಹಾತ್ಮ ಗಾಂಧೀಜಿಯವರ ಬದುಕು, ಸ್ವಾತಂತ್ರ್ಯ ಚಳುವಳಿ, ಸರಳತೆ, ಅಹಿಂಸಾ ಮಾರ್ಗ, ಅಸ್ಪೃಶ್ಯತೆ ನಿವಾರಣೆಗಾಗಿ ನಡೆಸಿದ ಪ್ರಯೋಗಗಳು ಮತ್ತಿತರ ವಿಚಾರಗಳ ಬಗ್ಗೆ ಪ್ರೌಢಶಾಲೆ, ಪದವಿ ಪೂರ್ವ ಹಾಗೂ ಪದವಿ/ ಸ್ನಾತಕೋತ್ತರ ವಿದ್ಯಾರ್ಥಿಗಳಿಗೆ ಬಾಪೂಜಿ ಪ್ರಬಂಧ ಸ್ಪರ್ಧೆಯು ಜಿಲ್ಲಾ ಮತ್ತು ರಾಜ್ಯ ಮಟ್ಟದಲ್ಲಿ ನಡೆಯಲಿದೆ. ವಿವಿಧ ವಿಷಯಗಳ ಕುರಿತು ಪ್ರೌಢಶಾಲೆ, ಪದವಿ ಪೂರ್ವ ಶಿಕ್ಷಣ ಹಾಗೂ ಪದವಿ-ಸ್ನಾತಕೋತ್ತರ ಪದವಿಗಳ ಹಂತದ ವಿದ್ಯಾರ್ಥಿಗಳಿಗೆ ಒಟ್ಟು 3 ವಿಭಾಗಗಳಲ್ಲಿ ಬಾಪೂಜಿ ಪ್ರಬಂಧ ಸ್ಪರ್ಧೆಯನ್ನು ವಿವಿಧ ಇಲಾಖೆಗಳ ಸಹಕಾರದಲ್ಲಿ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯಿಂದ ಆಯೋಜಿಸಲಾಗಿದೆ. ವಿಜೇತರಿಗೆ ರಾಜ್ಯ ಮಟ್ಟದಲ್ಲಿ ಪ್ರಥಮ 31 ಸಾವಿರ ರೂ. ದ್ವಿತೀಯ 21 ಸಾವಿರ ರೂ. ಮತ್ತು ತೃತೀಯ 11 ಸಾವಿರ ರೂ. ಹಾಗೂ ಜಿಲ್ಲಾ ಮಟ್ಟದಲ್ಲಿ ಪ್ರಥಮ 3 ಸಾವಿರ ರೂ. ದ್ವಿತೀಯ 2 ಸಾವಿರ ರೂ ಮತ್ತು ತೃತೀಯ 1 ಸಾವಿರ ರೂ. ಬಹುಮಾನ ನೀಡಲಾಗುತ್ತದೆ.
ಪ್ರೌಢಶಾಲಾ ವಿಭಾಗ: 1) ಮಹಾತ್ಮ ಗಾಂಧೀಜಿ ಹಾಗೂ ಪ್ರಜಾಪ್ರಭುತ್ವ, 2) ಗಾಂಧೀಜಿಯವರ ವಿಚಾರದಲ್ಲಿ ಸತ್ಯಾಗ್ರಹ, 3) ನನ್ನ ಬದುಕಿನಲ್ಲಿ ಗಾಂಧೀಜಿ ತತ್ವಗಳನ್ನು ಅಳವಡಿಸಿಕೊಳ್ಳುವ ಬಗೆ, 4) ಗಾಂಧೀಜಿಯವರ ತತ್ವಗಳಿಂದ ದೇಶ ಕಟ್ಟುವ ಬಗೆ, ಪ್ರೌಢಶಾಲಾ ವಿಭಾಗದ ವಿದ್ಯಾರ್ಥಿಗಳು ಈ ನಾಲ್ಕು ವಿಷಯಗಳಲ್ಲಿ ಯಾವುದಾದರೂ ಒಂದು ವಿಷಯ ಕುರಿತು ಸುಮಾರು 900 ಪದಗಳಿಗೆ ಮೀರದಂತೆ ಪ್ರಬಂಧ ಬರೆಯಬೇಕು.
ಪದವಿ ಪೂರ್ವ ಶಿಕ್ಷಣ ವಿಭಾಗ: 1)ಮಹಾತ್ಮ ಗಾಂಧೀಜಿ ಹಾಗೂ ಪ್ರಜಾಪ್ರಭುತ್ವ, 2) ದೇಶದ ಕಳಂಕವಾದ ಅಸ್ಪೃಶ್ಯತೆ ನಿವಾರಿಸುವಲ್ಲಿನ ಗಾಂಧೀಜಿಯವರ ಪ್ರಯೋಗಗಳು, 3) ಗಾಂಧೀಜಿಯವರನ್ನು ಜಗತ್ತು ಗ್ರಹಿಸಿದ ರೀತಿ, 4) ನನ್ನ ಬದುಕಿನಲ್ಲಿ ಗಾಂಧೀಜಿ ತತ್ವಗಳನ್ನು ಅಳವಡಿಸಿಕೊಳ್ಳುವ ಬಗೆ, ಪದವಿ ಪೂರ್ವ ಶಿಕ್ಷಣ ವಿಭಾಗದ ವಿದ್ಯಾರ್ಥಿಗಳು ಈ ನಾಲ್ಕು ವಿಷಯಗಳಲ್ಲಿ ಯಾವುದಾದರೂ ಒಂದು ವಿಷಯ ಕುರಿತು ಸುಮಾರು 1500 ಪದಗಳಿಗೆ ಮೀರದಂತೆ ಪ್ರಬಂಧ ಬರೆಯಬೇಕು.
ಪದವಿ ಹಾಗೂ ಸ್ನಾತಕೋತ್ತರ ಪದವಿ ವಿಭಾಗ: 1) ಇಂದಿನ ಪ್ರಜಾಪ್ರಭುತ್ವದಲ್ಲಿ ಸತ್ಯಾಗ್ರಹದ ಮಹತ್ವ, 2) ದೇಶ ನಿರ್ಮಾಣದಲ್ಲಿ ಗಾಂಧೀಜಿಯವರ ಜಾತ್ಯಾತೀತ ನಿಲುವುಗಳು, 3) ಗಾಂಧೀಜಿಯವರ ಧಾರ್ಮಿಕ ಸಹಿಷ್ಣುತೆ ಚಿಂತನೆ, ಸ್ವಾತಂತ್ರ್ಯ ಮತ್ತು ಸಮಾನತೆಯ ಪರಿಕಲ್ಪನೆಗಳು, 4) ಗಾಂಧೀಜಿಯವರ ವಿಚಾರದಲ್ಲಿ ಸತ್ಯದ ಪರಿಕಲ್ಪನೆ, 5) ಗಾಂಧೀಜಿಯವರು ಕಂಡ ಸ್ವರಾಜ್ಯ ಮತ್ತು ಆರ್ಥಿಕ ಚಿಂತನೆಗಳು. ಪದವಿ ಹಾಗೂ ಸ್ನಾತಕೋತ್ತರ ಪದವಿ ವಿಭಾಗದ ವಿದ್ಯಾರ್ಥಿಗಳು ಈ ಐದು ವಿಷಯಗಳಲ್ಲಿ ಯಾವುದಾದರೂ ಒಂದು ವಿಷಯ ಕುರಿತು ಸುಮಾರು 2000 ಪದಗಳಿಗೆ ಮೀರದಂತೆ ಪ್ರಬಂಧ ಬರೆಯಬೇಕು.
ಪ್ರತಿ ವಿಭಾಗದಲ್ಲಿನ ಅತ್ಯುತ್ತಮವಾದ ಮೂರು (3) ಪ್ರಬಂಧಗಳಿಗೆ ಅಕ್ಟೋಬರ್, 02 ರಂದು ಜಿಲ್ಲಾ ಮಟ್ಟದ ಗಾಂಧೀ ಜಯಂತಿ ದಿನಾಚರಣೆ ಸಂದರ್ಭದಲ್ಲಿ ಬಹುಮಾನ ನೀಡಿ ಪ್ರಬಂಧ ರಚನೆಕಾರರಿಗೆ ಗೌರವಿಸಲಾಗುವುದು.
‘ಆಯಾಯ ಪ್ರೌಢಶಾಲೆ, ಪದವಿ ಪೂರ್ವ ಶಿಕ್ಷಣ ಹಾಗೂ ಪದವಿ-ಸ್ನಾತಕೋತ್ತರ ಪದವಿ ಹಂತದಲ್ಲಿ ಪ್ರಬಂಧ ಸ್ಪರ್ಧೆ ಏರ್ಪಡಿಸಿ, ಸಂಬಂಧಪಟ್ಟ ಇಲಾಖೆಗಳ ಮುಖ್ಯಸ್ಥರು ತಾಲ್ಲೂಕು ಮಟ್ಟದಲ್ಲಿ ಮೌಲ್ಯಮಾಪನ ಮಾಡಿ ಪ್ರತಿ ವಿಭಾಗದಿಂದ ಪ್ರಥಮ, ದ್ವಿತೀಯ ಮತ್ತು ತೃತೀಯ ಸ್ಥಾನ ಪಡೆದ ಮೂವರ ಪ್ರಬಂಧಗಳನ್ನು ಆಗಸ್ಟ್ 30 ರೊಳಗೆ ಸಹಾಯಕ ನಿರ್ದೇಶಕರು, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ, ಸ್ಟೀವರ್ಟ್ ಹಿಲ್ ರಸ್ತೆ, ಮಡಿಕೇರಿ ಇಲ್ಲಿಗೆ ಕಳುಹಿಸಬೇಕು.’
ಪ್ರಬಂಧಕಾರರ ಹೆಸರು, ವಿಳಾಸ ಮತ್ತು ಮೊಬೈಲ್ ಸಂಖ್ಯೆ ನಮೂದಿಸಿರಬೇಕು. ಪ್ರಬಂಧವು ಈ ಮೊದಲು ಎಲ್ಲಿಯೂ ಪ್ರಕಟವಾಗಿರಬಾರದು. ಆಯ್ದ ಪ್ರಬಂಧಗಳ ಪ್ರಕಟಣೆಯ ಹಕ್ಕನ್ನು ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಹೊಂದಿರುತ್ತದೆ.
ಜಿಲ್ಲಾ ಮಟ್ಟದ ಪ್ರಥಮ ಬಹುಮಾನ ವಿಜೇತ ಪ್ರಬಂಧಗಳನ್ನು ರಾಜ್ಯ ಮಟ್ಟದಲ್ಲಿ ಮರು ಮೌಲ್ಯಮಾಪನ ಮಾಡಿ, ರಾಜ್ಯ ಮಟ್ಟದ ಫಲಿತಾಂಶ ಘೋಷಿಸಲಾಗುತ್ತದೆ. ಹೆಚ್ಚಿನ ಮಾಹಿತಿಗೆ ಸಹಾಯಕ ನಿರ್ದೇಶಕರು ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ, ಮಡಿಕೇರಿ, ಕೊಡಗು ಜಿಲ್ಲೆ ಇವರ ದೂ.ಸಂ. 9480841228 ನ್ನು ಸಂಪರ್ಕಿಸಬಹುದು ಎಂದು ಪ್ರಕಟಣೆ ತಿಳಿಸಿದೆ.

Follow us Follow us
Share. WhatsApp Facebook Twitter Email Telegram Copy Link

Website design development company services in Mangalore

Forex Trading Teacher in India

Related Posts

*ಇಸ್ಮಾಯಿಲ್ ಕಂಡಕರೆಗೆ ಕರ್ನಾಟಕ ಕಾರ್ಯನಿರತ ಪತ್ರಕರ್ತ ಸಂಘದ ವಾರ್ಷಿಕ ಪ್ರಶಸ್ತಿ*

ಮಾರ್ಚ್ 31, 2026

*ಯಶಸ್ವೀ ಕಾರ್ಯಾಚರಣೆ : ಅರಣ್ಯಕ್ಕೆ ಮರಳಿದ ಕಾಡಾನೆ ಹಿಂಡು*

ಮಾರ್ಚ್ 31, 2026

*ಚೇನಂಡ ಐನ್ ಮನೆಗೆ ಶಾಸಕ ಎ.ಎಸ್.ಪೊನ್ನಣ್ಣ ಭೇಟಿ : ಕೊಡವ ಹಾಕಿ ಉತ್ಸವಕ್ಕೆ ಅಗತ್ಯ ಸಹಕಾರದ ಭರವಸೆ*

ಮಾರ್ಚ್ 31, 2026

*ಯಶಸ್ವೀ ಕಾರ್ಯಾಚರಣೆ : ಅರಣ್ಯಕ್ಕೆ ಮರಳಿದ ಕಾಡಾನೆ ಹಿಂಡು*

ಮಾರ್ಚ್ 31, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಮಡಿಕೇರಿ, NEWS DESK ಮಾ.31 : ತಿತಿಮತಿ ಅರಣ್ಯ ವಲಯಕ್ಕೆ ಒಳಪಡುವ ತೋಟಗಳಲ್ಲಿ ಬೀಡುಬಿಟ್ಟಿದ್ದ ಕಾಡಾನೆ ಹಿಂಡನ್ನು ಮರಳಿ ಅರಣ್ಯಕ್ಕೆ…

*ಚೇನಂಡ ಐನ್ ಮನೆಗೆ ಶಾಸಕ ಎ.ಎಸ್.ಪೊನ್ನಣ್ಣ ಭೇಟಿ : ಕೊಡವ ಹಾಕಿ ಉತ್ಸವಕ್ಕೆ ಅಗತ್ಯ ಸಹಕಾರದ ಭರವಸೆ*

ಮಾರ್ಚ್ 31, 2026

*ವಿರಾಜಪೇಟೆಯಲ್ಲಿ ಜಾಗೃತಿಗಾಗಿ ಪೊಲೀಸರ ಪಥ ಸಂಚಲನ*

ಮಾರ್ಚ್ 31, 2026

*ಹಿಂದೂ ಜನ ಜಾಗೃತಿ ಸಭೆ : ನಾಪೋಕ್ಲುವಿನಲ್ಲಿ ಶಾಂತಿ ಸಭೆ*

ಮಾರ್ಚ್ 31, 2026

*ಏ.2 ರಿಂದ ಕಾರ್ಕಳ ಕ್ರಿಯೇಟಿವ್ ಗ್ಲೋಬಲ್ ಸ್ಕೂಲ್ ನಲ್ಲಿ ಚಿಲಿಪಿಲಿ ಮಕ್ಕಳ ವಿಶೇಷ ಶಿಬಿರ*

ಮಾರ್ಚ್ 31, 2026

*ಭಾಗಮಂಡಲ : ಕಾಡಂಚಿನ ಗ್ರಾಮಸ್ಥರಿಗೆ ಉಚಿತ ಆರೋಗ್ಯ ತಪಾಸಣೆ*

ಮಾರ್ಚ್ 31, 2026

*ಏ.02 ರಂದು ಸಾಮೂಹಿಕ ಸತ್ಯನಾರಾಯಣ ಪೂಜೆ*

ಮಾರ್ಚ್ 31, 2026

*ರೈತರ ಮಕ್ಕಳಿಂದ ತೋಟಗಾರಿಕೆ ತರಬೇತಿಗೆ ಅರ್ಜಿ ಆಹ್ವಾನ*

ಮಾರ್ಚ್ 31, 2026

*ಸಾರ್ವಜನಿಕರ ಗಮನಕ್ಕೆ*

ಮಾರ್ಚ್ 31, 2026

*ನಿವೃತ್ತಿ ಹೊಂದಿದ ಪೊಲೀಸ್ ಅಧಿಕಾರಿಗಳಿಗೆ ಬೀಳ್ಕೊಡುಗೆ*

ಮಾರ್ಚ್ 31, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.

Ad Blocker Enabled!
Ad Blocker Enabled!
Our website is made possible by displaying online advertisements to our visitors. Please support us by disabling your Ad Blocker.