Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada
Home»ಇತ್ತೀಚಿನ ಸುದ್ದಿಗಳು»”21ನೇ ಶತಮಾನಕ್ಕೆ ಮಹಾತ್ಮಗಾಂಧೀಜಿ” ಅಂತಾರಾಷ್ಟ್ರೀಯ ವಿಚಾರ ಸಂಕಿರಣ ಉದ್ಘಾಟನೆ
ಇತ್ತೀಚಿನ ಸುದ್ದಿಗಳು ಕರ್ನಾಟಕ

”21ನೇ ಶತಮಾನಕ್ಕೆ ಮಹಾತ್ಮಗಾಂಧೀಜಿ” ಅಂತಾರಾಷ್ಟ್ರೀಯ ವಿಚಾರ ಸಂಕಿರಣ ಉದ್ಘಾಟನೆ

ಆಗಷ್ಟ್ 24, 20242 Mins ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement

ಬೆಂಗಳೂರು ಆ.24 NEWS DESK : ಧರ್ಮ-ಜಾತಿ ಹೆಸರಲ್ಲಿ ಸಮಾಜವನ್ನು ಒಡೆಯುತ್ತಾ ಹೋದಂತೆ ಅಸಮಾನತೆ ಹೆಚ್ಚುತ್ತದೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ. ಗಾಂಧಿ ಸ್ಮಾರಕ ನಿಧಿಯ 75ನೇ ವರ್ಷದ ಸಂಸ್ಮರಣೆಗಾಗಿ ಗಾಂಧಿ ಭವನದಲ್ಲಿ ಆಯೋಜಿಸಲಾಗಿದ್ದ “21ನೇ ಶತಮಾನಕ್ಕೆ ಮಹಾತ್ಮಗಾಂಧೀಜಿ” ಅಂತಾರಾಷ್ಟ್ರೀಯ ವಿಚಾರ ಸಂಕಿರಣವನ್ನು ಉದ್ಘಾಟಿಸಿ ಮಾತನಾಡಿದರು.  ಜಾತಿ ವ್ಯವಸ್ಥೆ ಕಾರಣದಿಂದ ಬಹು ಜನರು ಶಿಕ್ಷಣದಿಂದ ವಂಚಿತರಾದರು. ಈ ಕಾರಣಕ್ಕೆ ಅಸಮಾನತೆ ಹೆಚ್ಚಾಯಿತು. ವಿದ್ಯಾವಂತರೇ ಹೆಚ್ಚೆಚ್ಚು ಜಾತಿವಾದಿಗಳಾಗುತ್ತಿರುವುದು ದುರಂತ. ಜಾತಿ ಅಸಮಾನತೆಯ ಪೋಷಕರೇ ಮಹಾತ್ಮಗಾಂಧಿಯವರನ್ನು ಕೊಂದರು ಎಂದು ಸಿಎಂ ಆಕ್ರೋಶ ವ್ಯಕ್ತಪಡಿಸಿದರು. ಗಾಂಧೀಜಿ ವಿಚಾರಗಳು, ಸಮಾಜಕ್ಕೆ ನೀಡಿದ ಮಾರ್ಗದರ್ಶನಗಳು 20ನೇ ಶತಮನಕ್ಕೆ ಮಾತ್ರ ಸೀಮಿತವಾಗಿಲ್ಲ. ಈಗಿನ ಕಾಲಕ್ಕೂ ಪ್ರಸ್ತುತವಾಗಿವೆ.‌ ಗಾಂಧೀಜಿಯವರು ಶಾಂತಿ, ಸತ್ಯ, ನ್ಯಾಯ ಮತ್ತು ಭ್ರಾತೃತ್ವವನ್ನು ಬದುಕಿನುದ್ದಕ್ಕೂ ಆಚರಿಸಿಕೊಂಡು ಬಂದಿದ್ದಾರೆ. ಇಡೀ ವಿಶ್ವವೇ ಪರಸ್ಪರ ಪ್ರೀತಿಸುವ ಗುಣವನ್ನು ರೂಢಿಸಿಕೊಂಡರೆ ಇಡೀ ಸಮಾಜ ನೆಮ್ಮದಿಯಿಂದ ಇರಬಹುದು ಎಂದರು. ಮನುಷ್ಯ ತನ್ನ ನೆಮ್ಮದಿಗಾಗಿ ಬೇರೆ ಗ್ರಹಗಳನ್ನು ಹುಡುಕಿಕೊಂಡು ಹೋಗುವಂತಾಗಬಾರದು ಎನ್ನುವ ಸ್ಟೀಫನ್ ಹಾಕಿಂಗ್ ಅವರ ಮಾತನ್ನು ಪ್ರಸ್ತಾಪಿಸಿ, ಮನುಷ್ಯ ಮನುಷ್ಯರ ನಡುವೆ ಸಹಿಷ್ಣುತೆ ರೂಢಿಸಿಕೊಳ್ಳದಿದ್ದರೆ ಸರ್ವನಾಶವಾಗುತ್ತದೆ. ಕೋಮು ಭಾವನೆ ಹೀಗೇ ಬೆಳೆದರೆ ಕವೆಂಪು ಅವರ ವಿಶ್ವ ಮಾನವ ಆಶಯ ಈಡೇರುವುದು ಕಷ್ಟವಾಗುತ್ತದೆ ಎಂದರು. ಪ್ರಕೃತಿ ನಮ್ಮ ಅಗತ್ಯಗಳನ್ನು ಈಡೇರಿಸುತ್ತದೆಯೇ ಹೊರತು, ದುರಾಸೆಗಳನ್ನು ಅದು ಪೂರೈಸುವುದಿಲ್ಲ ಎನ್ನುವುದು ಗಾಂಧಿಯವರ ನಂಬಿಕೆಯಾಗಿತ್ತು. ಕೇರಳದ ವಯನಾಡ್ ಮತ್ತು ರಾಜ್ಯದ ನಾನಾ ಕಡೆ ನಡೆಯುತ್ತಿರುವ ಪರಿಸರ ಅವಘಡಗಳಿಗೆ ಮನುಷ್ಯನ ದುರಾಸೆಗಳೇ ಕಾರಣವಾಗಿದೆ ಎಂದರು. ಸಿದ್ದರಾಮಯ್ಯ ಅವರು ಮುಖ್ಯಮಂತ್ರಿಯಾದರೆ ಅವರ ಕಾಲಗುಣದಿಂದ ರಾಜ್ಯಕ್ಕೆ ಬರಗಾಲ ಬರುತ್ತದೆ ಎಂದು ಸಾರ್ವಜನಿಕ ವ್ಯಕ್ತಿಗಳೇ ಮೌಡ್ಯ ಬಿತ್ತುವ ಕುಟಿಲ ಪ್ರಯತ್ನ ಮಾಡಿದ್ದರು. ಆದರೆ ಈಗ ಸಿಕ್ಕಾಪಟ್ಟೆ ಮಳೆ ಬರುತ್ತಿದೆ. ಬಹಳ ಮಂದಿ ಶಿಕ್ಷಿತರೇ ಕಂದಾಚಾರ, ಕರ್ಮ ಸಿದ್ಧಾಂತ, ಮೌಡ್ಯವನ್ನು ಆಚರಿಸುತ್ತಾರೆ. ಇದಕ್ಕೆ ಸರಿಯಾದ ವೈಜ್ಞಾನಿಕ ಶಿಕ್ಷಣದ ಕೊರತೆಯೇ ಕಾರಣ. 850 ವರ್ಷಗಳ ಹಿಂದೆಯೇ ಬಸವಾದಿ ಶರಣರು ಕರ್ಮ ಸಿದ್ಧಾಂತವನ್ನು ಸಾರಾಸಗಟಾಗಿ ತಿರಸ್ಕರಿಸಿದ್ದರು. ಆದರೆ ಈಗಿನ ಕೆಲವು ಶಿಕ್ಷಿತರೇ ಕರ್ಮ ಸಿದ್ಧಾಂತದಲ್ಲಿ ನಂಬಿಕೆ ಇಟ್ಟಿದ್ದಾರೆ ಎಂದು ಬೇಸರ ವ್ಯಕ್ತಪಡಿಸಿದರು. ನೆಹರೂ ಅವರು ವೈಜ್ಞಾನಿಕ ಮತ್ತು ವೈಚಾರಿಕ ಮಾರ್ಗದಲ್ಲಿ ಸಮಾಜವನ್ನು ಸನ್ನದ್ದಗೊಳಿಸಿ ದೇಶವನ್ನು ಮುನ್ನಡೆಸುತ್ತಿದ್ದರು ಎಂದರು. ಸರ್ವರನ್ನೂ ಒಳಗೊಳ್ಳುವ ಮತ್ತು ಅಹಿಂಸೆ ಗಾಂಧಿಯವರ ಮಾರ್ಗವಾಗಿತ್ತು. ಇದನ್ನು ಯುವಜನರಿಗೆ ತಲುಪಿಸುವ ಕೆಲಸ ಆಗಬೇಕಿದೆ. ದೇಶದ ಶೇ85 ರಷ್ಟು ಆಸ್ತಿ ಶೇ1 ಶ್ರೀಮಂತರ ಕೈಗೆ ಸೇರುತ್ತಿದೆ. ಇದು ಅಪಾಯಕಾರಿ. ಈ ಆರ್ಥಿಕ ಅಸಮಾನತೆ ಹೋಗಲಾಡಿಸಲು ಗಾಂಧಿಯವರು ವಿಚಾರಗಳಲ್ಲಿ ಮಾರ್ಗಗಳಿವೆ ಎಂದರು. ಮಹಾತ್ಮಗಾಂಧಿಯವರು‌ ಅಧ್ಯಕ್ಷತೆ ವಹಿಸಿದ್ದ ಕಾಂಗ್ರೆಸ್ ನ ಬೆಳಗಾವಿ ಅಧಿವೇಶನದ ಶತಮಾನೋತ್ಸವವನ್ನು ಹೆಚ್ಚು ಅರ್ಥಪೂರ್ಣವಾಗಿ ಆಚರಿಸುತ್ತೇವೆ ಎಂದರು. ಗಾಂಧೀಜಿಯವರ ಗ್ರಾಮ ಸ್ವರಾಜ್ಯದ ಕನಸನ್ನು ಈಡೇರಿಸಬೇಕಾಗಿದೆ.‌ ಗಾಂಧಿಯವರ ಆಶಯದಂತೆ ರಾತ್ರಿ 12 ಗಂಟೆಗೂ ನಮ್ಮ ಹೆಣ್ಣು ಮಕ್ಕಳು ನಿರ್ಭಯದಿಂದ ಓಡಾಡುವಂತಾಗಬೇಕಿದೆ ಎಂದರು. ಗಾಂಧಿ ಸ್ಮಾರಕ ನಿಧಿ ಅಧ್ಯಕ್ಷರಾದ ರಾಮಚಂದ್ರ ರಾಹಿ ಅವರು ಅಧ್ಯಕ್ಷತೆ ವಹಿಸಿದ್ದ ಕಾರ್ಯಕ್ರಮದಲ್ಲಿ ಕಾನೂನು ಸಚಿವರಾದ ಹೆಚ್.ಕೆ.ಪಾಟೀಲ್, ಕಾರ್ಯಾಧ್ಯಕ್ಷರಾದ ವಿಶುಕುಮಾರ್, ನವದೆಹಲಿ ಸ್ಮಾರಕ ನಿಧಿ ಅಧ್ಯಕ್ಷರಾದ ಸಂಜೋಯ್ ಸಿಂಗ್ ಸೇರಿ ಹಲವು ಪ್ರಮುಖರು ಉಪಸ್ಥಿತರಿದ್ದರು.

Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
Follow us Follow us
Share. WhatsApp Facebook Twitter Email Telegram Copy Link

Related Posts

ಮಡಿಕೇರಿಯಲ್ಲಿ ಮಕ್ಕಳ ದಸರಾ ಸಂಭ್ರಮ : ವಿದ್ಯಾರ್ಥಿಗಳ ಪ್ರತಿಭೆಗೆ ಪೋಷಕರ ಪ್ರೋತ್ಸಾಹ ಅಗತ್ಯ : ಜಿಲ್ಲಾಧಿಕಾರಿ ಎಸ್.ಜೆ.ಸೋಮಶೇಖರ್

ಅಕ್ಟೋಬರ್ 16, 2026

ತಲಕಾವೇರಿಯಲ್ಲಿ ಪವಿತ್ರ ತೀರ್ಥೋದ್ಭವ : ಜಿಲ್ಲಾಡಳಿತದಿಂದ ಅಗತ್ಯ ಸಿದ್ಧತೆ

ಅಕ್ಟೋಬರ್ 16, 2026

ಶಿರಂಗಾಲದಲ್ಲಿ ಎಸ್.ವಿ. ನಂಜುಂಡಪ್ಪ ಅವರಿಗೆ ನುಡಿನಮನ; ನಿಸ್ವಾರ್ಥ ಸಾಮಾಜಿಕ ಸೇವೆ ಮತ್ತು ಅಭಿವೃದ್ಧಿ ಕಾರ್ಯಗಳಿಗೆ ಸಮಾಜ ಮನ್ನಣೆ ನೀಡಲಿ: ಅರಮೇರಿ ಸ್ವಾಮೀಜಿ

ಅಕ್ಟೋಬರ್ 16, 2026

ತಲಕಾವೇರಿಯಲ್ಲಿ ಪವಿತ್ರ ತೀರ್ಥೋದ್ಭವ : ಜಿಲ್ಲಾಡಳಿತದಿಂದ ಅಗತ್ಯ ಸಿದ್ಧತೆ

ಅಕ್ಟೋಬರ್ 16, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಮಡಿಕೇರಿ ಅ.16 NEWS DESK : ತಲಕಾವೇರಿಯಲ್ಲಿ ಶ್ರೀ ಕಾವೇರಿ ತುಲಾ ಸಂಕ್ರಮಣ ಪವಿತ್ರ ತೀರ್ಥೋದ್ಭವಕ್ಕೆ ಕ್ಷಣಗಣನೆ ಆರಂಭವಾಗಿದ್ದು, ಸಿದ್ಧತೆಗಳು…

ಶಿರಂಗಾಲದಲ್ಲಿ ಎಸ್.ವಿ. ನಂಜುಂಡಪ್ಪ ಅವರಿಗೆ ನುಡಿನಮನ; ನಿಸ್ವಾರ್ಥ ಸಾಮಾಜಿಕ ಸೇವೆ ಮತ್ತು ಅಭಿವೃದ್ಧಿ ಕಾರ್ಯಗಳಿಗೆ ಸಮಾಜ ಮನ್ನಣೆ ನೀಡಲಿ: ಅರಮೇರಿ ಸ್ವಾಮೀಜಿ

ಅಕ್ಟೋಬರ್ 16, 2026

ರೋಟರಿ ಮಿಸ್ಟಿ ಹಿಲ್ಸ್‌ನ 13ನೇ ವರ್ಷದ ಮಕ್ಕಳ ದಸರಾ ಯಶಸ್ವಿ; ಮಂಟಪ ನಿರ್ಮಾಣ ಸ್ಪರ್ಧೆಯಲ್ಲಿ ಟೀಮ್ ಅಗ್ನಿಗೆ ಪ್ರಥಮ ಬಹುಮಾನ; ಸತತ ಮೂರು ವರ್ಷಗಳ ಹ್ಯಾಟ್ರಿಕ್ ಸಾಧನೆ

ಅಕ್ಟೋಬರ್ 16, 2026

ಅ.17 ರಂದು ಕೊಡಗು ಜಿಲ್ಲೆಯಲ್ಲಿ ಕಾವೇರಿ ತುಲಾ ಸಂಕ್ರಮಣದ ರಜೆ

ಅಕ್ಟೋಬರ್ 16, 2026

ಅ.17ಕ್ಕೆ ಕೊಡಗು ಜಿಲ್ಲೆಯಲ್ಲಿ ತುಲಾ ಸಂಕ್ರಮಣದ ರಜೆ

ಅಕ್ಟೋಬರ್ 16, 2026

ಕಡಗದಾಳಿನಲ್ಲಿ ಎನ್‌ಎಸ್‌ಎಸ್ ಶಿಬಿರದ ಸಮಾರೋಪ : ಸಮಾಜದ ಅಭಿವೃದ್ಧಿಗೆ ವಿದ್ಯಾರ್ಥಿಗಳು ಕೊಡುಗೆ ನೀಡಲಿ : ಮೇಜರ್ ಪ್ರೊ. ರಾಘವ ಬಿ.

ಅಕ್ಟೋಬರ್ 15, 2026

ಅ.17 ರಂದು ಉಸ್ತುವಾರಿ ಸಚಿವ ಪಿ.ಎಂ.ನರೇಂದ್ರ ಸ್ವಾಮಿ ಕೊಡಗಿಗೆ ಭೇಟಿ

ಅಕ್ಟೋಬರ್ 15, 2026

ಸಾಂತ್ವನ ಮಹಿಳಾ ಸಹಾಯವಾಣಿ : ಕೊಡಗಿನಲ್ಲಿ 5860 ಪ್ರಕರಣಗಳು ಇತ್ಯರ್ಥ

ಅಕ್ಟೋಬರ್ 15, 2026

ಅ.16 ರಂದು ಮಕ್ಕಳ ದಸರಾ ಸಂಭ್ರಮ: ಮಕ್ಕಳಿಂದ ವೈವಿದ್ಯಮಯ ಸ್ಪರ್ಧೆಗಳು

ಅಕ್ಟೋಬರ್ 15, 2026

ಗೋಣಿಕೊಪ್ಪಲು : ಅ.16 ರಂದು ವಿದ್ಯುತ್ ವ್ಯತ್ಯಯ

ಅಕ್ಟೋಬರ್ 15, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.