Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada
Home»ಇತ್ತೀಚಿನ ಸುದ್ದಿಗಳು»ಪುತ್ತೂರು ವಿವೇಕಾನಂದ ಎಂಜಿನಿಯರಿಂಗ್ ಕಾಲೇಜ್ ಪದವಿ ಪ್ರದಾನ : RANK ಗಳಿಸಿದವರಿಗೆ ಸನ್ಮಾನ : ಪದವಿ ಅವಕಾಶಗಳ ಬಾಗಿಲನ್ನು ತೆರೆಯುವ ಕೀಲಿಕೈ ಮಾತ್ರ
ಇತ್ತೀಚಿನ ಸುದ್ದಿಗಳು ಕರ್ನಾಟಕ

ಪುತ್ತೂರು ವಿವೇಕಾನಂದ ಎಂಜಿನಿಯರಿಂಗ್ ಕಾಲೇಜ್ ಪದವಿ ಪ್ರದಾನ : RANK ಗಳಿಸಿದವರಿಗೆ ಸನ್ಮಾನ : ಪದವಿ ಅವಕಾಶಗಳ ಬಾಗಿಲನ್ನು ತೆರೆಯುವ ಕೀಲಿಕೈ ಮಾತ್ರ

ಆಗಷ್ಟ್ 24, 20242 Mins ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement

ಪುತ್ತೂರು NEWS DESK ಆ.24 : ಜೀವನದಲ್ಲಿ ನಾವು ಇಷ್ಟಪಟ್ಟಪಡುವಂತಹ ಕೆಲಸಗಳೇ ನಮ್ಮ ಪಾಲಿಗೆ ಸಿಗುತ್ತದೆ ಎನ್ನುವಂತಿಲ್ಲ. ಆದರೂ ನಾವು ಮಾಡುವ ಕೆಲಸವನ್ನು ಪ್ರಮಾಣಿಕವಾಗಿ ಪ್ರೀತಿಸಿ ಅದರ ಬಗ್ಗೆ ಅಭಿರುಚಿಯನ್ನು ಬೆಳೆಸಿಕೊಳ್ಳಬೇಕು ಎಂದು ಪುತ್ತೂರು ಲೋಕೋಪಯೋಗಿ ಇಲಾಖೆಯ ಸಹಾಯಕ ಇಂಜಿನಿಯರ್, ವಿವೇಕಾನಂದ ಕಾಲೇಜ್ ಆಫ್ ಎಂಜಿನಿಯರಿಂಗ್ ಎಂಡ್ ಟೆಕ್ನಾಲಜಿಯ ಹಿರಿಯ ವಿದ್ಯಾರ್ಥಿ ಕನಿಷ್ಕ.ಎಸ್.ಚಂದ್ರ ಹೇಳಿದರು. ಅವರು ಪುತ್ತೂರಿನ ವಿವೇಕಾನಂದ ಕಾಲೇಜ್ ಆಫ್ ಎಂಜಿನಿಯರಿಂಗ್ ಎಂಡ್ ಟೆಕ್ನಾಲಜಿಯಲ್ಲಿ 2023-24ನೇ ಸಾಲಿನಲ್ಲಿ ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾನಿಲಯವು ನಡೆಸಿದ ಇಂಜಿನಿಯರಿಂಗ್ ವಿಭಾಗಗಳ ಅಂತಿಮ ವರ್ಷದ ಪರೀಕ್ಷೆಯಲ್ಲಿ ತೇರ್ಗಡೆ ಹೊಂದಿ ಪದವೀಧರರಾದ ಅರ್ಹ ವಿದ್ಯಾರ್ಥಿಗಳ ಪದವಿ ಪ್ರದಾನ ಕಾರ್ಯಕ್ರಮ ಸಮಾವರ್ತನ ಸಮಾರಂಭದ ಮುಖ್ಯ ಅತಿಥಿಗಳಾಗಿ ಮಾತಾಡಿದರು. ನಿಮ್ಮ ಇದುವರೆಗಿನ ಓದು ಸೀಮಿತ ಅವಧಿಯ ನಿರ್ಧಿಷ್ಟ ವಿಷಯದ ಮೇಲಿನ ಪ್ರಶ್ನೆಗಳನ್ನು ಉತ್ತರಿಸುವುದು ಆಗಿತ್ತು. ಆದರೆ ಜೀವನದಲ್ಲಿ ಹಾಗಲ್ಲ ಹೆಜ್ಜೆ ಹೆಜ್ಜೆಗೂ ಎದುರಾಗುವ ಸಮಸ್ಯೆಗಳನ್ನು ಪರಿಹರಿಸುತ್ತಾ ಮುಂದುವರಿಯಬೇಕು. ಅದಕ್ಕಾಗಿ ಸವಾಲುಗಳನ್ನು ಮೆಟ್ಟಿ ನಿಲ್ಲುವ ಛಾತಿಯನ್ನು ಬೆಳೆಸಿಕೊಳ್ಳಬೇಕು ಎಂದರು. ಜೀವನದಲ್ಲಿ ಉತ್ತಮ ಸ್ಥಾನವನ್ನು ಗಳಿಸಿಕೊಂಡು ದೇಶದ ಉನ್ನತಿಯ ನೀತಿ ರಚನೆಯ ಹರಿಕಾರರಾಗಬೇಕು ಎಂದು ನುಡಿದರು. ಸಮಾರಂಭದ ಅಧ್ಯಕ್ಷತೆ ವಹಿಸಿದ್ದ ಕಾಲೇಜು ಆಡಳಿತ ಮಂಡಳಿಯ ನಿರ್ದೇಶಕ ರವಿಕೃಷ್ಣ.ಡಿ.ಕಲ್ಲಾಜೆ ಮಾತನಾಡಿ ನೀವು ಗಳಿಸಿರುವ ಪದವಿ ನಿಮ್ಮ ಆತ್ಮವಿಶ್ವಾಸದ ಮಟ್ಟವನ್ನು ಹೆಚ್ಚಿಸಿರುತ್ತದೆ. ಈ ಪದವಿ ಅವಕಾಶಗಳ ಬಾಗಿಲನ್ನು ತೆರೆಯುವ ಕೀಲಿಕೈ ಮಾತ್ರ. ದೊರೆತ ಅವಕಾಶಗಳನ್ನು ಉಳಿಸಿ ಜೀವನದಲ್ಲಿ ಹೆಚ್ಚಿನದ್ದನ್ನು ಸಾಧಿಸುವ ಗುರಿ ನಿಮ್ಮದಾಗಬೇಕು ಎಂದರು. ತಾವು ಬೆಳೆಯುವುದರ ಜತೆಯನ್ನು ಸಮಾಜವನ್ನು ಬೆಳೆಸುವ ಕೆಲಸವೂ ಆಗಬೇಕು ಅದಕ್ಕಾಗಿ ಈ ಮಣ್ಣಿನ, ನೆಲ, ಜಲದ ಬಗ್ಗೆ ಪ್ರೀತಿ ಗೌರವವಿರುವ ಪ್ರಜ್ಞಾವಂತ ಪ್ರಜೆಗಳಾಗಿ ಎಂದು ಹಾರೈಸಿದರು. ಸಿವಿಲ್ ಇಂಜಿನಿಯರಿಂಗ್ ವಿಭಾಗದಲ್ಲಿ 3ನೇ ರ‍್ಯಾಂಕ್ ಗಳಿಸಿರುವ ಕೇಶವ ಪ್ರಜ್ವಲ್.ಪಿ ಹಾಗೂ 5ನೇ ರ‍್ಯಾಂಕ್ ಗಳಿಸಿರುವ ಕೆ.ಪಲ್ಲವಿ ಅವರನ್ನು ಈ ಸಂದರ್ಭದಲ್ಲಿ ಸನ್ಮಾನಿಸಲಾಯಿತು. ಅಲ್ಲದೆ ಪ್ರತಿ ವಿಭಾಗದಲ್ಲಿ ಶೈಕ್ಷಣಿಕವಾಗಿ ಉನ್ನತ ಸಾಧನೆಯನ್ನು ಮಾಡಿದ ಪ್ರತಿಭಾವಂತ ವಿದ್ಯಾರ್ಥಿಗಳನ್ನು ಗೌರವಿಸಲಾಯಿತು. ಕಾಲೇಜು ಆಡಳಿತ ಮಂಡಳಿಯ ಅಧ್ಯಕ್ಷ ವಿಶ್ವಾಸ್ ಶೆಣೈ, ಸಂಚಾಲಕ ಸುಬ್ರಮಣ್ಯ ಭಟ್.ಟಿ.ಎಸ್, ಕೋಶಾಧಿಕಾರಿ ಮುರಳೀಧರ ಭಟ್ ಬಂಗಾರಡ್ಕ, ನಿರ್ದೇಶಕ ಸತ್ಯನಾರಾಯಣ ಭಟ್, ಪ್ರಾಂಶುಪಾಲ ಡಾ.ಮಹೇಶ್‌ಪ್ರಸನ್ನ.ಕೆ, ದಾಖಲಾತಿ ಮತ್ತು ನೇಮಕಾತಿ ವಿಭಾಗ ಮುಖ್ಯಸ್ಥರು, ವಿಭಾಗ ಮುಖ್ಯಸ್ಥರುಗಳು, ವಿದ್ಯಾರ್ಥಿ ಕ್ಷೇಮಪಾಲನಾಧಿಕಾರಿ, ಗ್ರಂಥಪಾಲಕರು ಮತ್ತು ದೈಹಿಕ ಶಿಕ್ಷಣ ನಿರ್ದೇಶಕರು ವೇದಿಕೆಯಲ್ಲಿ ಉಪಸ್ಥಿತರಿದ್ದರು. ಪ್ರಾಂಶುಪಾಲ ಡಾ.ಮಹೇಶ್‌ಪ್ರಸನ್ನ.ಕೆ ಸ್ವಾಗತಿಸಿದರು. ಪ್ರೊ.ರೂಪಾ.ಜಿ.ಕೆ ಪ್ರಮಾಣವಚನ ಬೋಧಿಸಿದರು. ಡಾ.ದೀಪಕ್.ಕೆ.ಬಿ ಅತಿಥಿಗಳನ್ನು ಪರಿಚಯಿಸಿದರು. ಪ್ರೊ.ಪ್ರಶಾಂತ ವಂದನಾರ್ಪಣೆಗೈದರು. ಪ್ರೊ.ನಿಶಾ.ಜಿ.ಆರ್ ಹಾಗೂ ಪ್ರೊ.ನೀಮಾ ಕಾರ್ಯಕ್ರಮ ನಿರ್ವಹಿಸಿದರು.

Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
Follow us Follow us
Share. WhatsApp Facebook Twitter Email Telegram Copy Link

Related Posts

ಮಡಿಕೇರಿಯಲ್ಲಿ ಮಕ್ಕಳ ದಸರಾ ಸಂಭ್ರಮ : ವಿದ್ಯಾರ್ಥಿಗಳ ಪ್ರತಿಭೆಗೆ ಪೋಷಕರ ಪ್ರೋತ್ಸಾಹ ಅಗತ್ಯ : ಜಿಲ್ಲಾಧಿಕಾರಿ ಎಸ್.ಜೆ.ಸೋಮಶೇಖರ್

ಅಕ್ಟೋಬರ್ 16, 2026

ತಲಕಾವೇರಿಯಲ್ಲಿ ಪವಿತ್ರ ತೀರ್ಥೋದ್ಭವ : ಜಿಲ್ಲಾಡಳಿತದಿಂದ ಅಗತ್ಯ ಸಿದ್ಧತೆ

ಅಕ್ಟೋಬರ್ 16, 2026

ಶಿರಂಗಾಲದಲ್ಲಿ ಎಸ್.ವಿ. ನಂಜುಂಡಪ್ಪ ಅವರಿಗೆ ನುಡಿನಮನ; ನಿಸ್ವಾರ್ಥ ಸಾಮಾಜಿಕ ಸೇವೆ ಮತ್ತು ಅಭಿವೃದ್ಧಿ ಕಾರ್ಯಗಳಿಗೆ ಸಮಾಜ ಮನ್ನಣೆ ನೀಡಲಿ: ಅರಮೇರಿ ಸ್ವಾಮೀಜಿ

ಅಕ್ಟೋಬರ್ 16, 2026

ತಲಕಾವೇರಿಯಲ್ಲಿ ಪವಿತ್ರ ತೀರ್ಥೋದ್ಭವ : ಜಿಲ್ಲಾಡಳಿತದಿಂದ ಅಗತ್ಯ ಸಿದ್ಧತೆ

ಅಕ್ಟೋಬರ್ 16, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಮಡಿಕೇರಿ ಅ.16 NEWS DESK : ತಲಕಾವೇರಿಯಲ್ಲಿ ಶ್ರೀ ಕಾವೇರಿ ತುಲಾ ಸಂಕ್ರಮಣ ಪವಿತ್ರ ತೀರ್ಥೋದ್ಭವಕ್ಕೆ ಕ್ಷಣಗಣನೆ ಆರಂಭವಾಗಿದ್ದು, ಸಿದ್ಧತೆಗಳು…

ಶಿರಂಗಾಲದಲ್ಲಿ ಎಸ್.ವಿ. ನಂಜುಂಡಪ್ಪ ಅವರಿಗೆ ನುಡಿನಮನ; ನಿಸ್ವಾರ್ಥ ಸಾಮಾಜಿಕ ಸೇವೆ ಮತ್ತು ಅಭಿವೃದ್ಧಿ ಕಾರ್ಯಗಳಿಗೆ ಸಮಾಜ ಮನ್ನಣೆ ನೀಡಲಿ: ಅರಮೇರಿ ಸ್ವಾಮೀಜಿ

ಅಕ್ಟೋಬರ್ 16, 2026

ರೋಟರಿ ಮಿಸ್ಟಿ ಹಿಲ್ಸ್‌ನ 13ನೇ ವರ್ಷದ ಮಕ್ಕಳ ದಸರಾ ಯಶಸ್ವಿ; ಮಂಟಪ ನಿರ್ಮಾಣ ಸ್ಪರ್ಧೆಯಲ್ಲಿ ಟೀಮ್ ಅಗ್ನಿಗೆ ಪ್ರಥಮ ಬಹುಮಾನ; ಸತತ ಮೂರು ವರ್ಷಗಳ ಹ್ಯಾಟ್ರಿಕ್ ಸಾಧನೆ

ಅಕ್ಟೋಬರ್ 16, 2026

ಅ.17 ರಂದು ಕೊಡಗು ಜಿಲ್ಲೆಯಲ್ಲಿ ಕಾವೇರಿ ತುಲಾ ಸಂಕ್ರಮಣದ ರಜೆ

ಅಕ್ಟೋಬರ್ 16, 2026

ಅ.17ಕ್ಕೆ ಕೊಡಗು ಜಿಲ್ಲೆಯಲ್ಲಿ ತುಲಾ ಸಂಕ್ರಮಣದ ರಜೆ

ಅಕ್ಟೋಬರ್ 16, 2026

ಕಡಗದಾಳಿನಲ್ಲಿ ಎನ್‌ಎಸ್‌ಎಸ್ ಶಿಬಿರದ ಸಮಾರೋಪ : ಸಮಾಜದ ಅಭಿವೃದ್ಧಿಗೆ ವಿದ್ಯಾರ್ಥಿಗಳು ಕೊಡುಗೆ ನೀಡಲಿ : ಮೇಜರ್ ಪ್ರೊ. ರಾಘವ ಬಿ.

ಅಕ್ಟೋಬರ್ 15, 2026

ಅ.17 ರಂದು ಉಸ್ತುವಾರಿ ಸಚಿವ ಪಿ.ಎಂ.ನರೇಂದ್ರ ಸ್ವಾಮಿ ಕೊಡಗಿಗೆ ಭೇಟಿ

ಅಕ್ಟೋಬರ್ 15, 2026

ಸಾಂತ್ವನ ಮಹಿಳಾ ಸಹಾಯವಾಣಿ : ಕೊಡಗಿನಲ್ಲಿ 5860 ಪ್ರಕರಣಗಳು ಇತ್ಯರ್ಥ

ಅಕ್ಟೋಬರ್ 15, 2026

ಅ.16 ರಂದು ಮಕ್ಕಳ ದಸರಾ ಸಂಭ್ರಮ: ಮಕ್ಕಳಿಂದ ವೈವಿದ್ಯಮಯ ಸ್ಪರ್ಧೆಗಳು

ಅಕ್ಟೋಬರ್ 15, 2026

ಗೋಣಿಕೊಪ್ಪಲು : ಅ.16 ರಂದು ವಿದ್ಯುತ್ ವ್ಯತ್ಯಯ

ಅಕ್ಟೋಬರ್ 15, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.