Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಇಸ್ಮಾಯಿಲ್ ಕಂಡಕರೆಗೆ ಕರ್ನಾಟಕ ಕಾರ್ಯನಿರತ ಪತ್ರಕರ್ತ ಸಂಘದ ವಾರ್ಷಿಕ ಪ್ರಶಸ್ತಿ*
  • *ಯಶಸ್ವೀ ಕಾರ್ಯಾಚರಣೆ : ಅರಣ್ಯಕ್ಕೆ ಮರಳಿದ ಕಾಡಾನೆ ಹಿಂಡು*
  • *ಚೇನಂಡ ಐನ್ ಮನೆಗೆ ಶಾಸಕ ಎ.ಎಸ್.ಪೊನ್ನಣ್ಣ ಭೇಟಿ : ಕೊಡವ ಹಾಕಿ ಉತ್ಸವಕ್ಕೆ ಅಗತ್ಯ ಸಹಕಾರದ ಭರವಸೆ*
  • *ವಿರಾಜಪೇಟೆಯಲ್ಲಿ ಜಾಗೃತಿಗಾಗಿ ಪೊಲೀಸರ ಪಥ ಸಂಚಲನ*
  • *ಹಿಂದೂ ಜನ ಜಾಗೃತಿ ಸಭೆ : ನಾಪೋಕ್ಲುವಿನಲ್ಲಿ ಶಾಂತಿ ಸಭೆ*
  • *ಏ.2 ರಿಂದ ಕಾರ್ಕಳ ಕ್ರಿಯೇಟಿವ್ ಗ್ಲೋಬಲ್ ಸ್ಕೂಲ್ ನಲ್ಲಿ ಚಿಲಿಪಿಲಿ ಮಕ್ಕಳ ವಿಶೇಷ ಶಿಬಿರ*
  • *ಭಾಗಮಂಡಲ : ಕಾಡಂಚಿನ ಗ್ರಾಮಸ್ಥರಿಗೆ ಉಚಿತ ಆರೋಗ್ಯ ತಪಾಸಣೆ*
  • *ಏ.02 ರಂದು ಸಾಮೂಹಿಕ ಸತ್ಯನಾರಾಯಣ ಪೂಜೆ*
  • *ರೈತರ ಮಕ್ಕಳಿಂದ ತೋಟಗಾರಿಕೆ ತರಬೇತಿಗೆ ಅರ್ಜಿ ಆಹ್ವಾನ*
  • *ಸಾರ್ವಜನಿಕರ ಗಮನಕ್ಕೆ*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»ಕುಶಾಲನಗರದಲ್ಲಿ ‘ವಿದ್ಯಾರ್ಥಿಗಳತ್ತ ಜಾನಪದ’ ಕಾರ್ಯಕ್ರಮ : ಪರಂಪರಾಗತ ಸಂಸ್ಕೃತಿಯನ್ನು ಅರಿಯಲು ಜಾನಪದ ಮುಖ್ಯ : ಎಸ್.ಐ.ಮುನೀರ್ ಅಹ್ಮದ್*
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಕುಶಾಲನಗರದಲ್ಲಿ ‘ವಿದ್ಯಾರ್ಥಿಗಳತ್ತ ಜಾನಪದ’ ಕಾರ್ಯಕ್ರಮ : ಪರಂಪರಾಗತ ಸಂಸ್ಕೃತಿಯನ್ನು ಅರಿಯಲು ಜಾನಪದ ಮುಖ್ಯ : ಎಸ್.ಐ.ಮುನೀರ್ ಅಹ್ಮದ್*

ಆಗಷ್ಟ್ 28, 20242 Mins ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link

ಕುಶಾಲನಗರ ಆ.28 NEWS DESK :  ಪರಂಪರಾಗತ ಸಂಸ್ಕೃತಿಯನ್ನು ಅರಿಯಲು ಜಾನಪದ ಮುಖ್ಯ ಸಾಧನವಾಗಿದೆ ಎಂದು ಕೊಡಗು ಜಿಲ್ಲಾ ಜಾನಪದ ಪರಿಷತ್ ಪ್ರಧಾನ ಕಾರ್ಯದರ್ಶಿ ಎಸ್.ಐ.ಮುನೀರ್ ಅಹಮದ್ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ. ಕರ್ನಾಟಕ ಜಾನಪದ ಪರಿಷತ್ ಕುಶಾಲನಗರ ತಾಲ್ಲೂಕು ಘಟಕ ಹಾಗೂ ಕುಶಾಲನಗರ ತಾಲ್ಲೂಕು ಕಾರ್ಯನಿರತ ಪತ್ರಕರ್ತರ ಸಂಘದ ಆಶ್ರಯದಲ್ಲಿ ಕುಶಾಲನಗರದ ಸರಕಾರಿ ಪದವಿ ಪೂರ್ವ ಕಾಲೇಜಿನಲ್ಲಿ‌ ವಿಶ್ವ ಜಾನಪದ ದಿನಾಚರಣೆ  ಅಂಗವಾಗಿ ನಡೆದ ‘ವಿದ್ಯಾರ್ಥಿಗಳತ್ತ ಜಾನಪದ’ ಕಾರ್ಯಕ್ರಮ ಉದ್ಘಾಟಿಸಿ  ಮಾತನಾಡಿದರು. ಜೀವನದ ಹಾಸು ಹೊಕ್ಕಿನಲ್ಲಿ ಜಾನಪದ ಒಂದು ಸಾಮೂಹಿಕ ಸೃಷ್ಟಿಯಾಗಿದೆ. ಕಾಲಮಾನದ ಅಗತ್ಯಕ್ಕೆ ಅನುಗುಣವಾಗಿ ಮಾರ್ಪಾಡು ಹೊಂದುತ್ತಾ ತನ್ನ ಜೀವಂತಿಕೆಯನ್ನು ಜಾನಪದ ಕಾಪಾಡಿಕೊಳ್ಳುತ್ತಿದೆ. ಅನಕ್ಷರತೆಯ ನಡುವೆ ಬದುಕಿನಲ್ಲಿ ಕಂಡುಕೊಂಡ ಜೀವನವೇ ಜನಪದವಾಗಿದೆ ಎಂದ ಅವರು, ಜನಪರ ಸಾಹಿತ್ಯದಲ್ಲಿ ಅಡಕಗೊಂಡಿರುವ ಜನಪದ ನೀತಿಯ ತಿರುಳುಗಳನ್ನು ಅರಿತು ಜೀವನದಲ್ಲಿ ವಿದ್ಯಾರ್ಥಿಗಳು ಅಳವಡಿಸಿಕೊಳ್ಳಬೇಕಾಗಿದೆ ಎಂದು ಕರೆ ನೀಡಿದರು. ಮುಖ್ಯ ಅತಿಥಿಗಳಾಗಿ ಪಾಲ್ಗೊಂಡ ಉಪನ್ಯಾಸಕ ಹಾಗೂ ಜಾನಪದ ಕಲಾವಿದ ನಂಜುಂಡಸ್ವಾಮಿ ಮಾತನಾಡಿ, ಜನಪದೀಯ ವ್ಯವಸ್ಥೆ ಬಗ್ಗೆ ಸಮಗ್ರ ಮಾಹಿತಿ ಒದಗಿಸುವುದರೊಂದಿಗೆ ಹಲವು ಜಾನಪದ ಹಾಡುಗಳನ್ನು ಹಾಡಿದರು. ಜಾನಪದ ಪರಿಷತ್ತಿನ ಪ್ರಧಾನ ಕಾರ್ಯದರ್ಶಿ ಹಾ.ತಿ.ಜಯಪ್ರಕಾಶ್  ಚುಟುಕುಗಳನ್ನು ವಾಚಿಸಿದರು. ಕುಶಾಲನಗರ ತಾಲೂಕು ಜಾನಪದ ಪರಿಷತ್ ಘಟಕದ ಅಧ್ಯಕ್ಷ ಎಂ.ಎನ್.ಚಂದ್ರಮೋಹನ್ ಪ್ರಾಸ್ತಾವಿಕವಾಗಿ ಮಾತನಾಡಿ, ಇಂದಿನ ಆಧುನಿಕ ಯುಗದಲ್ಲಿ ಯುವ ಪೀಳಿಗೆಗೆ ಜಾನಪದ ಸಂಸ್ಕೃತಿ, ಸೊಗಡನ್ನು ಪರಿಚಯಿಸುವ ಕಾರ್ಯವನ್ನು ಪರಿಷತ್ ಮೂಲಕ ಕಳೆದ‌ 9 ವರ್ಷಗಳಿಂದ ನಿರಂತರವಾಗಿ ಹಮ್ಮಿಕೊಂಡು ಬರಲಾಗುತ್ತಿದೆ ಎಂದರು. ಪದವಿಪೂರ್ವ ಕಾಲೇಜು ಪ್ರಾಂಶುಪಾಲರಾದ ನಾಗೇಶ್  ಅಧ್ಯಕ್ಷತೆಯಲ್ಲಿ  ಕಾರ್ಯಕ್ರಮ ನಡೆಯಿತು. ಇದೇ ಸಂದರ್ಭ ಜನಪದ ಪರಿಷತ್ ಗೆ ಸದಸ್ಯತ್ವ ನೋಂದಣಿ ಕಾರ್ಯ ನಡೆಸಲಾಯಿತು. ಕಲಾವಿದ ನಂಜುಂಡಸ್ವಾಮಿ ಹಾಗೂ ಉಪನ್ಯಾಸಕ ನಂದೀಶ್, ಬಿ.ಜಿ.ಶಾಂತಿ, ಪ್ರಿಯಾಂಕ ಜಾನಪದ ಗೀತೆ ‌ಹಾಡಿದರು. ಉಪನ್ಯಾಸಕ ಫಿಲಿಪ್ ವಾಸ್, ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘದ ಉಪಾಧ್ಯಕ್ಷ ಬಿ.ಡಿ.ರಾಜು ರೈ ವೇದಿಕೆಯಲ್ಲಿ ಉಪಸ್ಥಿತರಿದ್ದರು. ಪತ್ರಕರ್ತರ ಸಂಘದ  ಪ್ರಧಾನ ಕಾರ್ಯದರ್ಶಿ ವನಿತಾ ಚಂದ್ರ ಮೋಹನ್, ಶಶಿಕಾಂತ್ ರೈ, ವಿನೋದ್,  ಡಿ.ಆರ್.ಸೋಮಶೇಖರ್ ಸೇರಿದಂತೆ ಪರಿಷತ್ ಹಾಗೂ ಪತ್ರಕರ್ತರ ಸಂಘದ ಪದಾಧಿಕಾರಿಗಳು, ಉಪನ್ಯಾಸಕ ವೃಂದದವರು ಇದ್ದರು. ವಿದ್ಯಾರ್ಥಿನಿ ಲಕ್ಷ್ಮಿ ಪ್ರಾರ್ಥನೆ ಕೆ.ಕೆ.ನಾಗರಾಜ ಶೆಟ್ಟಿ ಸ್ವಾಗತಿಸಿದರು. ಟಿ.ಆರ್.ಪ್ರಭುದೇವ್ ಕಾರ್ಯಕ್ರಮ ನಿರೂಪಿಸಿದರು. ಜಯಪ್ರಕಾಶ್ ವಂದಿಸಿದರು.

 

 

 

Follow us Follow us
Share. WhatsApp Facebook Twitter Email Telegram Copy Link

Website design development company services in Mangalore

Forex Trading Teacher in India

Related Posts

*ಇಸ್ಮಾಯಿಲ್ ಕಂಡಕರೆಗೆ ಕರ್ನಾಟಕ ಕಾರ್ಯನಿರತ ಪತ್ರಕರ್ತ ಸಂಘದ ವಾರ್ಷಿಕ ಪ್ರಶಸ್ತಿ*

ಮಾರ್ಚ್ 31, 2026

*ಯಶಸ್ವೀ ಕಾರ್ಯಾಚರಣೆ : ಅರಣ್ಯಕ್ಕೆ ಮರಳಿದ ಕಾಡಾನೆ ಹಿಂಡು*

ಮಾರ್ಚ್ 31, 2026

*ಚೇನಂಡ ಐನ್ ಮನೆಗೆ ಶಾಸಕ ಎ.ಎಸ್.ಪೊನ್ನಣ್ಣ ಭೇಟಿ : ಕೊಡವ ಹಾಕಿ ಉತ್ಸವಕ್ಕೆ ಅಗತ್ಯ ಸಹಕಾರದ ಭರವಸೆ*

ಮಾರ್ಚ್ 31, 2026

*ಯಶಸ್ವೀ ಕಾರ್ಯಾಚರಣೆ : ಅರಣ್ಯಕ್ಕೆ ಮರಳಿದ ಕಾಡಾನೆ ಹಿಂಡು*

ಮಾರ್ಚ್ 31, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಮಡಿಕೇರಿ, NEWS DESK ಮಾ.31 : ತಿತಿಮತಿ ಅರಣ್ಯ ವಲಯಕ್ಕೆ ಒಳಪಡುವ ತೋಟಗಳಲ್ಲಿ ಬೀಡುಬಿಟ್ಟಿದ್ದ ಕಾಡಾನೆ ಹಿಂಡನ್ನು ಮರಳಿ ಅರಣ್ಯಕ್ಕೆ…

*ಚೇನಂಡ ಐನ್ ಮನೆಗೆ ಶಾಸಕ ಎ.ಎಸ್.ಪೊನ್ನಣ್ಣ ಭೇಟಿ : ಕೊಡವ ಹಾಕಿ ಉತ್ಸವಕ್ಕೆ ಅಗತ್ಯ ಸಹಕಾರದ ಭರವಸೆ*

ಮಾರ್ಚ್ 31, 2026

*ವಿರಾಜಪೇಟೆಯಲ್ಲಿ ಜಾಗೃತಿಗಾಗಿ ಪೊಲೀಸರ ಪಥ ಸಂಚಲನ*

ಮಾರ್ಚ್ 31, 2026

*ಹಿಂದೂ ಜನ ಜಾಗೃತಿ ಸಭೆ : ನಾಪೋಕ್ಲುವಿನಲ್ಲಿ ಶಾಂತಿ ಸಭೆ*

ಮಾರ್ಚ್ 31, 2026

*ಏ.2 ರಿಂದ ಕಾರ್ಕಳ ಕ್ರಿಯೇಟಿವ್ ಗ್ಲೋಬಲ್ ಸ್ಕೂಲ್ ನಲ್ಲಿ ಚಿಲಿಪಿಲಿ ಮಕ್ಕಳ ವಿಶೇಷ ಶಿಬಿರ*

ಮಾರ್ಚ್ 31, 2026

*ಭಾಗಮಂಡಲ : ಕಾಡಂಚಿನ ಗ್ರಾಮಸ್ಥರಿಗೆ ಉಚಿತ ಆರೋಗ್ಯ ತಪಾಸಣೆ*

ಮಾರ್ಚ್ 31, 2026

*ಏ.02 ರಂದು ಸಾಮೂಹಿಕ ಸತ್ಯನಾರಾಯಣ ಪೂಜೆ*

ಮಾರ್ಚ್ 31, 2026

*ರೈತರ ಮಕ್ಕಳಿಂದ ತೋಟಗಾರಿಕೆ ತರಬೇತಿಗೆ ಅರ್ಜಿ ಆಹ್ವಾನ*

ಮಾರ್ಚ್ 31, 2026

*ಸಾರ್ವಜನಿಕರ ಗಮನಕ್ಕೆ*

ಮಾರ್ಚ್ 31, 2026

*ನಿವೃತ್ತಿ ಹೊಂದಿದ ಪೊಲೀಸ್ ಅಧಿಕಾರಿಗಳಿಗೆ ಬೀಳ್ಕೊಡುಗೆ*

ಮಾರ್ಚ್ 31, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.

Ad Blocker Enabled!
Ad Blocker Enabled!
Our website is made possible by displaying online advertisements to our visitors. Please support us by disabling your Ad Blocker.