
ಮಡಿಕೇರಿ ಆ.29 NEWS DESK : ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯು 2024-25ನೇ ಸಾಲಿನಲ್ಲಿ ಭಾರತ ಸರ್ಕಾರದಿಂದ ಮಾನ್ಯತೆ ಪಡೆದ ಅಧಿಕೃತ ರಾಷ್ಟ್ರೀಯ ಕ್ರೀಡಾ ಸಂಸ್ಥೆಗಳು ಆಯೋಜಿಸುವ ರಾಷ್ಟ್ರಮಟ್ಟದ ಕ್ರೀಡಾಕೂಟಗಳಲ್ಲಿ ಭಾಗವಹಿಸಿ ಪದಕ ಪಡೆದ ಮತ್ತು ಅಂತರ್‍ರಾಷ್ಟ್ರೀಯ ಮಟ್ಟದ ಕ್ರೀಡಾಕೂಟಗಳಿಗೆ ಭಾರತ ಸರ್ಕಾರದಿಂದ ನಿಯೋಜಿಸಲ್ಪಟ್ಟ ತಂಡದಲ್ಲಿ ಭಾಗವಹಿಸಿ ಉತ್ತಮ ಸಾಧನೆ ಮಾಡಿದ ರಾಜ್ಯದ ಕ್ರೀಡಾಪಟುಗಳ ಶೈಕ್ಷಣಿಕ ಶುಲ್ಕವನ್ನು ಮರು ಪಾವತಿಸುವ ಯೋಜನೆಯನ್ನು ಅನುಷ್ಠಾನಗೊಳಿಸಲು ಅರ್ಹ ಫಲಾನುಭವಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.
2024-25ನೇ ಸಾಲಿನ ಶೈಕ್ಷಣಿಕ ಶುಲ್ಕ ಮರುಪಾವತಿಗಾಗಿ ಆಸಕ್ತ ಕ್ರೀಡಾಪಟುಗಳು ಅರ್ಜಿ ನಮೂನೆಗಳನ್ನು ಸಹಾಯಕ ನಿರ್ದೇಶಕರ ಕಚೇರಿ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ಜನರಲ್ ತಿಮ್ಮಯ್ಯ ಜಿಲ್ಲಾ ಕ್ರೀಡಾಂಗಣ, ಮಡಿಕೇರಿಯಲ್ಲಿ ಪಡೆದು ಸೆ.20 ರೊಳಗೆ ಕಚೇರಿಗೆ ಸಲ್ಲಿಸುವುದು. ಹೆಚ್ಚಿನ ಮಾಹಿತಿಗೆ ದೂ.ಸಂ. 08272-220986 ಮತ್ತು ತರಬೇತುದಾರರು 9480032712 ನ್ನು ಕಚೇರಿ ವೇಳೆಯಲ್ಲಿ ಸಂಪರ್ಕಿಸಬಹುದು ಎಂದು ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕರು ತಿಳಿಸಿದ್ದಾರೆ. 







