Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಇಸ್ಮಾಯಿಲ್ ಕಂಡಕರೆಗೆ ಕರ್ನಾಟಕ ಕಾರ್ಯನಿರತ ಪತ್ರಕರ್ತ ಸಂಘದ ವಾರ್ಷಿಕ ಪ್ರಶಸ್ತಿ*
  • *ಯಶಸ್ವೀ ಕಾರ್ಯಾಚರಣೆ : ಅರಣ್ಯಕ್ಕೆ ಮರಳಿದ ಕಾಡಾನೆ ಹಿಂಡು*
  • *ಚೇನಂಡ ಐನ್ ಮನೆಗೆ ಶಾಸಕ ಎ.ಎಸ್.ಪೊನ್ನಣ್ಣ ಭೇಟಿ : ಕೊಡವ ಹಾಕಿ ಉತ್ಸವಕ್ಕೆ ಅಗತ್ಯ ಸಹಕಾರದ ಭರವಸೆ*
  • *ವಿರಾಜಪೇಟೆಯಲ್ಲಿ ಜಾಗೃತಿಗಾಗಿ ಪೊಲೀಸರ ಪಥ ಸಂಚಲನ*
  • *ಹಿಂದೂ ಜನ ಜಾಗೃತಿ ಸಭೆ : ನಾಪೋಕ್ಲುವಿನಲ್ಲಿ ಶಾಂತಿ ಸಭೆ*
  • *ಏ.2 ರಿಂದ ಕಾರ್ಕಳ ಕ್ರಿಯೇಟಿವ್ ಗ್ಲೋಬಲ್ ಸ್ಕೂಲ್ ನಲ್ಲಿ ಚಿಲಿಪಿಲಿ ಮಕ್ಕಳ ವಿಶೇಷ ಶಿಬಿರ*
  • *ಭಾಗಮಂಡಲ : ಕಾಡಂಚಿನ ಗ್ರಾಮಸ್ಥರಿಗೆ ಉಚಿತ ಆರೋಗ್ಯ ತಪಾಸಣೆ*
  • *ಏ.02 ರಂದು ಸಾಮೂಹಿಕ ಸತ್ಯನಾರಾಯಣ ಪೂಜೆ*
  • *ರೈತರ ಮಕ್ಕಳಿಂದ ತೋಟಗಾರಿಕೆ ತರಬೇತಿಗೆ ಅರ್ಜಿ ಆಹ್ವಾನ*
  • *ಸಾರ್ವಜನಿಕರ ಗಮನಕ್ಕೆ*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*ಕೂಡಿಗೆಯಲ್ಲಿ ಶರಣ ಸಾಹಿತ್ಯ ಪರಿಷತ್ತು ಸಂಸ್ಥಾಪನಾ ದಿನಾಚರಣೆ : ಸುತ್ತೂರು ಜಗದ್ಗುರು ಡಾ.ರಾಜೇಂದ್ರ ಶ್ರೀಗಳ ಜಯಂತಿ ಸರ್ಕಾರದ ಕಾರ್ಯಕ್ರಮವಾಗಲಿ : ವಿ.ಪಿ.ಶಶಿಧರ್ ಆಶಯ*
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

*ಕೂಡಿಗೆಯಲ್ಲಿ ಶರಣ ಸಾಹಿತ್ಯ ಪರಿಷತ್ತು ಸಂಸ್ಥಾಪನಾ ದಿನಾಚರಣೆ : ಸುತ್ತೂರು ಜಗದ್ಗುರು ಡಾ.ರಾಜೇಂದ್ರ ಶ್ರೀಗಳ ಜಯಂತಿ ಸರ್ಕಾರದ ಕಾರ್ಯಕ್ರಮವಾಗಲಿ : ವಿ.ಪಿ.ಶಶಿಧರ್ ಆಶಯ*

ಆಗಷ್ಟ್ 29, 20242 Mins ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link

ಕುಶಾಲನಗರ, ಆ.30 NEWS  DESK : ಮನುಕುಲದ ಒಳಿತಿಗೆ ವಚನ ಸಾಹಿತ್ಯದ ಮಹತ್ವ ಹಾಗೂ ಜಾಗೃತಿಯನ್ನು ಮೂಡಿಸುತ್ತಿರುವ ಶರಣ ಸಾಹಿತ್ಯ ಪರಿಷತ್ತಿನ ಸಂಸ್ಥಾಪನಾ ದಿನವಾಗಿ ಸುತ್ತೂರು ಮಹಾಸಂಸ್ಥಾನದ 23ನೇ ಜಗದ್ಗುರು ಡಾ.ರಾಜೇಂದ್ರ ಸ್ವಾಮೀಜಿ ಜನ್ಮದಿನಾಚರಣೆಯನ್ನು ಆಚರಿಸುತ್ತಿರುವುದರಿಂದ ಇದು ಸರ್ಕಾರವೇ ಆಚರಿಸುವಂತಾಗಬೇಕೆಂದು ಚಿಂತಕ, ವಾಗ್ಮಿ ವಿ.ಪಿ.ಶಶಿಧರ್ ಜಿಲ್ಲಾಡಳಿತವನ್ನು ಆಗ್ರಹಿಸಿದರು.
ಕೊಡಗು ಜಿಲ್ಲಾ ಶರಣ ಸಾಹಿತ್ಯ ಪರಿಷತ್ತು ವತಿಯಿಂದ ಕೂಡಿಗೆಯ ಮೊರಾರ್ಜಿ ದೇಸಾಯಿ ವಸತಿ ಶಾಲೆಯಲ್ಲಿ ನಡೆದ ಸುತ್ತೂರು ಮಠದ 23ನೇ ಜಗದ್ಗುರು ಡಾ.ರಾಜೇಂದ್ರ ಸ್ವಾಮೀಜಿಯವರ 109 ನೇ ಪುಣ್ಯಸ್ಮರಣೆ ಹಾಗೂ ಶರಣ ಸಾಹಿತ್ಯ ಪರಿಷತ್ತಿನ ಸಂಸ್ಥಾಪನಾ ದಿನೋತ್ಸವವನ್ನು ಉದ್ಘಾಟಿಸಿ ಅವರು ಮಾತನಾಡಿದರು. ಜನಸಾಮಾನ್ಯರ ಬದುಕು ಸಂಕೀರ್ಣವಾಗಿದ್ದಂತಹ ಕಾಲಘಟ್ಟದಲ್ಲಿ ಹೊರ ಬಂದಂತಹ ವಚನಗಳು ಹಾಗೂ ಹನ್ನೆರಡನೇ ಶತಮಾನದ ಶರಣರ ಚಿಂತನೆಗಳು ಮನುಷ್ಯರ ಉತ್ತಮ ಬದುಕಿಗೆ ಸಿಕ್ಕಂತಹ ಮುತ್ತು ರತ್ನಗಳು. ಮೂಢನಂಬಿಕೆ, ಕಂದಾಚಾರ, ಬಡವ – ಬಲ್ಲಿದ, ಮೇಲು – ಕೀಳು ಬೇಧಗಳು ಜನಸಾಮಾನ್ಯರ ಜೀವ ಹಿಂಡುತ್ತಿದ್ದ ಕಾಲದಲ್ಲಿ ಬಸವಾದಿ ಶರಣರ ವಚನಗಳು ಮನುಷ್ಯನಿಗೆ ಲೌಕಿಕ ಜೀವನ ದರ್ಶನ ಗೈದ ಮಾಣಿಕ್ಯಗಳು ಎಂದು ಶಶಿಧರ್ ಬಣ್ಣಿಸಿದರು. ಪ್ರತಿಯೊಬ್ಬರು ವಚನಗಳನ್ನು ಓದಿ ಅರ್ಥೈಸಿಕೊಂಡರೆ ಸಮಾಜದಲ್ಲಿ ಉದ್ವಿಘ್ನತೆ ಹಾಗೂ ಪ್ರಕ್ಷುಬ್ಧತೆಯ ವಾತಾವರಣವೇ ಘಟಿಸುವುದಿಲ್ಲ. ನಾಡು ಕಂಡಂತಹ ಶ್ರೇಷ್ಠ ಚಿಂತಕ ಡಾ.ಕಲ್ಬುರ್ಗಿಯವರ ವಚನ ಸಾಹಿತ್ಯ ಸಂಶೋಧನೆಯ ಪುಸ್ತಕಗಳು ಹೊರಬಂದಿದ್ದರೆ ವಚನ ಸಾಹಿತ್ಯದ ಹೊಳಹು ಮತ್ತಷ್ಟು ಹೆಚ್ಚುತ್ತಿತ್ತು. ಸಮರಸದ ಬಾವನೆಗಳಿಂದ ಸಾಮಾಜಿಕವಾದ ಸತ್ಯದರ್ಶನ ಕಲ್ಬುರ್ಗಿಯವರ ಗ್ರಂಥಗಳಲ್ಲಿ ಅಡಕವಾಗಿದ್ದವು ಎಂದು ಶಶಿಧರ್ ಬಣ್ಣಿಸಿದರು. ತನ್ನತನ ಹಾಗೂ ತಾನು ಸಮಾಜದಲ್ಲಿ ಗೈದ ಅಪಾರ ಕೊಡುಗೆಗಳನ್ನು ನೆನೆಯದೇ ವಚನ ಸಾಹಿತ್ಯವನ್ನು ಸ್ಮರಿಸಿದ ಶ್ರೇಷ್ಠ ದಾರ್ಶನಿಕ ಡಾ.ರಾಜೇಂದ್ರ ಸ್ವಾಮೀಜಿಗಳ ಜಯಂತಿಯನ್ನು ಸರಕಾರ ಸಾರ್ವಜನಿಕರನ್ನು ಒಳಗೊಂಡಂತೆ ವರ್ಷಂಪ್ರತೀ ಆಚರಿಸುವಂತಾಗಬೇಕು. ಅಂದು ಅಂಬೇಡ್ಕರ್ ಕೂಡ ಶರಣ ಸಾಹಿತ್ಯವನ್ನು ಓದಿ ಅರ್ಥೈಸಿಕೊಂಡೇ ಸಂವಿಧಾನವನ್ನು ಬರೆದಿದ್ದರು. ಹಾಗಾಗಿ ಎಲ್ಲರೂ ವಚನ ಸಾಹಿತ್ಯ ಓದಿಕೊಂಡು ಅದರಲ್ಲಿನ ತಿರುಳಿನಂತೆ ನಡೆದುಕೊಂಡಿದ್ದರೆ ಮೀಸಲಾತಿಯ ಅಗತ್ಯವೇ ಇರುತ್ತಿರಲಿಲ್ಲ. ಬಸವಣ್ಣನಬರು ಬರೆದಿರುವ ಕಲಬೇಡ ಕೊಲಬೇಡ ಎಂಬ ಸಪ್ತಸೂತ್ರಗಳು ಮನುಷ್ಯನ ಅಂತರಂಗ ಹಾಗೂ ಬಹಿರಂಗ ಗಳೆರಡನ್ನು ಸ್ವಚ್ಛವಾಗಿಡುತ್ತವೆ. ಹಾಗಾಗಿ ಶರಣ ತತ್ವಗಳ ಬಗ್ಗೆ ಹೇಳದೆಯೇ ಅಳವಡಿಸಿಕೊಳ್ಳುವಂತಾಗಬೇಕು ಎಂದು ಶಶಿಧರ್ ಹೇಳಿದರು. ಸಾನಿಧ್ಯ ವಹಿಸಿದ್ದ ಕೊಡ್ಲಿಪೇಟೆ ಕಿರಿಕೊಡ್ಲಿ ಮಠದ ಪೀಠಾಧ್ಯಕ್ಷ ಶ್ರೀ ಸದಾಶಿವ ಸ್ವಾಮೀಜಿ ಮಾತನಾಡಿ, ಮನುಷ್ಯನ ಆಯುಷ್ಯದ ಬಹುತೇಕ ಸಮಯ ನಿದ್ದೆಯಲ್ಲಿಯೇ ಕಳೆಯುತ್ತದೆ. ಆದರೆ ಉಳಿವ ಅಲ್ಪ ಅವಧಿಯನ್ನು ಶರಣರ ತತ್ವಗಳು ಹಾಗೂ ಸಮಾಜಮುಖಿ ಚಿಂತನೆಗಳಿಗೆ ಬಳಸುವ ಮೂಲಕ ಉತ್ತಮ ವ್ಯಕ್ತಿತ್ವ ಬೆಳೆಸಿಕೊಳ್ಳಬೇಕು. ಸುತ್ತೂರು ಮಠದ 23ನೇ ಜಗದ್ಗುರು ಡಾ.ರಾಜೇಂದ್ರ ಸ್ವಾಮೀಜಿಯವರ ಅನ್ನ, ಅರಿವು, ಆರೋಗ್ಯ ಎಂಬ ತ್ರಿವಿಧ ದಾಸೋಹದ ಫಲವಾಗಿ ಇಡೀ ನಾಡು ಸಾಕಷ್ಟು ಸುಶಿಕ್ಷಿತವಾಗಿದೆ.
ಸಾವಿರ ವರ್ಷಗಳ ಪರಂಪರೆ ಇರುವ ಸುತ್ತೂರು ಮಠ ಇಂದು ಜಗದಗಲ 400 ಕ್ಕೂ ಹೆಚ್ಚಿನ ವಿದ್ಯಾಸಂಸ್ಥೆಗಳನ್ನು ತೆರೆದುಕೊಂಡು ಒಂದು ಆಡಳಿತ ಸರ್ಕಾರಕ್ಕಿಂತ ಹೆಚ್ಚಾಗಿ ಲಕ್ಷಾಂತರ ಮಂದಿಯ ಮನೆಗಳನ್ನು ಬೆಳಗಿದೆ. ಹಾಗಾಗಿ ಇಡೀ ಮನುಕುಲಕ್ಕೆ ಶರಣರ ಚಿಂತನೆಗಳನ್ನು ಹರಡಲು 1986 ರಲ್ಲಿ ಅಖಿಲ ಭಾರತ ಶರಣ ಸಾಹಿತ್ಯ ಪರಿಷತ್ತನ್ನು ಡಾ.ರಾಜೇಂದ್ರ ಶ್ರೀಗಳು ಆರಂಭಿಸಿದರು. ಇದರ ಮೂಲಗುರಿಯೇ ಅಂತರಂಗ ಹಾಗೂ ಬಹಿರಂಗ ಶುದ್ದಿ ಎಂದು ಶ್ರೀಗಳು ವ್ಯಾಖ್ಯಾನಿಸಿದರು. ಡಾ.ರಾಜೇಂದ್ರ ಶ್ರೀಗಳ ಜೀವನ ದರ್ಶನದ ಕುರಿತು ಅಖಿಲ ಭಾರತ ವೀರಶೈವ ಮಹಾಸಭಾದ ಕೊಡಗು ಜಿಲ್ಲಾಧ್ಯಕ್ಷ ಹೆಚ್.ವಿ.ಶಿವಪ್ಪ ಹಾಗೂ ಬಸವನಹಳ್ಳಿ ಮೊರಾರ್ಜಿ ದೇಸಾಯಿ ವಸತಿ ಶಾಲೆಯ ಪ್ರಾಂಶುಪಾಲ ಕೆ.ಪ್ರಕಾಶ್ ಮಾತನಾಡಿದರು. ಕೊಡಗು ಜಿಲ್ಲಾ ಶರಣ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ಕೆ.ಎಸ್.ಮೂರ್ತಿ, ಪ್ರಧಾನ ಕಾರ್ಯದರ್ಶಿ ಬಿ.ನಟರಾಜು, ಕೋಷಾಧಿಕಾರಿ ಪರಮೇಶ್, ಕುಶಾಲನಗರ ತಾಲ್ಲೂಕು ಕದಳಿ ವೇದಿಕೆ ಅಧ್ಯಕ್ಷೆ ಹೇಮಲತಾ ವಿರೂಪಾಕ್ಷ, ಮಾಜಿ ಅಧ್ಯಕ್ಷೆ ಲೇಖನಾ ಧರ್ಮೇಂದ್ರ ಇದ್ದರು. ಬಸವನಹಳ್ಳಿ ಮೊರಾರ್ಜಿ ದೇಸಾಯಿ ವಸತಿ ಶಾಲೆಯ ಸಂಗೀತಾ ಶಿಕ್ಷಕ ಪುಟ್ಟರಾಜು ಅಲ್ಲಮಪ್ರಭುಗಳ ವಚನಗಳನ್ನು ಹಾಡಿದರು. ಇದೇ ಸಂದರ್ಭ ಕುಶಾಲನಗರ ತಾಲ್ಲೂಕು ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಅಧ್ಯಕ್ಷ ವಿ.ಪಿ.ಶಶಿಧರ್ ಅವರನ್ನು ಪರಿಷತ್ತು ವತಿಯಿಂದ ಗೌರವಿಸಲಾಯಿತು.

Follow us Follow us
Share. WhatsApp Facebook Twitter Email Telegram Copy Link

Website design development company services in Mangalore

Forex Trading Teacher in India

Related Posts

*ಇಸ್ಮಾಯಿಲ್ ಕಂಡಕರೆಗೆ ಕರ್ನಾಟಕ ಕಾರ್ಯನಿರತ ಪತ್ರಕರ್ತ ಸಂಘದ ವಾರ್ಷಿಕ ಪ್ರಶಸ್ತಿ*

ಮಾರ್ಚ್ 31, 2026

*ಯಶಸ್ವೀ ಕಾರ್ಯಾಚರಣೆ : ಅರಣ್ಯಕ್ಕೆ ಮರಳಿದ ಕಾಡಾನೆ ಹಿಂಡು*

ಮಾರ್ಚ್ 31, 2026

*ಚೇನಂಡ ಐನ್ ಮನೆಗೆ ಶಾಸಕ ಎ.ಎಸ್.ಪೊನ್ನಣ್ಣ ಭೇಟಿ : ಕೊಡವ ಹಾಕಿ ಉತ್ಸವಕ್ಕೆ ಅಗತ್ಯ ಸಹಕಾರದ ಭರವಸೆ*

ಮಾರ್ಚ್ 31, 2026

*ಯಶಸ್ವೀ ಕಾರ್ಯಾಚರಣೆ : ಅರಣ್ಯಕ್ಕೆ ಮರಳಿದ ಕಾಡಾನೆ ಹಿಂಡು*

ಮಾರ್ಚ್ 31, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಮಡಿಕೇರಿ, NEWS DESK ಮಾ.31 : ತಿತಿಮತಿ ಅರಣ್ಯ ವಲಯಕ್ಕೆ ಒಳಪಡುವ ತೋಟಗಳಲ್ಲಿ ಬೀಡುಬಿಟ್ಟಿದ್ದ ಕಾಡಾನೆ ಹಿಂಡನ್ನು ಮರಳಿ ಅರಣ್ಯಕ್ಕೆ…

*ಚೇನಂಡ ಐನ್ ಮನೆಗೆ ಶಾಸಕ ಎ.ಎಸ್.ಪೊನ್ನಣ್ಣ ಭೇಟಿ : ಕೊಡವ ಹಾಕಿ ಉತ್ಸವಕ್ಕೆ ಅಗತ್ಯ ಸಹಕಾರದ ಭರವಸೆ*

ಮಾರ್ಚ್ 31, 2026

*ವಿರಾಜಪೇಟೆಯಲ್ಲಿ ಜಾಗೃತಿಗಾಗಿ ಪೊಲೀಸರ ಪಥ ಸಂಚಲನ*

ಮಾರ್ಚ್ 31, 2026

*ಹಿಂದೂ ಜನ ಜಾಗೃತಿ ಸಭೆ : ನಾಪೋಕ್ಲುವಿನಲ್ಲಿ ಶಾಂತಿ ಸಭೆ*

ಮಾರ್ಚ್ 31, 2026

*ಏ.2 ರಿಂದ ಕಾರ್ಕಳ ಕ್ರಿಯೇಟಿವ್ ಗ್ಲೋಬಲ್ ಸ್ಕೂಲ್ ನಲ್ಲಿ ಚಿಲಿಪಿಲಿ ಮಕ್ಕಳ ವಿಶೇಷ ಶಿಬಿರ*

ಮಾರ್ಚ್ 31, 2026

*ಭಾಗಮಂಡಲ : ಕಾಡಂಚಿನ ಗ್ರಾಮಸ್ಥರಿಗೆ ಉಚಿತ ಆರೋಗ್ಯ ತಪಾಸಣೆ*

ಮಾರ್ಚ್ 31, 2026

*ಏ.02 ರಂದು ಸಾಮೂಹಿಕ ಸತ್ಯನಾರಾಯಣ ಪೂಜೆ*

ಮಾರ್ಚ್ 31, 2026

*ರೈತರ ಮಕ್ಕಳಿಂದ ತೋಟಗಾರಿಕೆ ತರಬೇತಿಗೆ ಅರ್ಜಿ ಆಹ್ವಾನ*

ಮಾರ್ಚ್ 31, 2026

*ಸಾರ್ವಜನಿಕರ ಗಮನಕ್ಕೆ*

ಮಾರ್ಚ್ 31, 2026

*ನಿವೃತ್ತಿ ಹೊಂದಿದ ಪೊಲೀಸ್ ಅಧಿಕಾರಿಗಳಿಗೆ ಬೀಳ್ಕೊಡುಗೆ*

ಮಾರ್ಚ್ 31, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.

Ad Blocker Enabled!
Ad Blocker Enabled!
Our website is made possible by displaying online advertisements to our visitors. Please support us by disabling your Ad Blocker.