Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಮಕ್ಕಳ ಸುರಕ್ಷತೆಗಾಗಿ ವಿವಿಧೆಡೆ ಜಾಗೃತಿ ಅಭಿಯಾನ*
  • *ಡಾ. ಕೆ.ಪಿ. ಲಲಿತ ಅವರ ‘ಕೊಡಗಿನ ಜಾನಪದ ಕಥೆಗಳು’ ಕೃತಿಗೆ ಕೊಡಗಿನ ಗೌರಮ್ಮ ದತ್ತಿ ಪ್ರಶಸ್ತಿ*
  • *ಮಕ್ಕಂದೂರು-ಮುಕ್ಕೋಡ್ಲು ಗೌಡ ಸಮಾಜದಿಂದ ಕೈಲ್ ಮುಹೂರ್ತ ಸಂತೋಷಕೂಟ*
  • *ನಶಾ ಮುಕ್ತ ಭಾರತ ಜಾಗೃತಿ ಕಾರ್ಯಕ್ರಮ*
  • *ಕರ್ನಾಟಕದಲ್ಲಿ ಹಿಂಗಾರು ಮಳೆ ಕೊರತೆ ಸಾಧ್ಯತೆ: ರೈತರಿಗೆ ಎಚ್ಚರಿಕೆ*
  • *ಸುಂಟಿಕೊಪ್ಪದಲ್ಲಿ ಪ್ರಜಾ ಸೇವೆ ಅಭಿಯಾನ: 70ಕ್ಕೂ ಅಧಿಕ ಅಹವಾಲು ಸ್ವೀಕಾರ*
  • *ಎಸ್‌ಐಆರ್ ಪ್ರಕ್ರಿಯೆಯಲ್ಲಿ ಅಕ್ರಮ ಆರೋಪ : ಮಡಿಕೇರಿಯಲ್ಲಿ ಎಸ್‌ಡಿಪಿಐ ಪ್ರತಿಭಟನೆ : ಉನ್ನತ ಮಟ್ಟದ ತನಿಖೆಗೆ ಆಗ್ರಹ*
  • *ಅ.6 ರಂದು ಚೇರಂಬಾಣೆಯಲ್ಲಿ ಸಿಎನ್‌ಸಿ ಮಾನವ ಸರಪಳಿ ಕಾರ್ಯಕ್ರಮ*
  • *ವಿರಾಜಪೇಟೆ ತಾಲ್ಲೂಕು ಮಟ್ಟದ ಪ್ರಜಾಸೇವಾ ಆಂದೋಲನ : ಎರಡು-ಮೂರು ತಿಂಗಳ ನಂತರ ಅತ್ಯಂತ ಕೆಟ್ಟ ಪರಿಣಾಮ ಎದುರಿಸಬೇಕಾಗುತ್ತದೆ : ಎಲ್-ನಿನೋ ಪರಿಣಾಮದಿಂದ ಇಡೀ ಪ್ರಪಂಚ ಹವಾಮಾನ ವೈಪರೀತ್ಯ ಎದುರಿಸುತ್ತಿದೆ : ಕೊಡಗು ಜಿಲ್ಲಾ ಉಸ್ತುವಾರಿ ಸಚಿವ ಪಿ.ಎಂ.ನರೇಂದ್ರ ಸ್ವಾಮಿ*
  • *ಕ್ಲೀನ್ ಕೊಡಗು : ಮಾಜಿ ಸೈನಿಕರು, ನಿವೃತ್ತ ನೌಕರರಿಂದ ಸ್ವಚ್ಛತಾ ಅಭಿಯಾನ*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*ಬಿಜೆಪಿ ಸದಸ್ಯತ್ವ ಅಭಿಯಾನ : ಸರ್ಕಾರ ಉರುಳುವ ಸಂಭವ ಹೆಚ್ಚಿದೆ : ಮಾಜಿ ಶಾಸಕ ಕೆ.ಜಿ.ಬೋಪಯ್ಯ ಭವಿಷ್ಯ*
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

*ಬಿಜೆಪಿ ಸದಸ್ಯತ್ವ ಅಭಿಯಾನ : ಸರ್ಕಾರ ಉರುಳುವ ಸಂಭವ ಹೆಚ್ಚಿದೆ : ಮಾಜಿ ಶಾಸಕ ಕೆ.ಜಿ.ಬೋಪಯ್ಯ ಭವಿಷ್ಯ*

ಆಗಷ್ಟ್ 31, 20242 Mins ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link

ಮಡಿಕೇರಿ NEWS DESK ಆ.31 : ಭ್ರಷ್ಟಾಚಾರವನ್ನು ಹೆಗಲಿನಲ್ಲಿ ಹೊತ್ತುಕೊಂಡು ತೆವಳುತ್ತಾ ಸಾಗುತ್ತಿರುವ ರಾಜ್ಯ ಸರ್ಕಾರ, ಈ ಭಾರವನ್ನು ಹೊತ್ತುಕೊಳ್ಳಲಾಗದೆ ಕೆಲವೇ ದಿನಗಳಲ್ಲಿ ಉರುಳಿ ಬೀಳುವ ಸಂಭವ ಹೆಚ್ಚಿದೆ ಎಂದು ಮಾಜಿ ಶಾಸಕ ಕೆ.ಜಿ.ಬೋಪಯ್ಯ ಭವಿಷ್ಯ ನುಡಿದಿದ್ದಾರೆ.
ಗೋಣಿಕೊಪ್ಪಲಿನ ಹರಿಶ್ಚಂದ್ರಪುರ ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿ ಸಭಾಂಗಣದಲ್ಲಿ ವಿರಾಜಪೇಟೆ ಮಂಡಲ ಭಾರತೀಯ ಜನತಾ ಪಾರ್ಟಿ ಆಯೋಜಿಸಿದ್ದ ‘ಸದಸ್ಯತ್ವ ಅಭಿಯಾನ’ ಕಾರ್ಯಾಗಾರದಲ್ಲಿ ಪಾಲ್ಗೊಂಡು ಅವರು ಮಾತನಾಡಿದರು. ಉಚಿತ ಯೋಜನೆಗಳ ಮೂಲಕ ಸರ್ಕಾರ ಶೂನ್ಯ ಪ್ರಗತಿಯನ್ನು ಕಾಣುತ್ತಿದ್ದು, ಜನರ ಸಮಸ್ಯೆಗಳಿಗೆ ಸ್ಪಂದಿಸುವ ಶಕ್ತಿಯನ್ನು ಕಳೆದುಕೊಂಡಿದೆ. ಬಿಜೆಪಿ ದೇಶ ಕಟ್ಟಲು ಹೊರಟಿದೆ, ದೇಶವನ್ನು ಆರ್ಥಿಕ ಪ್ರಗತಿಯ ಮೂಲಕ ಅಭಿವೃದ್ಧಿಯತ್ತ ಕೊಂಡೊಯ್ಯಲು ಕೇಂದ್ರ ಸರ್ಕಾರ ಪಣತೊಟ್ಟಿದೆ. ರಾಜ್ಯ ಸರ್ಕಾರ ಇಂತಹ ಜನಪರ ಚಟುವಟಿಕೆಗಳಿಗೆ ಸ್ಪಂದಿಸದೆ, ಈ ಹಿಂದೆ ಬಿಜೆಪಿ ಸರ್ಕಾರ ಅಭಿವೃದ್ಧಿ ಕಾರ್ಯಗಳಿಗಾಗಿ ಮೀಸಲಿಟ್ಟಿದ್ದ ಅನುದಾನವನ್ನೆ ಬಳಸಿಕೊಳ್ಳುತ್ತಿದೆ ಎಂದು ಟೀಕಿಸಿದರು. ಕೊಡಗು ಜಿಲ್ಲೆಯಲ್ಲಿ ಯಾವುದೇ ಪ್ರಗತಿಪರ ಚಟುವಟಿಕೆ ಕಾಣಿಸುತ್ತಿಲ್ಲ. ಬದಲಾಗಿ ಹಳ್ಳಿಗೊಂದು ಇಸ್ಪೇಟ್ ಕ್ಲಬ್‌ಗಳು, ಮರಳು ದಂಧೆ, ಮರದಂಧೆ, ಅಕ್ರಮ ಜಾನುವಾರು ಸಾಗಾಟ, ಚೆತ್‌ಕಲ್ ದಂಧೆ ಹೆಚ್ಚಾಗಿದೆ. 250 ಕೋಟಿ ಅನುದಾನ ತಂದಿದ್ದೇವೆ ಎಂದು ಶಾಸಕರು ಸುಳ್ಳು ಹೇಳುತ್ತಾ ಜನರ ಹಾದಿ ತಪ್ಪಿಸುತ್ತಿದ್ದಾರೆ ಎಂದು ಕೆ.ಜಿ.ಬೋಪಯ್ಯ ಆರೋಪಿಸಿದರು. ವಿಧಾನ ಪರಿಷತ್ ಸದಸ್ಯ ಸುಜಾಕುಶಲಪ್ಪ ಮಾತನಾಡಿ, ರಾಜ್ಯ ಸರ್ಕಾರದ ಆಡಳಿತದಲ್ಲಿ ಜನಪರವಾದ ನಿಲುವುಗಳು ಕಾಣುತ್ತಿಲ್ಲ. ಪ್ರತಿಯೊಂದು ವಸ್ತುಗಳ ತೆರಿಗೆ ಹೆಚ್ಚಿಸಿ ಜನವಿರೋಧಿ ಆಡಳಿತವನ್ನು ನಡೆಸುತ್ತಿದೆ. ಅಭಿವೃದ್ಧಿ ಎಂಬುವುದು ಮರೀಚಿಕೆಯಾಗಿದೆ. ಸರ್ಕಾರಿ ನೌಕರರಿಗೆ ವೇತನ ನೀಡಲು ಸಾಧ್ಯವಾಗದ ಪರಿಸ್ಥಿತಿಯಲ್ಲಿ ಸರ್ಕಾರ ಇದೆ ಎಂದು ವ್ಯಂಗ್ಯವಾಡಿದರು. ಅಧ್ಯಕ್ಷತೆ ವಹಿಸಿ ಮಾತನಾಡಿದ ಬಿಜೆಪಿಯ ವಿರಾಜಪೇಟೆ ಮಂಡಲ ಅಧ್ಯಕ್ಷ ಸುವಿನ್ ಗಣಪತಿ, ಸದಸ್ಯತ್ವ ಅಭಿಯಾನದ ಗುರಿಯನ್ನು ಶೀಘ್ರವಾಗಿ ತಲುಪಬೇಕಾಗಿದೆ. ಕಳೆದ ಬಾರಿ ಜಿಲ್ಲೆಯಲ್ಲಿ 58ಸಾವಿರ ಸದಸ್ಯತ್ವ ಮಾಡಲಾಗಿತ್ತು. ಈ ಬಾರಿ ಒಂದು ಲಕ್ಷಕು ಹೆಚ್ಚಿನ ಸದಸ್ಯತ್ವ ಹೊಂದುವ ಮೂಲಕ ಗುರಿಯನ್ನು ತಲುಪಬೇಕಾಗಿದೆ. ಈ ನಿಟ್ಟಿನಲ್ಲಿ ಸಂಘಟನಾತ್ಮಕವಾಗಿ ಬಿಜೆಪಿ ಸದೃಢವಾಗಿ ನಿಲ್ಲಬೇಕಾಗಿದೆ ಎಂದು ಕರೆ ನೀಡಿದರು. ಬಿಜೆಪಿಯ ಮಾಜಿ ಜಿಲ್ಲಾಧ್ಯಕ್ಷರಾದ ರಾಬಿನ್ ದೇವಯ್ಯ ಹಾಗೂ ಎಂ.ಎಂ.ರವೀಂದ್ರ ಮಾತನಾಡಿದರು. ಜಿಲ್ಲಾ ಪ್ರಧಾನ ಕಾರ್ಯದರ್ಶಿ ನೆಲ್ಲೀರ ಚಲನ್ ಕುಮಾರ್, ಕಾರ್ಯದರ್ಶಿ ಗುಮ್ಮಟ್ಟೀರ ಕಿಲನ್ ಗಣಪತಿ, ಉಪಾಧ್ಯಕ್ಷ ಕುಂಞಂಗಡ ಅರುಣ್ ಭೀಮಯ್ಯ, ತಾಲೂಕು ಮಂಡಲ ಕಾರ್ಯದರ್ಶಿ ಮುದ್ದಿಯಡ ಮಂಜುಗಣಪತಿ, ಡಿಸಿಸಿ ಬ್ಯಾಂಕ್ ಅಧ್ಯಕ್ಷ ಕೊಡಂದೇರ ಬಾಂಡ್ ಗಣಪತಿ, ತಾಲೂಕು ಮಂಡಲ ಕಾರ್ಯದರ್ಶಿ ಕುಟ್ಟಂಡ ಅಜಿತ್ ಕರುಂಬಯ್ಯ ಮತ್ತಿತರ ಪ್ರಮುಖರು ಉಪಸ್ಥಿತರಿದ್ದರು.

Follow us Follow us
Share. WhatsApp Facebook Twitter Email Telegram Copy Link

Related Posts

*ಮಕ್ಕಳ ಸುರಕ್ಷತೆಗಾಗಿ ವಿವಿಧೆಡೆ ಜಾಗೃತಿ ಅಭಿಯಾನ*

ಅಕ್ಟೋಬರ್ 3, 2026

*ಡಾ. ಕೆ.ಪಿ. ಲಲಿತ ಅವರ ‘ಕೊಡಗಿನ ಜಾನಪದ ಕಥೆಗಳು’ ಕೃತಿಗೆ ಕೊಡಗಿನ ಗೌರಮ್ಮ ದತ್ತಿ ಪ್ರಶಸ್ತಿ*

ಅಕ್ಟೋಬರ್ 3, 2026

*ಮಕ್ಕಂದೂರು-ಮುಕ್ಕೋಡ್ಲು ಗೌಡ ಸಮಾಜದಿಂದ ಕೈಲ್ ಮುಹೂರ್ತ ಸಂತೋಷಕೂಟ*

ಅಕ್ಟೋಬರ್ 3, 2026

*ಡಾ. ಕೆ.ಪಿ. ಲಲಿತ ಅವರ ‘ಕೊಡಗಿನ ಜಾನಪದ ಕಥೆಗಳು’ ಕೃತಿಗೆ ಕೊಡಗಿನ ಗೌರಮ್ಮ ದತ್ತಿ ಪ್ರಶಸ್ತಿ*

ಅಕ್ಟೋಬರ್ 3, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಮಡಿಕೇರಿ, NEWS DESK ಅ.3: ಕೊಡಗು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಪ್ರತಿಷ್ಠಿತ ದತ್ತಿನಿಧಿ ಪ್ರಶಸ್ತಿಗಳಲ್ಲಿ ಒಂದಾದ ಕೊಡಗಿನ ಗೌರಮ್ಮ…

*ಮಕ್ಕಂದೂರು-ಮುಕ್ಕೋಡ್ಲು ಗೌಡ ಸಮಾಜದಿಂದ ಕೈಲ್ ಮುಹೂರ್ತ ಸಂತೋಷಕೂಟ*

ಅಕ್ಟೋಬರ್ 3, 2026

*ನಶಾ ಮುಕ್ತ ಭಾರತ ಜಾಗೃತಿ ಕಾರ್ಯಕ್ರಮ*

ಅಕ್ಟೋಬರ್ 3, 2026

*ಕರ್ನಾಟಕದಲ್ಲಿ ಹಿಂಗಾರು ಮಳೆ ಕೊರತೆ ಸಾಧ್ಯತೆ: ರೈತರಿಗೆ ಎಚ್ಚರಿಕೆ*

ಅಕ್ಟೋಬರ್ 3, 2026

*ಸುಂಟಿಕೊಪ್ಪದಲ್ಲಿ ಪ್ರಜಾ ಸೇವೆ ಅಭಿಯಾನ: 70ಕ್ಕೂ ಅಧಿಕ ಅಹವಾಲು ಸ್ವೀಕಾರ*

ಅಕ್ಟೋಬರ್ 3, 2026

*ಎಸ್‌ಐಆರ್ ಪ್ರಕ್ರಿಯೆಯಲ್ಲಿ ಅಕ್ರಮ ಆರೋಪ : ಮಡಿಕೇರಿಯಲ್ಲಿ ಎಸ್‌ಡಿಪಿಐ ಪ್ರತಿಭಟನೆ : ಉನ್ನತ ಮಟ್ಟದ ತನಿಖೆಗೆ ಆಗ್ರಹ*

ಅಕ್ಟೋಬರ್ 3, 2026

*ಅ.6 ರಂದು ಚೇರಂಬಾಣೆಯಲ್ಲಿ ಸಿಎನ್‌ಸಿ ಮಾನವ ಸರಪಳಿ ಕಾರ್ಯಕ್ರಮ*

ಅಕ್ಟೋಬರ್ 3, 2026

*ವಿರಾಜಪೇಟೆ ತಾಲ್ಲೂಕು ಮಟ್ಟದ ಪ್ರಜಾಸೇವಾ ಆಂದೋಲನ : ಎರಡು-ಮೂರು ತಿಂಗಳ ನಂತರ ಅತ್ಯಂತ ಕೆಟ್ಟ ಪರಿಣಾಮ ಎದುರಿಸಬೇಕಾಗುತ್ತದೆ : ಎಲ್-ನಿನೋ ಪರಿಣಾಮದಿಂದ ಇಡೀ ಪ್ರಪಂಚ ಹವಾಮಾನ ವೈಪರೀತ್ಯ ಎದುರಿಸುತ್ತಿದೆ : ಕೊಡಗು ಜಿಲ್ಲಾ ಉಸ್ತುವಾರಿ ಸಚಿವ ಪಿ.ಎಂ.ನರೇಂದ್ರ ಸ್ವಾಮಿ*

ಅಕ್ಟೋಬರ್ 3, 2026

*ಕ್ಲೀನ್ ಕೊಡಗು : ಮಾಜಿ ಸೈನಿಕರು, ನಿವೃತ್ತ ನೌಕರರಿಂದ ಸ್ವಚ್ಛತಾ ಅಭಿಯಾನ*

ಅಕ್ಟೋಬರ್ 3, 2026

*ಖಾಸಗಿ ಶಾಲೆಗಳ ಮಾನ್ಯತೆ ನವೀಕರಣ ಸೇರಿದಂತೆ ವಿವಿಧ ವಿಚಾರಗಳ ಕುರಿತು ಚರ್ಚೆ*

ಅಕ್ಟೋಬರ್ 3, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.