Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಮಕ್ಕಳ ಸುರಕ್ಷತೆಗಾಗಿ ವಿವಿಧೆಡೆ ಜಾಗೃತಿ ಅಭಿಯಾನ*
  • *ಡಾ. ಕೆ.ಪಿ. ಲಲಿತ ಅವರ ‘ಕೊಡಗಿನ ಜಾನಪದ ಕಥೆಗಳು’ ಕೃತಿಗೆ ಕೊಡಗಿನ ಗೌರಮ್ಮ ದತ್ತಿ ಪ್ರಶಸ್ತಿ*
  • *ಮಕ್ಕಂದೂರು-ಮುಕ್ಕೋಡ್ಲು ಗೌಡ ಸಮಾಜದಿಂದ ಕೈಲ್ ಮುಹೂರ್ತ ಸಂತೋಷಕೂಟ*
  • *ನಶಾ ಮುಕ್ತ ಭಾರತ ಜಾಗೃತಿ ಕಾರ್ಯಕ್ರಮ*
  • *ಕರ್ನಾಟಕದಲ್ಲಿ ಹಿಂಗಾರು ಮಳೆ ಕೊರತೆ ಸಾಧ್ಯತೆ: ರೈತರಿಗೆ ಎಚ್ಚರಿಕೆ*
  • *ಸುಂಟಿಕೊಪ್ಪದಲ್ಲಿ ಪ್ರಜಾ ಸೇವೆ ಅಭಿಯಾನ: 70ಕ್ಕೂ ಅಧಿಕ ಅಹವಾಲು ಸ್ವೀಕಾರ*
  • *ಎಸ್‌ಐಆರ್ ಪ್ರಕ್ರಿಯೆಯಲ್ಲಿ ಅಕ್ರಮ ಆರೋಪ : ಮಡಿಕೇರಿಯಲ್ಲಿ ಎಸ್‌ಡಿಪಿಐ ಪ್ರತಿಭಟನೆ : ಉನ್ನತ ಮಟ್ಟದ ತನಿಖೆಗೆ ಆಗ್ರಹ*
  • *ಅ.6 ರಂದು ಚೇರಂಬಾಣೆಯಲ್ಲಿ ಸಿಎನ್‌ಸಿ ಮಾನವ ಸರಪಳಿ ಕಾರ್ಯಕ್ರಮ*
  • *ವಿರಾಜಪೇಟೆ ತಾಲ್ಲೂಕು ಮಟ್ಟದ ಪ್ರಜಾಸೇವಾ ಆಂದೋಲನ : ಎರಡು-ಮೂರು ತಿಂಗಳ ನಂತರ ಅತ್ಯಂತ ಕೆಟ್ಟ ಪರಿಣಾಮ ಎದುರಿಸಬೇಕಾಗುತ್ತದೆ : ಎಲ್-ನಿನೋ ಪರಿಣಾಮದಿಂದ ಇಡೀ ಪ್ರಪಂಚ ಹವಾಮಾನ ವೈಪರೀತ್ಯ ಎದುರಿಸುತ್ತಿದೆ : ಕೊಡಗು ಜಿಲ್ಲಾ ಉಸ್ತುವಾರಿ ಸಚಿವ ಪಿ.ಎಂ.ನರೇಂದ್ರ ಸ್ವಾಮಿ*
  • *ಕ್ಲೀನ್ ಕೊಡಗು : ಮಾಜಿ ಸೈನಿಕರು, ನಿವೃತ್ತ ನೌಕರರಿಂದ ಸ್ವಚ್ಛತಾ ಅಭಿಯಾನ*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*ಮಡಿಕೇರಿ ಯುವ ಜನೋತ್ಸವ : ಎಚ್.ಐ.ವಿ/ಏಡ್ಸ್ ಅರಿವು ಆಂದೋಲನದ ಮ್ಯಾರಥಾನ್*
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

*ಮಡಿಕೇರಿ ಯುವ ಜನೋತ್ಸವ : ಎಚ್.ಐ.ವಿ/ಏಡ್ಸ್ ಅರಿವು ಆಂದೋಲನದ ಮ್ಯಾರಥಾನ್*

ಆಗಷ್ಟ್ 31, 20242 Mins ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link

ಮಡಿಕೇರಿ NEWS DESK ಆ.31 : 2024-25 ನೇ ಸಾಲಿನ ಯುವಜನೋತ್ಸವ ಎಚ್.ಐ.ವಿ/ಏಡ್ಸ್ ಅರಿವು ಆಂದೋಲನ-ಕಾರ್ಯಕ್ರಮದ ಅಂಗವಾಗಿ (ರೆಡ್ ರಿಬ್ಬನ್ ಓಟ, ಎಚ್.ಐ.ವಿ/ಏಡ್ಸ್ ನಿಯಂತ್ರಣಕ್ಕಾಗಿ ಯುವಜನತೆ) ಎಚ್.ಐ.ವಿ/ಏಡ್ಸ್ ಜಾಗೃತಿಗಾಗಿ ಮ್ಯಾರಾಥಾನ್ ಸ್ಪರ್ಧೆಯು ನಗರದ ಜನರಲ್ ತಿಮ್ಮಯ್ಯ ಜಿಲ್ಲಾ ಕ್ರೀಡಾಂಗಣದಲ್ಲಿ ಶನಿವಾರ ನಡೆಯಿತು.
ಈ ಸ್ಪರ್ಧೆಯ ಮುಖ್ಯ ಉದ್ದೇಶ ಎಚ್.ಐ.ವಿ/ಏಡ್ಸ್ ಬಗ್ಗೆ ಅರಿವು, ಸೇವಾ ಸೌಲಭ್ಯಗಳ ಮಾಹಿತಿ, ಕಳಂಕ ಮತ್ತು ತಾರತಮ್ಯವನ್ನು ತಡೆಗಟ್ಟುವುದು, ಉಚಿತ ರಾಷ್ಟ್ರೀಯ ಸಹಾಯವಾಣಿ 1097, ಹೆಚ್.ಐ.ವಿ/ಎಡ್ಸ್ (ತಡೆಗಟ್ಟುವಿಕೆ ಹಾಗೂ ನಿಯಂತ್ರಣ) ಕಾಯಿದೆ 2017 ಇತ್ಯಾದಿ ಕುರಿತು ಅರಿವು ಮೂಡಿಸುವುದು. ಅದರಂತೆ ಕೊಡಗು ಜಿಲ್ಲೆಯಲ್ಲಿ ಜಿಲ್ಲಾ ಮಟ್ಟದ ಯುವ ಜನೋತ್ಸವ- ಎಚ್.ಐ.ವಿ/ಏಡ್ಸ್ ಅರಿವು ಆಂದೋಲನ 2024-25ರ ಕಾರ್ಯಕ್ರಮದ ಅಂಗವಾಗಿ ಜಿಲ್ಲಾಡಳಿತ ಮತ್ತು ಜಿಲ್ಲಾ ಪಂಚಾಯತ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಜಿಲ್ಲಾ ಏಡ್ಸ್ ನಿಯಂತ್ರಣ ಘಟಕ, ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರ, ಜಿಲ್ಲಾ ಯುವಸಬಲೀಕರಣ ಮತ್ತು ಕ್ರೀಡಾ ಇಲಾಖೆ ಹಾಗೂ ಭಾರತೀಯ ರೆಡ್‌ಕ್ರಾಸ್ ಸಂಸ್ಥೆ ಇವರ ಸಹಯೋಗದೊಂದಿಗೆ ಮ್ಯಾರಾಥಾನ್ ಸ್ಪರ್ಧೆ(5 ಕಿ.ಮೀ) ಹಮ್ಮಿಕೊಳ್ಳಲಾಗಿತ್ತು. ಮ್ಯಾರಾಥಾನ್ ಸ್ಪರ್ಧೆಯಲ್ಲಿ ಜಿಲ್ಲೆಯ ವಿವಿಧ ಕಾಲೇಜುಗಳ ಒಟ್ಟು 83 ಕಾಲೇಜು ವಿದ್ಯಾರ್ಥಿ/ ವಿದ್ಯಾರ್ಥಿನಿಯರು ಭಾಗವಹಿಸಿದ್ದರು. ಕಾರ್ಯಕ್ರಮವನ್ನು ಹಿರಿಯ ಸಿವಿಲ್ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಶುಭ ಅವರು ಹಸಿರು ನಿಶಾನೆ ಮುಖಾಂತರ ಉದ್ಘಾಟಿಸಿದರು.
ಮುಖ್ಯ ಅತಿಥಿಗಳಾಗಿ ಜಿಲ್ಲಾ ಏಡ್ಸ್ ನಿಯಂತ್ರಣಾಧಿಕಾರಿ ಡಾ.ಆನಂದ್, ಭಾರತೀಯ ರೆಡ್‌ಕ್ರಾಸ್ ಸಂಸ್ಥೆಯ ಮುರಳಿಧರ್ ಅಂಥೋನಿ ಡಿಸೋಜ, ಮಹಾಬಲ, ಜಿಲ್ಲಾ ಯುವಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ತರಬೇತುದಾರರಾದ ಬಿಂದ್ಯಾ, ಜಿಲ್ಲಾ ಆರೋಗ್ಯ ಶಿಕ್ಷಣಾಧಿಕಾರಿ ಶಾಂತಿ, ಅಂತರಾಷ್ಟ್ರೀಯ ಬ್ಯಾಡ್ಮಿಂಟನ್ ಆಟಗಾರ್ತಿ ಜ್ಯೋತಿ, ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಜಯಪ್ಪ ಜಿಲ್ಲಾ ಏಡ್ಸ್ ನಿಯಂತ್ರಣ ಘಟಕದ ಸುನೀತ ಮುತ್ತಣ್ಣ, ಜಿಲ್ಲಾ ಮೇಲ್ವಿಚಾರಕರು, ಕಮಲ, ಉಷಾ ಮತ್ತು ಆರೋಗ್ಯ ಇಲಾಖೆಯ ಸಿಬ್ಬಂದಿಗಳು ಹಾಗೂ ವಿವಿಧ ಕಾಲೇಜಿನ ಉಪನ್ಯಾಸಕರು ಹಾಜರಿದ್ದರು. ಮ್ಯಾರಾಥಾನ್ ಸ್ಪರ್ಧೆಯು ಜನರಲ್ ತಿಮ್ಮಯ್ಯ ಕ್ರೀಡಾಂಗಣ, ಮಾನ್ಸ್ ಕಾಂಪೌಂಡ್, ಮಡಿಕೇರಿಯಿಂದ ಪ್ರಾರಂಭವಾಗಿ, ನಗರದ ಪ್ರಮುಖ ಬೀದಿಗಳಾದ ಫೀಲ್ಡ್ ಮಾರ್ಷಲ್ ಕಾರ್ಯಪ್ಪ ಸರ್ಕಲ್, ಜನರಲ್ ತಿಮ್ಮಯ್ಯ ಸರ್ಕಲ್ (ಜಿ.ಟಿ ಸರ್ಕಲ್) ಮುಖಾಂತರ ಹಾದು ಜನರಲ್ ತಿಮ್ಮಯ್ಯ ಕ್ರೀಡಾಂಗಣವನ್ನು ತಲುಪಿತು. ಮ್ಯಾರಾಥಾನ್ ಸಂಚರಿಸುವ ಮಾರ್ಗದಲ್ಲಿ, ಆಟೋ ಪ್ರಚಾರದ ಮುಖಾಂತರ ಎಚ್.ಐ.ವಿ/ಏಡ್ಸ್ ಬಗ್ಗೆ ಅರಿವು ಮೂಡಿಸಲಾಯಿತು. ವಿವಿಧ ಕಾಲೇಜುಗಳಿಂದ ಒಟ್ಟು 83 ವಿದ್ಯಾರ್ಥಿಗಳು ಮ್ಯಾರಾಥಾನ್‌ನಲ್ಲಿ ಭಾಗವಹಿಸಿ ವಿಜೇತರಾದವರ ವಿವರ ಇಂತಿದೆ. ಬಾಲಕರ ವಿಭಾಗದಲ್ಲಿ: ನಾಪೋಕ್ಲು ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಎಂ.ಎಸ್.ಗೌತಮ್(ಪ್ರಥಮ), ವಿರಾಜಪೇಟೆ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಎಂ.ಎಚ್.ಪ್ರತಾಪ್ (ದ್ವಿತೀಯ), ಸೋಮವಾರಪೇಟೆ ಸೆಂಟ್ ಜೋಸೆಪ್‌ನ ದೀಪಕ್ ಎಸ್.ಯು(ತೃತೀಯ) ಹಾಗೂ ವಿರಾಜಪೇಟೆ ಕಾವೇರಿ ಕಾಲೇಜಿನ ತಕ್ಷಕ್ ಬಿದ್ದಪ್ಪ, ಗೋಣಿಕೊಪ್ಪ ಕಾವೇರಿ ಕಾಲೇಜಿನ ಗೌತಮ್ ಪಿ.ಸಿ., ವಿರಾಜಪೇಟೆ ಕಾವೇರಿ ಕಾಲೇಜಿನ ರೋಶನ್ ಉತ್ತಪ್ಪ ಮತ್ತು ಮಡಿಕೇರಿ ಎಫ್‌ಎಂಸಿ ಕಾಲೇಜಿನ ಪೃಥ್ವೀಶ್ ಎಂ.ಆರ್ ಅವರು ಸಮಾದಾನಕರ ಬಹುಮಾನ ಪಡೆದುಕೊಂಡಿದ್ದಾರೆ.
ಬಾಲಕಿಯರ ವಿಭಾಗದಲ್ಲಿ: ಪೊನ್ನಂಪೇಟೆ ಕೂರ್ಗ್ ಇನ್ಸ್ಟ್ಯೂಟ್ ಆಫ್ ಟೆಕ್ನಾಲಜಿನ ಚೋಂದಮ್ಮ ಕೆ.ಟಿ.(ಪ್ರಥಮ), ಮಡಿಕೇರಿ ಎಫ್‌ಎಂಸಿ ಕಾಲೇಜಿನ ನಿಲಿಶಾ ಜೋಜೋ(ದ್ವಿತೀಯ), ಸೋಮವಾರಪೇಟೆ ಸಂತ ಜೋಸೆಪ್ ಶಾಲೆಯ ಐಶ್ವರ್ಯ ಕೆ.ವೈ(ತೃತೀಯ) ಹಾಗೂ ವಿರಾಜಪೇಟೆ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಮೌನ ಎಚ್.ಎಸ್., ಮಡಿಕೇರಿ ಎಫ್‌ಎಂಸಿ ಕಾಲೇಜಿನ ಭೂಮಿಕಾ ಕೆ.ಆರ್., ವಿರಾಜಪೇಟೆ ಕಾವೇರಿ ಕಾಲೇಜಿನ ಕಾವ್ಯ ಎನ್.ಆರ್. ಮತ್ತು ಮಡಿಕೇರಿ ಪ್ರಥಮ ದರ್ಜೆ ಕಾಲೇಜಿನ ಮೇಘನಾ ಬಿ.ಎಂ. ಅವರು ಸಮಾದಾನಕರ ಬಹುಮಾನ ಪಡೆದುಕೊಂಡಿದ್ದಾರೆ. ಜಿಲ್ಲಾ ಮಟ್ಟದಲ್ಲಿ ಪ್ರಥಮ ಬಹುಮಾನ ಪಡೆದ ವಿದ್ಯಾರ್ಥಿಗಳಾದ, ಗೌತಮ್. ಎಸ್ ಮತ್ತು ಚೋಂದಮ್ಮ ಕೆ.ಟಿ ಇವರು ಬೆಂಗಳೂರಿನಲ್ಲಿ ನಡೆಯುವ ರಾಜ್ಯ ಮಟ್ಟದ ಮ್ಯಾರಥಾನ್ ಸ್ಪರ್ಧೆಯಲ್ಲಿ ಭಾಗವಹಿಸಲಿದ್ದಾರೆ. ಮ್ಯಾರಥಾನ್ ಸ್ಪರ್ಧೆಯಲ್ಲಿ ವಿಜೇತರು ಹಾಗೂ ಭಾಗವಹಿಸಿದ ಎಲ್ಲಾ ವಿದ್ಯಾರ್ಥಿಗಳಿಗೆ ಪ್ರಮಾಣ ಪತ್ರ ವಿತರಿಸಲಾಯಿತು.

Follow us Follow us
Share. WhatsApp Facebook Twitter Email Telegram Copy Link

Related Posts

*ಮಕ್ಕಳ ಸುರಕ್ಷತೆಗಾಗಿ ವಿವಿಧೆಡೆ ಜಾಗೃತಿ ಅಭಿಯಾನ*

ಅಕ್ಟೋಬರ್ 3, 2026

*ಡಾ. ಕೆ.ಪಿ. ಲಲಿತ ಅವರ ‘ಕೊಡಗಿನ ಜಾನಪದ ಕಥೆಗಳು’ ಕೃತಿಗೆ ಕೊಡಗಿನ ಗೌರಮ್ಮ ದತ್ತಿ ಪ್ರಶಸ್ತಿ*

ಅಕ್ಟೋಬರ್ 3, 2026

*ಮಕ್ಕಂದೂರು-ಮುಕ್ಕೋಡ್ಲು ಗೌಡ ಸಮಾಜದಿಂದ ಕೈಲ್ ಮುಹೂರ್ತ ಸಂತೋಷಕೂಟ*

ಅಕ್ಟೋಬರ್ 3, 2026

*ಡಾ. ಕೆ.ಪಿ. ಲಲಿತ ಅವರ ‘ಕೊಡಗಿನ ಜಾನಪದ ಕಥೆಗಳು’ ಕೃತಿಗೆ ಕೊಡಗಿನ ಗೌರಮ್ಮ ದತ್ತಿ ಪ್ರಶಸ್ತಿ*

ಅಕ್ಟೋಬರ್ 3, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಮಡಿಕೇರಿ, NEWS DESK ಅ.3: ಕೊಡಗು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಪ್ರತಿಷ್ಠಿತ ದತ್ತಿನಿಧಿ ಪ್ರಶಸ್ತಿಗಳಲ್ಲಿ ಒಂದಾದ ಕೊಡಗಿನ ಗೌರಮ್ಮ…

*ಮಕ್ಕಂದೂರು-ಮುಕ್ಕೋಡ್ಲು ಗೌಡ ಸಮಾಜದಿಂದ ಕೈಲ್ ಮುಹೂರ್ತ ಸಂತೋಷಕೂಟ*

ಅಕ್ಟೋಬರ್ 3, 2026

*ನಶಾ ಮುಕ್ತ ಭಾರತ ಜಾಗೃತಿ ಕಾರ್ಯಕ್ರಮ*

ಅಕ್ಟೋಬರ್ 3, 2026

*ಕರ್ನಾಟಕದಲ್ಲಿ ಹಿಂಗಾರು ಮಳೆ ಕೊರತೆ ಸಾಧ್ಯತೆ: ರೈತರಿಗೆ ಎಚ್ಚರಿಕೆ*

ಅಕ್ಟೋಬರ್ 3, 2026

*ಸುಂಟಿಕೊಪ್ಪದಲ್ಲಿ ಪ್ರಜಾ ಸೇವೆ ಅಭಿಯಾನ: 70ಕ್ಕೂ ಅಧಿಕ ಅಹವಾಲು ಸ್ವೀಕಾರ*

ಅಕ್ಟೋಬರ್ 3, 2026

*ಎಸ್‌ಐಆರ್ ಪ್ರಕ್ರಿಯೆಯಲ್ಲಿ ಅಕ್ರಮ ಆರೋಪ : ಮಡಿಕೇರಿಯಲ್ಲಿ ಎಸ್‌ಡಿಪಿಐ ಪ್ರತಿಭಟನೆ : ಉನ್ನತ ಮಟ್ಟದ ತನಿಖೆಗೆ ಆಗ್ರಹ*

ಅಕ್ಟೋಬರ್ 3, 2026

*ಅ.6 ರಂದು ಚೇರಂಬಾಣೆಯಲ್ಲಿ ಸಿಎನ್‌ಸಿ ಮಾನವ ಸರಪಳಿ ಕಾರ್ಯಕ್ರಮ*

ಅಕ್ಟೋಬರ್ 3, 2026

*ವಿರಾಜಪೇಟೆ ತಾಲ್ಲೂಕು ಮಟ್ಟದ ಪ್ರಜಾಸೇವಾ ಆಂದೋಲನ : ಎರಡು-ಮೂರು ತಿಂಗಳ ನಂತರ ಅತ್ಯಂತ ಕೆಟ್ಟ ಪರಿಣಾಮ ಎದುರಿಸಬೇಕಾಗುತ್ತದೆ : ಎಲ್-ನಿನೋ ಪರಿಣಾಮದಿಂದ ಇಡೀ ಪ್ರಪಂಚ ಹವಾಮಾನ ವೈಪರೀತ್ಯ ಎದುರಿಸುತ್ತಿದೆ : ಕೊಡಗು ಜಿಲ್ಲಾ ಉಸ್ತುವಾರಿ ಸಚಿವ ಪಿ.ಎಂ.ನರೇಂದ್ರ ಸ್ವಾಮಿ*

ಅಕ್ಟೋಬರ್ 3, 2026

*ಕ್ಲೀನ್ ಕೊಡಗು : ಮಾಜಿ ಸೈನಿಕರು, ನಿವೃತ್ತ ನೌಕರರಿಂದ ಸ್ವಚ್ಛತಾ ಅಭಿಯಾನ*

ಅಕ್ಟೋಬರ್ 3, 2026

*ಖಾಸಗಿ ಶಾಲೆಗಳ ಮಾನ್ಯತೆ ನವೀಕರಣ ಸೇರಿದಂತೆ ವಿವಿಧ ವಿಚಾರಗಳ ಕುರಿತು ಚರ್ಚೆ*

ಅಕ್ಟೋಬರ್ 3, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.