
ಮಡಿಕೇರಿ ಸೆ.2 NEWS DESK : ಅಲ್ಪಸಂಖ್ಯಾತರ ನಿರ್ದೇಶನಾಲಯ, ಬೆಂಗಳೂರು ವತಿಯಿಂದ 2024-25 ನೇ ಸಾಲಿನಲ್ಲಿ ಅಲ್ಪಸಂಖ್ಯಾತ ಮುಸ್ಲಿಂ, ಕ್ರಿಶ್ಚಿಯನ್, ಸಿಖ್, ಪಾರ್ಸಿ, ಜೈನ್, ಬೌದ್ಧ ಸಮುದಾಯದ ಕಾನೂನು ಪದವೀಧರರಿಗೆ ನುರಿತ ವಕೀಲರಿಂದ ತರಬೇತಿ ನೀಡಲು ಮಾಸಿಕ ರೂ.5 ಸಾವಿರಗಳ ತರಬೇತಿ ಭತ್ಯೆಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಸಲು ಸೆಪ್ಟೆಂಬರ್, 15 ರವರೆಗೆ ಅವಧಿ ವಿಸ್ತರಿಸಲಾಗಿದೆ. ಹೆಚ್ಚಿನ ಮಾಹಿತಿ ಪಡೆಯ ಬಯಸುವ ಅಭ್ಯರ್ಥಿಗಳು ಕಚೇರಿ ದೂರವಾಣಿ ಸಂಖ್ಯೆ: 08272-225528/220214 ಹಾಗೂ ಜಿಲ್ಲಾ ಅಲ್ಪಸಂಖ್ಯಾತರ ಇಲಾಖಾ ಕಚೇರಿಯನ್ನು ಹಾಗೂ ಇಲಾಖಾ ವೆಬ್‍ಸೈಟ್ www.dom.karnataka.gov.in ನಿಂದ ಅಲ್ಪಸಂಖ್ಯಾತರ ಎಲ್ಲಾ ಅರ್ಹ ವಿದ್ಯಾರ್ಥಿಗಳು ವಿದ್ಯಾರ್ಥಿ ವೇತನ ಮತ್ತು ಇತರೆ ಸೌಲಭ್ಯಗಳ ಮಾಹಿತಿಯನ್ನು ಪಡೆದು ಸದುಪಯೋಗ ಪಡಿಸಿಕೊಳ್ಳುವಂತೆ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಜಿಲ್ಲಾ ಅಧಿಕಾರಿ ಆರ್.ಕೃಷ್ಣಮೂರ್ತಿ ತಿಳಿಸಿದ್ದಾರೆ.








