Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಬಾಳೆಲೆ-ನಲ್ಲೂರು : ಮೇ 5 ರಂದು ವಿವಿಧೆಡೆ ವಿದ್ಯುತ್ ವ್ಯತ್ಯಯ*
  • *ಉಳ್ಳಿಯಡ ಎಂ. ಪೂವಯ್ಯ ಅವರಿಗೆ ಸನ್ಮಾನ*
  • *ನಾಪೋಕ್ಲು : ಮಹಿಳೆಯರು ಸ್ವಾವಲಂಬಿಗಳಾಗಿ : ವನಜಾಕ್ಷಿ ರೇಣುಕೇಶ್*
  • *ವಿರಾಜಪೇಟೆಯಲ್ಲಿ ಸಂಭ್ರಮದಿಂದ ನಡೆದ ವಿಶು ಕಣಿ ಪೂಜೆ ಹಾಗೂ ಗ್ರಾಮೀಣ ಕ್ರೀಡಾಕೂಟ*
  • *ಅತಿಥಿ ಉಪನ್ಯಾಸಕರ ಹುದ್ದೆಗೆ ಅರ್ಜಿ ಆಹ್ವಾನ* 
  • *ಕೊಡಗು : ವಿಕೇಂದ್ರೀಕರಣ ಯೋಜನೆ ಮತ್ತು ಅಭಿವೃದ್ಧಿ ಸಮಿತಿ ಸಭೆ : ಸ್ಥಳೀಯ ಸಂಸ್ಥೆಗಳ ಬಲವರ್ಧನೆಗೆ ಶ್ರಮಿಸಿ, ಜೊತೆಗೆ ಅಧಿಕಾರ ನಡೆಸಿ : ಗಣ್ಯರ ಅಭಿಮತ*
  • *ಗೋಣಿಕೊಪ್ಪ : ಸೀನಿಯರ್ ಚೇಂಬರ್ ಇಂಟರ್ನ್ಯಾಷನಲ್ ಅಧ್ಯಕ್ಷರಾಗಿ ಡಾ.ಮಂಡೆಪಂಡ ಆಶಿಕ್ ಚಂಗಪ್ಪ ಆಯ್ಕೆ* 
  • *ಕಾವೇರಿ ನದಿಯಲ್ಲಿ ಮುಳುಗಿ ವ್ಯಕ್ತಿ ಸಾವು*
  • *ಗೋಣಿಕೊಪ್ಪಲುವಿನಲ್ಲಿ ನಗರ ಬಿಜೆಪಿ, ಶಕ್ತಿ ಕೇಂದ್ರದಿಂದ ಸಂಭ್ರಮಾಚರಣೆ*
  • *ಹಣ ಮರಳಿಸಿ ಪ್ರಾಮಾಣಿಕತೆ ಮೆರೆದ ಷಂಶುದ್ದೀನ್*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*ಕುವೇಂಡ ವೈ.ಹಂಝತುಲ್ಲಾ ಅವರಿಗೆ ಬ್ಯಾರಿ ಸಾಹಿತ್ಯ ಅಕಾಡೆಮಿಯ ಪ್ರಶಸ್ತಿ ಪ್ರದಾನ*
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

*ಕುವೇಂಡ ವೈ.ಹಂಝತುಲ್ಲಾ ಅವರಿಗೆ ಬ್ಯಾರಿ ಸಾಹಿತ್ಯ ಅಕಾಡೆಮಿಯ ಪ್ರಶಸ್ತಿ ಪ್ರದಾನ*

ಸೆಪ್ಟೆಂಬರ್ 8, 20242 Mins ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link

ವಿರಾಜಪೇಟೆ NEWS DESK ಸೆ.8 : ಕೊಡವ ಮುಸ್ಲಿಂ ಅಸೋಸಿಯೇಷನ್ (ಕೆ.ಎಂ.ಎ.) ನ ಸ್ಥಾಪಕ ಅಧ್ಯಕ್ಷರೂ ಆಗಿರುವ ಹಿರಿಯ ಪತ್ರಕರ್ತ ಮತ್ತು ಕಿತ್ತಳೆ ನಾಡು ಕನ್ನಡ ವಾರಪತ್ರಿಕೆಯ ಪ್ರಧಾನ ಸಂಪಾದಕರಾದ ಕುವೇಂಡ ವೈ.ಹಂಝತುಲ್ಲಾ ಅವರಿಗೆ  ಕರ್ನಾಟಕ ಬ್ಯಾರಿ ಸಾಹಿತ್ಯ ಅಕಾಡೆಮಿಯ ಗೌರವ ಪ್ರಶಸ್ತಿಯನ್ನು ಪ್ರದಾನ ಮಾಡಲಾಯಿತು. ಕರ್ನಾಟಕ ಬ್ಯಾರಿ ಸಾಹಿತ್ಯ ಅಕಾಡೆಮಿಯ ವತಿಯಿಂದ ಮಂಗಳೂರಿನ ಕುದ್ಮಲ್ ರಂಗರಾವ್ ಪುರಭವನದಲ್ಲಿ ಅಕಾಡೆಮಿ ಅಧ್ಯಕ್ಷರಾದ ಯು. ಎಚ್. ಉಮರ್ ಅವರ ಅಧ್ಯಕ್ಷತೆಯಲ್ಲಿ ನಡೆದ ಸಮಾರಂಭದಲ್ಲಿ ಕುವೇಂಡ  ವೈ. ಹಂಝತುಲ್ಲಾ ಅವರು, ಕಡಲ ತೀರದ ಶಿಕ್ಷಣ ಪ್ರೇಮಿ, ಅಕ್ಷರ ಸಂತ ಪದ್ಮಶ್ರೀ ಹರೇಕಳ ಹಾಜಬ್ಬ ಅವರಿಂದ ರೂ.50000/- ಸಾವಿರ ನಗದು ಬಹುಮಾನವನ್ನು ಒಳಗೊಂಡ ಈ ಗೌರವ ಪ್ರಶಸ್ತಿಯನ್ನು ಸ್ವೀಕರಿಸಿದರು. ಕಾರ್ಯಕ್ರಮದಲ್ಲಿ ಮಂಗಳೂರು ವಿಶ್ವವಿದ್ಯಾಲಯದ ಬ್ಯಾರಿ ಅಧ್ಯಯನ ಪೀಠದ ಸಂಯೋಜಕರಾದ ಡಾ. ಅಬೂಬಕ್ಕರ್ ಸಿದ್ದೀಕ್, ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿ ಅಧ್ಯಕ್ಷರಾದ ತಾರಾನಾಥ್ ಗಟ್ಟಿ ಕಾಪಿಕಾಡ್, ಕರ್ನಾಟಕ ಕೊಂಕಣಿ ಸಾಹಿತ್ಯ ಅಕಾಡೆಮಿ ಅಧ್ಯಕ್ಷರಾದ ಸ್ಟ್ಯಾನಿ ಜೋಕಿಂ ಆಳ್ವಾರಿಸ್, ಕರ್ನಾಟಕ ಯಕ್ಷಗಾನ ಅಕಾಡೆಮಿ ಅಧ್ಯಕ್ಷರಾದ ಡಾ. ತಲ್ಲೂರು ಶಿವರಾಮ ಶೆಟ್ಟಿ, ಬಂಟ್ವಾಳ ಮೂಡದ ಸರ್ಕಾರಿ ಪದವಿ ಪೂರ್ವ ಕಾಲೇಜಿನ ಉಪನ್ಯಾಸಕರಾದ ಅಬ್ದುಲ್ ರಜಾಕ್ ಅನಂತಾಡಿ ಸೇರಿದಂತೆ ಕರ್ನಾಟಕ ಬ್ಯಾರಿ ಸಾಹಿತ್ಯ ಅಕಾಡೆಮಿಯ ಮಾಜಿ ಅಧ್ಯಕ್ಷರು, ಬ್ಯಾರಿ ಸಮುದಾಯದ ಸಾಮಾಜಿಕ ಶೈಕ್ಷಣಿಕ ಹಾಗೂ ಸಾಹಿತ್ಯ ಕ್ಷೇತ್ರದ ಪ್ರಮುಖರು ಭಾಗವಹಿಸಿದ್ದರು. ಸಮಾರಂಭದ ನಂತರ ಕೊಡಗಿನಿಂದ ತೆರಳಿದ್ದ ಕೊಡವ ಮುಸ್ಲಿಂ ಅಸೋಸಿಯೇಷನ್ (ಕೆ.ಎಂ.ಎ.) ಅಧ್ಯಕ್ಷರಾದ ದುದ್ದಿಯಂಡ ಸೂಫಿ ಹಾಜಿ ನೇತೃತ್ವದ ಪ್ರಮುಖರ ನಿಯೋಗ ಗೌರವ ಪ್ರಶಸ್ತಿ ಪುರಸ್ಕೃತರಾದ ಕುವೇಂಡ  ವೈ. ಹಂಝತುಲ್ಲಾ ಅವರಿಗೆ ಶಾಲು ಹೊದಿಸಿ, ಹಾರಾರ್ಪಣೆ ಮಾಡಿ ಅಭಿನಂದಿಸಿತು. ಈ ಸಂದರ್ಭದಲ್ಲಿ ಮಾತನಾಡಿದ ಸೂಫಿ ಹಾಜಿಯವರು, ಕುವೇಂಡ  ವೈ. ಹಂಝತುಲ್ಲಾ ಅವರು ತಮ್ಮ ದೂರದೃಷ್ಟಿತ್ವದಲ್ಲಿ ಕೊಡವ ಮುಸ್ಲಿಂ ಅಸೋಸಿಯೇಷನ್ ನನ್ನು ಕಳೆದ 46 ವರ್ಷಗಳ ಹಿಂದೆಯೇ ಸ್ಥಾಪನೆ ಮಾಡಿ ಸಮುದಾಯದ ಸಾಮಾಜಿಕ ಬೆಳವಣಿಗೆಗೆ ಯಲ್ಲಿ ಪ್ರಮುಖ ಪಾತ್ರ ವಹಿಸಿದ್ದಾರೆ. ಇವರಿಗೆ ಬ್ಯಾರಿ ಸಾಹಿತ್ಯ ಅಕಾಡೆಮಿಯ ಗೌರವ ಪ್ರಶಸ್ತಿ ದೊರೆತಿರುವುದು ಕೇವಲ ಸಮುದಾಯಕ್ಕೆ ಮಾತ್ರ ಅಲ್ಲ ಇಡೀ ಕೊಡಗು ಜಿಲ್ಲೆಗೆ ಅಭಿಮಾನ ತಂದಿದೆ ಎಂದು ಹೇಳಿದರು. ನಿಯೋಗದಲ್ಲಿ ಕೆ.ಎಂ.ಎ. ಪ್ರಧಾನ ಕಾರ್ಯದರ್ಶಿ ಈತಲತಂಡ ರಫೀಕ್ ತೂಚಮಕೇರಿ, ಹಿರಿಯ ನಿರ್ದೇಶಕರಾದ ಪುದಿಯತಂಡ ಹೆಚ್. ಸಂಸುದ್ದೀನ್, ಆಡಳಿತ ಮಂಡಳಿ ಪದಾಧಿಕಾರಿಗಳಾದ ಪೊಯಕೆರ ಎಸ್. ಮೊಹಮ್ಮದ್ ರಫೀಕ್, ಪುದಿಯಾಣೆರ ಎಂ. ಹನೀಫ್, ದುದ್ದಿಯಂಡ ಹೆಚ್. ಮೊಯ್ದು ಹಾಜಿ, ಮಂದಮಾಡ ಎ. ಮುನೀರ್, ದುದ್ದಿಯಂಡ ಮಸೂಕ್ ಸೂಫಿ ಮೊದಲಾದವರಿದ್ದರು. 1988ರಲ್ಲಿ ಪತ್ರಿಕಾ ಕ್ಷೇತ್ರಕ್ಕೆ ಪದಾರ್ಪಣೆ ಮಾಡಿದ ಕುವೇಂಡ ವೈ. ಹಂಝತುಲ್ಲಾ ಅವರು, ಮೊದಲಿಗೆ ಬೆಂಗಳೂರಿನಲ್ಲಿ ಬ್ಯಾರಿ ಟೈಮ್ಸ್ ಎಂಬ ಬ್ಯಾರಿ ಬಾಷಾ ಪತ್ರಿಕೆಯನ್ನು ಆರಂಭಿಸಿ ಅದರ ಸ್ಥಾಪಕ ಸಂಪಾದಕರಾಗಿ ಆರು ವರ್ಷಗಳ ಕಾಲ ವೃತ್ತಿ ನಿರ್ವಹಿಸಿದ್ದರು. ಬಳಿಕ ಬೆಂಗಳೂರಿನಿಂದಲೇ ಕಿತ್ತಳೆ ನಾಡು ಎಂಬ ಕನ್ನಡ ವಾರಪತ್ರಿಕೆಯನ್ನು ಆರಂಭಿಸಿ ಇಂದಿನವರೆಗೂ ಅದರ ಸಂಪಾದಕರಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಜೊತೆಗೆ ಬ್ಯಾರಿ ಮತ್ತು ಕೊಡವ ಮುಸ್ಲಿಂ ಅಸೋಸಿಯೇಷನ್ ನಲ್ಲಿ ಕಳೆದ ನಾಲ್ಕು ದಶಕಗಳಿಂದ ಸೇವೆ ಸಲ್ಲಿಸುತ್ತಿದ್ದಾರೆ. ಸರಕಾರದಿಂದ ಮಾನ್ಯತೆ ಪಡೆದ ಹಿರಿಯ ಪತ್ರಕರ್ತರಾಗಿರುವ ಹಂಝತುಲ್ಲಾ, ಬ್ಯಾರಿ ಮತ್ತು ಕನ್ನಡ ಭಾಷೆಯಲ್ಲಿ ವಿವಿಧ ಕೃತಿಗಳನ್ನು ಹೊರ ತರುವಲ್ಲಿ ಪ್ರಮುಖ ಪಾತ್ರ ವಹಿಸಿದ್ದಾರೆ. ಮೂಲತಃ ವಿರಾಜಪೇಟೆ ಸಮೀಪದ ಕೊಟ್ಟೋಳಿ (ಗುಂಡಿಕೆರೆ) ನಿವಾಸಿಯಾಗಿರುವ ಕೆ. ವೈ. ಹಂಝತುಲ್ಲಾ ಅವರು ದಿ. ಕುವೇಂಡ ಯೂಸುಫ್ ಹಾಜಿ ಮತ್ತು ದಿ.ನಫೀಸಾ ದಂಪತಿಯ ಪುತ್ರರಾಗಿದ್ದಾರೆ.

Follow us Follow us
Share. WhatsApp Facebook Twitter Email Telegram Copy Link

Website design development company services in Mangalore

Forex Trading Teacher in India

Related Posts

*ಬಾಳೆಲೆ-ನಲ್ಲೂರು : ಮೇ 5 ರಂದು ವಿವಿಧೆಡೆ ವಿದ್ಯುತ್ ವ್ಯತ್ಯಯ*

ಮೇ 4, 2026

*ಉಳ್ಳಿಯಡ ಎಂ. ಪೂವಯ್ಯ ಅವರಿಗೆ ಸನ್ಮಾನ*

ಮೇ 4, 2026

*ನಾಪೋಕ್ಲು : ಮಹಿಳೆಯರು ಸ್ವಾವಲಂಬಿಗಳಾಗಿ : ವನಜಾಕ್ಷಿ ರೇಣುಕೇಶ್*

ಮೇ 4, 2026

*ಉಳ್ಳಿಯಡ ಎಂ. ಪೂವಯ್ಯ ಅವರಿಗೆ ಸನ್ಮಾನ*

ಮೇ 4, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಮಡಿಕೇರಿ ಮೇ 4 NEWS DESK : ಕೊಡಗು ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ವತಿಯಿಂದ ಮನೆಯಂಗಳದಲ್ಲಿ ಮನದುಂಬಿ ಕಾರ್ಯಕ್ರಮದಡಿ…

*ನಾಪೋಕ್ಲು : ಮಹಿಳೆಯರು ಸ್ವಾವಲಂಬಿಗಳಾಗಿ : ವನಜಾಕ್ಷಿ ರೇಣುಕೇಶ್*

ಮೇ 4, 2026

*ವಿರಾಜಪೇಟೆಯಲ್ಲಿ ಸಂಭ್ರಮದಿಂದ ನಡೆದ ವಿಶು ಕಣಿ ಪೂಜೆ ಹಾಗೂ ಗ್ರಾಮೀಣ ಕ್ರೀಡಾಕೂಟ*

ಮೇ 4, 2026

*ಅತಿಥಿ ಉಪನ್ಯಾಸಕರ ಹುದ್ದೆಗೆ ಅರ್ಜಿ ಆಹ್ವಾನ* 

ಮೇ 4, 2026

*ಕೊಡಗು : ವಿಕೇಂದ್ರೀಕರಣ ಯೋಜನೆ ಮತ್ತು ಅಭಿವೃದ್ಧಿ ಸಮಿತಿ ಸಭೆ : ಸ್ಥಳೀಯ ಸಂಸ್ಥೆಗಳ ಬಲವರ್ಧನೆಗೆ ಶ್ರಮಿಸಿ, ಜೊತೆಗೆ ಅಧಿಕಾರ ನಡೆಸಿ : ಗಣ್ಯರ ಅಭಿಮತ*

ಮೇ 4, 2026

*ಗೋಣಿಕೊಪ್ಪ : ಸೀನಿಯರ್ ಚೇಂಬರ್ ಇಂಟರ್ನ್ಯಾಷನಲ್ ಅಧ್ಯಕ್ಷರಾಗಿ ಡಾ.ಮಂಡೆಪಂಡ ಆಶಿಕ್ ಚಂಗಪ್ಪ ಆಯ್ಕೆ* 

ಮೇ 4, 2026

*ಕಾವೇರಿ ನದಿಯಲ್ಲಿ ಮುಳುಗಿ ವ್ಯಕ್ತಿ ಸಾವು*

ಮೇ 4, 2026

*ಗೋಣಿಕೊಪ್ಪಲುವಿನಲ್ಲಿ ನಗರ ಬಿಜೆಪಿ, ಶಕ್ತಿ ಕೇಂದ್ರದಿಂದ ಸಂಭ್ರಮಾಚರಣೆ*

ಮೇ 4, 2026

*ಹಣ ಮರಳಿಸಿ ಪ್ರಾಮಾಣಿಕತೆ ಮೆರೆದ ಷಂಶುದ್ದೀನ್*

ಮೇ 4, 2026

*ಗೋಣಿಕೊಪ್ಪ ನಗರ ಕಾಂಗ್ರೆಸ್‍ನಿಂದ ಸಂಭ್ರಮಾಚರಣೆ*

ಮೇ 4, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.

Ad Blocker Enabled!
Ad Blocker Enabled!
Our website is made possible by displaying online advertisements to our visitors. Please support us by disabling your Ad Blocker.