Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada
Home»ಇತ್ತೀಚಿನ ಸುದ್ದಿಗಳು»ಹಿರಿಯ ಪತ್ರಕರ್ತ ವಸಂತ ನಾಡಿಗೇರ ನಿಧನ : ಗಣ್ಯರ ಸಂತಾಪ
ಇತ್ತೀಚಿನ ಸುದ್ದಿಗಳು ಕರ್ನಾಟಕ

ಹಿರಿಯ ಪತ್ರಕರ್ತ ವಸಂತ ನಾಡಿಗೇರ ನಿಧನ : ಗಣ್ಯರ ಸಂತಾಪ

ಸೆಪ್ಟೆಂಬರ್ 9, 20241 Min ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement

ಬೆಂಗಳೂರು ಸೆ.9 NEWS DESK  : ಕನ್ನಡದ ಹಿರಿಯ ಪತ್ರಕರ್ತ ಹಾಗೂ ಸಂಯುಕ್ತ ಕರ್ನಾಟಕ ಪತ್ರಿಕೆ ಸಂಪಾದಕ ವಸಂತ ನಾಡಿಗೇರ (59)  ಹೃದಯಾಘಾತದಿಂದ ನಿಧನರಾಗಿದ್ದಾರೆ. ಮೃತರು ಪತ್ನಿ, ಪುತ್ರ, ಪುತ್ರಿ ಸೇರಿದಂತೆ ಅಪಾರ ಬಂಧುಗಳನ್ನು ಅಗಲಿದ್ದಾರೆ. ಮೂಲತಃ ಹಾವೇರಿ ಜಿಲ್ಲೆ ರಾಣಿಬೆನ್ನೂರಿನವರಾದ ನಾಡಿಗೇರ್‌ ಅವರು ಸಂಯುಕ್ತ ಕರ್ನಾಟಕ, ವಿಜಯ ಕರ್ನಾಟಕ, ವಿಶ್ವವಾಣಿ ಪತ್ರಿಕೆಗಳಲ್ಲಿ ಸೇವೆ ಸಲ್ಲಿಸಿದ್ದರು.  ವಿಜಯ ಕರ್ನಾಟಕದಲ್ಲಿ ಅವರು ಶೀರ್ಷಿಕೆಗಳನ್ನು ಕೊಡುವುದರಲ್ಲಿ ಹಲವು ವಿನೂತನ ಪ್ರಯೋಗಗಳನ್ನು ಕೈಗೊಂಡು, ಕನ್ನಡ ಪತ್ರಿಕೋದ್ಯಮಕ್ಕೇ ಹೊಸ ಆಯಾಮ ನೀಡಿದ್ದರು. ಹಿಂದಿ ಚಿತ್ರರಂಗದ ಖ್ಯಾತ ಗಾಯಕಿ ಲತಾ ಮಂಗೇಶಕರ್ ಜೀವನ ಚರಿತ್ರೆಯನ್ನು ಕನ್ನಡದಲ್ಲಿ ಬರೆದಿದ್ದಾರೆ. ಸುಮಾರು ಮೂವತ್ತು ವರ್ಷಗಳಿಂದ ಕನ್ನಡ ಪತ್ರಿಕೋದ್ಯಮದಲ್ಲಿ ಕೆಲಸ ಮಾಡುತ್ತಿದ್ದ ವಸಂತ ನಾಡಿಗೇರ, ತಮ್ಮ ವಿಶಿಷ್ಟ ಮಾತಿನ ಶೈಲಿ ಹಾಗೂ ಪನ್‌ ಹೆಡ್ಡಿಂಗ್‌ಗಳ ಮೂಲಕವೇ ಕನ್ನಡ ಪತ್ರಿಕೋದ್ಯಮದಲ್ಲಿ ಖ್ಯಾತಿ ಪಡೆದಿದ್ದರು. ಸರಳ, ಸಜ್ಜನಿಕೆಯ ವಸಂತ ನಾಡಿಗೇರ ಅವರು ಕನ್ನಡ ಪ್ರಭ, ವಿಜಯಕರ್ನಾಟಕ. ವಿಶ್ವವಾಣಿ ನಂತರ ಎರಡು ವರ್ಷಗಳಿಂದ ಸಂಯುಕ್ತ ಕರ್ನಾಟಕ ಸಂಪಾದಕರಾಗಿ ಸೇವೆ ಸಲ್ಲಿಸುತ್ತಿದ್ದರು.

ಗಣ್ಯರ ಸಂತಾಪ : ಹಿರಿಯ ಪತ್ರಕರ್ತ ವಸಂತ ನಾಡಿಗೇರ ಅವರ ನಿಧನಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು, ಹಿರಿಯ ಪತ್ರಕರ್ತರಾದ ವಸಂತ ನಾಡಿಗೇರ ಅವರ ನಿಧನವಾರ್ತೆ ನೋವುಂಟು ಮಾಡಿದೆ. ವಿಜಯ ಕರ್ನಾಟಕದಲ್ಲಿ ಹಿರಿಯ ಸಹಾಯಕ ಸಂಪಾದಕರಾಗಿ, ಸಂಯುಕ್ತ ಕರ್ನಾಟಕದಲ್ಲಿ ಸಂಪಾದಕರಾಗಿ, ಹೀಗೆ ಹಲವು ದಶಕಗಳಿಂದ ಪತ್ರಿಕಾರಂಗದಲ್ಲಿ ಸೇವೆ ಸಲ್ಲಿಸುತ್ತಿದ್ದ ವಸಂತ ನಾಡಿಗೇರ ಅವರ ಅಗಲಿಕೆಯಿಂದ ಪತ್ರಿಕಾ ರಂಗಕ್ಕೆ ಬಹುದೊಡ್ಡ ನಷ್ಟವಾಗಿದೆ. ಮೃತರ ಆತಕ್ಕೆ ಶಾಂತಿ ಸಿಗಲೆಂದು ಪ್ರಾರ್ಥಿಸುತ್ತೇನೆ. ಅವರ ದುಃಖತಪ್ತ ಕುಟುಂಬ ವರ್ಗಕ್ಕೆ ನನ್ನ ಸಂತಾಪಗಳು ಎಂದು ಸಂತಾಪ ಸೂಚಿಸಿದ್ದಾರೆ. ವಸಂತ ನಾಡಿಗೇರ ಅವರ ನಿಧನಕ್ಕೆ ಕೇಂದ್ರ ಸಚಿವ ಎಚ್‌.ಡಿ.ಕುಮಾರಸ್ವಾಮಿ, ಮಾಜಿ ಮುಖ್ಯಮಂತ್ರಿ ಸಂಸದ ಬಸವರಾಜ ಬೊಮಾಯಿ,  ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಸೇರಿದಂತೆ ಕನ್ನಡದ ಹಲವು ಪತ್ರಕರ್ತರು ಸಂತಾಪ ಸೂಚಿಸಿದ್ದಾರೆ.

Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
Follow us Follow us
Share. WhatsApp Facebook Twitter Email Telegram Copy Link

Related Posts

ಮಡಿಕೇರಿಯಲ್ಲಿ ಮಕ್ಕಳ ದಸರಾ ಸಂಭ್ರಮ : ವಿದ್ಯಾರ್ಥಿಗಳ ಪ್ರತಿಭೆಗೆ ಪೋಷಕರ ಪ್ರೋತ್ಸಾಹ ಅಗತ್ಯ : ಜಿಲ್ಲಾಧಿಕಾರಿ ಎಸ್.ಜೆ.ಸೋಮಶೇಖರ್

ಅಕ್ಟೋಬರ್ 16, 2026

ತಲಕಾವೇರಿಯಲ್ಲಿ ಪವಿತ್ರ ತೀರ್ಥೋದ್ಭವ : ಜಿಲ್ಲಾಡಳಿತದಿಂದ ಅಗತ್ಯ ಸಿದ್ಧತೆ

ಅಕ್ಟೋಬರ್ 16, 2026

ಶಿರಂಗಾಲದಲ್ಲಿ ಎಸ್.ವಿ. ನಂಜುಂಡಪ್ಪ ಅವರಿಗೆ ನುಡಿನಮನ; ನಿಸ್ವಾರ್ಥ ಸಾಮಾಜಿಕ ಸೇವೆ ಮತ್ತು ಅಭಿವೃದ್ಧಿ ಕಾರ್ಯಗಳಿಗೆ ಸಮಾಜ ಮನ್ನಣೆ ನೀಡಲಿ: ಅರಮೇರಿ ಸ್ವಾಮೀಜಿ

ಅಕ್ಟೋಬರ್ 16, 2026

ತಲಕಾವೇರಿಯಲ್ಲಿ ಪವಿತ್ರ ತೀರ್ಥೋದ್ಭವ : ಜಿಲ್ಲಾಡಳಿತದಿಂದ ಅಗತ್ಯ ಸಿದ್ಧತೆ

ಅಕ್ಟೋಬರ್ 16, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಮಡಿಕೇರಿ ಅ.16 NEWS DESK : ತಲಕಾವೇರಿಯಲ್ಲಿ ಶ್ರೀ ಕಾವೇರಿ ತುಲಾ ಸಂಕ್ರಮಣ ಪವಿತ್ರ ತೀರ್ಥೋದ್ಭವಕ್ಕೆ ಕ್ಷಣಗಣನೆ ಆರಂಭವಾಗಿದ್ದು, ಸಿದ್ಧತೆಗಳು…

ಶಿರಂಗಾಲದಲ್ಲಿ ಎಸ್.ವಿ. ನಂಜುಂಡಪ್ಪ ಅವರಿಗೆ ನುಡಿನಮನ; ನಿಸ್ವಾರ್ಥ ಸಾಮಾಜಿಕ ಸೇವೆ ಮತ್ತು ಅಭಿವೃದ್ಧಿ ಕಾರ್ಯಗಳಿಗೆ ಸಮಾಜ ಮನ್ನಣೆ ನೀಡಲಿ: ಅರಮೇರಿ ಸ್ವಾಮೀಜಿ

ಅಕ್ಟೋಬರ್ 16, 2026

ರೋಟರಿ ಮಿಸ್ಟಿ ಹಿಲ್ಸ್‌ನ 13ನೇ ವರ್ಷದ ಮಕ್ಕಳ ದಸರಾ ಯಶಸ್ವಿ; ಮಂಟಪ ನಿರ್ಮಾಣ ಸ್ಪರ್ಧೆಯಲ್ಲಿ ಟೀಮ್ ಅಗ್ನಿಗೆ ಪ್ರಥಮ ಬಹುಮಾನ; ಸತತ ಮೂರು ವರ್ಷಗಳ ಹ್ಯಾಟ್ರಿಕ್ ಸಾಧನೆ

ಅಕ್ಟೋಬರ್ 16, 2026

ಅ.17 ರಂದು ಕೊಡಗು ಜಿಲ್ಲೆಯಲ್ಲಿ ಕಾವೇರಿ ತುಲಾ ಸಂಕ್ರಮಣದ ರಜೆ

ಅಕ್ಟೋಬರ್ 16, 2026

ಅ.17ಕ್ಕೆ ಕೊಡಗು ಜಿಲ್ಲೆಯಲ್ಲಿ ತುಲಾ ಸಂಕ್ರಮಣದ ರಜೆ

ಅಕ್ಟೋಬರ್ 16, 2026

ಕಡಗದಾಳಿನಲ್ಲಿ ಎನ್‌ಎಸ್‌ಎಸ್ ಶಿಬಿರದ ಸಮಾರೋಪ : ಸಮಾಜದ ಅಭಿವೃದ್ಧಿಗೆ ವಿದ್ಯಾರ್ಥಿಗಳು ಕೊಡುಗೆ ನೀಡಲಿ : ಮೇಜರ್ ಪ್ರೊ. ರಾಘವ ಬಿ.

ಅಕ್ಟೋಬರ್ 15, 2026

ಅ.17 ರಂದು ಉಸ್ತುವಾರಿ ಸಚಿವ ಪಿ.ಎಂ.ನರೇಂದ್ರ ಸ್ವಾಮಿ ಕೊಡಗಿಗೆ ಭೇಟಿ

ಅಕ್ಟೋಬರ್ 15, 2026

ಸಾಂತ್ವನ ಮಹಿಳಾ ಸಹಾಯವಾಣಿ : ಕೊಡಗಿನಲ್ಲಿ 5860 ಪ್ರಕರಣಗಳು ಇತ್ಯರ್ಥ

ಅಕ್ಟೋಬರ್ 15, 2026

ಅ.16 ರಂದು ಮಕ್ಕಳ ದಸರಾ ಸಂಭ್ರಮ: ಮಕ್ಕಳಿಂದ ವೈವಿದ್ಯಮಯ ಸ್ಪರ್ಧೆಗಳು

ಅಕ್ಟೋಬರ್ 15, 2026

ಗೋಣಿಕೊಪ್ಪಲು : ಅ.16 ರಂದು ವಿದ್ಯುತ್ ವ್ಯತ್ಯಯ

ಅಕ್ಟೋಬರ್ 15, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.