Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಫೀಲ್ಡ್ ಮಾರ್ಷಲ್ ಕೆ.ಎಂ.ಕಾರ್ಯಪ್ಪ ಕಾಲೇಜಿನಲ್ಲಿ ‘ಶಾರ್ಟ್ ರೇಂಜ್ ರೈಫಲ್ ಫೈರಿಂಗ್ ರೇಂಜ್’ ಉದ್ಘಾಟನೆ*
  • *ಶ್ರದ್ಧಾಭಕ್ತಿಯಿಂದ ಜರುಗಿದ ಕರ್ಣಂಗೇರಿ ಕ್ಷೇತ್ರದ ಶ್ರೀರಾಜರಾಜೇಶ್ವರಿ ದೇವಾಲಯದ ವಾರ್ಷಿಕೋತ್ಸವ ಹಾಗೂ ರಥೋತ್ಸವ*
  • *ಬಾಳೆಲೆ-ನಲ್ಲೂರು : ಮೇ 5 ರಂದು ವಿವಿಧೆಡೆ ವಿದ್ಯುತ್ ವ್ಯತ್ಯಯ*
  • *ಉಳ್ಳಿಯಡ ಎಂ. ಪೂವಯ್ಯ ಅವರಿಗೆ ಸನ್ಮಾನ*
  • *ನಾಪೋಕ್ಲು : ಮಹಿಳೆಯರು ಸ್ವಾವಲಂಬಿಗಳಾಗಿ : ವನಜಾಕ್ಷಿ ರೇಣುಕೇಶ್*
  • *ವಿರಾಜಪೇಟೆಯಲ್ಲಿ ಸಂಭ್ರಮದಿಂದ ನಡೆದ ವಿಶು ಕಣಿ ಪೂಜೆ ಹಾಗೂ ಗ್ರಾಮೀಣ ಕ್ರೀಡಾಕೂಟ*
  • *ಅತಿಥಿ ಉಪನ್ಯಾಸಕರ ಹುದ್ದೆಗೆ ಅರ್ಜಿ ಆಹ್ವಾನ* 
  • *ಕೊಡಗು : ವಿಕೇಂದ್ರೀಕರಣ ಯೋಜನೆ ಮತ್ತು ಅಭಿವೃದ್ಧಿ ಸಮಿತಿ ಸಭೆ : ಸ್ಥಳೀಯ ಸಂಸ್ಥೆಗಳ ಬಲವರ್ಧನೆಗೆ ಶ್ರಮಿಸಿ, ಜೊತೆಗೆ ಅಧಿಕಾರ ನಡೆಸಿ : ಗಣ್ಯರ ಅಭಿಮತ*
  • *ಗೋಣಿಕೊಪ್ಪ : ಸೀನಿಯರ್ ಚೇಂಬರ್ ಇಂಟರ್ನ್ಯಾಷನಲ್ ಅಧ್ಯಕ್ಷರಾಗಿ ಡಾ.ಮಂಡೆಪಂಡ ಆಶಿಕ್ ಚಂಗಪ್ಪ ಆಯ್ಕೆ* 
  • *ಕಾವೇರಿ ನದಿಯಲ್ಲಿ ಮುಳುಗಿ ವ್ಯಕ್ತಿ ಸಾವು*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*ಕೊಡಗು ಪತ್ರಕರ್ತರ ಸಂಘದ ಸೋಮವಾರಪೇಟೆ ಘಟಕದ ನೂತನ ಪದಾಧಿಕಾರಿಗಳ ಪದಗ್ರಹಣ*
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

*ಕೊಡಗು ಪತ್ರಕರ್ತರ ಸಂಘದ ಸೋಮವಾರಪೇಟೆ ಘಟಕದ ನೂತನ ಪದಾಧಿಕಾರಿಗಳ ಪದಗ್ರಹಣ*

ಸೆಪ್ಟೆಂಬರ್ 9, 20242 Mins ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link

ಸೋಮವಾರಪೇಟೆ NEWS DESK ಸೆ.9 : ರಾಷ್ಟ್ರದ ಸರ್ವೋತೋಮುಖ ಅಭಿವೃದ್ಧಿಯಲ್ಲಿ ಪತ್ರಿಕಾ ರಂಗದ ಕೊಡುಗೆ ಅಪಾರವಾಗಿದೆ ಎಂದು ಮಡಿಕೇರಿ ಶಾಸಕ ಡಾ.ಮಂತರ್‌ಗೌಡ ಅಭಿಪ್ರಾಯಿಸಿದರು. ಪತ್ರಿಕಾ ಭವನದಲ್ಲಿ ಸೋಮವಾರ ಆಯೋಜಿಸಿದ್ದ ಕೊಡಗು ಪತ್ರಕರ್ತರ ಸಂಘದ ಸೋಮವಾರಪೇಟೆ ಘಟಕದ ನೂತನ ಪದಾಧಿಕಾರಿಗಳ ಪದಗ್ರಹಣ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು. ಪತ್ರಿಕಾಕ್ಷೇತ್ರದಲ್ಲಿ ಕೆಲಸ ಮಾಡುತ್ತಿರುವ ಕಷ್ಟದಲ್ಲಿರುವ ಪತ್ರಕರ್ತರನ್ನು ಕಾಪಾಡಿಕೊಳ್ಳಬೇಕಾದ ಕರ್ತವ್ಯ ಶಾಸಕಾಂಗದಲ್ಲಿ ಕೆಲಸ ಮಾಡುತ್ತಿರುವ ನಮ್ಮಂತವರ ಕರ್ತವ್ಯ ಎಂದು ಹೇಳಿದರು. ಪತ್ರಿಕೆ ಎಂದರೆ ಕೇವಲ ಸುದ್ದಿ ಸಮಾಚಾರಗಳನ್ನು ನೀಡುವ ಮಧ್ಯಮವಲ್ಲ. ತನ್ನದೆ ಆದ ಕರ್ತವ್ಯವನ್ನು ನಿಭಾಯಿಸುತ್ತಿದೆ. ಸಮಾಜದಲ್ಲಿರುವ ಅಂಕುಡೊಂಕನ್ನು ತಿದ್ದುವ ಕೆಲಸವನ್ನು ಮಾಡುತ್ತಿದೆ. ರಾಜಕಾರಣಿಗಳು ತಪ್ಪು ಮಾಡಿದಾಗ ಪತ್ರಿಕೆಗಳಲ್ಲಿ ಬರೆದು, ತಪ್ಪು ಹೆಜ್ಜೆಗಳನ್ನು ಇಡದಂತೆ ಎಚ್ಚರಿಸುವ ಕೆಲಸವನ್ನು ಮಾಡುತ್ತಿರುವುದು ನಮ್ಮ ಕಣ್ಣು ಮುಂದಿದೆ. ಪತ್ರಿಕೆ, ಮಾಧ್ಯಮಗಳ ಸಲಹೆಗಳನ್ನು ಜನಪ್ರತಿನಿಧಿಗಳು ಪಡೆದುಕೊಂಡರೆ ಉತ್ತನ ಜನಪರ ಕೆಲಸಗಳನ್ನು ಮಾಡಬಹುದು ಎಂದು ಹೇಳಿದರು. ಗ್ರಾಮೀಣ ಪತ್ರಕರ್ತರ ಬೇಡಿಕೆಗಳನ್ನು ಈಡೇರಿಸುವುದು ನಮ್ಮ ಕರ್ತವ್ಯವಾಗಿದೆ. ಗ್ರಾಮೀಣ ಪತ್ರಕರ್ತರಿಗೆ ಬಸ್ ಪಾಸ್ ಕೊಡಿಸಲು ಸರ್ಕಾರದದೊಂದಿಗೆ ವ್ಯವಹರಿಸಲಾಗುವುದು ಎಂದು ಹೇಳಿದರು. ಮಾಜಿ ಸಚಿವ ಎಂ.ಪಿ.ಅಪ್ಪಚ್ಚು ರಂಜನ್ ಅವರು ಮಾತನಾಡಿ, ಪತ್ರಕರ್ತರು ಪ್ರತಿದಿನ ಒತ್ತಡದಲ್ಲೇ ಕೆಲಸ ಮಾಡಲೇಬೇಕಾದ ಅನಿವಾರ್ಯತೆ ಇದೆ. ಪತ್ರಕರ್ತರ ಬೇಡಿಕೆಗಳನ್ನು ಸರ್ಕಾರಗಳು ನಿರ್ಲಕ್ಷ್ಯ ಮಾಡಬಾರದು. ಪ್ರಜಾಪ್ರಭುತ್ವ ರಕ್ಷಣೆಯನ್ನು ಪತ್ರಿಕಾರಂಗ ಮಾಡುತ್ತಿದೆ. ಈ ಕಾರಣದಿಂದ ಪತ್ರಕರ್ತರುಗಳಿಗೂ ಸೌಲಭ್ಯಗಳು ಸಿಗಬೇಕು ಎಂದು ಹೇಳಿದರು. ವಸ್ತುನಿಷ್ಠ ವರದಿಗಳಿಗೆ ಪತ್ರಕರ್ತರು ಹೆಚ್ಚಿನ ಪ್ರಾಧ್ಯಾನತೆ ಕೊಡಬೇಕು. ಸಮಾಜಕ್ಕೆ ಮಾರಕವಾದ ಮತ್ತು ವೈಯುಕ್ತಿಕ ದ್ವೇಷದಿಂದ ಸುದ್ದಿಯನ್ನು ಪ್ರಕಟಿಸಿದರೆ, ಅದಕ್ಕೆ ತಕ್ಕ ಬೆಲೆಯನ್ನು ತೆರಬೇಕಾಗುತ್ತದೆ. ಸುಳ್ಳು ವರದಿ ಪ್ರಕಟಿಸಿದರೆ ನ್ಯಾಯಾಲಯದಲ್ಲಿ ಪ್ರಶ್ನಿಸುವ ಹಕ್ಕು ಎಲ್ಲರಿಗೂ ಇದೆ. ಬಹುತೇಕ ರಾಜಕಾರಣಿಗಳು ಪತ್ರಿಕೆಯಿಂದ ಬೆಳೆದಿದ್ದಾರೆ. ಈ ಕಾರಣದಿಂದ ಪತ್ರಿಕೋಧ್ಯಮದ ಮೇಲೆ ವಿಶೇಷ ಗೌರವವಿದೆ ಎಂದು ಹೇಳಿದರು. ರಾಜ್ಯ ಕಾರ್ಯನಿರತ ಪತ್ರಕರ್ತರ ಸಂಘದ ಮಾಜಿ ಉಪಾಧ್ಯಕ್ಷ ಮಂಡಿಬೆಲೆ ರಾಜಣ್ಣ ಮಾತನಾಡಿ, ಹೆಚ್ಚೆಚ್ಚು ಪತ್ರಕರ್ತರ ಸಂಘಗಳು ಹುಟ್ಟಿಕೊಳ್ಳುವುದಕ್ಕೆ ರಾಜಕಾರಣಿಗಳು ಕಾರಣರಾಗುತ್ತಿದ್ದಾರೆ. ತತ್ವ-ಸಿದ್ದಾಂತಗಳಿಲ್ಲ ಸಂಘಗಳು ಹೆಚ್ಚಿನ ಕಾಲ ಇರಲು ಸಾಧ್ಯವಿಲ್ಲ. ಪತ್ರಕರ್ತರ ಶ್ರೇಯೋಭಿವೃದ್ಧಿಗೆ ಸಂಘಗಳು ಕೆಲಸ ಮಾಡಬೇಕು ಎಂದು ಕಿವಿಮಾತು ಹೇಳಿದರು. ಗ್ರಾಮೀಣ ಪತ್ರಕರ್ತರಿಗೆ ಸರ್ಕಾರ ಯಾವುದೇ ಸೌಲಭ್ಯಗಳನ್ನು ನೀಡುತ್ತಿಲ್ಲ. ಭರವಸೆಗಳು ಈಡೇರುತ್ತಿಲ್ಲ. ಪತ್ರಕರ್ತರ ಸಮಸ್ಯೆಗಳನ್ನು ಅರಿಯಲು ಐಎಎಸ್ ಅಧಿಕಾರಿಗಳಿಗೆ ಸಾಧ್ಯವಾಗುತ್ತಿಲ್ಲ. ಅದರ ಅವಶ್ಯಕತೆಯೂ ಅವರಿಗೆ ಬೇಕಾಗಿಲ್ಲ. ಸರ್ಕಾರಕ್ಕೆ ಮನವರಿಕೆ ಮಾಡಿಕೊಡುವವರು ಇಲ್ಲದಂತಾಗಿದೆ. ಒಂದು ತಾಲ್ಲೂಕಿನಲ್ಲಿ 10 ಸಾವಿರ ಮಂದಿ ಮಹಿಳೆಯರು ಸರ್ಕಾರಿ ಬಸ್‌ನಲ್ಲಿ ಉಚಿತವಾಗಿ ಸಂಚರಿಸುತ್ತಿದ್ದಾರೆ. ಇಡೀ ರಾಜ್ಯದಲ್ಲಿ ಕೇವಲ 10 ಸಾವಿರ ಮಂದಿ ಪತ್ರಕರ್ತರಿಗೆ ಬಸ್ ಪಾಸ್ ಕೋಡಲು ಸಾಧ್ಯವಾಗುತ್ತಿಲ್ಲ. ಇದೊಂದು ದುರಂತ ಎಂದು ಬೇಸರ ವ್ಯಕ್ತಪಡಿಸಿದರು. ಕೊಡಗಿನಲ್ಲಿ ಪತ್ರಕರ್ತರು ಉತ್ತಮವಾಗಿ ಕೆಲಸ ಮಾಡುತ್ತಿದ್ದಾರೆ. ಜಿಲ್ಲೆಯಲ್ಲಿ ಹಳದಿ ಪತ್ರಿಕೋದ್ಯಮ ಇಲ್ಲ ಎಂದು ಕೊಡಗು ಪತ್ರಕರ್ತರ ಸಂಘದ ಜಿಲ್ಲಾಧ್ಯಕ್ಷ ಎಸ್.ಎ.ಮುರುಳೀಧರ್ ಹೇಳಿದರು. ಇಂದಿನ ಪರಿಸ್ಥಿತಿಯಲ್ಲಿ ಪತ್ರಕರ್ತರು ಭ್ರಷ್ಟಾಚಾರದ ವಿರುದ್ಧ ಸುದ್ದಿ ಮಾಡಲು ಭಯಪಡಬೇಕಾದ ಅನಿವಾರ್ಯತೆ ಇದೆ. ಯಾವುದೇ ಸಾಕ್ಷಿ ಸಿಗದಂತೆ ಭ್ರಷ್ಟಾಚಾರ ನಡೆಯುತ್ತಿರುವುದರಿಂದ ಮಾನನಷ್ಟ ಮೊಕದ್ದಮೆಗೆ ಭಯಪಡುವಂತಹ ಸ್ಥಿತಿ ಒದಗಿದೆ ಎಂದರು. ನೂತನ ಅಧ್ಯಕ್ಷ ಎಚ್.ಆರ್.ಹರೀಶ್, ಕಾರ್ಯದರ್ಶಿ ಡಿ.ಪಿ.ಲೋಕೇಶ್, ಖಜಾಂಚಿ ದುಶ್ಯಂತ್ ಕುಮಾರ್, ಉಪಾಧ್ಯಕ್ಷ ಕವನ್ ಕಾರ್ಯಪ್ಪ, ಸಹ ಕಾರ್ಯದರ್ಶಿ ಹೋಮೇಶ್ ಮಣಗಲಿ, ನಿರ್ದೇಶಕರುಗಳಾದ ಎಸ್.ಆರ್.ವಸಂತ್, ಜಯಪ್ಪ ಹಾನಗಲ್, ಸುಕುಮಾರ, ಟೋನಿ ತೋಮಸ್ ಅವರುಗಳು ಅಧಿಕಾರ ಸ್ವೀಕರಿಸಿದರು.

Follow us Follow us
Share. WhatsApp Facebook Twitter Email Telegram Copy Link

Website design development company services in Mangalore

Forex Trading Teacher in India

Related Posts

*ಫೀಲ್ಡ್ ಮಾರ್ಷಲ್ ಕೆ.ಎಂ.ಕಾರ್ಯಪ್ಪ ಕಾಲೇಜಿನಲ್ಲಿ ‘ಶಾರ್ಟ್ ರೇಂಜ್ ರೈಫಲ್ ಫೈರಿಂಗ್ ರೇಂಜ್’ ಉದ್ಘಾಟನೆ*

ಮೇ 5, 2026

*ಶ್ರದ್ಧಾಭಕ್ತಿಯಿಂದ ಜರುಗಿದ ಕರ್ಣಂಗೇರಿ ಕ್ಷೇತ್ರದ ಶ್ರೀರಾಜರಾಜೇಶ್ವರಿ ದೇವಾಲಯದ ವಾರ್ಷಿಕೋತ್ಸವ ಹಾಗೂ ರಥೋತ್ಸವ*

ಮೇ 5, 2026

*ಬಾಳೆಲೆ-ನಲ್ಲೂರು : ಮೇ 5 ರಂದು ವಿವಿಧೆಡೆ ವಿದ್ಯುತ್ ವ್ಯತ್ಯಯ*

ಮೇ 4, 2026

*ಶ್ರದ್ಧಾಭಕ್ತಿಯಿಂದ ಜರುಗಿದ ಕರ್ಣಂಗೇರಿ ಕ್ಷೇತ್ರದ ಶ್ರೀರಾಜರಾಜೇಶ್ವರಿ ದೇವಾಲಯದ ವಾರ್ಷಿಕೋತ್ಸವ ಹಾಗೂ ರಥೋತ್ಸವ*

ಮೇ 5, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಮಡಿಕೇರಿ ಮೇ 5 NEWS DESK : ಮಡಿಕೇರಿ ನಗರದ ಹೊರವಲಯದ ಕರ್ಣಂಗೇರಿ ಕ್ಷೇತ್ರದ ಶ್ರೀರಾಜರಾಜೇಶ್ವರಿ ದೇವಾಲಯದ ವಾರ್ಷಿಕೋತ್ಸವ ಹಾಗೂ…

*ಬಾಳೆಲೆ-ನಲ್ಲೂರು : ಮೇ 5 ರಂದು ವಿವಿಧೆಡೆ ವಿದ್ಯುತ್ ವ್ಯತ್ಯಯ*

ಮೇ 4, 2026

*ಉಳ್ಳಿಯಡ ಎಂ. ಪೂವಯ್ಯ ಅವರಿಗೆ ಸನ್ಮಾನ*

ಮೇ 4, 2026

*ನಾಪೋಕ್ಲು : ಮಹಿಳೆಯರು ಸ್ವಾವಲಂಬಿಗಳಾಗಿ : ವನಜಾಕ್ಷಿ ರೇಣುಕೇಶ್*

ಮೇ 4, 2026

*ವಿರಾಜಪೇಟೆಯಲ್ಲಿ ಸಂಭ್ರಮದಿಂದ ನಡೆದ ವಿಶು ಕಣಿ ಪೂಜೆ ಹಾಗೂ ಗ್ರಾಮೀಣ ಕ್ರೀಡಾಕೂಟ*

ಮೇ 4, 2026

*ಅತಿಥಿ ಉಪನ್ಯಾಸಕರ ಹುದ್ದೆಗೆ ಅರ್ಜಿ ಆಹ್ವಾನ* 

ಮೇ 4, 2026

*ಕೊಡಗು : ವಿಕೇಂದ್ರೀಕರಣ ಯೋಜನೆ ಮತ್ತು ಅಭಿವೃದ್ಧಿ ಸಮಿತಿ ಸಭೆ : ಸ್ಥಳೀಯ ಸಂಸ್ಥೆಗಳ ಬಲವರ್ಧನೆಗೆ ಶ್ರಮಿಸಿ, ಜೊತೆಗೆ ಅಧಿಕಾರ ನಡೆಸಿ : ಗಣ್ಯರ ಅಭಿಮತ*

ಮೇ 4, 2026

*ಗೋಣಿಕೊಪ್ಪ : ಸೀನಿಯರ್ ಚೇಂಬರ್ ಇಂಟರ್ನ್ಯಾಷನಲ್ ಅಧ್ಯಕ್ಷರಾಗಿ ಡಾ.ಮಂಡೆಪಂಡ ಆಶಿಕ್ ಚಂಗಪ್ಪ ಆಯ್ಕೆ* 

ಮೇ 4, 2026

*ಕಾವೇರಿ ನದಿಯಲ್ಲಿ ಮುಳುಗಿ ವ್ಯಕ್ತಿ ಸಾವು*

ಮೇ 4, 2026

*ಗೋಣಿಕೊಪ್ಪಲುವಿನಲ್ಲಿ ನಗರ ಬಿಜೆಪಿ, ಶಕ್ತಿ ಕೇಂದ್ರದಿಂದ ಸಂಭ್ರಮಾಚರಣೆ*

ಮೇ 4, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.

Ad Blocker Enabled!
Ad Blocker Enabled!
Our website is made possible by displaying online advertisements to our visitors. Please support us by disabling your Ad Blocker.