Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಕೊಡಗು ಹೆಗ್ಗಡೆ ಸಮಾಜದ ಕ್ರೀಡಾ ಹಬ್ಬಕ್ಕೆ ಸಂಭ್ರಮದ ತೆರೆ*
  • *ಶಂಸುಲ್ ಉಲಮಾ ಕಾಲೇಜು ವಿದ್ಯಾರ್ಥಿಗಳ ಸಾಧನೆ : ಶಿಕ್ಷಣದ ಮೂಲಕ ಉತ್ತಮ ಭವಿಷ್ಯ ರೂಪಿಸಿಕೊಳ್ಳಲು ಗಣ್ಯರ ಕರೆ*
  • *5ನೇ ದಿನವೂ ಮುಂದುವರೆದ ವಸತಿ ರಹಿತರ ಧರಣಿ*
  • *ಕೊಡಗು : ಪತ್ರಿಕಾ ಪ್ರವಾಸ ವಾಹನಕ್ಕೆ ಚಾಲನೆ*
  • *ಜಿಲ್ಲಾ ಮಟ್ಟದ ತ್ರೈಮಾಸಿಕ ಕೆಡಿಪಿ ಸಭೆ : ಜೂನ್ ಮೊದಲ ವಾರದಲ್ಲಿ ಮುಂಗಾರು ಆರಂಭ ಸಾಧ್ಯತೆ : ರಸ್ತೆ ಸೇರಿದಂತೆ ಹಲವು ಕಾಮಗಾರಿ ಪೂರ್ಣಗೊಳಿಸಿ : ಸಚಿವ ಎನ್.ಎಸ್.ಭೋಸರಾಜು*
  • *ಮಾದಾಪುರದಲ್ಲಿ ಕೊಡವ ಸಮಾಜ ಭವನ ಲೋಕಾಪ೯ಣೆ : ಪ್ರಾಮಾಣಿಕತೆಯೊಂದಿಗೆ ಸಂಸ್ಕೃತಿ ಸಂರಕ್ಷಣೆಗೆ ಕೊಡವರು ವಿಶ್ವವ್ಯಾಪಿ ಹೆಸರು ವಾಸಿ : ಬಸವರಾಜ ಬೊಮ್ಮಾಯಿ ಶ್ಲಾಘನೆ*
  • *ಮಡಿಕೇರಿಯಲ್ಲಿ ಪತ್ರಕರ್ತರಿಗೆ ಉಚಿತ ಆರೋಗ್ಯ ತಪಾಸಣಾ ಶಿಬಿರ*
  • *ಪೊನ್ನಂಪೇಟೆಯಲ್ಲಿ ಬಿಜೆಪಿ ವಿಜಯೋತ್ಸವ*
  • *ಫೀಲ್ಡ್ ಮಾರ್ಷಲ್ ಕೆ.ಎಂ.ಕಾರ್ಯಪ್ಪ ಕಾಲೇಜಿನಲ್ಲಿ ‘ಶಾರ್ಟ್ ರೇಂಜ್ ರೈಫಲ್ ಫೈರಿಂಗ್ ರೇಂಜ್’ ಉದ್ಘಾಟನೆ*
  • *ಶ್ರದ್ಧಾಭಕ್ತಿಯಿಂದ ಜರುಗಿದ ಕರ್ಣಂಗೇರಿ ಕ್ಷೇತ್ರದ ಶ್ರೀರಾಜರಾಜೇಶ್ವರಿ ದೇವಾಲಯದ ವಾರ್ಷಿಕೋತ್ಸವ ಹಾಗೂ ರಥೋತ್ಸವ*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*ಸಂಪಾಜೆಯಿಂದ ಶಿರಂಗಾಲ ಗಡಿ ಪ್ರದೇಶದವರೆಗೆ ಬೃಹತ್ ಮಾನವ ಸರಪಳಿ*
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

*ಸಂಪಾಜೆಯಿಂದ ಶಿರಂಗಾಲ ಗಡಿ ಪ್ರದೇಶದವರೆಗೆ ಬೃಹತ್ ಮಾನವ ಸರಪಳಿ*

ಸೆಪ್ಟೆಂಬರ್ 12, 20243 Mins ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link

ಮಡಿಕೇರಿ NEWS DESK ಸೆ.12 : ರಾಜ್ಯದ 31 ಜಿಲ್ಲೆಗಳಲ್ಲಿ ಮಾನವ ಸರಪಳಿ ಏರ್ಪಡಿಸುತ್ತಿದ್ದು, ಆ ನಿಟ್ಟಿನಲ್ಲಿ ಕೊಡಗು ಜಿಲ್ಲೆಯಲ್ಲಿ ಸಂಪಾಜೆಯಿಂದ ಶಿರಂಗಾಲ ಬಳಿಯ ಗಡಿ ಪ್ರದೇಶದವರೆಗೆ ಮಾನವ ಸರಪಳಿ ಏರ್ಪಡಿಸಬೇಕಿದೆ ಎಂದು ಜಿಲ್ಲಾಧಿಕಾರಿ ವೆಂಕಟ್ ರಾಜಾ ತಿಳಿಸಿದ್ದಾರೆ. ಅಂತರರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಪ್ರಯುಕ್ತ ಜಿಲ್ಲೆಯಾದ್ಯಂತ ಏಕಕಾಲದಲ್ಲಿ ಮಾನವ ಸರಪಳಿ ರಚಿಸುವ ಸಂಬಂಧ ಶಾಲಾ-ಕಾಲೇಜಿನ ಮುಖ್ಯಸ್ಥರು, ಅಧಿಕಾರಿಗಳು ಹಾಗೂ ವಿವಿಧ ಸಂಘ ಸಂಸ್ಥೆಗಳ ಪ್ರತಿನಿಧಿಗಳ ಜೊತೆ ಎರಡನೇ ಸುತ್ತಿನ ಪೂರ್ವಭಾವಿ ಸಭೆಯು ಜಿಲ್ಲಾಧಿಕಾರಿ ವೆಂಕಟ್ ರಾಜಾ ಅವರ ಅಧ್ಯಕ್ಷತೆಯಲ್ಲಿ ಗುರುವಾರ ನಡೆಯಿತು. ನಗರದ ಜಿಲ್ಲಾ ಪಂಚಾಯಿತಿ ಕಚೇರಿ ಸಭಾಂಗಣದಲ್ಲಿ ನಡೆದ ಸಭೆಯಲ್ಲಿ ಮಾತನಾಡಿದ ಜಿಲ್ಲಾಧಿಕಾರಿ ಸೆ.15 ರಂದು ಬೆಳಗ್ಗೆ 9 ರಿಂದ 10 ಗಂಟೆಯವರೆಗೆ ಮಾನವ ಸರಪಳಿ ಆಯೋಜಿಸಬೇಕಿದೆ. ಆ ನಿಟ್ಟಿನಲ್ಲಿ ಶಾಲಾ-ಕಾಲೇಜು ವಿದ್ಯಾರ್ಥಿಗಳು, ಅಧಿಕಾರಿಗಳು ಸೇರಿದಂತೆ ವಿವಿಧ ಸಂಘ ಸಂಸ್ಥೆಗಳ ಪ್ರತಿನಿಧಿಗಳು ಸ್ವಯಂ ಪ್ರೇರಣೆಯಿಂದ ಪಾಲ್ಗೊಂಡು ಕಾರ್ಯಕ್ರಮ ಯಶಸ್ಸಿಗೆ ಸಹಕರಿಸುವಂತೆ ಕೋರಿದರು. ಸರ್ಕಾರವು ಬೀದರ್ ಜಿಲ್ಲೆಯ ಬಸವ ಕಲ್ಯಾಣದಿಂದ ಚಾಮರಾಜನಗರದವರೆಗೆ ರಾಜ್ಯದ 31 ಜಿಲ್ಲೆಗಳಲ್ಲಿ ಮಾನವ ಸರಪಳಿ ಏರ್ಪಡಿಸುತ್ತಿದ್ದು, ಆ ನಿಟ್ಟಿನಲ್ಲಿ ಕೊಡಗು ಜಿಲ್ಲೆಯಲ್ಲಿ ಸಂಪಾಜೆಯಿಂದ ಶಿರಂಗಾಲ ಬಳಿಯ ಗಡಿ ಪ್ರದೇಶದವರೆಗೆ ಮಾನವ ಸರಪಳಿ ಏರ್ಪಡಿಸಬೇಕಿದೆ. ಆ ದಿಸೆಯಲ್ಲಿ ಆಯಾಯ ಗ್ರಾಮ, ಗ್ರಾಮ ಪಂಚಾಯಿತಿ, ನಗರಸಭೆ, ಪುರಸಭೆ ವ್ಯಾಪ್ತಿಯಲ್ಲಿ ಸ್ಥಳೀಯವಾಗಿ ಎಲ್ಲರೂ ಪಾಲ್ಗೊಂಡು ಸಹಕರಿಸುವಂತೆ ಮನವಿ ಮಾಡಿದರು. ಭಾರತವು ವಿಶ್ವದಲ್ಲಿ ಬೃಹತ್ ಸಂವಿಧಾನವನ್ನು ಒಳಗೊಂಡಿದೆ. ಆ ನಿಟ್ಟಿನಲ್ಲಿ ಪ್ರಜಾಪ್ರಭುತ್ವದ ಮಹತ್ವ ಬಗ್ಗೆ ಮಾಹಿತಿ ನೀಡುವ ನಿಟ್ಟಿನಲ್ಲಿ ಅಂತರರಾಷ್ಟ್ರೀಯ ಪ್ರಜಾಪ್ರಭುತ್ವ ದಿನವನ್ನು ಆಚರಿಸಲಾಗುತ್ತಿದ್ದು, ಪ್ರತಿಯೊಬ್ಬರೂ ಭಾಗವಹಿಸುವಂತೆ ಕೋರಿದರು.
ಸೆಪ್ಟೆಂಬರ್, 15 ರಂದು ಬೆಳಗ್ಗೆ 9 ರಿಂದ 10 ಗಂಟೆವರೆಗೆ ಒಂದು ಗಂಟೆ ಕಾರ್ಯಕ್ರಮ ಇರಲಿದೆ. ಮಾನವ ಸರಪಳಿ ಸಂದರ್ಭದಲ್ಲಿ ಎಲ್ಲರ ಸುರಕ್ಷತೆ ಮತ್ತು ಸುಭದ್ರತೆ ಅತೀ ಮುಖ್ಯವಾಗಿದೆ. ಆ ನಿಟ್ಟಿನಲ್ಲಿ ಎಲ್ಲರೂ ಗಮನಹರಿಸಬೇಕು ಎಂದು ಜಿಲ್ಲಾಧಿಕಾರಿ ಅವರು ಮನವಿ ಮಾಡಿದರು. ‘ಜಿಲ್ಲೆಯಲ್ಲಿ ಸಂಪಾಜೆಯಿAದ ಶಿರಂಗಾಲ ಬಳಿಯ ಗಡಿ ಪ್ರದೇಶದವರೆಗೆ ಸುಮಾರು 77 ಕಿ.ಮೀ. ಮಾನವ ಸರಪಳಿ/ ರಿಲೇ ನಡೆಯಲಿದೆ. ಆ ನಿಟ್ಟಿನಲ್ಲಿ ಪ್ರತೀ 100 ಮೀ.ಗೆ ಒಬ್ಬರಂತೆ ವಿಭಾಗಾಧಿಕಾರಿ, ಪ್ರತೀ ಒಂದು ಕಿ.ಮೀ.ಗೆ ಒಬ್ಬರಂತೆ ಪ್ರದೇಶ ಅಧಿಕಾರಿ, 3 ರಿಂದ 5 ಕಿ.ಮೀ.ವರೆಗೆ ಒಬ್ಬರಂತೆ ತಾಲ್ಲೂಕು ಮಟ್ಟದ ಅಧಿಕಾರಿ ಜೊತೆಗೆ ಮಾನವ ಸರಪಳಿಯಲ್ಲಿ ಭಾಗವಹಿಸುವವರ ಸುರಕ್ಷತೆಗೆ ಸಾಕಷ್ಟು ಪೊಲೀಸ್ ಸಿಬ್ಬಂದಿಯನ್ನು ನಿಯೋಜಿಸಲಾಗುತ್ತದೆ ಎಂದು ವೆಂಕಟ್ ರಾಜಾ ತಿಳಿಸಿದರು.’ ಮಾನವ ಸರಪಳಿ ಸಂದರ್ಭದಲ್ಲಿ ಸಾರಿಗೆ ಸಂಚಾರದಲ್ಲಿ ಯಾವುದೇ ರೀತಿಯ ವ್ಯತ್ಯಯ ಇರುವುದಿಲ್ಲ. ಸುಗಮವಾಗಿ ಸಾರಿಗೆ ಸಂಚಾರ ನಡೆಯಬೇಕು. ಸಾರ್ವಜನಿಕರಿಗೆ ಯಾವುದೇ ತೊಂದರೆಯಾಗದಂತೆ ಪ್ರತಿಯೊಬ್ಬರೂ ಗಮನಹರಿಸಬೇಕು ಎಂದು ಜಿಲ್ಲಾಧಿಕಾರಿ ಅವರು ಕೋರಿದರು. ಮಳೆ ಇರುವುದರಿಂದ ರೈನ್‌ಕೋಟ್ ಹಾಗೂ ಛತ್ರಿಯನ್ನು ತೆಗೆದುಕೊಂಡು ಬರಬೇಕು ಎಂದು ಜಿಲ್ಲಾಧಿಕಾರಿ ಅವರು ಇದೇ ಸಂದರ್ಭದಲ್ಲಿ ಸಲಹೆ ಮಾಡಿದರು. ಸಮಾಜ ಕಲ್ಯಾಣ ಇಲಾಖೆ ಉಪ ನಿರ್ದೇಶಕರಾದ ಶೇಖರ್ ಅವರು ಮಾಹಿತಿ ನೀಡಿ ಜಿಲ್ಲೆಯ ಸಂಪಾಜೆಯಿಂದ ಶಿರಂಗಾಲ ಗಡಿ ಪ್ರದೇಶದವರೆಗೆ 12 ಗ್ರಾಮ ಪಂಚಾಯಿತಿಗಳು, 1 ನಗರಸಭೆ, 1 ಪುರಸಭೆ ಬರಲಿದ್ದು, ಆಯಾಯ ವ್ಯಾಪ್ತಿಯಲ್ಲಿ ಜಿಲ್ಲಾ ಮಟ್ಟದ, ತಾಲ್ಲೂಕು ಮಟ್ಟದ, ಗ್ರಾಮ ಮಟ್ಟದ ಅಧಿಕಾರಿಗಳನ್ನು ನಿಯೋಜಿಸಲಾಗಿದೆ ಎಂದು ಮಾಹಿತಿ ನೀಡಿದರು. ಜಿಲ್ಲೆಯಲ್ಲಿ ಮಾನವ ಸರಪಳಿ/ರಿಲೇ ಸಂದರ್ಭದಲ್ಲಿ ಸುಮಾರು 30 ಸಾವಿರ ಜನರು ಪಾಲ್ಗೊಳ್ಳುವ ಸಾಧ್ಯತೆ ಇದೆ. ಮಾನವ ಸರಪಳಿ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳುವ ಎಲ್ಲರೂ ಸೆಪ್ಟೆಂಬರ್ 15 ರಂದು ಬೆಳಗ್ಗೆ 8.30 ಗಂಟೆಗೆ ಆಗಮಿಸಬೇಕು ಎಂದು ಕೋರಿದರು. ವಿವಿಧ ಕಡೆಗಳಲ್ಲಿ ಆರೋಗ್ಯ ಸಿಬ್ಬಂದಿಯನ್ನು ನಿಯೋಜಿಸುವಂತಾಗಬೇಕು. ಅಂತರರಾಷ್ಟಿçÃಯ ಪ್ರಜಾಪ್ರಭುತ್ವ ದಿನಾಚರಣೆ ಪ್ರಯುಕ್ತ ಎಲ್ಲರೂ ಆನ್‌ಲೈನ್ ಮೂಲಕ ಹೆಸರು ನೋಂದಾಯಿಸುವಂತೆ ಕೋರಿದರು. ಮಾನವ ಸರಪಳಿಯಲ್ಲಿ ನಾವಿನ್ಯತೆ ಕಾಪಾಡಿಕೊಳ್ಳುವುದು, ಅತೀ ಹೆಚ್ಚು ಗಿಡಗಳನ್ನು ನೆಡುವುದು, ಅತೀ ಹೆಚ್ಚು ಸರ್ಕಾರೇತರ ಸಂಸ್ಥೆಗಳು ಪಾಲ್ಗೊಳ್ಳುವಿಕೆ, ಅತೀ ಹೆಚ್ಚು ಖಾಸಗಿ ವಲಯ ಪಾಲ್ಗೊಳ್ಳುವಂತೆ ಮನವಿ ಮಾಡಿದರು.
ಅಂತರರಾಷ್ಟಿçÃಯ ಪ್ರಜಾಪ್ರಭುತ್ವ ದಿನಾಚರಣೆ ಮಹತ್ವ ಕುರಿತು ಹೊರತಂದಿರುವ ಭಿತ್ತಿಪತ್ರವನ್ನು ಜಿಲ್ಲಾಧಿಕಾರಿ ವೆಂಕಟ್ ರಾಜಾ ಅವರು ಇದೇ ಸಂದರ್ಭದಲ್ಲಿ ಬಿಡುಗಡೆ ಮಾಡಿದರು. ಜಿ.ಪಂ.ಸಿಇಒ ಆನಂದ್ ಪ್ರಕಾಶ್ ಮೀನಾ, ಉಪ ವಿಭಾಗಾಧಿಕಾರಿ ವಿನಾಯಕ ನರ್ವಾಡೆ, ಹೆಚ್ಚುವರಿ ಜಿಲ್ಲಾಧಿಕಾರಿ ಆರ್.ಐಶ್ವರ್ಯ, ಜಿ.ಪಂ.ಉಪ ಕಾರ್ಯದರ್ಶಿ ಎಸ್.ಧನರಾಜ್, ಜಿಲ್ಲಾ ಹಾಗೂ ತಾಲ್ಲೂಕು ಮಟ್ಟದ ಅಧಿಕಾರಿಗಳು, ಶಾಲಾ- ಕಾಲೇಜಿನ ಮುಖ್ಯಸ್ಥರು, ತಾ.ಪಂ.ಇಒಗಳು ಇತರರು ಇದ್ದರು.

Follow us Follow us
Share. WhatsApp Facebook Twitter Email Telegram Copy Link

Website design development company services in Mangalore

Forex Trading Teacher in India

Related Posts

*ಕೊಡಗು ಹೆಗ್ಗಡೆ ಸಮಾಜದ ಕ್ರೀಡಾ ಹಬ್ಬಕ್ಕೆ ಸಂಭ್ರಮದ ತೆರೆ*

ಮೇ 5, 2026

*ಶಂಸುಲ್ ಉಲಮಾ ಕಾಲೇಜು ವಿದ್ಯಾರ್ಥಿಗಳ ಸಾಧನೆ : ಶಿಕ್ಷಣದ ಮೂಲಕ ಉತ್ತಮ ಭವಿಷ್ಯ ರೂಪಿಸಿಕೊಳ್ಳಲು ಗಣ್ಯರ ಕರೆ*

ಮೇ 5, 2026

*5ನೇ ದಿನವೂ ಮುಂದುವರೆದ ವಸತಿ ರಹಿತರ ಧರಣಿ*

ಮೇ 5, 2026

*ಶಂಸುಲ್ ಉಲಮಾ ಕಾಲೇಜು ವಿದ್ಯಾರ್ಥಿಗಳ ಸಾಧನೆ : ಶಿಕ್ಷಣದ ಮೂಲಕ ಉತ್ತಮ ಭವಿಷ್ಯ ರೂಪಿಸಿಕೊಳ್ಳಲು ಗಣ್ಯರ ಕರೆ*

ಮೇ 5, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ವಿರಾಜಪೇಟೆ ಮೇ 6 NEWS DESK : ಪೆರುಂಬಾಡಿಯ ಶಂಸುಲ್ ಉಲಮಾ ಎಜುಕೇಶನಲ್ ಅಕಾಡೆಮಿಯ ಎಸ್ಇಎ ಕಾಲೇಜು ವಿದ್ಯಾರ್ಥಿಗಳು ಪಿಯುಸಿ ಪರೀಕ್ಷೆಯಲ್ಲಿ…

*5ನೇ ದಿನವೂ ಮುಂದುವರೆದ ವಸತಿ ರಹಿತರ ಧರಣಿ*

ಮೇ 5, 2026

*ಕೊಡಗು : ಪತ್ರಿಕಾ ಪ್ರವಾಸ ವಾಹನಕ್ಕೆ ಚಾಲನೆ*

ಮೇ 5, 2026

*ಜಿಲ್ಲಾ ಮಟ್ಟದ ತ್ರೈಮಾಸಿಕ ಕೆಡಿಪಿ ಸಭೆ : ಜೂನ್ ಮೊದಲ ವಾರದಲ್ಲಿ ಮುಂಗಾರು ಆರಂಭ ಸಾಧ್ಯತೆ : ರಸ್ತೆ ಸೇರಿದಂತೆ ಹಲವು ಕಾಮಗಾರಿ ಪೂರ್ಣಗೊಳಿಸಿ : ಸಚಿವ ಎನ್.ಎಸ್.ಭೋಸರಾಜು*

ಮೇ 5, 2026

*ಮಾದಾಪುರದಲ್ಲಿ ಕೊಡವ ಸಮಾಜ ಭವನ ಲೋಕಾಪ೯ಣೆ : ಪ್ರಾಮಾಣಿಕತೆಯೊಂದಿಗೆ ಸಂಸ್ಕೃತಿ ಸಂರಕ್ಷಣೆಗೆ ಕೊಡವರು ವಿಶ್ವವ್ಯಾಪಿ ಹೆಸರು ವಾಸಿ : ಬಸವರಾಜ ಬೊಮ್ಮಾಯಿ ಶ್ಲಾಘನೆ*

ಮೇ 5, 2026

*ಮಡಿಕೇರಿಯಲ್ಲಿ ಪತ್ರಕರ್ತರಿಗೆ ಉಚಿತ ಆರೋಗ್ಯ ತಪಾಸಣಾ ಶಿಬಿರ*

ಮೇ 5, 2026

*ಪೊನ್ನಂಪೇಟೆಯಲ್ಲಿ ಬಿಜೆಪಿ ವಿಜಯೋತ್ಸವ*

ಮೇ 5, 2026

*ಫೀಲ್ಡ್ ಮಾರ್ಷಲ್ ಕೆ.ಎಂ.ಕಾರ್ಯಪ್ಪ ಕಾಲೇಜಿನಲ್ಲಿ ‘ಶಾರ್ಟ್ ರೇಂಜ್ ರೈಫಲ್ ಫೈರಿಂಗ್ ರೇಂಜ್’ ಉದ್ಘಾಟನೆ*

ಮೇ 5, 2026

*ಶ್ರದ್ಧಾಭಕ್ತಿಯಿಂದ ಜರುಗಿದ ಕರ್ಣಂಗೇರಿ ಕ್ಷೇತ್ರದ ಶ್ರೀರಾಜರಾಜೇಶ್ವರಿ ದೇವಾಲಯದ ವಾರ್ಷಿಕೋತ್ಸವ ಹಾಗೂ ರಥೋತ್ಸವ*

ಮೇ 5, 2026

*ಬಾಳೆಲೆ-ನಲ್ಲೂರು : ಮೇ 5 ರಂದು ವಿವಿಧೆಡೆ ವಿದ್ಯುತ್ ವ್ಯತ್ಯಯ*

ಮೇ 4, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.

Ad Blocker Enabled!
Ad Blocker Enabled!
Our website is made possible by displaying online advertisements to our visitors. Please support us by disabling your Ad Blocker.