Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಸುಂಟಿಕೊಪ್ಪ : ಹಿರಿಯ ಪತ್ರಕರ್ತ ಬಿ.ಸಿ.ದಿನೇಶ್ ಅವರಿಗೆ ಸನ್ಮಾನ*
  • *ಮೈಸೂರು ಕಾಫಿ ಸಂಸ್ಕರಣ ಮಾರಾಟ ಮತ್ತು ಉಗ್ರಾಣ ಸಹಕಾರ ಸಂಘದ ಸಭೆ*
  • *ಬೇಡು ಹಬ್ಬ : ಮದ್ಯ ಮಾರಾಟ ನಿಷೇಧ*
  • *ಮೂರ್ನಾಡು : ಮೇ 26 ರಂದು ಸುತ್ತಮುತ್ತಲಿನ ಪ್ರದೇಶದಲ್ಲಿ ವಿದ್ಯುತ್ ವ್ಯತ್ಯಯ*
  • *ಶರಣ ಸಾಹಿತ್ಯ ಸಮ್ಮೇಳನದ ಆಮಂತ್ರಣ ಪತ್ರಿಕೆ ಬಿಡುಗಡೆ*
  • *ಕೊಡಗು ಪತ್ರಕತ೯ರ ಸಂಘದಿಂದ ಪ್ರಶಸ್ತಿಗಳಿಗೆ ಅಜಿ೯ ಆಹ್ವಾನ*
  • *ಕೊಡಗು : ಗ್ಯಾರಂಟಿ ಯೋಜನೆ ಅನುಷ್ಠಾನ ಪ್ರಾಧಿಕಾರ ಸಮಿತಿ ಸಭೆ : ಗ್ಯಾರಂಟಿ ಯೋಜನೆ ಪರಿಣಾಮಕಾರಿ ಅನುಷ್ಠಾನಕ್ಕೆ ಧರ್ಮಜ ಉತ್ತಪ್ಪ ಸಲಹೆ*
  • *ಜಿಸಿಎಲ್ ಕ್ರಿಕೆಟ್ ಪಂದ್ಯಾವಳಿ ಉದ್ಘಾಟನೆ*
  • *ಫೀ.ಮಾ.ಕಾರ್ಯಪ್ಪ ಕಾಲೇಜ್ ನಲ್ಲಿ ಕ್ರೀಡೆ ಮತ್ತು ಪ್ರತಿಭೋತ್ಸವ : ಶಿಕ್ಷಣದೊಂದಿಗೆ ಕ್ರೀಡೆಯಲ್ಲೂ ಕೀರ್ತಿ ಗಳಿಸಿ : ಅಂಕಿತಾ ಬಿ.ಎಸ್ ಕರೆ*
  • *ಮೇ 25 ರಂದು ಮಡಿಕೇರಿಯಲ್ಲಿ ಪ್ರತಿಭಟನೆ*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*ಸಿಎನ್‌ಸಿಯಿಂದ ಸೆ.16 ರಂದು ಹುದಿಕೇರಿಯಲ್ಲಿ ಜನಜಾಗೃತಿ ಮಾನವ ಸರಪಳಿ ಕಾರ್ಯಕ್ರಮ*
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

*ಸಿಎನ್‌ಸಿಯಿಂದ ಸೆ.16 ರಂದು ಹುದಿಕೇರಿಯಲ್ಲಿ ಜನಜಾಗೃತಿ ಮಾನವ ಸರಪಳಿ ಕಾರ್ಯಕ್ರಮ*

ಸೆಪ್ಟೆಂಬರ್ 13, 20242 Mins ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link

ಮಡಿಕೇರಿ NEWS DESK ಸೆ.13 : ಕೊಡಗು ಜಿಲ್ಲೆಯ ವಿವಿಧೆಡೆ ನಡೆಯುತ್ತಿರುವ ಬೃಹತ್ ಭೂಪರಿವರ್ತನೆ ಮತ್ತು ಭೂವಿಲೇವಾರಿಯನ್ನು ಸ್ಥಗಿತಗೊಳಿಸಬೇಕೆಂದು ಒತ್ತಾಯಿಸಿ ಕೊಡವ ನ್ಯಾಷನಲ್ ಕೌನ್ಸಿಲ್ ಸಂಘಟನೆಯ ವತಿಯಿಂದ ಸೆ.16ರಂದು ಹುದಿಕೇರಿಯಲ್ಲಿ ಜನಜಾಗೃತಿ ಮಾನವ ಸರಪಳಿ ಕಾರ್ಯಕ್ರಮ ನಡೆಯಲಿದೆ ಎಂದು ಸಿಎನ್‌ಸಿ ಅಧ್ಯಕ್ಷ ಎನ್.ಯು.ನಾಚಪ್ಪ ತಿಳಿಸಿದ್ದಾರೆ. ಪತ್ರಿಕಾ ಪ್ರಕಟಣೆ ನೀಡಿರುವ ಅವರು ಹುದಿಕೇರಿಯಲ್ಲಿ ಬೆಳಿಗ್ಗೆ 10.30 ಗಂಟೆಗೆ ಮಾನವ ಸರಪಳಿ ನಿರ್ಮಿಸಿ ಹಕ್ಕೊತ್ತಾಯ ಮಂಡಿಸಲಾಗುವುದು. ಮಾನವ ಸರಪಳಿ ಜನಜಾಗೃತಿ ಕಾರ್ಯಕ್ರಮದಲ್ಲಿ ಸರ್ವ ಕೊಡವರು ಪಾಲ್ಗೊಳ್ಳುವ ಮೂಲಕ ಬೃಹತ್ ಭೂಪರಿವರ್ತನೆ ಮತ್ತು ಭೂವಿಲೇವಾರಿಯ ವಿರುದ್ಧ ಸಿಎನ್‌ಸಿ ನಡೆಸುತ್ತಿರುವ ಹೋರಾಟಕ್ಕೆ ಕೈಜೋಡಿಸಬೇಕೆಂದು ಮನವಿ ಮಾಡಿದ್ದಾರೆ. ಆದಿಮಸಂಜಾತ ಕೊಡವರ ಭೂಮಿಯ ಹಕ್ಕನ್ನು ರಕ್ಷಿಸಲು ಬೃಹತ್ ಭೂಪರಿವರ್ತನೆ ಮತ್ತು ಭೂವಿಲೇವಾರಿ ವಿರುದ್ಧ ಹೋರಾಟ ಅನಿವಾರ್ಯವಾಗಿದೆ. “ಕೊಡವ ಲ್ಯಾಂಡ್” ಸ್ವಯಂ ನಿರ್ಣಯದ ಭೂರಾಜಕೀಯ ಸ್ವಾಯತ್ತತೆ ಘೋಷಣೆ ಮತ್ತು ಕೊಡವರಿಗೆ ಎಸ್‌ಟಿ ಟ್ಯಾಗ್ ನೀಡುವುದು ಅಗತ್ಯವಾಗಿದೆ. ಇದಕ್ಕಾಗಿ ವ್ಯಾಪಕ ಜನಜಾಗೃತಿ ಮತ್ತು ಜಿಲ್ಲೆಯಾದ್ಯಂತ ಶಾಂತಿಯುತ ಬೃಹತ್ ಮಾನವ ಸರಪಳಿ ಕಾರ್ಯಕ್ರಮಗಳನ್ನು ನಡೆಸಲಾಗುತ್ತಿದೆ ಎಂದು ಹೇಳಿದ್ದಾರೆ. ಕೊಡವ ಲ್ಯಾಂಡ್ ಗೆ ಮಾರಕವಾಗಿರುವ ಭೂಮಾಫಿಯಾ, ರೆಸಾರ್ಟ್ ಮಾಫಿಯಾ, ವಿಲ್ಲಾ, ಟೌನ್ ಶಿಪ್, ಬೃಹತ್ ಭೂಪರಿವರ್ತನೆ ಮತ್ತು ಭೂವಿಲೇವಾರಿ ಮಾಫಿಯಾಗಳಂತಹ ಬಂಡವಾಳಶಾಹಿಗಳಿಗೆ ನೆರವಾಗಬಲ್ಲ ಕಾನೂನುಗಳನ್ನು ರೂಪಿಸಿ ಕೊಡವರಿಗೆ ಮಾತೃಭೂಮಿಯಲ್ಲಿ ನೆಲೆ ಇಲ್ಲದಂತೆ ಮಾಡುವ ಹುನ್ನಾರ ನಡೆದಿದೆ. ಇದಕ್ಕೆ ಕೊಡವ ವಿರೋಧಿಗಳ ಬೆಂಬಲವಿದೆ ಎಂದು ಆರೋಪಿಸಿದ್ದಾರೆ. ರಾಷ್ಟಿçÃಯ ಹೆದ್ದಾರಿಯ ಕುಟ್ಟ ಸಮೀಪದ ಪೂಚೆಕಲ್ಲು ಗ್ರಾಮದಲ್ಲಿ ಇತ್ತೀಚೆಗೆ ಜಲಗರ್ಭ ಮತ್ತು ಭೂಗರ್ಭ ಸ್ಫೋಟವಾಗಿದೆ. ಇಲ್ಲಿ ಸಂಭವಿಸಿರುವ ಅನಾಹುತ ಲಕ್ಷö್ಮಣ ತೀರ್ಥ ವ್ಯಾಪ್ತಿಗೂ ವ್ಯಾಪಿಸಿ ಕ್ರಮೇಣ ಇಡೀ ಕೊಡಗಿಗೆ ಅನಾಹುತ ಎದುರಾಗಬಹುದು. ಕುಟ್ಟ ಅತಿ ಎತ್ತರದ ಬ್ರಹ್ಮಗಿರಿ ಪರ್ವತ ಶ್ರೇಣಿಯಲ್ಲಿದ್ದು, ವಿಶ್ವ ಪಾರಂಪರಿಕ ತಾಣವಾಗಿದೆ. ಜಲಪ್ರಳಯ, ಭೂಸ್ಫೋಟ ಸಂಭವಿಸಿದ ಕೇರಳದ ವಯನಾಡು ಕೊಡಗು ಗಡಿರೇಖೆಯಲ್ಲಿದೆ. ಬಂಡವಾಳಶಾಹಿಗಳು ನಿಯಮ ಮೀರಿರುವುದರಿಂದ ಮುಂದೆ ಅಪಾಯ ಕಾದಿದೆ. ಸರಕಾರದ ಕಾನೂನು ಕೊಡವರಿಗೆ ಮಾತ್ರ ಅನ್ವಯವಾಗುತ್ತಿದ್ದು, ಬಂಡವಾಳಶಾಹಿಗಳು ಆಡಳಿತ ವ್ಯವಸ್ಥೆಯ ಕೃಪಾ ಕಟಾಕ್ಷದಿಂದ ಯಾವುದೇ ಸೂಕ್ಷö್ಮ ಪರಿಸರ ವಲಯದ ಕಾನೂನಿಗೆ ಒಳಪಡುತ್ತಿಲ್ಲ. ಕೊಡವರು ಮಾತ್ರ ಎಲ್ಲಾ ಕಾನೂನುಗಳಿಗೆ ಒಳಪಟ್ಟು ಆಡಳಿತ ವ್ಯವಸ್ಥೆಯಿಂದ ಕಿರುಕುಳ ಅನುಭವಿಸುತ್ತಿದ್ದಾರೆ ಎಂದು ಆರೋಪಿಸಿದ್ದಾರೆ.
ಹಾರಂಗಿ ಸೇರಿದಂತೆ ಅಪಾಯಕಾರಿ ಕಟ್ಟೆಗಳನ್ನು ತೆರವುಗೊಳಿಸಬೇಕು. ಕೊಡಗು ಜಿಲ್ಲೆಯಲ್ಲಿರುವ ಮಾರಕ ಕಟ್ಟೆಗಳು ಮತ್ತು ರೆಸಾರ್ಟ್ಗಳ ಬಗ್ಗೆ ಶ್ವೇತಪತ್ರ ಹೊರಡಿಸಬೇಕು. ಆರ್ಥಿಕವಾಗಿ ಹಿಂದುಳಿದಿರುವ ಕೊಡವರು ಸ್ವಾಭಿಮಾನದಿಂದ ಜೀವನ ಸಾಗಿಸಲು ಬ್ಯಾಂಕ್ ಮತ್ತು ಸಹಕಾರ ಸಂಘಗಳು ಸಾಲದ ಸೌಲಭ್ಯ ನೀಡಬೇಕು ಎಂದು ಒತ್ತಾಯಿಸಿದ್ದಾರೆ.
ಕೊಡವ ಲ್ಯಾಂಡ್ ನ್ನು ಉಳಿಸಿಕೊಳ್ಳುವುದಕ್ಕಾಗಿ ಸಿಎನ್‌ಸಿ ಸಂಘಟನೆ ಭೂಮಾಫಿಯಾ, ರೆಸಾರ್ಟ್ ಮಾಫಿಯಾ, ವಿಲ್ಲಾ, ಟೌನ್ ಶಿಪ್ ಗಳ ನಿರ್ಮಾಣ, ಬೃಹತ್ ಭೂಪರಿವರ್ತನೆ ಮತ್ತು ಭೂವಿಲೇವಾರಿ ವಿರುದ್ಧ ಹೋರಾಟವನ್ನು ನಡೆಸುತ್ತಿದೆ. ಆದರೆ ಅಧಿಕಾರದಲ್ಲಿರುವವರು ಹೋರಾಟದ ದಿಕ್ಕು ತಪ್ಪಿಸಿ ಜನರಲ್ಲಿ ಗೊಂದಲ ಸೃಷ್ಟಿಸುವ ಕಾರ್ಯಕ್ಕೆ ಮುಂದಾಗಿದ್ದು, ಹೋಂಸ್ಟೇ ಮತ್ತು ಗೋದಾಮುಗಳ ನಿರ್ಮಾಣಕ್ಕೆ ಅನುಮತಿ ನೀಡದೆ ಸತಾಯಿಸಲು ಆರಂಭಿಸಿದ್ದಾರೆ. ಆದಿಮಸಂಜಾತ ಕೊಡವ ಬುಡಕಟ್ಟು ಜನಾಂಗದ ಮಾತೃಭೂಮಿ ಕೊಡವಲ್ಯಾಂಡ್ ಗೆ ಸಂಚಕಾರವಾಗಬಲ್ಲ ಬೃಹತ್ ಭೂಪರಿವರ್ತನೆಗೆ ಮಾತ್ರ ಅನುಮತಿ ನೀಡುತ್ತಿದ್ದಾರೆ. ಬೇಲಿಯೇ ಎದ್ದು ಹೊಲವನ್ನು ಮೇಯ್ದಂತೆ ಸರ್ಕಾರವೇ ನೇರವಾಗಿ ಭೂಪರಿವರ್ತನೆಗೆ ಕುಮ್ಮಕ್ಕು ನೀಡುತ್ತಿದೆ. ರೆಸಾರ್ಟ್ ಮಾಫಿಯಾಗಳು ಹೋರಾಟವನ್ನು ಹತ್ತಿಕ್ಕಲು ಪಂಚಾಯ್ತಿ ಪ್ರತಿನಿಧಿಗಳನ್ನು ಹಾಗೂ ಪ್ರಜಾಪ್ರಭುತ್ವದ 4ನೇ ಅಂಗದ ಕೆಲವು ಸದಸ್ಯರನ್ನು ಸ್ಲೀಫಿಂಗ್ ಪಾರ್ಟ್ ನರ್ ಗಳನ್ನಾಗಿ ನೇಮಕ ಮಾಡಿಕೊಳ್ಳುತ್ತಿದ್ದಾರೆ. ಭೂಮಾಫಿಯಾಗಳನ್ನು ಪ್ರೀತಿಯಿಂದ ಕಾಣುವ ಆಡಳಿತ ವರ್ಗ ಮುಗ್ಧ ರೈತರನ್ನು ಹಾಗೂ ಮೂಲ ನಿವಾಸಿಗಳನ್ನು ಶತ್ರುಗಳಂತೆ ನಡೆಸಿಕೊಳ್ಳುತ್ತಿದ್ದಾರೆ. ಹೋರಾಟ ನಡೆಸುವ ಜನರಿಗೆ ಕಿರುಕುಳ ನೀಡುತ್ತಿದ್ದಾರೆ ಎಂದು ಎನ್.ಯು.ನಾಚಪ್ಪ ಆರೋಪಿಸಿದ್ದಾರೆ. ಕೊಡಗಿನಲ್ಲಿ ನಿರಂತರವಾಗಿ ಹೊರ ಪ್ರದೇಶದ ಬಂಡವಾಳಶಾಹಿಗಳಿಗೆ, ಕಾರ್ಪೋರೇಟ್ ವಲಯಕ್ಕೆ, ಬಹುರಾಷ್ಟಿçÃಯ ಕಂಪೆನಿಗಳಿಗೆ, ಅನಿವಾಸಿ ಭಾರತೀಯರಿಗೆ, ರೆಸಾರ್ಟ್ ಮಾಫಿಯಾಗಳಿಗೆ, ದೊಡ್ಡ ಉದ್ಯಮಿಪತಿಗಳಿಗೆ ಭೂಮಿಯನ್ನು ಮಿತಿ ಮೀರಿ ನೀಡಿದರೆ ಭವಿಷ್ಯತ್ತಿಗೆ ತೊಂದರೆಯಾಗಲಿದೆ. ಟೌನ್ ಶಿಪ್, ನಗರೀಕರಣ, ವಿಲ್ಲಾ, ರೆಸಾರ್ಟ್ಗಳ ನಿರ್ಮಾಣದಿಂದ ಕೊಡಗಿನಲ್ಲಿ ಜನಸಂಖ್ಯೆ ಹೆಚ್ಚಾಗಲಿದ್ದು, ಇದನ್ನು ತಡೆದುಕೊಳ್ಳುವ ಶಕ್ತಿ ಇಲ್ಲಿನ ಭೂಪ್ರದೇಶಕ್ಕೆ, ಭೂದೇವಿಗೆ ಇಲ್ಲವಾದ ಕಾರಣ ಬೃಹತ್ ಭೂಪರಿವರ್ತನೆ ಮತ್ತು ಭೂವಿಲೇವಾರಿಯನ್ನು ತಕ್ಷಣ ನಿಲ್ಲಿಸಬೇಕೆಂದು ಒತ್ತಾಯಿಸಿದ್ದಾರೆ.

Follow us Follow us
Share. WhatsApp Facebook Twitter Email Telegram Copy Link

Website design development company services in Mangalore

Forex Trading Teacher in India

Related Posts

*ಸುಂಟಿಕೊಪ್ಪ : ಹಿರಿಯ ಪತ್ರಕರ್ತ ಬಿ.ಸಿ.ದಿನೇಶ್ ಅವರಿಗೆ ಸನ್ಮಾನ*

ಮೇ 25, 2026

*ಮೈಸೂರು ಕಾಫಿ ಸಂಸ್ಕರಣ ಮಾರಾಟ ಮತ್ತು ಉಗ್ರಾಣ ಸಹಕಾರ ಸಂಘದ ಸಭೆ*

ಮೇ 25, 2026

*ಬೇಡು ಹಬ್ಬ : ಮದ್ಯ ಮಾರಾಟ ನಿಷೇಧ*

ಮೇ 25, 2026

*ಮೈಸೂರು ಕಾಫಿ ಸಂಸ್ಕರಣ ಮಾರಾಟ ಮತ್ತು ಉಗ್ರಾಣ ಸಹಕಾರ ಸಂಘದ ಸಭೆ*

ಮೇ 25, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಮಡಿಕೇರಿ ಮೇ 25 NEWS DESK : ದಿ ಮೈಸೂರು ಕಾಫಿ ಸಂಸ್ಕರಣ ಮಾರಾಟ ಮತ್ತು ಉಗ್ರಾಣ ಸಹಕಾರ ಸಂಘದ…

*ಬೇಡು ಹಬ್ಬ : ಮದ್ಯ ಮಾರಾಟ ನಿಷೇಧ*

ಮೇ 25, 2026

*ಮೂರ್ನಾಡು : ಮೇ 26 ರಂದು ಸುತ್ತಮುತ್ತಲಿನ ಪ್ರದೇಶದಲ್ಲಿ ವಿದ್ಯುತ್ ವ್ಯತ್ಯಯ*

ಮೇ 25, 2026

*ಶರಣ ಸಾಹಿತ್ಯ ಸಮ್ಮೇಳನದ ಆಮಂತ್ರಣ ಪತ್ರಿಕೆ ಬಿಡುಗಡೆ*

ಮೇ 25, 2026

*ಕೊಡಗು ಪತ್ರಕತ೯ರ ಸಂಘದಿಂದ ಪ್ರಶಸ್ತಿಗಳಿಗೆ ಅಜಿ೯ ಆಹ್ವಾನ*

ಮೇ 25, 2026

*ಕೊಡಗು : ಗ್ಯಾರಂಟಿ ಯೋಜನೆ ಅನುಷ್ಠಾನ ಪ್ರಾಧಿಕಾರ ಸಮಿತಿ ಸಭೆ : ಗ್ಯಾರಂಟಿ ಯೋಜನೆ ಪರಿಣಾಮಕಾರಿ ಅನುಷ್ಠಾನಕ್ಕೆ ಧರ್ಮಜ ಉತ್ತಪ್ಪ ಸಲಹೆ*

ಮೇ 25, 2026

*ಜಿಸಿಎಲ್ ಕ್ರಿಕೆಟ್ ಪಂದ್ಯಾವಳಿ ಉದ್ಘಾಟನೆ*

ಮೇ 25, 2026

*ಫೀ.ಮಾ.ಕಾರ್ಯಪ್ಪ ಕಾಲೇಜ್ ನಲ್ಲಿ ಕ್ರೀಡೆ ಮತ್ತು ಪ್ರತಿಭೋತ್ಸವ : ಶಿಕ್ಷಣದೊಂದಿಗೆ ಕ್ರೀಡೆಯಲ್ಲೂ ಕೀರ್ತಿ ಗಳಿಸಿ : ಅಂಕಿತಾ ಬಿ.ಎಸ್ ಕರೆ*

ಮೇ 25, 2026

*ಮೇ 25 ರಂದು ಮಡಿಕೇರಿಯಲ್ಲಿ ಪ್ರತಿಭಟನೆ*

ಮೇ 24, 2026

*ರಾಷ್ಟ್ರೀಯ ನಾಯಕರ ಪ್ರಶಸ್ತಿಗೆ ಭಾಜನರಾದ, ಚಾಮೆರ ದಿನೇಶ್ ಬೆಳ್ಯಪ್ಪ, ಚೋವಂಡ ಚೋಂದಮ್ಮ ಪೂಣಚ್ಚ*

ಮೇ 24, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.

Ad Blocker Enabled!
Ad Blocker Enabled!
Our website is made possible by displaying online advertisements to our visitors. Please support us by disabling your Ad Blocker.