Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಕೊಡಗು ಹೆಗ್ಗಡೆ ಸಮಾಜದ ಕ್ರೀಡಾ ಹಬ್ಬಕ್ಕೆ ಸಂಭ್ರಮದ ತೆರೆ*
  • *ಶಂಸುಲ್ ಉಲಮಾ ಕಾಲೇಜು ವಿದ್ಯಾರ್ಥಿಗಳ ಸಾಧನೆ : ಶಿಕ್ಷಣದ ಮೂಲಕ ಉತ್ತಮ ಭವಿಷ್ಯ ರೂಪಿಸಿಕೊಳ್ಳಲು ಗಣ್ಯರ ಕರೆ*
  • *5ನೇ ದಿನವೂ ಮುಂದುವರೆದ ವಸತಿ ರಹಿತರ ಧರಣಿ*
  • *ಕೊಡಗು : ಪತ್ರಿಕಾ ಪ್ರವಾಸ ವಾಹನಕ್ಕೆ ಚಾಲನೆ*
  • *ಜಿಲ್ಲಾ ಮಟ್ಟದ ತ್ರೈಮಾಸಿಕ ಕೆಡಿಪಿ ಸಭೆ : ಜೂನ್ ಮೊದಲ ವಾರದಲ್ಲಿ ಮುಂಗಾರು ಆರಂಭ ಸಾಧ್ಯತೆ : ರಸ್ತೆ ಸೇರಿದಂತೆ ಹಲವು ಕಾಮಗಾರಿ ಪೂರ್ಣಗೊಳಿಸಿ : ಸಚಿವ ಎನ್.ಎಸ್.ಭೋಸರಾಜು*
  • *ಮಾದಾಪುರದಲ್ಲಿ ಕೊಡವ ಸಮಾಜ ಭವನ ಲೋಕಾಪ೯ಣೆ : ಪ್ರಾಮಾಣಿಕತೆಯೊಂದಿಗೆ ಸಂಸ್ಕೃತಿ ಸಂರಕ್ಷಣೆಗೆ ಕೊಡವರು ವಿಶ್ವವ್ಯಾಪಿ ಹೆಸರು ವಾಸಿ : ಬಸವರಾಜ ಬೊಮ್ಮಾಯಿ ಶ್ಲಾಘನೆ*
  • *ಮಡಿಕೇರಿಯಲ್ಲಿ ಪತ್ರಕರ್ತರಿಗೆ ಉಚಿತ ಆರೋಗ್ಯ ತಪಾಸಣಾ ಶಿಬಿರ*
  • *ಪೊನ್ನಂಪೇಟೆಯಲ್ಲಿ ಬಿಜೆಪಿ ವಿಜಯೋತ್ಸವ*
  • *ಫೀಲ್ಡ್ ಮಾರ್ಷಲ್ ಕೆ.ಎಂ.ಕಾರ್ಯಪ್ಪ ಕಾಲೇಜಿನಲ್ಲಿ ‘ಶಾರ್ಟ್ ರೇಂಜ್ ರೈಫಲ್ ಫೈರಿಂಗ್ ರೇಂಜ್’ ಉದ್ಘಾಟನೆ*
  • *ಶ್ರದ್ಧಾಭಕ್ತಿಯಿಂದ ಜರುಗಿದ ಕರ್ಣಂಗೇರಿ ಕ್ಷೇತ್ರದ ಶ್ರೀರಾಜರಾಜೇಶ್ವರಿ ದೇವಾಲಯದ ವಾರ್ಷಿಕೋತ್ಸವ ಹಾಗೂ ರಥೋತ್ಸವ*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*ನಾಪೋಕ್ಲುವಿನಲ್ಲಿ ಸೆ.20 ರಿಂದ 22ರ ವರೆಗೆ “ಮದದೇ ಮದೀನಾ” ಬೃಹತ್ ಮಿಲಾದ್ ಸಮಾವೇಶ*
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

*ನಾಪೋಕ್ಲುವಿನಲ್ಲಿ ಸೆ.20 ರಿಂದ 22ರ ವರೆಗೆ “ಮದದೇ ಮದೀನಾ” ಬೃಹತ್ ಮಿಲಾದ್ ಸಮಾವೇಶ*

ಸೆಪ್ಟೆಂಬರ್ 18, 20242 Mins ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link


ಮಡಿಕೇರಿ ಸೆ.18 NEWS DESK : ನಾಪೋಕ್ಲು ಟೌನ್ ಮುಹಿಯದ್ದೀನ್ ಸುನ್ನಿ ಮುಸ್ಲಿಂ ಜಮಾಅತ್ ಆಶ್ರಯದಲ್ಲಿ ಸೆ.20 ರಿಂದ 22ರ ವರೆಗೆ “ಮದದೇ ಮದೀನಾ” ಬೃಹತ್ ಮಿಲಾದ್ ಸಮಾವೇಶ ನಾಪೋಕ್ಲುವಿನಲ್ಲಿ ನಡೆಯಲಿದೆ ಎಂದು ಜಮಾಅತ್‍ನ ಅಧ್ಯಕ್ಷ ಎಂ.ಹೆಚ್.ಅಬ್ದುಲ್ ರೆಹಮಾನ್ ತಿಳಿಸಿದರು.  ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ನಾಪೋಕ್ಲು ಮಾರುಕಟ್ಟೆ ಆವರಣದಲ್ಲಿ ಮೂರು ದಿನಗಳ ಕಾಲ ನಡೆಯಲಿರುವ ಸಮಾವೇಶಕ್ಕೆ ಸೆ.20 ರಂದು ಜುಮುಅ ನಮಾಜ್‍ನ ನಂತರ ನಾಪೋಕ್ಲು ಟೌನ್ ಮುಹಿಯದ್ದೀನ್ ಸುನ್ನಿ ಮುಸ್ಲಿಂ ಜಮಾಅತ್‍ನ ಅಧ್ಯಕ್ಷ ಎಂ.ಹೆಚ್.ಅಬ್ದುಲ್ ರೆಹಮಾನ್ ನೇತೃತ್ವದಲ್ಲಿ ಧ್ವಜಾರೋಹಣ ನೆರವೇರಿಸುವ ಮೂಲಕ ಚಾಲನೆ ದೊರೆಯಲಿದೆ ಎಂದರು. ಸಂಜೆ 7 ಗಂಟೆಗೆ ಧಾರ್ಮಿಕ ಪ್ರಭಾಷಣ ನಡೆಯಲಿದ್ದು, ನಾಪೋಕ್ಲು ಟೌನ್ ಮುಸ್ಲಿಂ ಜಮಾಅತ್ ಮುದರಿಸ್ ಅಶ್ರಫ್ ಅಹ್ಸನಿ ಕಾಮಿಲ್ ಸಖಾಫಿ ಉದ್ಘಾಟಿಸಲಿದ್ದಾರೆ. ಮಿಲಾದ್ ಸ್ವಾಗತ ಸಮಿತಿ ಗೌರವಾಧ್ಯಕ್ಷ ಉಸ್ಮಾನ್ ಹಾಜಿ ಅಧ್ಯಕ್ಷತೆ ವಹಿಸಲಿದ್ದು, ನಾಪೋಕ್ಲು ಟೌನ್ ಸುನ್ನಿ ಮುಸ್ಲಿಂ ಜಮಾಅತ್ ಖತೀಬ್ ಉಬೈದ್ ಸಖಾಫಿ ಅಲ್ ಅಝ್‍ಹರಿ ವಯನಾಡ್ ಮುಖ್ಯ ಪ್ರಭಾಷಣ ಮಾಡಲಿದ್ದಾರೆ. ಮುದರಿಸ್ ಕುಂಜಿಲ ನಿಝಾರ್ ಅಹ್ಸನಿ ಕಕ್ಕಿಡಿಪುರಂ ದುಆ ನೇತೃತ್ವ ವಹಿಸಲಿದ್ದಾರೆ ಎಂದರು. ಸೆ.21 ರಂದು ಬೆಳಿಗ್ಗೆ 9 ಗಂಟೆಗೆ ಮದ್ರಸ ವಿದ್ಯಾರ್ಥಿಗಳಿಗೆ ಕಲಾ ಸ್ಪರ್ಧೆ ನಡೆಯಲಿದ್ದು, ಕಾರ್ಯಕ್ರಮವನ್ನು ನಾಪೋಕ್ಲು ಮುಅಲ್ಲಿಂ ಹಿದಾಯತುಲ್ ಇಸ್ಲಾಂ ಮದ್ರಸ್‍ನ ಸದರ್ ರಫೀಖ್ ಅಹ್ಸನಿ ಉದ್ಘಾಟಿಸಲಿದ್ದಾರೆ. ಅಧ್ಯಕ್ಷತೆಯನ್ನು ನಾಪೋಕ್ಲು ಟೌನ್ ಸುನ್ನಿ ಮುಸ್ಲಿಂ ಜಮಾಅತ್ ಅಧ್ಯಕ್ಷ ಎಂ.ಹೆಚ್.ಅಬ್ದುಲ್ ರಹಮಾನ್ ವಹಿಸಿದ್ದಾರೆ ಎಂದು ತಿಳಿಸಿದರು. ಸಂಜೆ 7 ಗಂಟೆಗೆ ಹುಬ್ಬುರಸೂಲ್ ಪ್ರಭಾಷಣ ನಡೆಯಲಿದ್ದು, ಕಾರ್ಯಕ್ರಮವನ್ನು ನಾಪೋಕ್ಲು ಟೌನ್ ಸುನ್ನಿ ಮುಸ್ಲಿಂ ಜಮಾಅತ್ ಮಾಜಿ ಖತೀಬ್ ಶಾದುಲಿ ಸಖಾಫಿ ಉದ್ಘಾಟಿಸಲಿದ್ದಾರೆ. ಅಧ್ಯಕ್ಷತೆಯನ್ನು ಮೀಲಾದ್ ಸ್ವಾಗತ ಸಮಿತಿ ಅಧ್ಯಕ್ಷ ಎಂ.ಎಂ.ಅಬೂಬಕರ್ ವಹಿಸಲಿದ್ದು, ಯಹ್ಯ ಬಾಖವಿ ಪುಝಕ್ಕರ ಮುಖ್ಯ ಭಾಷಣ ಮಾಡಲಿದ್ದಾರೆ. ದುಆ ನೇತೃತ್ವವನ್ನು ಸಯ್ಯಿದ್ ಅಬ್ದುಲ್ ಅಝೀಝ್ ತಂಙಳ್ ಮಲೇಶಿಯ ವಹಿಸಲಿದ್ದಾರೆ ಎಂದು ಹೇಳಿದರು.  ಸೆ.22 ರಂದು ಸಂಜೆ 4 ಗಂಟೆಗೆ ಸಾರ್ವಜನಿಮ ಸಮಾವೇಶ ನಡೆಯಲಿದ್ದು, ಕೊಡಗು ನಾಇಬ್ ಖಾಝಿ ಅಬ್ದುಲ್ಲ ಫೈಝಿ ಉದ್ಘಾಟಿಸಲಿದ್ದಾರೆ. ಅಧ್ಯಕ್ಷತೆಯನ್ನು ನಾಪೋಕ್ಲು ಟೌನ್ ಸುನ್ನಿ ಮುಸ್ಲಿಂ ಜಮಾಅತ್ ಅಧ್ಯಕ್ಷ ಎಂ.ಹೆಚ್.ಅಬ್ದುಲ್ ರಹಮಾನ್ ವಹಿಸಲಿದ್ದಾರೆ. ಮುಖ್ಯ ಅತಿಥಿಗಳಾಗಿ ಮುಖ್ಯಮಂತ್ರಿಗಳ ಕಾನೂನು ಸಲಹೆಗಾರರು ಹಾಗೂ ವಿರಾಜಪೇಟೆ ಕ್ಷೇತ್ರದ ಶಾಸಕ ಎ.ಎಸ್.ಪೊನ್ನಣ್ಣ, ಮಡಿಕೇರಿ ವಿಧಾನಸಭಾ ಕ್ಷೇತ್ರದ ಶಾಸಕ ಡಾ.ಮಂತರ್ ಗೌಡ ಪಾಲ್ಗೊಳ್ಳಲಿದ್ದು, ಕಾರ್ಯಕ್ರಮಕ್ಕೆ ಸುಮಾರು ಮೂರು ಸಾವಿರ ಜನ ಸೇರುವ ನಿರೀಕ್ಷೆ ಇದೆ ಎಂದರು. ಸಂಜೆ 7 ಗಂಟೆಗೆ ಅಬ್ದುಲ್ ಲತೀಫ್ ಸಖಾಫಿ ಕಾಂತಪುರಂ ನೇತೃತ್ವದಲ್ಲಿ ಮದನೀಯಂ ಆತ್ಮೀಯ ಮಜ್ಲಿಸ್ ನಡೆಯಲಿದ್ದು, ದುಆ ನೇತೃತ್ವವನ್ನು ಸಯ್ಯಿದ್ ಅಲ್ ಮಶ್‍ಹೂರ್ ಆಟಕೋಯ ತಂಙಳ್ ಅಲ್ ಅಝ್‍ಹರಿ ನಿಲಾಮುಟಂ ವಹಿಸಲಿದ್ದಾರೆ ಎಂದು ತಿಳಿಸಿದರು. ಜಮಾಅತ್‍ನ ಮಾಜಿ ಅಧ್ಯಕ್ಷ ಸಲೀಂ ಹ್ಯಾರಿಸ್ ಮಾತನಾಡಿ, ಸೆ.22 ರಂದು ಮಧ್ಯಾಹ್ನ 1.30 ಗಂಟೆಗೆ ಹಳೇತೂಕು ಮಸೀದಿ ಆವರಣದಿಂದ ನಾಪೋಕ್ಲು ಮಾರುಕಟ್ಟೆಯವರೆಗೆ ಬೃಹತ್ ಮಿಲಾದ್ ಸಂದೇಶ ಜಾಥಾ ನಡೆಯಲಿದ್ದು, ಜಾಥಾದಲ್ಲಿ ಪ್ರವಾದಿ ಮಹಮ್ಮದ್‍ರ ಶಾಂತಿ ಸಂದೇಶ ಹಾಗೂ ಅಲ್ಲಾ ಶ್ಲೋಕ ಪಠಣ ಮಾಡಲಾಗುವುದು. ಈ ನಿಟ್ಟಿನಲ್ಲಿ ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ಸಮಿತಿಯವರು ಜಾಗೃತಿ ವಹಿಸುವುದಾಗಿ ತಿಳಿಸಿದರು. ಸುದ್ದಿಗೋಷ್ಠಿಯಲ್ಲಿ ಜಮಾಅತ್ ಮಾಜಿ ಅಧ್ಯಕ್ಷ ಬಿ.ಹೆಚ್.ಹಮೀದ್, ಅಬ್ದುಲ್ ಹಝಿಜ್, ಸಮಾವೇಶ ಸಮಿತಿ ಕಾರ್ಯದರ್ಶಿ ಸಿ.ಹೆಚ್.ಅಹಮ್ಮದ್ ಹಾಗೂ ಗೌರವಾಧ್ಯಕ್ಷ ಕೆ.ಕೆ.ಉಸ್ಮಾನ್ ಉಪಸ್ಥಿತರಿದ್ದರು.

Follow us Follow us
Share. WhatsApp Facebook Twitter Email Telegram Copy Link

Website design development company services in Mangalore

Forex Trading Teacher in India

Related Posts

*ಕೊಡಗು ಹೆಗ್ಗಡೆ ಸಮಾಜದ ಕ್ರೀಡಾ ಹಬ್ಬಕ್ಕೆ ಸಂಭ್ರಮದ ತೆರೆ*

ಮೇ 5, 2026

*ಶಂಸುಲ್ ಉಲಮಾ ಕಾಲೇಜು ವಿದ್ಯಾರ್ಥಿಗಳ ಸಾಧನೆ : ಶಿಕ್ಷಣದ ಮೂಲಕ ಉತ್ತಮ ಭವಿಷ್ಯ ರೂಪಿಸಿಕೊಳ್ಳಲು ಗಣ್ಯರ ಕರೆ*

ಮೇ 5, 2026

*5ನೇ ದಿನವೂ ಮುಂದುವರೆದ ವಸತಿ ರಹಿತರ ಧರಣಿ*

ಮೇ 5, 2026

*ಶಂಸುಲ್ ಉಲಮಾ ಕಾಲೇಜು ವಿದ್ಯಾರ್ಥಿಗಳ ಸಾಧನೆ : ಶಿಕ್ಷಣದ ಮೂಲಕ ಉತ್ತಮ ಭವಿಷ್ಯ ರೂಪಿಸಿಕೊಳ್ಳಲು ಗಣ್ಯರ ಕರೆ*

ಮೇ 5, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ವಿರಾಜಪೇಟೆ ಮೇ 6 NEWS DESK : ಪೆರುಂಬಾಡಿಯ ಶಂಸುಲ್ ಉಲಮಾ ಎಜುಕೇಶನಲ್ ಅಕಾಡೆಮಿಯ ಎಸ್ಇಎ ಕಾಲೇಜು ವಿದ್ಯಾರ್ಥಿಗಳು ಪಿಯುಸಿ ಪರೀಕ್ಷೆಯಲ್ಲಿ…

*5ನೇ ದಿನವೂ ಮುಂದುವರೆದ ವಸತಿ ರಹಿತರ ಧರಣಿ*

ಮೇ 5, 2026

*ಕೊಡಗು : ಪತ್ರಿಕಾ ಪ್ರವಾಸ ವಾಹನಕ್ಕೆ ಚಾಲನೆ*

ಮೇ 5, 2026

*ಜಿಲ್ಲಾ ಮಟ್ಟದ ತ್ರೈಮಾಸಿಕ ಕೆಡಿಪಿ ಸಭೆ : ಜೂನ್ ಮೊದಲ ವಾರದಲ್ಲಿ ಮುಂಗಾರು ಆರಂಭ ಸಾಧ್ಯತೆ : ರಸ್ತೆ ಸೇರಿದಂತೆ ಹಲವು ಕಾಮಗಾರಿ ಪೂರ್ಣಗೊಳಿಸಿ : ಸಚಿವ ಎನ್.ಎಸ್.ಭೋಸರಾಜು*

ಮೇ 5, 2026

*ಮಾದಾಪುರದಲ್ಲಿ ಕೊಡವ ಸಮಾಜ ಭವನ ಲೋಕಾಪ೯ಣೆ : ಪ್ರಾಮಾಣಿಕತೆಯೊಂದಿಗೆ ಸಂಸ್ಕೃತಿ ಸಂರಕ್ಷಣೆಗೆ ಕೊಡವರು ವಿಶ್ವವ್ಯಾಪಿ ಹೆಸರು ವಾಸಿ : ಬಸವರಾಜ ಬೊಮ್ಮಾಯಿ ಶ್ಲಾಘನೆ*

ಮೇ 5, 2026

*ಮಡಿಕೇರಿಯಲ್ಲಿ ಪತ್ರಕರ್ತರಿಗೆ ಉಚಿತ ಆರೋಗ್ಯ ತಪಾಸಣಾ ಶಿಬಿರ*

ಮೇ 5, 2026

*ಪೊನ್ನಂಪೇಟೆಯಲ್ಲಿ ಬಿಜೆಪಿ ವಿಜಯೋತ್ಸವ*

ಮೇ 5, 2026

*ಫೀಲ್ಡ್ ಮಾರ್ಷಲ್ ಕೆ.ಎಂ.ಕಾರ್ಯಪ್ಪ ಕಾಲೇಜಿನಲ್ಲಿ ‘ಶಾರ್ಟ್ ರೇಂಜ್ ರೈಫಲ್ ಫೈರಿಂಗ್ ರೇಂಜ್’ ಉದ್ಘಾಟನೆ*

ಮೇ 5, 2026

*ಶ್ರದ್ಧಾಭಕ್ತಿಯಿಂದ ಜರುಗಿದ ಕರ್ಣಂಗೇರಿ ಕ್ಷೇತ್ರದ ಶ್ರೀರಾಜರಾಜೇಶ್ವರಿ ದೇವಾಲಯದ ವಾರ್ಷಿಕೋತ್ಸವ ಹಾಗೂ ರಥೋತ್ಸವ*

ಮೇ 5, 2026

*ಬಾಳೆಲೆ-ನಲ್ಲೂರು : ಮೇ 5 ರಂದು ವಿವಿಧೆಡೆ ವಿದ್ಯುತ್ ವ್ಯತ್ಯಯ*

ಮೇ 4, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.

Ad Blocker Enabled!
Ad Blocker Enabled!
Our website is made possible by displaying online advertisements to our visitors. Please support us by disabling your Ad Blocker.