Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಸಂಚಾರ ನಿಯಮ ಉಲ್ಲಂಘನೆ ಪ್ರಕರಣ : ಶೇ.50 ರಷ್ಟು ದಂಡ ಪಾವತಿಗೆ ಅವಕಾಶ*
  • *ಕೊಡಗು ವಿದ್ಯಾಲಯದಲ್ಲಿ ಅಂತರಾಷ್ಟ್ರೀಯ ಯೋಗ ದಿನಾಚರಣೆ*
  • *ಗದ್ದೆಹಳ್ಳ ಸರಕಾರಿ ಪ್ರಾಥಮಿಕ ಶಾಲೆಯಲ್ಲಿ ಎಲ್‌ಕೆಜಿ ತರಗತಿ ಪ್ರಾರಂಭೋತ್ಸವ : ಆಂಗ್ಲ ಭಾಷೆಯ ಕಲಿಕೆ ಅನಿವಾರ್ಯ : ಶಾಸಕ ಡಾ.ಮಂತರ್ ಗೌಡ*
  • *ಕೊಡಗಿನಲ್ಲಿ ಮಳೆ ಕೊರತೆ : ಪುತ್ತರಿ ಹಬ್ಬಕ್ಕೆ ಕದಿರು ತೆಗೆಯುವುದಕ್ಕಾಗಿ ಮಾತ್ರ ಭತ್ತ ಬೆಳೆಯಬೇಕಾದ ಪರಿಸ್ಥಿತಿ*
  • *ಕೊಡಗು ಜಿಲ್ಲಾ ಅಭಿವೃದ್ಧಿ ಸಮನ್ವಯ ಮತ್ತು ಉಸ್ತುವಾರಿ ಸಮಿತಿ(ದಿಶಾ) ಸಭೆ : ಅಭಿವೃದ್ಧಿ ಕಾರ್ಯಗಳನ್ನು ಚುರುಕುಗೊಳಿಸಲು ಸಂಸದ ಯದುವೀರ್ ಸೂಚನೆ*
  • *ವಲಸಿಗರನ್ನು ಮುಕ್ತವಾಗಿ ಬಿಟ್ಟು ಹಿಂದೂ ಕಾರ್ಯಕರ್ತರ ವಿರುದ್ಧ ಎಫ್‌ಐಆರ್ : ಸಂಸದ ಯದುವೀರ್ ಅಸಮಾಧಾನ*
  • *33 ನಿಮಿಷದಲ್ಲಿ 310 ಆಸನಗಳು : ಯೋಗಾಸನದಲ್ಲಿ ಬಿ.ಕೆ.ಸಿಂಚನ ಹೊಸ ದಾಖಲೆ*
  • *ಕೆಪಿಸಿಸಿ ಅಧ್ಯಕ್ಷರನ್ನು ಭೇಟಿಯಾದ ನಂದಿನೆರವಂಡ ಮಧು*
  • *33 ನಿಮಿಷದಲ್ಲಿ 310 ಆಸನಗಳು : ಯೋಗಾಸನದಲ್ಲಿ ಬಿ.ಕೆ.ಸಿಂಚನ ಹೊಸ ದಾಖಲೆ*
  • *ಮಕ್ಕಂದೂರು : ವಿದ್ಯಾರ್ಥಿಗಳಿಗೆ ಸಾಂಕ್ರಾಮಿಕ ರೋಗಗಳ ಕುರಿತು ಆರೋಗ್ಯ ಅರಿವು*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*ಕೊಡಗು : ಪೌರಕಾರ್ಮಿಕರ ವಸತಿ ಗೃಹ ನಿರ್ಮಾಣಕ್ಕೆ ಪ್ರಸ್ತಾವನೆ ಸಲ್ಲಿಸಿ : ಜಿಲ್ಲಾಧಿಕಾರಿ ಸೂಚನೆ*
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

*ಕೊಡಗು : ಪೌರಕಾರ್ಮಿಕರ ವಸತಿ ಗೃಹ ನಿರ್ಮಾಣಕ್ಕೆ ಪ್ರಸ್ತಾವನೆ ಸಲ್ಲಿಸಿ : ಜಿಲ್ಲಾಧಿಕಾರಿ ಸೂಚನೆ*

ಸೆಪ್ಟೆಂಬರ್ 25, 20242 Mins ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link

ಮಡಿಕೇರಿ ಸೆ.25 NEWS DESK  : ಜಿಲ್ಲೆಯಲ್ಲಿನ ಪೌರಕಾರ್ಮಿಕರ ವಸತಿ ಗೃಹಗಳು ಶಿಥಿಲಗೊಂಡಿರುವ ಬಗ್ಗೆ ಪರಿಶೀಲಿಸಿ, ವಸತಿ ಗೃಹ ನಿರ್ಮಾಣಕ್ಕೆ ಅಗತ್ಯ ಪ್ರಸ್ತಾವನೆ ಸಲ್ಲಿಸುವಂತೆ ಸಂಬಂಧಪಟ್ಟ ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ವೆಂಕಟ್ ರಾಜಾ ಸೂಚಿಸಿದ್ದಾರೆ. ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಅನುಸೂಚಿತ ಜಾತಿ, ಅನುಸೂಚಿತ ಪಂಗಡಗಳ ದೌರ್ಜನ್ಯ ನಿಯಂತ್ರಣ ಸಂಬಂಧ ರಚಿಸಲಾಗಿರುವ ಜಿಲ್ಲಾ ಜಾಗೃತಿ ಮತ್ತು ಉಸ್ತುವಾರಿ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಜಿಲ್ಲೆಯಲ್ಲಿನ ನಗರಸಭೆ, ಪುರಸಭೆ, ಪಟ್ಟಣ ಪಂಚಾಯಿತಿ ಹಾಗೂ ಇತರೆ ಕಡೆಗಳಲ್ಲಿ ಪೌರಕಾರ್ಮಿಕರ ವಸತಿ ಗೃಹ ಕಟ್ಟಡ ಶೀತಲಗೊಂಡಿರುವ ಮಾಹಿತಿ ಪಡೆದು ವರದಿ ನೀಡಬೇಕು. ಜೊತೆಗೆ ನೂತನ ಕಟ್ಟಡ ನಿರ್ಮಾಣಕ್ಕೆ ಸರ್ಕಾರಕ್ಕೆ ಅಗತ್ಯ ಪ್ರಸ್ತಾವನೆ ಸಲ್ಲಿಸುವಂತೆ ಜಿಲ್ಲಾಧಿಕಾರಿ ನಿರ್ದೇಶನ ನೀಡಿದರು. ಈ ಕುರಿತು ವಿಷಯ ಪ್ರಸ್ತಾಪಿಸಿದ ಸಮಿತಿ ಸದಸ್ಯರಾದ ಪಳನಿ ಪ್ರಕಾಶ್ ಅವರು ಮಡಿಕೇರಿ ನಗರಸಭೆ, ವಿರಾಜಪೇಟೆ ಮತ್ತು ಕುಶಾಲನಗರ ಪುರಸಭೆ, ಸೋಮವಾರಪೇಟೆ ಪಟ್ಟಣ ಪಂಚಾಯಿತಿ ಸೇರಿದಂತೆ ಪೌರಕಾರ್ಮಿಕರು ವಾಸಿಸುವ ವಸತಿ ಗೃಹಗಳು ಹಳೇ ಕಟ್ಟಡಗಳಾಗಿದ್ದು, ಶೀತಲಗೊಂಡಿವೆ. ಆದ್ದರಿಂದ ನೂತನ ಕಟ್ಟಡ ನಿರ್ಮಾಣಕ್ಕೆ ಕ್ರಮಕೈಗೊಳ್ಳಬೇಕಿದೆ ಎಂದು ಅವರು ಮನವಿ ಮಾಡಿದರು. ನಗರಸಭೆ, ಪುರಸಭೆ, ಪಟ್ಟಣ ಪಂಚಾಯಿತಿ ಹಾಗೂ ಗ್ರಾ.ಪಂಗಳಲ್ಲಿ ಪೌರಕಾರ್ಮಿಕ ವೃತ್ತಿಯಲ್ಲಿ ತೊಡಗಿಸಿಕೊಂಡಿರುವ ಕುಟುಂಬಗಳಿಗೆ ವಸತಿ ಒದಗಿಸುವಂತಾಗಬೇಕು ಎಂದು ಕೋರಿದರು. ಸಮಿತಿ ನಾಮನಿರ್ದೇಶಿತ ಸದಸ್ಯರಾದ ಮುತ್ತಪ್ಪ ಮಾತನಾಡಿ, ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಸಮುದಾಯದಲ್ಲಿ ನಿವೇಶನ ರಹಿತರು ಸಾಕಷ್ಟು ಸಂಖ್ಯೆಯಲ್ಲಿದ್ದಾರೆ. ಇವರಿಗೆ 94 ಸಿ, ರಡಿ ನಿವೇಶನ ಹಕ್ಕುಪತ್ರ ಒದಗಿಸುವಂತಾಗಬೇಕು. ಕೆಲವು ಪರಿಶಿಷ್ಟ ಕುಟುಂಬಗಳು ಆರ್‍ಟಿಸಿ ಇಲ್ಲದೆ ಸೌಲಭ್ಯ ಪಡೆಯಲು ಪರದಾಡುತ್ತಿದ್ದಾರೆ. ಈ ಬಗ್ಗೆ ಗಮನಹರಿಸಬೇಕು ಎಂದು ಕೋರಿದರು. ಈ ಸಂದರ್ಭದಲ್ಲಿ ಮಾತನಾಡಿದ ತಹಶೀಲ್ದಾರ್ ಪ್ರವೀಣ್ ಕುಮಾರ್ ಜನವರಿ, 01, 2005 ರ ಹಿಂದೆ ವಾಸಿಸುತ್ತಿರುವ ಬಗ್ಗೆ ಗ್ರಾಮ ಪಂಚಾಯಿತಿಗಳಲ್ಲಿ ಮಾಹಿತಿ ಇದ್ದು, ಕಂದಾಯ ಪಾವತಿ ಬಗ್ಗೆ ಖಾತರಿಪಡಿಸಿಕೊಂಡು ಹಕ್ಕುಪತ್ರ ಪಡೆಯಲು ಮುಂದಾಗಬೇಕು ಎಂದು ಸಲಹೆ ನೀಡಿದರು. ಬಳಿಕ ಮಾತನಾಡಿದ ಮುತ್ತಪ್ಪ ಅವರು ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಯುವಜನರು ಎಸ್‍ಎಸ್‍ಎಲ್‍ಸಿ, ಪಿಯುಸಿ, ಪದವಿ ಪೂರ್ಣಗೊಳಿಸಿ ಸಾಕಷ್ಟು ಉದ್ಯೋಗಾಕಾಂಕ್ಷಿಗಳು ಇದ್ದಾರೆ. ಇವರಿಗೆ ವೃತ್ತಿ ತರಬೇತಿ ನೀಡುವಂತಾಗಬೇಕು ಎಂದು ಮನವಿ ಮಾಡಿದರು. ಈ ಕುರಿತು ಮಾತನಾಡಿದ ಜಿಲ್ಲಾಧಿಕಾರಿ ವೆಂಕಟ್ ರಾಜಾ ಅವರು ಯುವನಿಧಿ ಯೋಜನೆಯಡಿ ಪದವಿ, ಸ್ನಾತಕೋತ್ತರ ಪದವಿ, ಡಿಪ್ಲೋಮಾ ವ್ಯಾಸಂಗ ಮಾಡಿರುವವರಿಗೆ ಯುವನಿಧಿ ಸೌಲಭ್ಯವಿದ್ದು, ಇದನ್ನು ಬಳಸಿಕೊಳ್ಳುವಂತೆ ಸಲಹೆ ನೀಡಿದರು. ಮತ್ತೊಬ್ಬ ಸದಸ್ಯರಾದ ಪಿ.ಪಿ.ಸುಕುಮಾರ್ ಅವರು ಮಾತನಾಡಿ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ ಕಾಲೋನಿಗಳಲ್ಲಿ ರಸ್ತೆ ಸುದಾರಿಸಬೇಕು. ಆ ನಿಟ್ಟಿನಲ್ಲಿ ರಸ್ತೆ ನಿರ್ಮಾಣಕ್ಕೆ ಅಗತ್ಯ ಕ್ರಮ ಕೈಗೊಳ್ಳುವಂತೆ ಕೋರಿದರು. ಸಮಾಜ ಕಲ್ಯಾಣ ಇಲಾಖೆಯ ಉಪ ನಿರ್ದೇಶಕರಾದ ಶೇಖರ್ ಅವರು ಜಿಲ್ಲಾ ಜಾಗೃತಿ ಮತ್ತು ಉಸ್ತುವಾರಿ ಸಮಿತಿಯ ನಡವಳಿ ಪ್ರಸ್ತಾಪಿಸಿದರು. ಜಿ.ಪಂ.ಸಿಇಒ ಆನಂದ್ ಪ್ರಕಾಶ್ ಮೀನಾ, ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಕೆ.ಎಸ್.ಸುಂದರರಾಜ್, ಐಟಿಡಿಪಿ ಇಲಾಖಾ ಅಧಿಕಾರಿ ಹೊನ್ನೇಗೌಡ, ನಗರಾಭಿವೃದ್ಧಿ ಯೋಜನಾ ಶಾಖೆಯ ಯೋಜನಾ ನಿರ್ದೇಶಕರಾದ ಬಿ.ಬಸಪ್ಪ, ಪೌರಾಯುಕ್ತರಾದ ರಮೇಶ್, ಪುರಸಭೆ ಮುಖ್ಯಾಧಿಕಾರಿ ಚಂದ್ರಕಾಂತ್, ಪಟ್ಟಣ ಪಂಚಾಯಿತಿ ಮುಖ್ಯಾಧಿಕಾರಿ ನಾಚಪ್ಪ, ತಹಶೀಲ್ದಾರರಾದ ರಾಮಚಂದ್ರ, ಮೋಹನ್ ಕುಮಾರ್, ತಾ.ಪಂ.ಇಒ ಅಪ್ಪಣ್ಣ, ಸಹಾಯಕ ನಿರ್ದೇಶಕರಾದ ಪಿ.ವಿ.ಶ್ರೀನಿವಾಸ್, ಸಮಿತಿ ಸದಸ್ಯರಾದ ದಿಲೀಪ್ ಕುಮಾರ್, ಜೇನುಕುರುಬರ ಕೆಂಪ, ಇತರರು ಇದ್ದರು.

Follow us Follow us
Share. WhatsApp Facebook Twitter Email Telegram Copy Link

Website design development company services in Mangalore

Forex Trading Teacher in India

Related Posts

*ಸಂಚಾರ ನಿಯಮ ಉಲ್ಲಂಘನೆ ಪ್ರಕರಣ : ಶೇ.50 ರಷ್ಟು ದಂಡ ಪಾವತಿಗೆ ಅವಕಾಶ*

ಜೂನ್ 22, 2026

*ಕೊಡಗು ವಿದ್ಯಾಲಯದಲ್ಲಿ ಅಂತರಾಷ್ಟ್ರೀಯ ಯೋಗ ದಿನಾಚರಣೆ*

ಜೂನ್ 22, 2026

*ಗದ್ದೆಹಳ್ಳ ಸರಕಾರಿ ಪ್ರಾಥಮಿಕ ಶಾಲೆಯಲ್ಲಿ ಎಲ್‌ಕೆಜಿ ತರಗತಿ ಪ್ರಾರಂಭೋತ್ಸವ : ಆಂಗ್ಲ ಭಾಷೆಯ ಕಲಿಕೆ ಅನಿವಾರ್ಯ : ಶಾಸಕ ಡಾ.ಮಂತರ್ ಗೌಡ*

ಜೂನ್ 22, 2026

*ಕೊಡಗು ವಿದ್ಯಾಲಯದಲ್ಲಿ ಅಂತರಾಷ್ಟ್ರೀಯ ಯೋಗ ದಿನಾಚರಣೆ*

ಜೂನ್ 22, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಮಡಿಕೇರಿ NEWS DESK ಜೂ.22 : ಅಂತರಾಷ್ಟ್ರೀಯ ಯೋಗ ದಿನಾಚರಣೆಯ ಅಂಗವಾಗಿ ಕೊಡಗು ವಿದ್ಯಾಲಯದಲ್ಲಿ ವಿಶೇಷ ಕಾರ್ಯಕ್ರಮವನ್ನು ಆಯೋಜಿಸಲಾಯಿತು. ಕಾರ್ಯಕ್ರಮವು…

*ಗದ್ದೆಹಳ್ಳ ಸರಕಾರಿ ಪ್ರಾಥಮಿಕ ಶಾಲೆಯಲ್ಲಿ ಎಲ್‌ಕೆಜಿ ತರಗತಿ ಪ್ರಾರಂಭೋತ್ಸವ : ಆಂಗ್ಲ ಭಾಷೆಯ ಕಲಿಕೆ ಅನಿವಾರ್ಯ : ಶಾಸಕ ಡಾ.ಮಂತರ್ ಗೌಡ*

ಜೂನ್ 22, 2026

*ಕೊಡಗಿನಲ್ಲಿ ಮಳೆ ಕೊರತೆ : ಪುತ್ತರಿ ಹಬ್ಬಕ್ಕೆ ಕದಿರು ತೆಗೆಯುವುದಕ್ಕಾಗಿ ಮಾತ್ರ ಭತ್ತ ಬೆಳೆಯಬೇಕಾದ ಪರಿಸ್ಥಿತಿ*

ಜೂನ್ 22, 2026

*ಕೊಡಗು ಜಿಲ್ಲಾ ಅಭಿವೃದ್ಧಿ ಸಮನ್ವಯ ಮತ್ತು ಉಸ್ತುವಾರಿ ಸಮಿತಿ(ದಿಶಾ) ಸಭೆ : ಅಭಿವೃದ್ಧಿ ಕಾರ್ಯಗಳನ್ನು ಚುರುಕುಗೊಳಿಸಲು ಸಂಸದ ಯದುವೀರ್ ಸೂಚನೆ*

ಜೂನ್ 22, 2026

*ವಲಸಿಗರನ್ನು ಮುಕ್ತವಾಗಿ ಬಿಟ್ಟು ಹಿಂದೂ ಕಾರ್ಯಕರ್ತರ ವಿರುದ್ಧ ಎಫ್‌ಐಆರ್ : ಸಂಸದ ಯದುವೀರ್ ಅಸಮಾಧಾನ*

ಜೂನ್ 22, 2026

*33 ನಿಮಿಷದಲ್ಲಿ 310 ಆಸನಗಳು : ಯೋಗಾಸನದಲ್ಲಿ ಬಿ.ಕೆ.ಸಿಂಚನ ಹೊಸ ದಾಖಲೆ*

ಜೂನ್ 21, 2026

*ಕೆಪಿಸಿಸಿ ಅಧ್ಯಕ್ಷರನ್ನು ಭೇಟಿಯಾದ ನಂದಿನೆರವಂಡ ಮಧು*

ಜೂನ್ 21, 2026

*33 ನಿಮಿಷದಲ್ಲಿ 310 ಆಸನಗಳು : ಯೋಗಾಸನದಲ್ಲಿ ಬಿ.ಕೆ.ಸಿಂಚನ ಹೊಸ ದಾಖಲೆ*

ಜೂನ್ 21, 2026

*ಮಕ್ಕಂದೂರು : ವಿದ್ಯಾರ್ಥಿಗಳಿಗೆ ಸಾಂಕ್ರಾಮಿಕ ರೋಗಗಳ ಕುರಿತು ಆರೋಗ್ಯ ಅರಿವು*

ಜೂನ್ 20, 2026

*ಮಡಿಕೇರಿ : ನಗರಸಭೆಯ ಪೌರ ಕಾರ್ಮಿಕರಿಗೆ ಉಚಿತ ಆರೋಗ್ಯ ತಪಾಸಣೆ*

ಜೂನ್ 20, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.

Ad Blocker Enabled!
Ad Blocker Enabled!
Our website is made possible by displaying online advertisements to our visitors. Please support us by disabling your Ad Blocker.