Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಕೊಡಗು ಹೆಗ್ಗಡೆ ಸಮಾಜದ ಕ್ರೀಡಾ ಹಬ್ಬಕ್ಕೆ ಸಂಭ್ರಮದ ತೆರೆ*
  • *ಶಂಸುಲ್ ಉಲಮಾ ಕಾಲೇಜು ವಿದ್ಯಾರ್ಥಿಗಳ ಸಾಧನೆ : ಶಿಕ್ಷಣದ ಮೂಲಕ ಉತ್ತಮ ಭವಿಷ್ಯ ರೂಪಿಸಿಕೊಳ್ಳಲು ಗಣ್ಯರ ಕರೆ*
  • *5ನೇ ದಿನವೂ ಮುಂದುವರೆದ ವಸತಿ ರಹಿತರ ಧರಣಿ*
  • *ಕೊಡಗು : ಪತ್ರಿಕಾ ಪ್ರವಾಸ ವಾಹನಕ್ಕೆ ಚಾಲನೆ*
  • *ಜಿಲ್ಲಾ ಮಟ್ಟದ ತ್ರೈಮಾಸಿಕ ಕೆಡಿಪಿ ಸಭೆ : ಜೂನ್ ಮೊದಲ ವಾರದಲ್ಲಿ ಮುಂಗಾರು ಆರಂಭ ಸಾಧ್ಯತೆ : ರಸ್ತೆ ಸೇರಿದಂತೆ ಹಲವು ಕಾಮಗಾರಿ ಪೂರ್ಣಗೊಳಿಸಿ : ಸಚಿವ ಎನ್.ಎಸ್.ಭೋಸರಾಜು*
  • *ಮಾದಾಪುರದಲ್ಲಿ ಕೊಡವ ಸಮಾಜ ಭವನ ಲೋಕಾಪ೯ಣೆ : ಪ್ರಾಮಾಣಿಕತೆಯೊಂದಿಗೆ ಸಂಸ್ಕೃತಿ ಸಂರಕ್ಷಣೆಗೆ ಕೊಡವರು ವಿಶ್ವವ್ಯಾಪಿ ಹೆಸರು ವಾಸಿ : ಬಸವರಾಜ ಬೊಮ್ಮಾಯಿ ಶ್ಲಾಘನೆ*
  • *ಮಡಿಕೇರಿಯಲ್ಲಿ ಪತ್ರಕರ್ತರಿಗೆ ಉಚಿತ ಆರೋಗ್ಯ ತಪಾಸಣಾ ಶಿಬಿರ*
  • *ಪೊನ್ನಂಪೇಟೆಯಲ್ಲಿ ಬಿಜೆಪಿ ವಿಜಯೋತ್ಸವ*
  • *ಫೀಲ್ಡ್ ಮಾರ್ಷಲ್ ಕೆ.ಎಂ.ಕಾರ್ಯಪ್ಪ ಕಾಲೇಜಿನಲ್ಲಿ ‘ಶಾರ್ಟ್ ರೇಂಜ್ ರೈಫಲ್ ಫೈರಿಂಗ್ ರೇಂಜ್’ ಉದ್ಘಾಟನೆ*
  • *ಶ್ರದ್ಧಾಭಕ್ತಿಯಿಂದ ಜರುಗಿದ ಕರ್ಣಂಗೇರಿ ಕ್ಷೇತ್ರದ ಶ್ರೀರಾಜರಾಜೇಶ್ವರಿ ದೇವಾಲಯದ ವಾರ್ಷಿಕೋತ್ಸವ ಹಾಗೂ ರಥೋತ್ಸವ*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*ಕುಶಾಲನಗರ ಹೋಬಳಿ ಕಾರ್ಯನಿರತ ಪತ್ರಕರ್ತರ ಸಂಘದ ಬೆಳ್ಳಿ ಮಹೋತ್ಸವ*
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

*ಕುಶಾಲನಗರ ಹೋಬಳಿ ಕಾರ್ಯನಿರತ ಪತ್ರಕರ್ತರ ಸಂಘದ ಬೆಳ್ಳಿ ಮಹೋತ್ಸವ*

ಸೆಪ್ಟೆಂಬರ್ 25, 20243 Mins ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link

ಕುಶಾಲನಗರ NEWS DESK ಸೆ.25 : ರಾಷ್ಟ್ರ ಕಂಡ  ಮಹಾನ್ ಪತ್ರಕರ್ತರಾದ ರಾಷ್ಟ್ರಪಿತ ಮಹಾತ್ಮ ಗಾಂಧೀಜಿ ಹಾಗೂ ಸಂವಿಧಾನ ಶಿಲ್ಪಿ ಡಾ.ಬಿ.ಆರ್. ಅಂಬೇಡ್ಕರ್ ಅವರ ಆದರ್ಶ ವ್ಯಕ್ತಿತ್ವವನ್ನು ಪ್ರತಿಯೊಬ್ಬರು ಅಳವಡಿಸಿಕೊಳ್ಳಬೇಕು ಎಂದು ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ರಾಜ್ಯಾಧ್ಯಕ್ಷರಾದ ಶಿವಾನಂದ ತಗಡೂರು ಹೇಳಿದರು. ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ ಕುಶಾಲನಗರ ತಾಲ್ಲೂಕು ಘಟಕದ ವತಿಯಿಂದ ಸ್ಥಳೀಯ ಎಪಿಸಿಎಂಎಸ್  ಸುವರ್ಣ ಮಹೋತ್ಸವ ಸಭಾಂಗಣದಲ್ಲಿ ಏರ್ಪಡಿಸಿದ್ದ ಕುಶಾಲನಗರ ಹೋಬಳಿ ಕಾರ್ಯನಿರತ ಪತ್ರಕರ್ತರ ಸಂಘದ ಬೆಳ್ಳಿ ಮಹೋತ್ಸವ ಸಮಾರಂಭವನ್ನು ಉದ್ಘಾಟಿಸಿ ಅವರು ಮಾತನಾಡಿದರು. ಸ್ವಾತಂತ್ರ್ಯ ಪೂರ್ವದಲ್ಲಿ  ಮಹಾತ್ಮಗಾಂಧಿ ಪತ್ರಿಕೋದ್ಯಮದ ಮೂಲಕ ದೇಶದ ಸ್ವಾತಂತ್ರ್ಯಕ್ಕಾಗಿ ಹೋರಾಟ ನಡೆಸಿದರು. ಅದೇ ರೀತಿ ಡಾ.ಅಂಬೇಡ್ಕರ್ ಅವರು ಐದು ಪತ್ರಿಕೆಗಳ ಸಂಪಾದಕರಾಗಿ ಸೇವೆ ಸಲ್ಲಿಸಿದ್ದರು.  ರಾಷ್ಟ್ರಪತಿ ಎಪಿಜೆ ಅಬ್ದುಲ್ ಕಲಾಂ ಅವರು ಪತ್ರಿಕಾ ವಿತಕರರಾಗಿ ಹೋರಾಟದ ಬದುಕು,ಬೆಳೆದು ಬಂದ ದಾರಿ ನಮ್ಮೆಲ್ಲರ ಸ್ಪೂರ್ತಿಯಾಗಬೇಕು. ಇಂತಹ ಮಹಾನ್‌ ನಾಯಕರ ಆದರ್ಶ ನಮಗೆ ಬೆಳಕಾಗಲಿ ಎಂದು ಆಶಯ ವ್ಯಕ್ತಪಡಿಸಿದರು.  80 ರ ಕಾಲಘಟ್ಟದಲ್ಲಿ ಪತ್ರಿಕೆಗಳ ಸ್ವರೂಪ ಬದಲಾವಣೆ ಕಂಡಿದೆ. ಬಹು ರಾಷ್ಟ್ರೀಯ  ಕಂಪನಿಗಳ ಪ್ರವೇಶದ ನಂತರ ಎಲ್ಲಾ ಕ್ಷೇತ್ರಗಳು ಉದ್ಯಮವಾಗಿ ರೂಪುಗೊಂಡವು. ಅದೇ ರೀತಿ ಪತ್ರಿಕೋದ್ಯಮ, ಕ್ರೀಡಾ ಕ್ಷೇತ್ರಗಳು ಕೂಡ ಉದ್ಯಮವಾಗಿ ಬದಲಾವಣೆಯಾಗಿವೆ ಎಂದರು. ಇಂದು ಬ್ಲಾಕ್‌ಮೇಲ್ ಪತ್ರಕರ್ತರಿಂದ ನೈಜ ಪತ್ರಕರ್ತ ಕಳೆದು ಹೋಗುವ ಸ್ಥಿತಿ ಉಂಟಾಗಿದೆ.  ಬ್ಲಾಕ್ ಮೇಲ್ ಪತ್ರಕರ್ತರ ಸಂಖ್ಯೆ ಅಧಿಕವಾಗಿದ್ದು  ಇಂತಹವರಿಂದ ಸಮಾಜಕ್ಕೆ ಕಳಂಕ ಉಂಟಾಗುತ್ತಿದೆ .ಇಂತಹ ವ್ಯಕ್ತಿಗಳನ್ನು  ಪತ್ರಿಕೋದ್ಯಮದಿಂದ ದೂರ ಇಡುವ ಕೆಲಸವನ್ನು ನಾವುಗಳೇ  ಮಾಡಬೇಕು ಕರೆ ನೀಡಿದರು. ಪತ್ರಕರ್ತರು ಸಮಾಜದ, ಶೋಷಿತರ ,ಸಮಸ್ಯೆಗಳ ಧ್ವನಿಯಾಗಿ ಕೆಲಸ‌ ಮಾಡಬೇಕು ಎಂದು ಸಲಹೆ ನೀಡಿದರು. ಹೋಬಳಿ ಸಂಘದ ಬೆಳ್ಳಿ ಮಹೋತ್ಸವ ಅಂಗವಾಗಿ ಹೊರತರಲು ಉದ್ದೇಶಿರುವ  ‘ಬೆಳ್ಳಿ ಪಯಣ ‘ಸ್ಮರಣ ಸಂಚಿಕೆಯ ಮುಖಪುಟ ಬಿಡುಗಡೆ ಮಾಡಿದ ಶಾಸಕ ಡಾ.ಮಂತರ್ ಗೌಡ ಮಾತನಾಡಿ, ಕುಶಾಲನಗರದಲ್ಲಿ ಪತ್ರಕರ್ತ ಭವನ ನಿರ್ಮಾಣ ಮಾಡಲು ಎಲ್ಲಾ ರೀತಿಯ ಸಹಕಾರ ನೀಡುವುದಾಗಿ ಭರವಸೆ ನೀಡಿದರು. ಶಾಸಕರ ಅನುದಾನದ ಜೊತೆಗೆ ದಾನಿಗಳಿಂದಲೂ  ಸಹಕಾರ ಕೊಡಿಸಲು ಪ್ರಯತ್ನಿಸುತ್ತೇನೆ. ಪತ್ರಿಕಾ ಭವನ ನಿರ್ಮಾಣಕ್ಕೆ ಎಲ್ಲ ರೀತಿಯ ಸಹಾಯ ನೀಡುವುದಾಗಿ ಅವರು ಭರವಸೆ ವ್ಯಕ್ತಪಡಿಸಿದರು. ಪತ್ರಕರ್ತರು ನೈಜ ಹಾಗೂ ವಸ್ತು ಸ್ಥಿತಿ ವರದಿಗಳನ್ನು ಮಾಡುವ‌ ಮೂಲಕ ಸಮಾಜದ ಏಳಿಗೆಗೆ ಒತ್ತು ನೀಡಬೇಕು ಎಂದರು.ಇಂದಿನ ಕಂಪ್ಯೂಟರ್ ಹಾಗೂ ಹೈಟೆಕ್ ತಂತ್ರಜ್ಞಾನ ವ್ಯವಸ್ಥೆಯಲ್ಲಿ ಪತ್ರಕರ್ತರು ವೃತ್ತಿ ನೈಪುಣ್ಯತೆಯನ್ನು ಅಭಿವೃದ್ಧಿ ಪಡಿಸಿಕೊಳ್ಳಬೇಕು ಎಂದು ಸಲಹೆ ನೀಡಿದರು. ಮುಖ್ಯ ಅತಿಥಿಯಾಗಿ ಆಗಮಿಸಿದ್ದ ಮಾಜಿ ಸಚಿವ ಎಂ.ಪಿ.ಅಪ್ಪಚ್ಚುರಂಜನ್ ಮಾಜಿ ಅಧ್ಯಕ್ಷರುಗಳನ್ನು ಸನ್ಮಾನಿಸಿ  ಮಾತನಾಡಿ, ಕುಶಾಲನಗರ ಹೋಬಳಿ ಪತ್ರಕರ್ತರ ಬೆಳ್ಳಿ ಹಬ್ಬ ಆಚರಣೆ ಮಾಡುತ್ತಿರುವುದು  ಸಂತೋಷದ ವಿಚಾರವಾಗಿದೆ. ಪತ್ರಕರ್ತರು ಸಮಾಜದಲ್ಲಿನ ಅಂಕುಡೊಂಕುಗಳನ್ನು ತಿದ್ದುವ ಹಾಗೂ ಸಮಸ್ಯೆಗಳನ್ನು ಬಿಂಬಿಸುವಂತಹ    ಲೇಖನಗಳನ್ನು ಪ್ರಕಟಿಸುವಂತಾಗಬೇಕು ಎಂದು ಸಲಹೆ ನೀಡಿದರು.  ಸಾರ್ವಜನಿಕ ಸಭೆಯಲ್ಲಿ ರಾಜಕಾರಣಿಗಳು, ಪತ್ರಕರ್ತರು ಯಾವ ರೀತಿ ಸಾಮಾಜಕ್ಕೆ ಬೆಳಕು ಚೆಲ್ಲುತ್ತಾರೆ ಎಂಬುದನ್ನು ವಿದ್ಯಾರ್ಥಿಗಳು ಅರಿತುಗೊಳ್ಳಬೇಕು ಎಂದರು. ವಿದ್ಯಾರ್ಥಿ  ಶಿಸ್ತು, ಸಮಯ ಪ್ರಜ್ಞೆ ಮೈಗೂಡಿಸಿಕೊಳ್ಳಬೇಕು. ಗುರಿಯೊಂದಿಗೆ ಕಠಿಣ ಪರಿಶ್ರಮ, ಕನಸು ನನಸು ಮಾಡಿಕೊಳ್ಳುವತ್ತ ಪ್ರಯತ್ನ ಮಾಡಬೇಕು ಎಂದರು.  ತಮ್ಮ ವೃತ್ತಿಯೊಂದಿಗೆ ಪ್ರತಿಯೊಬ್ಬರು ಪರಿಸರ ರಕ್ಷಣೆಯಲ್ಲಿ ತಮ್ಮನ್ನು ತೊಡಗಿಸಿಕೊಳ್ಳಬೇಕು. ಈ ನಿಟ್ಟಿನಲ್ಲಿ ಚಂದ್ರಮೋಹನ್ ಅವರು ತೊಡಗಿಸಿಕೊಂಡಿದ್ದಾರೆ ಎಂದು ಪ್ರಸ್ತಾಪಿಸಿದ  ಅವರು ಕಳೆದ ಹಲವು ವರ್ಷಗಳಿಂದ  ನಾನು ಕೂಡ ಅವರೊಂದಿಗೆ  ಅನೇಕ ಸಸಿಗಳನ್ನು ನೆಡುವ ಕೆಲಸ ಮಾಡಿರುವುದಾಗಿ ನೆನಪಿಸಿದರು. ಶಕ್ತಿ ಪ್ರಧಾನ ಸಂಪಾದಕ ಜಿ ರಾಜೇಂದ್ರ ಅವರು ಸಂಘದ ಸದಸ್ಯರ ಮಕ್ಕಳಿಗೆ ಪ್ರತಿಭಾ ಪುರಸ್ಕಾರ ನೆರವೇರಿಸಿ ಮಾತನಾಡಿ, ಸಂವಿಧಾನದ ನಾಲ್ಕನೇ ಅಂಗವಾಗಿರುವ ಮಾದ್ಯಮ ರಂಗ  ತುಂಬಾ ಮಹತ್ವದ್ದಾಗಿದೆ, ಸಮಾಜದ ಏಳಿಗೆಯಲ್ಲಿ ಪತ್ರಿಕಾ ಕ್ಷೇತ್ರ ತನ್ನದೇ ಆದ ಛಾಪನ್ನು ಮೂಡಿಸಿದೆ. ಕಾಲಕ್ಕೆ ತಕ್ಕಂತೆ ಪ್ರತಿಯೊಬ್ಬರೂ ಬದಲಾಗಬೇಕಾಗಿದೆ. ಪ್ರತಿಯೊಬ್ಬರು ತಮ್ಮ ಗುರಿಯನ್ನು ಹೊಂದಬೇಕಾಗಿದೆ ಎಂದು ಹೇಳಿದ ಅವರು ಹೋಬಳಿ ಬೆಳ್ಳಿ ಮಹೋತ್ಸವ ಆಚರಣೆ ಸಂತೋಷ ತರುವ ಸಂಗತಿ. ಬೆಳೆದು ಬಂದ ದಾರಿಯನ್ನು ಮೆಲಕು ಹಾಕಿಕೊಳ್ಳುವುದರ ಜೊತೆಗೆ ಅಧ್ಯಕ್ಷರಾಗಿ ಸೇವೆ ಸಲ್ಲಿಸಿದವರನ್ನು  ನೆನಪಿಸಿಕೊಂಡು ಗೌರವಿಸಿರುವುದು ಉತ್ತಮ ಕಾರ್ಯವಾಗಿದೆ ಎಂದರು. ಕುಶಾಲನಗರ ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಎಂ ಎನ್ ಚಂದ್ರಮೋಹನ್ ಅಧ್ಯಕ್ಷತೆ ವಹಿಸುವುದರೊಂದಿಗೆ ಪ್ರಾಸ್ತಾವಿಕವಾಗಿ ಮಾತನಾಡಿ, ಪತ್ರಕರ್ತರು ಸಮಾಜಮುಖಿಯಾಗಿ ಕೆಲಸ‌ಮಾಡಬೇಕು. ಪತ್ರಕರ್ತರ ಸಮಸ್ಯೆಗಳಿಗೆ ಸ್ಪಂದಿಸುವ ಕೆಲಸ ಆಗಬೇಕು.  ರಾಜಕಾರಣಿಗಳು ಹಾಗೂ ಅಧಿಕಾರಿಗಳು ಪತ್ರಕರ್ತರನ್ನು ನಿರ್ಲಕ್ಷ್ಯ ಭಾವನೆಯಿಂದ ಕಾಣುವ ಸ್ಥಿತಿ ಇದೆ.  ಇಂತಹ ಪರಿಸ್ಥಿತಿಯನ್ನು ಮನಗಂಡ ಹಿರಿಯ ಪತ್ರಕರ್ತ ಬಿ.ಆರ್.ನಾರಾಯಣ ಅವರು ಹೋಬಳಿ ಸಂಘವನ್ನು ಸ್ಥಾಪಿಸುವ ಮೂಲಕ ಪತ್ರಕರ್ತರ ಶ್ರೇಯೋವೃದ್ಧಿಗೆ ವಿಶೇಷ ಒತ್ತು ನೀಡಿದರು ಎಂದರಲ್ಲದೆ ಕಳೆದ 25 ವರ್ಷಗಳ ಸುದೀರ್ಘ ಅವಧಿಯ ಬಗ್ಗೆ ಸಮಗ್ರ ಮಾಹಿತಿ ನೀಡಿದರು. ಕೊಡಗು ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷರಾದ ಬಿ ಆರ್ ಸವಿರಾ ರೈ ಅವರು ಸಾಧಕರನ್ನು ಸನ್ಮಾನಿಸಿ ಗೌರವಿಸಿದರು. ಕರ್ನಾಟಕ ರಾಜ್ಯ ಕಾರ್ಯನಿರತ ಪತ್ರಕರ್ತರ ಸಂಘದ ಉಪಾಧ್ಯಕ್ಷ ರಮೇಶ್ ಕುಟ್ಟಪ್ಪ, ಕೊಡಗು ಪ್ರೆಸ್ ಕ್ಲಬ್ ಅಧ್ಯಕ್ಷ ಬೊಳ್ಳಜಿರ ಅಯ್ಯಪ್ಪ, ಸಂಘದ ರಾಷ್ಟ್ರೀಯ ಸಮಿತಿ ಸದಸ್ಯರಾದ ಸುನಿಲ್ ಪೊನ್ನೆಟ್ಟಿ ಅವರು ಕೊಡಗು ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಸದಸ್ಯರ ನಡುವೆ ನಡೆದ ಜಿಲ್ಲಾ ಮಟ್ಟದ ಕ್ರಿಕೆಟ್ ಪಂದ್ಯಾಟದಲ್ಲಿ ವಿಜೇತರಾದ ತಂಡದ ಸದಸ್ಯರಿಗೆ  ನಗದು ಬಹುಮಾನ ವಿತರಿಸಿದರು. ಸನ್ಮಾನ : ಹೋಬಳಿ ಸಂಘದ ಅಧ್ಯಕ್ಷರಾಗಿ 25 ವರ್ಷಗಳ ಅವಧಿಯಲ್ಲಿ ಸೇವೆ ಸಲ್ಲಿಸಿ ಸಂಘದ ಏಳಿಗೆಗಾಗಿ ಶ್ರಮಿಸಿದ ಸ್ಥಾಪಕ ಅಧ್ಯಕ್ಷ ಬಿ.ಆರ್.ನಾರಾಯಾಣ, ಕೆ.ಕೆ.ನಾಗರಾಜ ಶೆಟ್ಟಿ, ಎಂ.ಎನ್.ಚಂದ್ರಮೋಹನ್, ಸಬಲಂ ಬೋಜಣ್ಣ ರೆಡ್ಡಿ, ರಘುಹೆಬ್ಬಾಲೆ ಅವರನ್ನು ಸಂಘದ ವತಿಯಿಂದ ಸನ್ಮಾನಿಸಿ ನೆನಪಿನ ಕಾಣಿಕೆ ನೀಡಿ ಆತ್ಮೀಯವಾಗಿ ಗೌರವಿಸಲಾಯಿತು. ಜೊತೆಗೆ ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡಿರುವ ಡಾ.ಕಿಶೋರ್ ಕುಮಾರ್, ಪುರಸಭೆಯ ದಫೆದಾರ್ ಮೋಹನ್‌ಕುಮಾರ್, ಸಮಾಜ ಸೇವಕ ಮುನೀರ್, ಮಹಿಳಾ ಭಜನಾ ಮಂಡಳಿ ಪ್ರಮುಖರಾದ ಪದ್ಮಪುರುಷೋತ್ತಮ, ಹಿರಿಯ ಪತ್ರಿಕಾ ವಿತರಕ ವಿ.ಪಿ.ಪ್ರಕಾಶ್ ಹಾಗೂ ನಿವೃತ್ತ ಮುಖ್ಯ ಶಿಕ್ಷಕ ನಜೀರ್ ಅಹ್ಮದ್, ಕರ್ನಾಟಕ ಕೊಡವ ಅಕಾಡೆಮಿ ಮಾಜಿ ಅಧ್ಯಕ್ಷರೂ ಸಾಹಿತಿ ಬಾಚರಣಿಯಂಡ ಪಿ.ಅಪ್ಪಣ್ಣ, ಕುದುಪಜೆ ಬಸಪ್ಪ ಅವರನ್ನು ಸಂಘದ ವತಿಯಿಂದ ಸನ್ಮಾನಿಸಿ ಗೌರವಿಸಲಾಯಿತು. ಕೊಡವ ಸಮಾಜದ ನಿರ್ದೇಶಕಿ ಧರಣಿ ಸೋಮಯ್ಯ ಪ್ರಾರ್ಥಿಸಿದರು.ಸಂಘದ ಪ್ರಧಾನ ಕಾರ್ಯದರ್ಶಿ ವನಿತಾಚಂದ್ರಮೋಹನ್ ಸ್ವಾಗತಿಸಿದರು. ಕೊಡಗು ವಿವಿ ಉಪನ್ಯಾಸಕ ಡಾ.ಜಮೀರ್ ಅಹಮ್ಮದ್ ಹಾಗೂ ಜಿಲ್ಲಾ ಪತ್ರಕರ್ತರ ಸಂಘದ ನಿರ್ದೇಶಕ ಟಿ.ಆರ್.ಪ್ರಭುದೇವ್ ನಿರೂಪಿಸಿದರು. ಕೆ.ಕೆ.ನಾಗರಾಜ್ ಶೆಟ್ಟಿಯವರು ವಂದಿಸಿದರು.

Follow us Follow us
Share. WhatsApp Facebook Twitter Email Telegram Copy Link

Website design development company services in Mangalore

Forex Trading Teacher in India

Related Posts

*ಕೊಡಗು ಹೆಗ್ಗಡೆ ಸಮಾಜದ ಕ್ರೀಡಾ ಹಬ್ಬಕ್ಕೆ ಸಂಭ್ರಮದ ತೆರೆ*

ಮೇ 5, 2026

*ಶಂಸುಲ್ ಉಲಮಾ ಕಾಲೇಜು ವಿದ್ಯಾರ್ಥಿಗಳ ಸಾಧನೆ : ಶಿಕ್ಷಣದ ಮೂಲಕ ಉತ್ತಮ ಭವಿಷ್ಯ ರೂಪಿಸಿಕೊಳ್ಳಲು ಗಣ್ಯರ ಕರೆ*

ಮೇ 5, 2026

*5ನೇ ದಿನವೂ ಮುಂದುವರೆದ ವಸತಿ ರಹಿತರ ಧರಣಿ*

ಮೇ 5, 2026

*ಶಂಸುಲ್ ಉಲಮಾ ಕಾಲೇಜು ವಿದ್ಯಾರ್ಥಿಗಳ ಸಾಧನೆ : ಶಿಕ್ಷಣದ ಮೂಲಕ ಉತ್ತಮ ಭವಿಷ್ಯ ರೂಪಿಸಿಕೊಳ್ಳಲು ಗಣ್ಯರ ಕರೆ*

ಮೇ 5, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ವಿರಾಜಪೇಟೆ ಮೇ 6 NEWS DESK : ಪೆರುಂಬಾಡಿಯ ಶಂಸುಲ್ ಉಲಮಾ ಎಜುಕೇಶನಲ್ ಅಕಾಡೆಮಿಯ ಎಸ್ಇಎ ಕಾಲೇಜು ವಿದ್ಯಾರ್ಥಿಗಳು ಪಿಯುಸಿ ಪರೀಕ್ಷೆಯಲ್ಲಿ…

*5ನೇ ದಿನವೂ ಮುಂದುವರೆದ ವಸತಿ ರಹಿತರ ಧರಣಿ*

ಮೇ 5, 2026

*ಕೊಡಗು : ಪತ್ರಿಕಾ ಪ್ರವಾಸ ವಾಹನಕ್ಕೆ ಚಾಲನೆ*

ಮೇ 5, 2026

*ಜಿಲ್ಲಾ ಮಟ್ಟದ ತ್ರೈಮಾಸಿಕ ಕೆಡಿಪಿ ಸಭೆ : ಜೂನ್ ಮೊದಲ ವಾರದಲ್ಲಿ ಮುಂಗಾರು ಆರಂಭ ಸಾಧ್ಯತೆ : ರಸ್ತೆ ಸೇರಿದಂತೆ ಹಲವು ಕಾಮಗಾರಿ ಪೂರ್ಣಗೊಳಿಸಿ : ಸಚಿವ ಎನ್.ಎಸ್.ಭೋಸರಾಜು*

ಮೇ 5, 2026

*ಮಾದಾಪುರದಲ್ಲಿ ಕೊಡವ ಸಮಾಜ ಭವನ ಲೋಕಾಪ೯ಣೆ : ಪ್ರಾಮಾಣಿಕತೆಯೊಂದಿಗೆ ಸಂಸ್ಕೃತಿ ಸಂರಕ್ಷಣೆಗೆ ಕೊಡವರು ವಿಶ್ವವ್ಯಾಪಿ ಹೆಸರು ವಾಸಿ : ಬಸವರಾಜ ಬೊಮ್ಮಾಯಿ ಶ್ಲಾಘನೆ*

ಮೇ 5, 2026

*ಮಡಿಕೇರಿಯಲ್ಲಿ ಪತ್ರಕರ್ತರಿಗೆ ಉಚಿತ ಆರೋಗ್ಯ ತಪಾಸಣಾ ಶಿಬಿರ*

ಮೇ 5, 2026

*ಪೊನ್ನಂಪೇಟೆಯಲ್ಲಿ ಬಿಜೆಪಿ ವಿಜಯೋತ್ಸವ*

ಮೇ 5, 2026

*ಫೀಲ್ಡ್ ಮಾರ್ಷಲ್ ಕೆ.ಎಂ.ಕಾರ್ಯಪ್ಪ ಕಾಲೇಜಿನಲ್ಲಿ ‘ಶಾರ್ಟ್ ರೇಂಜ್ ರೈಫಲ್ ಫೈರಿಂಗ್ ರೇಂಜ್’ ಉದ್ಘಾಟನೆ*

ಮೇ 5, 2026

*ಶ್ರದ್ಧಾಭಕ್ತಿಯಿಂದ ಜರುಗಿದ ಕರ್ಣಂಗೇರಿ ಕ್ಷೇತ್ರದ ಶ್ರೀರಾಜರಾಜೇಶ್ವರಿ ದೇವಾಲಯದ ವಾರ್ಷಿಕೋತ್ಸವ ಹಾಗೂ ರಥೋತ್ಸವ*

ಮೇ 5, 2026

*ಬಾಳೆಲೆ-ನಲ್ಲೂರು : ಮೇ 5 ರಂದು ವಿವಿಧೆಡೆ ವಿದ್ಯುತ್ ವ್ಯತ್ಯಯ*

ಮೇ 4, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.

Ad Blocker Enabled!
Ad Blocker Enabled!
Our website is made possible by displaying online advertisements to our visitors. Please support us by disabling your Ad Blocker.