Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಮಡಿಕೇರಿ ದಸರಾ : ಸಾಂಸ್ಕೃತಿಕ ಕಾರ್ಯಕ್ರಮಗಳಿಗೆ ಕಲಾವಿದರಿಂದ ಅರ್ಜಿ ಆಹ್ವಾನ*
  • *ಸೆ.11 ರಂದು ರಾಷ್ಟ್ರೀಯ ಅರಣ್ಯ ಹುತಾತ್ಮರ ದಿನಾಚರಣೆ*
  • *ಕೊಡಗು: ಪ್ರೌಢಶಾಲೆ ಮತ್ತು ಪಿಯು ವಿದ್ಯಾರ್ಥಿಗಳಿಗೆ ಜಿಲ್ಲಾಮಟ್ಟದ ಪ್ರಬಂಧ ಹಾಗೂ ಚರ್ಚಾ ಸ್ಪರ್ಧೆ*
  • *ಸೆ.12ರಂದು ಪ್ರೌಢಶಾಲಾ ಮಕ್ಕಳಿಗೆ ಗೌರಮ್ಮ ದತ್ತಿ ಕಥಾ ಸ್ಪರ್ಧೆ*
  • *ಕುಶಾಲನಗರ ಎಲ್‌ಐಸಿ ಕಚೇರಿಯಲ್ಲಿ 70ನೇ ಸಂಸ್ಥಾಪನಾ ದಿನಾಚರಣೆ*
  • *ವಿಕಸಿತ ಭಾರತ ಯಂಗ್ ಲೀಡರ್ಸ್ ಡೈಲಾಗ್ ನೋಂದಣಿ ಆರಂಭ : ಯುವಜನರಿಗೆ ಅವಕಾಶ*
  • *ಮಡಿಕೇರಿಯಲ್ಲಿ ವಿಶ್ವ ಬೆನ್ನುಹುರಿ ಗಾಯ ದಿನಾಚರಣೆ ಹಾಗೂ ನಶಾ ಮುಕ್ತ ಭಾರತ ಕಾರ್ಯಕ್ರಮ : ಯಾವುದೇ ರೀತಿಯ ಗಾಯ, ನೋವಿಗೆ ಆರಂಭದಲ್ಲಿ ಚಿಕಿತ್ಸೆ ಅಗತ್ಯ : ಡಾ.ಲೋಕೇಶ್*
  • *ಪದವೀಧರ ವಿಭಾಗದ ಕೊಡಗು ಜಿಲ್ಲಾಧ್ಯಕ್ಷರಾಗಿ ಅಚ್ಚಾಂಡಿರ ಪವನ್ ಪೆಮ್ಮಯ್ಯ ನೇಮಕ*
  • *ಸೆ.12 ರಂದು ಮಡಿಕೇರಿಯಲ್ಲಿ ಕಾಂಗ್ರೆಸ್ ಪ್ರತಿಭಟನೆ*
  • *ಕಾವೇರಿ ಶಾಲೆಯಲ್ಲಿ ಸಂಭ್ರಮದ ಶಿಕ್ಷಕರ ದಿನಾಚರಣೆ*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*ಮಡಿಕೇರಿ : ನಿವೃತ್ತ ನೌಕರರ ವೇದಿಕೆ ಮಹಾಪ್ರಧಾನ ಸಂಚಾಲಕ ಷಣ್ಮುಖಯ್ಯ ಭೇಟಿ : ಹೋರಾಟಕ್ಕೆ ನಿರ್ಧಾರ*
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

*ಮಡಿಕೇರಿ : ನಿವೃತ್ತ ನೌಕರರ ವೇದಿಕೆ ಮಹಾಪ್ರಧಾನ ಸಂಚಾಲಕ ಷಣ್ಮುಖಯ್ಯ ಭೇಟಿ : ಹೋರಾಟಕ್ಕೆ ನಿರ್ಧಾರ*

ಸೆಪ್ಟೆಂಬರ್ 28, 20242 Mins ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link

ಮಡಿಕೇರಿ NEWS DESK ಸೆ.28 : 2022ರ ಜುಲೈ 1ರಿಂದ 2024ರ ಜುಲೈ 31ರ ಅವಧಿಯೊಳಗೆ ನಿವೃತ್ತಿಯಾಗಿರುವ ರಾಜ್ಯ ಸರಕಾರಿ ನೌಕರರಿಗೆ, 7ನೇ ವೇತನ ಆಯೋಗದ ಶಿಫಾರಸ್ಸಿನಂತೆ ನಿವೃತ್ತಿ ಆರ್ಥಿಕ ಸೌಲಭ್ಯ ಕಲ್ಪಿಸಬೇಕು ಸೇರಿದಂತೆ ವಿವಿಧ ಬೇಡಿಕೆಗಳನ್ನು ಈಡೇರಿಸಲು ಒತ್ತಾಯಿಸಿ ಅ.1 ರಂದು ನಡೆಯಲಿರುವ ಪ್ರತಿಭಟನೆಯಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ನಿವೃತ್ತ ನೌಕರರು ಪಾಲ್ಗೊಂಡಲ್ಲಿ ನಮ್ಮ ಹೋರಾಟಕ್ಕೆ ಯಶಸ್ಸು ಸಾಧ್ಯ ಎಂದು ಕರ್ನಾಟಕ ನಿವೃತ್ತ ನೌಕರರ ವೇದಿಕೆಯ ರಾಜ್ಯ ಮಹಾಪ್ರಧಾನ ಸಂಚಾಲಕ ಎಂ.ಪಿ.ಎಂ.ಷಣ್ಮುಖಯ್ಯ ಹೇಳಿದರು. ಮಡಿಕೇರಿ ನಗರಕ್ಕೆ ಭೇಟಿ ನೀಡಿದ ಅವರು ವೇದಿಕೆಯ ಕೊಡಗು ಜಿಲ್ಲಾ ಘಟಕದ ಪದಾಧಿಕಾರಿಗಳೊಂದಿಗೆ ಹೋರಾಟದ ರೂಪುರೇಷಗಳ ಕುರಿತು ಚರ್ಚಿಸಿದರು.
ಅ.1 ರಂದು ವಿಶ್ವ ಹಿರಿಯ ನಾಗರಿಕರ ದಿನಾಚರಣೆ ಸಂದರ್ಭ ರಾಜ್ಯಾದ್ಯಂತ ಜಿಲ್ಲಾಧಿಕಾರಿಗಳ ಕಚೇರಿ ಎದುರು ಏಕಕಾಲದಲ್ಲಿ ನಿವೃತ್ತ ನೌಕರರು ಕಪ್ಪುಪಟ್ಟಿ ಧರಿಸಿ ಒಂದು ದಿನದ ಧರಣಿ ಸತ್ಯಾಗ್ರಹ ನಡೆಸಿ ಜಿಲ್ಲಾಧಿಕಾರಿಗಳ ಮೂಲಕ ಮುಖ್ಯಮಂತ್ರಿಗಳಿಗೆ ಮನವಿ ಸಲ್ಲಿಸಲಾಗವುದು ಎಂದರು. 2022ರ ಜುಲೈ 1ರಿಂದ 2024ರ ಜುಲೈ 31ರ ಅವಧಿಯಲ್ಲಿ ನಿವೃತ್ತಿಯಾದ ನೌಕರರಿಗೆ 6ನೇ ಆಯೋಗದ ಲೆಕ್ಕಾಚಾರದ ಅನುಸಾರ ಡಿ.ಸಿ.ಆರ್.ಜಿ. ಕಮ್ಯುಟೇಶನ್, ರಜೆ ನಗದೀಕರಣಗಳ ನಿವೃತ್ತಿ ಆರ್ಥಿಕ ಸೌಲಭ್ಯವನ್ನು ನೀಡಿದ್ದಾರೆ. ಈ ನಿಟ್ಟಿನಲ್ಲಿ ನಮಗೆ ಆರ್ಥಿಕ ನಷ್ಟವುಂಟಾಗಿ ಅನ್ಯಾಯವಾಗಿದೆ ಎಂದು ಹೇಳಿದರು. ಈ ನಿಟ್ಟಿನಲ್ಲಿ ಈಗಾಗಲೇ ರಾಜ್ಯದ ಎಲ್ಲಾ ಜಿಲ್ಲಾ ಉಸ್ತುವಾರಿ ಸಚಿವರು, ಕ್ಷೇತ್ರದ ಶಾಸಕರು, ಜಿಲ್ಲಾಧಿಕಾರಿಗಳು ಹಾಗೂ ಎಲ್ಲಾ ತಹಶೀಲ್ದಾರರ ಮೂಲಕ ನೂರಾರು ನಿವೃತ್ತ ನೌಕರರು ಮನವಿಯನ್ನು ಸಲ್ಲಿಸಿದ್ದಾರೆ. ಅಲ್ಲದೆ ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಸುಮಾರು 12 ಸಾವಿರ ನಿವೃತ್ತ ನೌಕರರು ವಿಶ್ರಾಂತ ನ್ಯಾಯಮೂರ್ತಿ ಸಂತೋಷ ಹೆಗಡೆ, ಕರ್ನಾಟಕ ರಾಜ್ಯ ಸರಕಾರಿ ನೌಕರರ ರಾಜ್ಯಾಧ್ಯಕ್ಷ ಸಿ.ಎಸ್.ಷಡಕ್ಷರಿ, ಕರ್ನಾಟಕ ರಾಜ್ಯ ನಿವೃತ್ತ ನೌಕರರ ಸಂಘದ ರಾಜ್ಯಾಧ್ಯಕ್ಷ ಡಾ.ಎಲ್.ಭೈರಪ್ಪ ಅವರ ಸಮ್ಮುಖದಲ್ಲಿ ನಮಗೆ ಆಗಿರುವ ಅನ್ಯಾಯದ ಕುರಿತು ಮುಖ್ಯಮಂತ್ರಿಗಳು ಹಾಗೂ ಉಪಮುಖ್ಯಮಂತಿಗಳಿಗೆ ಮನವಿ ನೀಡಲಾಗಿದ್ದರೂ ಸ್ಪಂದಿಸುತ್ತಿಲ್ಲ ಎಂದು ಹೇಳಿದರು.
30 ರಿಂದ 40 ವರ್ಷ ಸುದೀರ್ಘ ಸೇವೆ ಸಲ್ಲಿಸಿದ ನಮ್ಮನ್ನು ಕಡೆಗಣಿಸಲಾಗಿದೆ. ಮತ್ತೊಮ್ಮೆ ಸರ್ಕಾರದ ಗಮನ ಸೆಳೆಯಲು ಎಲ್ಲರೂ ಹೆಚ್ಚಿನ ಸಂಖ್ಯೆಯಲ್ಲಿ ಒಗ್ಗೂಡಿದರೆ ನಮ್ಮ ಹೋರಾಟಕ್ಕೆ ಯಶಸ್ಸು ದೊರೆಯಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದ ಷಣ್ಮುಖಯ್ಯ ಅವರು, ನಮ್ಮ ಬೇಡಿಕೆ ನ್ಯಾಯ ಸಮ್ಮತವಾಗಿದ್ದು, ಇದು ಈಡೇರುವವರೆಗೆ ಹೋರಾಟ ನಡೆಸಲಾಗುವುದೆಂದು ತಿಳಿಸಿದರು. ಹೋರಾಟದ ಯಶಸ್ಸಿಗೆ ಪ್ರತಿಯೊಬ್ಬ ನಿವೃತ್ತ ನೌಕರರ ಪಾತ್ರ ಪ್ರಮುಖವಾಗಿದ್ದು, ಜಿಲ್ಲಾ ಸಂಚಾಲಕರು ನಿವೃತ್ತ ನೌಕರರ ವೇದಿಕೆಯ ಸದಸ್ಯರ ಸಂಖ್ಯೆಯನ್ನು ಹೆಚ್ಚಿಸುವ ಮೂಲಕ ಸಂಘಟನೆಯನ್ನು ಬಲಪಡಿಸಬೇಕು ಎಂದು ಕರೆ ನೀಡಿದರು. ಈಗಾಗಲೇ ಎಲ್ಲಾ ಜಿಲ್ಲೆಗಳ ನಿವೃತ್ತ ನೌಕರರ ವೇದಿಕೆಯ ಸಂಘಟನೆಯ ಸಂಚಾಲಕರನ್ನು ಭೇಟಿ ಮಾಡಿ ಹೋರಾಟದ ರೂಪುರೇಷಗಳ ಕುರಿತು ಚರ್ಚಿಸಲಾಗಿದೆ ಎಂದು ತಿಳಿಸಿದರು. ವೇದಿಕೆಯ ಜಿಲ್ಲಾ ಸಂಚಾಲಕ ಪಿ.ಎಸ್.ಜನಾರ್ಧನ್ ಅವರು ಅತಿಥಿಗಳನ್ನು ಸ್ವಾಗತಿಸಿ ಮಾತನಾಡಿ ಸದಸ್ಯತ್ವವನ್ನು ಹೆಚ್ಚಿಸುವ ಸಲುವಾಗಿ ಈಗಾಗಲೇ ಕಾರ್ಯಚಟುವಟಿಕೆ ಆರಂಭಗೊಂಡಿದೆ ಎಂದರು. ರಾಜ್ಯ ಸಂಚಾಲಕ ಕೆ.ಶಿವಶಂಕರ್, ದಾವಣಗೆರೆ ಜಿಲ್ಲಾ ಸಂಚಾಲಕರಾದ ಜಿ.ಎಸ್.ನಾಗರಾಜು, ಓ.ಜಿ.ಏಕಾಂತಪ್ಪ, ಕೊಡಗು ಜಿಲ್ಲಾ ನಿವೃತ್ತ ನೌಕರರ ವೇದಿಕೆಯ ಪ್ರಮುಖರಾದ ಸಿ.ಕೆ.ಶಿವಕುಮಾರ್, ಎಂ.ಪಿ.ನಾಣಯ್ಯ, ಸುಕ್ರುದೇವು ಗೌಡ ಸೇರಿದಂತೆ ವಿವಿಧ ಇಲಾಖೆಯ ನಿವೃತ್ತ ನೌಕರರ ಉಪಸ್ಥಿತರಿದ್ದರು. ಜಿಲ್ಲಾ ಉಪಾಧ್ಯಕ್ಷ ಜಿ.ಎಂ.ಚಿನ್ನಯ್ಯ ವಂದಿಸಿದರು.

Follow us Follow us
Share. WhatsApp Facebook Twitter Email Telegram Copy Link

Website design development company services in Mangalore

Forex Trading Teacher in India

Related Posts

*ಮಡಿಕೇರಿ ದಸರಾ : ಸಾಂಸ್ಕೃತಿಕ ಕಾರ್ಯಕ್ರಮಗಳಿಗೆ ಕಲಾವಿದರಿಂದ ಅರ್ಜಿ ಆಹ್ವಾನ*

ಸೆಪ್ಟೆಂಬರ್ 10, 2026

*ಸೆ.11 ರಂದು ರಾಷ್ಟ್ರೀಯ ಅರಣ್ಯ ಹುತಾತ್ಮರ ದಿನಾಚರಣೆ*

ಸೆಪ್ಟೆಂಬರ್ 10, 2026

*ಕೊಡಗು: ಪ್ರೌಢಶಾಲೆ ಮತ್ತು ಪಿಯು ವಿದ್ಯಾರ್ಥಿಗಳಿಗೆ ಜಿಲ್ಲಾಮಟ್ಟದ ಪ್ರಬಂಧ ಹಾಗೂ ಚರ್ಚಾ ಸ್ಪರ್ಧೆ*

ಸೆಪ್ಟೆಂಬರ್ 10, 2026

*ಸೆ.11 ರಂದು ರಾಷ್ಟ್ರೀಯ ಅರಣ್ಯ ಹುತಾತ್ಮರ ದಿನಾಚರಣೆ*

ಸೆಪ್ಟೆಂಬರ್ 10, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಮಡಿಕೇರಿ ಸೆ.10 NEWS DESK : ಕರ್ನಾಟಕ ಅರಣ್ಯ ಇಲಾಖೆ, ಕೊಡಗು ವೃತ್ತ ಮಡಿಕೇರಿ ವತಿಯಿಂದ ರಾಷ್ಟ್ರೀಯ ಅರಣ್ಯ ಹುತಾತ್ಮರ…

*ಕೊಡಗು: ಪ್ರೌಢಶಾಲೆ ಮತ್ತು ಪಿಯು ವಿದ್ಯಾರ್ಥಿಗಳಿಗೆ ಜಿಲ್ಲಾಮಟ್ಟದ ಪ್ರಬಂಧ ಹಾಗೂ ಚರ್ಚಾ ಸ್ಪರ್ಧೆ*

ಸೆಪ್ಟೆಂಬರ್ 10, 2026

*ಸೆ.12ರಂದು ಪ್ರೌಢಶಾಲಾ ಮಕ್ಕಳಿಗೆ ಗೌರಮ್ಮ ದತ್ತಿ ಕಥಾ ಸ್ಪರ್ಧೆ*

ಸೆಪ್ಟೆಂಬರ್ 10, 2026

*ಕುಶಾಲನಗರ ಎಲ್‌ಐಸಿ ಕಚೇರಿಯಲ್ಲಿ 70ನೇ ಸಂಸ್ಥಾಪನಾ ದಿನಾಚರಣೆ*

ಸೆಪ್ಟೆಂಬರ್ 10, 2026

*ವಿಕಸಿತ ಭಾರತ ಯಂಗ್ ಲೀಡರ್ಸ್ ಡೈಲಾಗ್ ನೋಂದಣಿ ಆರಂಭ : ಯುವಜನರಿಗೆ ಅವಕಾಶ*

ಸೆಪ್ಟೆಂಬರ್ 10, 2026

*ಮಡಿಕೇರಿಯಲ್ಲಿ ವಿಶ್ವ ಬೆನ್ನುಹುರಿ ಗಾಯ ದಿನಾಚರಣೆ ಹಾಗೂ ನಶಾ ಮುಕ್ತ ಭಾರತ ಕಾರ್ಯಕ್ರಮ : ಯಾವುದೇ ರೀತಿಯ ಗಾಯ, ನೋವಿಗೆ ಆರಂಭದಲ್ಲಿ ಚಿಕಿತ್ಸೆ ಅಗತ್ಯ : ಡಾ.ಲೋಕೇಶ್*

ಸೆಪ್ಟೆಂಬರ್ 10, 2026

*ಪದವೀಧರ ವಿಭಾಗದ ಕೊಡಗು ಜಿಲ್ಲಾಧ್ಯಕ್ಷರಾಗಿ ಅಚ್ಚಾಂಡಿರ ಪವನ್ ಪೆಮ್ಮಯ್ಯ ನೇಮಕ*

ಸೆಪ್ಟೆಂಬರ್ 10, 2026

*ಸೆ.12 ರಂದು ಮಡಿಕೇರಿಯಲ್ಲಿ ಕಾಂಗ್ರೆಸ್ ಪ್ರತಿಭಟನೆ*

ಸೆಪ್ಟೆಂಬರ್ 10, 2026

*ಕಾವೇರಿ ಶಾಲೆಯಲ್ಲಿ ಸಂಭ್ರಮದ ಶಿಕ್ಷಕರ ದಿನಾಚರಣೆ*

ಸೆಪ್ಟೆಂಬರ್ 10, 2026

*ಕಾರ್ಯಪ್ಪ ಕಾಲೇಜಿನಲ್ಲಿ ಬೃಹತ್ ರಕ್ತದಾನ ಶಿಬಿರ; 65 ಯೂನಿಟ್ ರಕ್ತ ಸಂಗ್ರಹ*

ಸೆಪ್ಟೆಂಬರ್ 10, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.