Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಕೊಡಗು ಹೆಗ್ಗಡೆ ಸಮಾಜದ ಕ್ರೀಡಾ ಹಬ್ಬಕ್ಕೆ ಸಂಭ್ರಮದ ತೆರೆ*
  • *ಶಂಸುಲ್ ಉಲಮಾ ಕಾಲೇಜು ವಿದ್ಯಾರ್ಥಿಗಳ ಸಾಧನೆ : ಶಿಕ್ಷಣದ ಮೂಲಕ ಉತ್ತಮ ಭವಿಷ್ಯ ರೂಪಿಸಿಕೊಳ್ಳಲು ಗಣ್ಯರ ಕರೆ*
  • *5ನೇ ದಿನವೂ ಮುಂದುವರೆದ ವಸತಿ ರಹಿತರ ಧರಣಿ*
  • *ಕೊಡಗು : ಪತ್ರಿಕಾ ಪ್ರವಾಸ ವಾಹನಕ್ಕೆ ಚಾಲನೆ*
  • *ಜಿಲ್ಲಾ ಮಟ್ಟದ ತ್ರೈಮಾಸಿಕ ಕೆಡಿಪಿ ಸಭೆ : ಜೂನ್ ಮೊದಲ ವಾರದಲ್ಲಿ ಮುಂಗಾರು ಆರಂಭ ಸಾಧ್ಯತೆ : ರಸ್ತೆ ಸೇರಿದಂತೆ ಹಲವು ಕಾಮಗಾರಿ ಪೂರ್ಣಗೊಳಿಸಿ : ಸಚಿವ ಎನ್.ಎಸ್.ಭೋಸರಾಜು*
  • *ಮಾದಾಪುರದಲ್ಲಿ ಕೊಡವ ಸಮಾಜ ಭವನ ಲೋಕಾಪ೯ಣೆ : ಪ್ರಾಮಾಣಿಕತೆಯೊಂದಿಗೆ ಸಂಸ್ಕೃತಿ ಸಂರಕ್ಷಣೆಗೆ ಕೊಡವರು ವಿಶ್ವವ್ಯಾಪಿ ಹೆಸರು ವಾಸಿ : ಬಸವರಾಜ ಬೊಮ್ಮಾಯಿ ಶ್ಲಾಘನೆ*
  • *ಮಡಿಕೇರಿಯಲ್ಲಿ ಪತ್ರಕರ್ತರಿಗೆ ಉಚಿತ ಆರೋಗ್ಯ ತಪಾಸಣಾ ಶಿಬಿರ*
  • *ಪೊನ್ನಂಪೇಟೆಯಲ್ಲಿ ಬಿಜೆಪಿ ವಿಜಯೋತ್ಸವ*
  • *ಫೀಲ್ಡ್ ಮಾರ್ಷಲ್ ಕೆ.ಎಂ.ಕಾರ್ಯಪ್ಪ ಕಾಲೇಜಿನಲ್ಲಿ ‘ಶಾರ್ಟ್ ರೇಂಜ್ ರೈಫಲ್ ಫೈರಿಂಗ್ ರೇಂಜ್’ ಉದ್ಘಾಟನೆ*
  • *ಶ್ರದ್ಧಾಭಕ್ತಿಯಿಂದ ಜರುಗಿದ ಕರ್ಣಂಗೇರಿ ಕ್ಷೇತ್ರದ ಶ್ರೀರಾಜರಾಜೇಶ್ವರಿ ದೇವಾಲಯದ ವಾರ್ಷಿಕೋತ್ಸವ ಹಾಗೂ ರಥೋತ್ಸವ*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*ಜಿಲ್ಲಾಸ್ಪತ್ರೆಯಲ್ಲಿ ಎಂಆರ್ ಐ ಸ್ಕ್ಯಾನಿಂಗ್ ಉಪಕರಣ ಉದ್ಘಾಟನೆ : ಕೊಡಗು ವೈದ್ಯಕೀಯ ವಿಜ್ಞಾನ ಸಂಸ್ಥೆಗೆ ಮತ್ತಷ್ಟು ಅನುದಾನ : ಸಚಿವ ಡಾ.ಶರಣ ಪ್ರಕಾಶ ಪಾಟೀಲ ಭರವಸೆ*
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

*ಜಿಲ್ಲಾಸ್ಪತ್ರೆಯಲ್ಲಿ ಎಂಆರ್ ಐ ಸ್ಕ್ಯಾನಿಂಗ್ ಉಪಕರಣ ಉದ್ಘಾಟನೆ : ಕೊಡಗು ವೈದ್ಯಕೀಯ ವಿಜ್ಞಾನ ಸಂಸ್ಥೆಗೆ ಮತ್ತಷ್ಟು ಅನುದಾನ : ಸಚಿವ ಡಾ.ಶರಣ ಪ್ರಕಾಶ ಪಾಟೀಲ ಭರವಸೆ*

ಸೆಪ್ಟೆಂಬರ್ 29, 20243 Mins ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link

ಮಡಿಕೇರಿ NEWS DESK ಸೆ.29 : ಕೊಡಗು ವೈದ್ಯಕೀಯ ವಿಜ್ಞಾನ ಸಂಸ್ಥೆಯಲ್ಲಿ ಎಂಆರ್ ಐ ಸ್ಕ್ಯಾನಿಂಗ್ ಉಪಕರಣಗಳನ್ನು ವೈದ್ಯಕೀಯ ಶಿಕ್ಷಣ ಸಚಿವ ಡಾ.ಶರಣ ಪ್ರಕಾಶ ಪಾಟೀಲ ಅವರು ಭಾನುವಾರ ಲೋಕಾರ್ಪಣೆಗೊಳಿಸಿದರು. ವೈದ್ಯಕೀಯ ಶಿಕ್ಷಣ ಇಲಾಖೆ, ಕೊಡಗು ವೈದ್ಯಕೀಯ ವಿಜ್ಞಾನ ಸಂಸ್ಥೆ ವತಿಯಿಂದ ನಡೆದ ಕಾರ್ಯಕ್ರಮದಲ್ಲಿ ಎಂಆರ್ ಐ ಸ್ಕ್ಯಾನಿಂಗ್ ಉಪಕರಣಗಳನ್ನು ಉದ್ಘಾಟಿಸಿದರು.
ಕೊಡಗು ಜಿಲ್ಲೆಯ ಹಲವು ವರ್ಷಗಳ ಬೇಡಿಕೆಯಾದ ಎಂಆರ್ ಐ ಸ್ಕ್ಯಾನಿಂಗ್ ಯಂತ್ರವನ್ನು ಅಳವಡಿಸಲಾಗಿದೆ. ಆ ನಿಟ್ಟಿನಲ್ಲಿ ಇಬ್ಬರು ವೈದ್ಯಕೀಯ ತಾಂತ್ರಿಕರನ್ನು ನೇಮಿಸಲು ತುರ್ತು ಕ್ರಮ ವಹಿಸಲಾಗುವುದು ಎಂದು ಶರಣ ಪ್ರಕಾಶ ಪಾಟೀಲ ಅವರು ಹೇಳಿದರು. ಕೊಡಗು ವೈದ್ಯಕೀಯ ವಿಜ್ಞಾನ ಸಂಸ್ಥೆಯ ಮುಂದುವರೆದ ಕಾಮಗಾರಿಗೆ ಇನ್ನೂ 50 ರಿಂದ 60 ಕೋಟಿ ರೂ. ಬಿಡುಗಡೆಗೆ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಲಾಗಿದೆ. ಆ ದಿಸೆಯಲ್ಲಿ ಶೀಘ್ರ ಹಣ ಬಿಡುಗಡೆಗೆ ಪ್ರಯತ್ನಿಸಲಾಗುವುದು ಎಂದು ವೈದ್ಯಕೀಯ ಶಿಕ್ಷಣ ಸಚಿವರು ತಿಳಿಸಿದರು. ಸರ್ಕಾರ ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣಕ್ಕೆ ಹೆಚ್ಚಿನ ಒತ್ತು ನೀಡಿದೆ. ಆ ನಿಟ್ಟಿನಲ್ಲಿ ಕೊಡಗು ವೈದ್ಯಕೀಯ ವಿಜ್ಞಾನ ಸಂಸ್ಥೆ ವ್ಯಾಪ್ತಿಯಲ್ಲಿ ವಿದ್ಯಾರ್ಥಿ ನಿಲಯ, ವಸತಿ ಗೃಹ ಸೇರಿದಂತೆ ಹಲವು ಮೂಲ ಸೌಲಭ್ಯ ಕಲ್ಪಿಸಲು ಪ್ರಯತ್ನಿಸಲಾಗುವುದು ಎಂದು ಶರಣ ಪ್ರಕಾಶ ಪಾಟೀಲ ಅವರು ವಿವರಿಸಿದರು. ರಾಜ್ಯದಲ್ಲಿ 22 ಸರ್ಕಾರಿ ವೈದ್ಯಕೀಯ ಕಾಲೇಜುಗಳು, 2 ಇಎಸ್ ಐ ಆಸ್ಪತ್ರೆಗಳು ಸೇರಿ ಒಟ್ಟು 24 ವೈದ್ಯಕೀಯ ಆಸ್ಪತ್ರೆಗಳು ಹಾಗೂ 71 ವೈದ್ಯಕೀಯ ಕಾಲೇಜುಗಳು ಇದ್ದು, ರಾಜ್ಯದ ಪ್ರತಿಭಾವಂತ ಬಡ ಹಾಗೂ ಮಧ್ಯಮ ವರ್ಗದ ವಿದ್ಯಾರ್ಥಿಗಳು ವೈದ್ಯರಾಗುವಲ್ಲಿ ವೈದ್ಯಕೀಯ ಕಾಲೇಜುಗಳು ಸಹಕಾರಿಯಾಗಿದೆ ಎಂದು ಸಚಿವರು ತಿಳಿಸಿದರು. ಬಡವರ ಮಕ್ಕಳು ವೈದ್ಯರಾಗಬೇಕು ಎಂಬ ಉದ್ದೇಶದಿಂದ ಪ್ರತಿ ಜಿಲ್ಲೆಯಲ್ಲಿಯೂ ವೈದ್ಯಕೀಯ ಕಾಲೇಜು ಆರಂಭಿಸಲು ಸರ್ಕಾರ ಪ್ರಯತ್ನಿಸಿದೆ ಎಂದರು. ಕೊಡಗು ಜಿಲ್ಲೆಯಲ್ಲಿ ವೈದ್ಯಕೀಯ ಕಾಲೇಜಿನ ಜತೆಗೆ ಸೂಪರ್ ಸ್ಪೇಷಾಲಿಟಿ ಆಸ್ಪತ್ರೆ ಕ್ರಿಟಿಕಲ್ ಕೇರ್ ಸೆಂಟರ್ ಆರಂಭಕ್ಕೆ ಪ್ರಯತ್ನಿಸಲಾಗಿದೆ ಎಂದು ಶರಣ ಪ್ರಕಾಶ ಪಾಟೀಲ ತಿಳಿಸಿದರು. ಬಡವರು ಹೃದಯ, ನರ ವಿಜ್ಞಾನ, ವಿಕಿರಣ ವಿಭಾಗದಲ್ಲಿ ದುಬಾರಿ ವೆಚ್ಚದಲ್ಲಿ ಚಿಕಿತ್ಸೆ ಪಡೆಯುವುದು ಕಷ್ಟ ಸಾಧ್ಯ, ಆದ್ದರಿಂದ ಉಚಿತವಾಗಿ ಆರೋಗ್ಯ ಸೌಲಭ್ಯಗಳು ತಲುಪಬೇಕು ಎಂಬ ಉದ್ದೇಶದಿಂದ ಸರ್ಕಾರ ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಇಲಾಖೆಗಳು ಒಟ್ಟುಗೂಡಿ ಆರೋಗ್ಯ ಸೌಲಭ್ಯ ಕಲ್ಪಿಸಲು ಮುಂದಾಗಿದೆ ಎಂದರು. ಮುಂದಿನ ದಿನದಲ್ಲಿ ಸರ್ಕಾರ, ಸಾರ್ವಜನಿಕರು ಹಾಗೂ ಖಾಸಗಿ(ಪಿಪಿಪಿ) ಅವರ ಸಹಭಾಗಿತ್ವದಲ್ಲಿ ಟ್ರಾಮ ಕೇರ್ ಸೆಂಟರ್ ಆರಂಭಕ್ಕೆ ಚಾಲನೆ ನೀಡಲಾಗುವುದು ಎಂದು ವೈದ್ಯಕೀಯ ಶಿಕ್ಷಣ ಸಚಿವರು ಹೇಳಿದರು. ಮಡಿಕೇರಿ ವಿಧಾನಸಭಾ ಕ್ಷೇತ್ರದ ಶಾಸಕರಾದ ಡಾ.ಮಂತರ್ ಗೌಡ ಅವರು ಮಾತನಾಡಿ ಹಲವು ವರ್ಷಗಳ ಬೇಡಿಕೆ ಈಡೇರಿಸಲು ಪ್ರಯತ್ನಿಸಲಾಗಿದೆ. ಮೈಸೂರು, ಮಂಗಳೂರು ಹಾಗೂ ಸುಳ್ಯಕ್ಕೆ ಹೋಗುವುದು ತಪ್ಪಲಿದೆ ಎಂದರು. ಎಂಆರ್ ಐ ಸ್ಕ್ಯಾನಿಂಗ್ ಮಾಡಿಸುವುದರಿಂದ ಯಾವುದೇ ರೀತಿಯ ತೊಂದರೆ ಆಗುವುದಿಲ್ಲ, ಪಾರ್ಶ್ವವಾಯು, ಮೂಳೆ ಸೇರಿದಂತೆ ದೇಹದಲ್ಲಿ ಎಲ್ಲಾ ರೀತಿಯ ರೋಗವನ್ನು ಪತ್ತೆಹಚ್ಚಲು ಎಂಆರ್ ಐ ಸಹಕಾರಿಯಾಗಿದೆ ಎಂದು ವಿವರಿಸಿದರು. ಎಂಆರ್ ಐ ಸ್ಕ್ಯಾನಿಂಗ್ ಯಂತ್ರ ಅಳವಡಿಸಲಾಗಿದ್ದು, ಕೂಡಲೇ ಇಬ್ಬರು ತಾಂತ್ರಿಕ ಸಿಬ್ಬಂದಿಯನ್ನು ನಿಯೋಜಿಸಬೇಕು ಎಂದು ಸಚಿವರಲ್ಲಿ ಮನವಿ ಮಾಡಿದರು. ಕೊಡಗು ವೈದ್ಯಕೀಯ ವಿಜ್ಞಾನ ಸಂಸ್ಥೆ (ಜಿಲ್ಲಾಸ್ಪತ್ರೆ) ಜಾಗವನ್ನು ಕೊರವಂಡ ಕುಟುಂಬದವರು ದಾನವಾಗಿ ನೀಡಿದ್ದಾರೆ. ಆ ನಿಟ್ಟಿನಲ್ಲಿ ಕೊರವಂಡ ತಿಮ್ಮಯ್ಯ ಅವರ ಹೆಸರನ್ನು ಇಡುವಂತಾಗಬೇಕು ಎಂದು ಇದೇ ಸಂದರ್ಭದಲ್ಲಿ ಶಾಸಕರು ಮನವಿ ಮಾಡಿದರು. ವೈದ್ಯಕೀಯ ಶಿಕ್ಷಣ ಸಂಸ್ಥೆಯ ಮುಂದುವರೆದ ಅಭಿವೃದ್ಧಿ ಕಾಮಗಾರಿಗೆ 50 ರಿಂದ 60 ಕೋಟಿ ರೂ ಬಿಡುಗಡೆಗೆ ಸಚಿವರಲ್ಲಿ ಮನವಿ ಮಾಡಿದರು. ಎಂಆರ್ ಐ ಸ್ಕ್ಯಾನಿಂಗ್ ಉಪಕರಣ ಬಳಕೆಯಲ್ಲಿ ಆ ವಿಭಾಗದ ವೈದ್ಯರ ಜೊತೆಗೆ ಇತರೆ ವೈದ್ಯರು ತರಬೇತಿ ಪಡೆಯುವಂತಾಗಬೇಕು ಎಂದು ಡಾ.ಮಂತರ್ ಗೌಡ ಅವರು ಸಲಹೆ ನೀಡಿದರು. ಮುಖ್ಯಮಂತ್ರಿ ಅವರ ಕಾನೂನು ಸಲಹೆಗಾರರು ಮತ್ತು ವಿರಾಜಪೇಟೆ ವಿಧಾನಸಭಾ ಕ್ಷೇತ್ರದ ಶಾಸಕರಾದ ಎ.ಎಸ್.ಪೊನ್ನಣ್ಣ ಅವರು ಮಾತನಾಡಿ ಸರ್ಕಾರ ವೈದ್ಯಕೀಯ ಶಿಕ್ಷಣ ಮತ್ತು ಆರೋಗ್ಯ ಕ್ಷೇತ್ರಕ್ಕೆ ಹೆಚ್ಚಿನ ಒತ್ತು ನೀಡಿದೆ ಎಂದು ತಿಳಿಸಿದರು. ಕೋವಿಡ್ ಸಂದರ್ಭದಲ್ಲಿ ವೈದ್ಯರು ಮತ್ತು ಶ್ರುಶ್ರುಷಕರು ಹೆಚ್ಚಿನ ವೈದ್ಯಕೀಯ ಸೇವೆ ಸಲ್ಲಿಸಿರುವುದು ಶ್ಲಾಘನೀಯ ಎಂದರು. ವೈದ್ಯಕೀಯ ಶಿಕ್ಷಣ ಮತ್ತು ಆರೋಗ್ಯ ಕ್ಷೇತ್ರದಲ್ಲಿ ಅಂತರ ರಾಷ್ಟ್ರೀಯ ಮಟ್ಟದಲ್ಲಿ ಆದ್ಯತೆ ನೀಡಬೇಕು ಎಂಬ ಉದ್ದೇಶದಿಂದ ಸರ್ಕಾರ ಆರೋಗ್ಯ ಕ್ಷೇತ್ರಕ್ಕೆ ಹೆಚ್ಚಿನ ಒತ್ತು ನೀಡಿದೆ ಎಂದು ಎ.ಎಸ್.ಪೊನ್ನಣ್ಣ ಅವರು ತಿಳಿಸಿದರು. ವೈದ್ಯಕೀಯ ಶಿಕ್ಷಣ ಇಲಾಖೆಯ ಪ್ರಧಾನ ಕಾರ್ಯದರ್ಶಿ ಮೊಹಮ್ಮದ್ ಮೊಸಿನ್ ಅವರು ಜಿಲ್ಲೆಯಲ್ಲಿ ಕ್ರಿಟಿಕಲ್ ಕೇರ್ ಸೆಂಟರ್ ಶೀಘ್ರ ಆರಂಭವಾಗಲಿದೆ ಎಂದು ತಿಳಿಸಿದರು. ಕೊಡಗು ವೈದ್ಯಕೀಯ ವಿಜ್ಞಾನ ಸಂಸ್ಥೆಯ ನಿರ್ದೇಶಕರಾದ ಡಾ.ವಿಶಾಲ್ ಕುಮಾರ್ ಅವರು ಮಾತನಾಡಿದರು. ಹೆಚ್ಚುವರಿ ಜಿಲ್ಲಾಧಿಕಾರಿ ಆರ್.ಐಶ್ವರ್ಯ, ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಜಿಲ್ಲಾ ಅಧ್ಯಕ್ಷರಾದ ಧರ್ಮಜ ಉತ್ತಪ್ಪ, ಕೊಡಗು ವೈದ್ಯಕೀಯ ವಿಜ್ಞಾನ ಸಂಸ್ಥೆಯ ಮುಖ್ಯ ಆಡಳಿತ ಅಧಿಕಾರಿ ಕೆ.ಎಂ.ರೋಹಿಣಿ, ಜಿಲ್ಲಾ ಶಸ್ತ್ರ ಚಿಕಿತ್ಸಕರಾದ ಡಾ.ನಂಜುಂಡಯ್ಯ, ವೈದ್ಯಕೀಯ ಅಧೀಕ್ಷಕರಾದ ಡಾ.ಎಚ್.ಕೆ.ಸೋಮಶೇಖರ, ವಿವಿಧ ವಿಭಾಗದ ಮುಖ್ಯಸ್ಥರು ಇದ್ದರು. ಸಚಿವರನ್ನು ಇದೇ ಸಂದರ್ಭದಲ್ಲಿ ಸನ್ಮಾನಿಸಲಾಯಿತು.

Follow us Follow us
Share. WhatsApp Facebook Twitter Email Telegram Copy Link

Website design development company services in Mangalore

Forex Trading Teacher in India

Related Posts

*ಕೊಡಗು ಹೆಗ್ಗಡೆ ಸಮಾಜದ ಕ್ರೀಡಾ ಹಬ್ಬಕ್ಕೆ ಸಂಭ್ರಮದ ತೆರೆ*

ಮೇ 5, 2026

*ಶಂಸುಲ್ ಉಲಮಾ ಕಾಲೇಜು ವಿದ್ಯಾರ್ಥಿಗಳ ಸಾಧನೆ : ಶಿಕ್ಷಣದ ಮೂಲಕ ಉತ್ತಮ ಭವಿಷ್ಯ ರೂಪಿಸಿಕೊಳ್ಳಲು ಗಣ್ಯರ ಕರೆ*

ಮೇ 5, 2026

*5ನೇ ದಿನವೂ ಮುಂದುವರೆದ ವಸತಿ ರಹಿತರ ಧರಣಿ*

ಮೇ 5, 2026

*ಶಂಸುಲ್ ಉಲಮಾ ಕಾಲೇಜು ವಿದ್ಯಾರ್ಥಿಗಳ ಸಾಧನೆ : ಶಿಕ್ಷಣದ ಮೂಲಕ ಉತ್ತಮ ಭವಿಷ್ಯ ರೂಪಿಸಿಕೊಳ್ಳಲು ಗಣ್ಯರ ಕರೆ*

ಮೇ 5, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ವಿರಾಜಪೇಟೆ ಮೇ 6 NEWS DESK : ಪೆರುಂಬಾಡಿಯ ಶಂಸುಲ್ ಉಲಮಾ ಎಜುಕೇಶನಲ್ ಅಕಾಡೆಮಿಯ ಎಸ್ಇಎ ಕಾಲೇಜು ವಿದ್ಯಾರ್ಥಿಗಳು ಪಿಯುಸಿ ಪರೀಕ್ಷೆಯಲ್ಲಿ…

*5ನೇ ದಿನವೂ ಮುಂದುವರೆದ ವಸತಿ ರಹಿತರ ಧರಣಿ*

ಮೇ 5, 2026

*ಕೊಡಗು : ಪತ್ರಿಕಾ ಪ್ರವಾಸ ವಾಹನಕ್ಕೆ ಚಾಲನೆ*

ಮೇ 5, 2026

*ಜಿಲ್ಲಾ ಮಟ್ಟದ ತ್ರೈಮಾಸಿಕ ಕೆಡಿಪಿ ಸಭೆ : ಜೂನ್ ಮೊದಲ ವಾರದಲ್ಲಿ ಮುಂಗಾರು ಆರಂಭ ಸಾಧ್ಯತೆ : ರಸ್ತೆ ಸೇರಿದಂತೆ ಹಲವು ಕಾಮಗಾರಿ ಪೂರ್ಣಗೊಳಿಸಿ : ಸಚಿವ ಎನ್.ಎಸ್.ಭೋಸರಾಜು*

ಮೇ 5, 2026

*ಮಾದಾಪುರದಲ್ಲಿ ಕೊಡವ ಸಮಾಜ ಭವನ ಲೋಕಾಪ೯ಣೆ : ಪ್ರಾಮಾಣಿಕತೆಯೊಂದಿಗೆ ಸಂಸ್ಕೃತಿ ಸಂರಕ್ಷಣೆಗೆ ಕೊಡವರು ವಿಶ್ವವ್ಯಾಪಿ ಹೆಸರು ವಾಸಿ : ಬಸವರಾಜ ಬೊಮ್ಮಾಯಿ ಶ್ಲಾಘನೆ*

ಮೇ 5, 2026

*ಮಡಿಕೇರಿಯಲ್ಲಿ ಪತ್ರಕರ್ತರಿಗೆ ಉಚಿತ ಆರೋಗ್ಯ ತಪಾಸಣಾ ಶಿಬಿರ*

ಮೇ 5, 2026

*ಪೊನ್ನಂಪೇಟೆಯಲ್ಲಿ ಬಿಜೆಪಿ ವಿಜಯೋತ್ಸವ*

ಮೇ 5, 2026

*ಫೀಲ್ಡ್ ಮಾರ್ಷಲ್ ಕೆ.ಎಂ.ಕಾರ್ಯಪ್ಪ ಕಾಲೇಜಿನಲ್ಲಿ ‘ಶಾರ್ಟ್ ರೇಂಜ್ ರೈಫಲ್ ಫೈರಿಂಗ್ ರೇಂಜ್’ ಉದ್ಘಾಟನೆ*

ಮೇ 5, 2026

*ಶ್ರದ್ಧಾಭಕ್ತಿಯಿಂದ ಜರುಗಿದ ಕರ್ಣಂಗೇರಿ ಕ್ಷೇತ್ರದ ಶ್ರೀರಾಜರಾಜೇಶ್ವರಿ ದೇವಾಲಯದ ವಾರ್ಷಿಕೋತ್ಸವ ಹಾಗೂ ರಥೋತ್ಸವ*

ಮೇ 5, 2026

*ಬಾಳೆಲೆ-ನಲ್ಲೂರು : ಮೇ 5 ರಂದು ವಿವಿಧೆಡೆ ವಿದ್ಯುತ್ ವ್ಯತ್ಯಯ*

ಮೇ 4, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.

Ad Blocker Enabled!
Ad Blocker Enabled!
Our website is made possible by displaying online advertisements to our visitors. Please support us by disabling your Ad Blocker.