Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಬಾಳೆಯಡ ಕಿಶನ್ ಪೂವಯ್ಯ ಅವರ ‘ರಾಜಕೀಯ ಮತ್ತು ಪ್ರಕೃತಿ’ ಕೃತಿಗೆ ಬಿ.ಎಸ್.ಗೋಪಾಲಕೃಷ್ಣ ದತ್ತಿ ಪ್ರಶಸ್ತಿ*
  • *ಸರ್ಕಾರಿ ನೌಕರಿ ಆಕಾಂಕ್ಷಿಗಳಿಗೆ ಬಂಪರ್ ಆಫರ್: ಸರ್ಕಾರದಿಂದ ಉಚಿತ ಆನ್‌ಲೈನ್ ಕೋಚಿಂಗ್*
  • *ಬೆಂಗಳೂರಿನಲ್ಲಿ ಕೊಡಗು ಗೌಡ ಸಮಾಜದ ಕೈಲ್ ಮುಹೂರ್ತ ಜಂಬರ : ಸಿಎಂ ಡಿ.ಕೆ.ಶಿವಕುಮಾರ್ ಭಾಗಿ*
  • *ಮಡಿಕೇರಿ ಸರಕಾರಿ ಮಹಿಳಾ ಕಾಲೇಜಿನಲ್ಲಿ ರೋಟರೆಕ್ಟ್ ಕ್ಲಬ್ ಪದಗ್ರಹಣ*
  • *ದಸರಾ ಸುವರ್ಣ ಮಹೋತ್ಸವ ಸಂಭ್ರಮ : ಶ್ರೀ ಕೋಟೆ ಮಹಾಗಣಪತಿ ಸಮಿತಿಯಿಂದ ಸ್ವಚ್ಛತಾ ಶ್ರಮದಾನ : ಪೌರ ಕಾರ್ಮಿಕರಿಗೆ ಬಟ್ಟೆ ವಿತರಣೆ*
  • *ಸೂಪರ್ ಎಲ್‌ನಿನೊ ಪರಿಣಾಮ : ನೀರನ್ನು ಮಿತವಾಗಿ ಬಳಸಿ ಸಹಕರಿಸಿ : ಸಚಿವ ಪಿ.ಎಂ. ನರೇಂದ್ರಸ್ವಾಮಿ*
  • *ನಿಯಮಗಳಡಿಯಲ್ಲೇ ಜವಾಬ್ದಾರಿಯಿಂದ ದಸರಾ ಆಚರಿಸಿ : ಸಚಿವ ಪಿ.ಎಂ.ನರೇಂದ್ರಸ್ವಾಮಿ*
  • *ಮಕ್ಕಳ ಸುರಕ್ಷತೆಗಾಗಿ ವಿವಿಧೆಡೆ ಜಾಗೃತಿ ಅಭಿಯಾನ*
  • *ಡಾ. ಕೆ.ಪಿ. ಲಲಿತ ಅವರ ‘ಕೊಡಗಿನ ಜಾನಪದ ಕಥೆಗಳು’ ಕೃತಿಗೆ ಕೊಡಗಿನ ಗೌರಮ್ಮ ದತ್ತಿ ಪ್ರಶಸ್ತಿ*
  • *ಮಕ್ಕಂದೂರು-ಮುಕ್ಕೋಡ್ಲು ಗೌಡ ಸಮಾಜದಿಂದ ಕೈಲ್ ಮುಹೂರ್ತ ಸಂತೋಷಕೂಟ*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*ಮಾಯಮುಡಿಯಲ್ಲಿ ವಚನಗಳ ನಡಿಗೆ ವಿದ್ಯಾರ್ಥಿಗಳ ಕಡೆಗೆ : ಯುವಜನರಿಗೆ ವಚನಗಳ ಅರಿವು  ಅಗತ್ಯ* 
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

*ಮಾಯಮುಡಿಯಲ್ಲಿ ವಚನಗಳ ನಡಿಗೆ ವಿದ್ಯಾರ್ಥಿಗಳ ಕಡೆಗೆ : ಯುವಜನರಿಗೆ ವಚನಗಳ ಅರಿವು  ಅಗತ್ಯ* 

ಸೆಪ್ಟೆಂಬರ್ 30, 20242 Mins ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link

ಗೋಣಿಕೊಪ್ಪ NEWS DESK ಸೆ.30 : ವಚನ ಸಾಹಿತ್ಯ ಮರೆತು ಹೋದ ಶರಣರ ಪರಂಪರೆಯ   ಮೌಲ್ಯಗಳನ್ನು ಮರಳಿ ಸ್ಮರಿಸುವ ವೇದಿಕೆಯಾಗಿದೆ ಎಂದು ಸಾಹಿತಿ ಕಣಿವೆ ಭಾರಧ್ವಾಜ್ ಆನಂದತೀರ್ಥ ಹೇಳಿದರು. ಅಖಿಲ ಭಾರತ ಶರಣ ಸಾಹಿತ್ಯ ಪರಿಷತ್ತು ಕೊಡಗು ಜಿಲ್ಲೆ, ಪೊನ್ನಂಪೇಟೆ ತಾಲ್ಲೂಕು ಕದಳಿ ವೇದಿಕೆ ಹಾಗೂ ಮಾಯಮುಡಿ ಸರ್ಕಾರಿ ಪ್ರಾಥಮಿಕ ಶಾಲೆಯ ಸಂಯುಕ್ತಾಶ್ರಯದಲ್ಲಿ ” ವಿದ್ಯಾರ್ಥಿಗಳೆಡೆಗೆ ವಚನಗಳ ನಡಿಗೆ ” ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಅವರು, ಶರಣರ ವ್ಯಕ್ತಿತ್ವ ಹಾಗೂ ಅವರ ಸಾಧನೆಗಳ ಘನತೆಯನ್ನು ಬಿಂಬಿಸುವ ವಚನಗಳು  ಕನ್ನಡ ಸಾಹಿತ್ಯದ ಅಮೂಲ್ಯ ಸಂಪತ್ತು. ಹಾಗಾಗಿ ಶಾಲಾ ಕಾಲೇಜು ಹಂತದಿಂದಲೇ ವಿದ್ಯಾರ್ಥಿಗಳು ವಚನ ಸಾಹಿತ್ಯದ ಅರಿವು ಮೂಡಿಸಿಕೊಂಡು ಉತ್ತಮ ವ್ಯಕ್ತಿತ್ವ ಹೊಂದಲು ಭಾರದ್ವಾಜ್ ಕರೆಕೊಟ್ಟರು. ವಚನ ಸಾಹಿತ್ಯದಲ್ಲಿ ಮಾನವೀಯ ಮೌಲ್ಯಗಳು ವಿಷಯದ ಕುರಿತು ಉಪನ್ಯಾಸ ನೀಡಿದ ವಿರಾಜಪೇಟೆ ತಾಲ್ಲೂಕು  ಶರಣ ಸಾಹಿತ್ಯ ಪರಿಷತ್ತು ಅಧ್ಯಕ್ಷ ಡಾ.ದಿಲನ್ ಮುತ್ತಣ್ಣ, ಶತ ಶತಮಾನಗಳ ಎಲ್ಲೆಯನ್ನು ಮೀರಿ ಎಷ್ಟೋ ಕಾಲದವರೆಗೂ ಜೀವಂತವಾಗಿ ಉಳಿಯಬಲ್ಲ ಸತ್ವ ವಚನಗಳಲ್ಲಿವೆ. ರಾಜಧರ್ಮ ಕ್ಷೀಣಿಸಿ ಪ್ರಜಾಧರ್ಮ ಜಾರಿಗೆ ಬಂದದ್ದು ವಚನಕಾರರ ಚಳುವಳಿಯಿಂದ. ಹನ್ನೆರಡನೇ ಶತಮಾನದಲ್ಲಿ ಮೌಢ್ಯಗಳು ಹಾಗೂ ಕಂದಾಚಾರಗಳ ಸುಳಿಯಲ್ಲಿ  ಜನಸಾಮಾನ್ಯರನ್ನು ಸಿಲುಕಿಸಿ ದೇವರ ಹೆಸರಿನಲ್ಲಿ ನರಕ ಹಾಗೂ ಸ್ವರ್ಗದ ಹೆಸರಲ್ಲಿ ಶೋಷಿಸುತ್ತಿದ್ದ ಕಾಲಘಟ್ಟದಲ್ಲಿ ದೇಹವನ್ನೇ ದೇವಾಲಯವಾಗಿಸಿದ ವಚನಕಾರರು ಅಮಾಯಕ ಶೋಷಿತ ಮಂದಿಯ ಬದುಕಿನಲ್ಲಿ ಬೆಳಕು ನೀಡಿದವರು ವಚನಕಾರರು ಎಂದು ಡಾ.ದಿಲನ್ ವ್ಯಾಖ್ಯಾನಿಸಿದರು‌. ಮಾಯಮುಡಿ ಗ್ರಾಮ ಪಂಚಾಯಿತಿ ಅಧ್ಯಕ್ಷ ಟಾಟು ಮೊಣ್ಣಪ್ಪ ಮಾತನಾಡಿ, ಹನ್ನೆರಡನೇ ಶತಮಾನದ ಶರಣರ ಚಿಂತನೆಗಳು ಹಾಗೂ ಆದರ್ಶಗಳನ್ನು  ಮಕ್ಕಳಿಗೆ ಮನನ ಮಾಡುವ ಕೆಲಸವಾದಲ್ಲಿ ಮಕ್ಕಳಲ್ಲಿ ಸದ್ವಿಚಾರಗಳು ಬೆಳೆಯಲು ಸಹಕಾರಿಯಾಗುತ್ತದೆ. ಬಸವಣ್ಣನವರು ರಚಿಸಿದ ಕಲಬೇಡ ಕೊಲಬೇಡ ವಚನದ ಸಾರವನ್ನು ಯುವ ಜನಾಂಗ ತಿಳಿದಲ್ಲಿ ಸಮಾಜ ಸ್ವಾಸ್ಥ್ಯವಾಗುತ್ತದೆ ಎಂದು ಟಾಟು ಮೊಣ್ಣಪ್ಪ ಹೇಳಿದರು. ಜಿಲ್ಲಾ ಶರಣ ಸಾಹಿತ್ಯ ಪರಿಷತ್ತು ಅಧ್ಯಕ್ಷ ಕೆ.ಎಸ್.ಮೂರ್ತಿ, ಜಿಲ್ಲಾ ಸಮಿತಿ ಗೌರವ ಕಾರ್ಯದರ್ಶಿ ಬಿ.ನಟರಾಜು, ಕಾರ್ಯದರ್ಶಿ ಕೆ.ಪಿ. ಪರಮೇಶ್, ಜಿಲ್ಲಾ ನಿರ್ದೇಶಕರೂ ಆದ ನಿವೃತ್ತ ಸೈನಿಕ ಮೋಹನ್,  ಮಾಯಮುಡಿ ಗ್ರಾಮ ಪಂಚಾಯಿತಿ ಅಧ್ಯಕ್ಷ ಟಾಟುಮೊಣ್ಣಪ್ಪ,  ಪೊನ್ನಂಪೇಟೆ ತಾಲ್ಲೂಕು ಶರಣ ಸಾಹಿತ್ಯ ಪರಿಷತ್ತು ಅಧ್ಯಕ್ಷ ಜೆ.ಎಸ್.ಲೋಕೇಶ್, ತಾಲ್ಲೂಕು ಕದಳಿ ವೇದಿಕೆ ಅಧ್ಯಕ್ಷೆ ಶೋಭಾರಾಣಿ, ಶಾಲಾಭಿವೃದ್ದಿ ಸಮಿತಿ ಅಧ್ಯಕ್ಷ ಉಮೇಶ್, ಶಾಲೆಯ ಮುಖ್ಯ ಶಿಕ್ಷಕಿ  ಜಯಮ್ಮ,  ನಿವೃತ್ತ ಶಿಕ್ಷಕಿ ಸುಬ್ಬಮ್ಮ, ಮಾಯಮುಡಿ ಗ್ರಾಮದ ನಿವಾಸಿಗಳಾದ ಸರೋಜ, ಲತಾ, ಅರ್ಪಿತಾ, ನೇತ್ರಾವತಿ,  ಇದ್ದರು. ವಿದ್ಯಾರ್ಥಿಗಳಿಂದ ವಚನ ಗಾಯನ ನಡೆಯಿತು. ಶಾಲಾ ಶಿಕ್ಷಕಿ ಎಂ.ಟಿ.ಸುಮಾ ಹಾಗೂ ಶಾಲಾ ವಿದ್ಯಾರ್ಥಿಗಳಿಂದ  ವಚನ ಗಾಯನ ನಡೆಯಿತು. ಕೆ.ಬಿ.ಪುಷ್ಪಾ ಸ್ವಾಗತಿಸಿದರು. ಎಂ.ಬಿ.ಸಹನಾ ಪ್ರಾಸ್ತಾವಿಕವಾಗಿ ಮಾತನಾಡಿದರು. ರಾಗಿಣಿ ವಂದಿಸಿದರು. ಕಾರ್ಯಕ್ರಮದ ಅಂಗವಾಗಿ ನಿವೃತ್ತ ಸೈನಿಕ ಮಾಯಮುಡಿಯ ಎಸ್.ಪಿ. ಮೋಹನ ಚಂದ್ರ ವಿದ್ಯಾರ್ಥಿಗಳಿಗೆ ಸಿಹಿ ವಿತರಿಸಿದರು.

Follow us Follow us
Share. WhatsApp Facebook Twitter Email Telegram Copy Link

Related Posts

*ಬಾಳೆಯಡ ಕಿಶನ್ ಪೂವಯ್ಯ ಅವರ ‘ರಾಜಕೀಯ ಮತ್ತು ಪ್ರಕೃತಿ’ ಕೃತಿಗೆ ಬಿ.ಎಸ್.ಗೋಪಾಲಕೃಷ್ಣ ದತ್ತಿ ಪ್ರಶಸ್ತಿ*

ಅಕ್ಟೋಬರ್ 4, 2026

*ಸರ್ಕಾರಿ ನೌಕರಿ ಆಕಾಂಕ್ಷಿಗಳಿಗೆ ಬಂಪರ್ ಆಫರ್: ಸರ್ಕಾರದಿಂದ ಉಚಿತ ಆನ್‌ಲೈನ್ ಕೋಚಿಂಗ್*

ಅಕ್ಟೋಬರ್ 4, 2026

*ಬೆಂಗಳೂರಿನಲ್ಲಿ ಕೊಡಗು ಗೌಡ ಸಮಾಜದ ಕೈಲ್ ಮುಹೂರ್ತ ಜಂಬರ : ಸಿಎಂ ಡಿ.ಕೆ.ಶಿವಕುಮಾರ್ ಭಾಗಿ*

ಅಕ್ಟೋಬರ್ 4, 2026

*ಸರ್ಕಾರಿ ನೌಕರಿ ಆಕಾಂಕ್ಷಿಗಳಿಗೆ ಬಂಪರ್ ಆಫರ್: ಸರ್ಕಾರದಿಂದ ಉಚಿತ ಆನ್‌ಲೈನ್ ಕೋಚಿಂಗ್*

ಅಕ್ಟೋಬರ್ 4, 2026 ಇತ್ತೀಚಿನ ಸುದ್ದಿಗಳು ಕರ್ನಾಟಕ

ಸರ್ಕಾರಿ ಉದ್ಯೋಗ ಪಡೆಯುವ ಕನಸು ಕಾಣುತ್ತಿರುವ ಕರ್ನಾಟಕದ ನಿರುದ್ಯೋಗಿ ಯುವಜನರಿಗೆ ರಾಜ್ಯ ಸರ್ಕಾರ ಸಿಹಿಸುದ್ದಿ ನೀಡಿದೆ. ‘ಮುಖ್ಯಮಂತ್ರಿ ವಿದ್ಯಾರ್ಥಿ ಸಹಾಯ…

*ಬೆಂಗಳೂರಿನಲ್ಲಿ ಕೊಡಗು ಗೌಡ ಸಮಾಜದ ಕೈಲ್ ಮುಹೂರ್ತ ಜಂಬರ : ಸಿಎಂ ಡಿ.ಕೆ.ಶಿವಕುಮಾರ್ ಭಾಗಿ*

ಅಕ್ಟೋಬರ್ 4, 2026

*ಮಡಿಕೇರಿ ಸರಕಾರಿ ಮಹಿಳಾ ಕಾಲೇಜಿನಲ್ಲಿ ರೋಟರೆಕ್ಟ್ ಕ್ಲಬ್ ಪದಗ್ರಹಣ*

ಅಕ್ಟೋಬರ್ 4, 2026

*ದಸರಾ ಸುವರ್ಣ ಮಹೋತ್ಸವ ಸಂಭ್ರಮ : ಶ್ರೀ ಕೋಟೆ ಮಹಾಗಣಪತಿ ಸಮಿತಿಯಿಂದ ಸ್ವಚ್ಛತಾ ಶ್ರಮದಾನ : ಪೌರ ಕಾರ್ಮಿಕರಿಗೆ ಬಟ್ಟೆ ವಿತರಣೆ*

ಅಕ್ಟೋಬರ್ 4, 2026

*ಸೂಪರ್ ಎಲ್‌ನಿನೊ ಪರಿಣಾಮ : ನೀರನ್ನು ಮಿತವಾಗಿ ಬಳಸಿ ಸಹಕರಿಸಿ : ಸಚಿವ ಪಿ.ಎಂ. ನರೇಂದ್ರಸ್ವಾಮಿ*

ಅಕ್ಟೋಬರ್ 3, 2026

*ನಿಯಮಗಳಡಿಯಲ್ಲೇ ಜವಾಬ್ದಾರಿಯಿಂದ ದಸರಾ ಆಚರಿಸಿ : ಸಚಿವ ಪಿ.ಎಂ.ನರೇಂದ್ರಸ್ವಾಮಿ*

ಅಕ್ಟೋಬರ್ 3, 2026

*ಮಕ್ಕಳ ಸುರಕ್ಷತೆಗಾಗಿ ವಿವಿಧೆಡೆ ಜಾಗೃತಿ ಅಭಿಯಾನ*

ಅಕ್ಟೋಬರ್ 3, 2026

*ಡಾ. ಕೆ.ಪಿ. ಲಲಿತ ಅವರ ‘ಕೊಡಗಿನ ಜಾನಪದ ಕಥೆಗಳು’ ಕೃತಿಗೆ ಕೊಡಗಿನ ಗೌರಮ್ಮ ದತ್ತಿ ಪ್ರಶಸ್ತಿ*

ಅಕ್ಟೋಬರ್ 3, 2026

*ಮಕ್ಕಂದೂರು-ಮುಕ್ಕೋಡ್ಲು ಗೌಡ ಸಮಾಜದಿಂದ ಕೈಲ್ ಮುಹೂರ್ತ ಸಂತೋಷಕೂಟ*

ಅಕ್ಟೋಬರ್ 3, 2026

*ನಶಾ ಮುಕ್ತ ಭಾರತ ಜಾಗೃತಿ ಕಾರ್ಯಕ್ರಮ*

ಅಕ್ಟೋಬರ್ 3, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.