Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಸೆ.12ರಂದು ಪ್ರೌಢಶಾಲಾ ಮಕ್ಕಳಿಗೆ ಗೌರಮ್ಮ ದತ್ತಿ ಕಥಾ ಸ್ಪರ್ಧೆ*
  • *ಕುಶಾಲನಗರ ಎಲ್‌ಐಸಿ ಕಚೇರಿಯಲ್ಲಿ 70ನೇ ಸಂಸ್ಥಾಪನಾ ದಿನಾಚರಣೆ*
  • *ವಿಕಸಿತ ಭಾರತ ಯಂಗ್ ಲೀಡರ್ಸ್ ಡೈಲಾಗ್ ನೋಂದಣಿ ಆರಂಭ : ಯುವಜನರಿಗೆ ಅವಕಾಶ*
  • *ಮಡಿಕೇರಿಯಲ್ಲಿ ವಿಶ್ವ ಬೆನ್ನುಹುರಿ ಗಾಯ ದಿನಾಚರಣೆ ಹಾಗೂ ನಶಾ ಮುಕ್ತ ಭಾರತ ಕಾರ್ಯಕ್ರಮ : ಯಾವುದೇ ರೀತಿಯ ಗಾಯ, ನೋವಿಗೆ ಆರಂಭದಲ್ಲಿ ಚಿಕಿತ್ಸೆ ಅಗತ್ಯ : ಡಾ.ಲೋಕೇಶ್*
  • *ಪದವೀಧರ ವಿಭಾಗದ ಕೊಡಗು ಜಿಲ್ಲಾಧ್ಯಕ್ಷರಾಗಿ ಅಚ್ಚಾಂಡಿರ ಪವನ್ ಪೆಮ್ಮಯ್ಯ ನೇಮಕ*
  • *ಸೆ.12 ರಂದು ಮಡಿಕೇರಿಯಲ್ಲಿ ಕಾಂಗ್ರೆಸ್ ಪ್ರತಿಭಟನೆ*
  • *ಕಾವೇರಿ ಶಾಲೆಯಲ್ಲಿ ಸಂಭ್ರಮದ ಶಿಕ್ಷಕರ ದಿನಾಚರಣೆ*
  • *ಕಾರ್ಯಪ್ಪ ಕಾಲೇಜಿನಲ್ಲಿ ಬೃಹತ್ ರಕ್ತದಾನ ಶಿಬಿರ; 65 ಯೂನಿಟ್ ರಕ್ತ ಸಂಗ್ರಹ*
  • *ವಿಭಾಗ ಮಟ್ಟದ ಹ್ಯಾಂಡ್ಬಾಲ್ ಪಂದ್ಯಾಟಕ್ಕೆ ಭಾಗಮಂಡಲ ವಸತಿ ಶಾಲೆ ವಿದ್ಯಾರ್ಥಿಗಳ ಆಯ್ಕೆ*
  • *ರೋಟರಿ ವುಡ್ಸ್ ನಿಂದ ಶಿಕ್ಷಕಿಯರಿಗೆ ನೇಷನ್ ಬಿಲ್ಡರ್ ಪ್ರಶಸ್ತಿ ಪ್ರಧಾನ; ಪುಣ್ಯದ ಕೆಲಸವಾದ ಶಿಕ್ಷಕ ವೖತ್ತಿಯಲ್ಲಿರುವವರನ್ನು ಸಮಾಜ ಗೌರವಿಸಬೇಕು – ಬಿ.ಆರ್.ಜೋಯಪ್ಪ* 
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*ಕೂಡುಮಂಗಳೂರು ಸರ್ಕಾರಿ ಪ್ರೌಢಶಾಲೆಯಲ್ಲಿ ಸ್ವಚ್ಛತಾ ಕಾರ್ಯಕ್ರಮ : ವಿದ್ಯಾರ್ಥಿಗಳಿಂದ ಪ್ರತಿಜ್ಞಾ ವಿಧಿ ಸ್ವೀಕಾರ*
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

*ಕೂಡುಮಂಗಳೂರು ಸರ್ಕಾರಿ ಪ್ರೌಢಶಾಲೆಯಲ್ಲಿ ಸ್ವಚ್ಛತಾ ಕಾರ್ಯಕ್ರಮ : ವಿದ್ಯಾರ್ಥಿಗಳಿಂದ ಪ್ರತಿಜ್ಞಾ ವಿಧಿ ಸ್ವೀಕಾರ*

ಅಕ್ಟೋಬರ್ 2, 20242 Mins ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link

ಕುಶಾಲನಗರ ಅ.2 NEWS DESK : ಪ್ರತಿಯೊಬ್ಬರೂ ನಮ್ಮ ಸುತ್ತಲಿನ ಪರಿಸರ ಸ್ವಚ್ಚತೆಗೆ ಜತೆಗೆ ಆರೋಗ್ಯ ಮತ್ತು ನೈರ್ಮಲ್ಯ ಕಾಪಾಡಿಕೊಂಡು ಸ್ವಾಸ್ಥ್ಯ ಸಮಾಜ ನಿರ್ಮಾಣಕ್ಕೆ ಕೈಜೋಡಿಸಬೇಕು ಎಂದು ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ನ ಕೊಡಗು ಸಂಸ್ಥೆಯ ಜಿಲ್ಲಾ ಸಾರ್ವಜನಿಕ ಸಂಪರ್ಕ ಅಧಿಕಾರಿ, ಕೂಡುಮಂಗಳೂರು ಸರ್ಕಾರಿ ಪ್ರೌಢಶಾಲಾ ಮುಖ್ಯ ಶಿಕ್ಷಕ ಟಿ.ಜಿ.ಪ್ರೇಮಕುಮಾರ್ ಮನವಿ ಮಾಡಿದರು. ಕುಶಾಲನಗರ ತಾಲ್ಲೂಕಿನ ಕೂಡುಮಂಗಳೂರು ಗ್ರಾಮ ಪಂಚಾಯತಿ ಸಹಯೋಗದೊಂದಿಗೆ  ಕೂಡುಮಂಗಳೂರು (ಕೂಡ್ಲೂರು) ಸರ್ಕಾರಿ ಪ್ರೌಢಶಾಲೆಯಲ್ಲಿ ಸ್ವಚ್ಛ ಭಾರತ ಅಭಿಯಾನ ಯೋಜನೆಯಡಿ ಮಂಗಳವಾರ ( ಅ.1 ರಂದು ) ಶಾಲೆಯ ರಾಷ್ಟ್ರೀಯ ಹಸಿರು ಪಡೆಯ ಇಕೋ ಕ್ಲಬ್, ರಾಷ್ಟ್ರೀಯ ಸೇವಾ ಯೋಜನೆ ( ಎಸ್.ಎಸ್.ಎಸ್.) ಹಾಗೂ ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಸಂಸ್ಥೆಯ ಘಟಕದ ವತಿಯಿಂದ ಸ್ವಚ್ಛತೆಯೇ ಸೇವೆ : “ಸ್ವಚ್ಛತಾ ಹೀ ಸೇವಾ” ಆಂದೋಲನದ ಅಂಗವಾಗಿ ಶಾಲಾ ಮಕ್ಕಳಿಗೆ ಸ್ವಚ್ಛತೆಯ ಕುರಿತು ಜಾಗೃತಿ ಮೂಡಿಸುವುದರ ಜೊತೆಗೆ ಸ್ವಚ್ಛತಾ ಪ್ರತಿಜ್ಞಾ ವಿಧಿಯನ್ನು ಬೋಧಿಸಿ ಮಾತನಾಡಿದರು. ಪ್ರತಿಯೊಬ್ಬರು ತಮ್ಮ ಮನೆ ಹಾಗೂ ಸುತ್ತಮುತ್ತಲಿನ ಪ್ರದೇಶವನ್ನು ಸ್ವಚ್ಛವಾಗಿ ಇಟ್ಟಾಗ ಮಾತ್ರ ನಮ್ಮ ಪರಿಸರ ಮತ್ತು ಗ್ರಾಮ ಸುಂದರವಾಗಿ ಕಾಣಲು ಸಾಧ್ಯ ಹಾಗಾಗಿ, ತಾವೆಲ್ಲರೂ ಸ್ವಚ್ಚತೆಗೆ ಮೊದಲ ಆದ್ಯತೆ ನೀಡುವ ಮೂಲಕ ಸ್ವಚ್ಛ ಭಾರತ ಅಭಿಯಾನ ಯಶಸ್ವಿಗೆ ಎಲ್ಲರೂ ಸಹಕರಿಸಬೇಕು ಎಂದರು. ರಾಷ್ಟ್ರಪಿತ ಮಹಾತ್ಮ ಗಾಂಧೀಜಿಯವರು ತಮ್ಮ 155ನೇ ಜನ್ಮ ವರ್ಷಾಚರಣೆಯ ಸಂದರ್ಭದಲ್ಲಿ ಅವರು ದ್ಯೇಯವಾಗಿದ್ದ ಸ್ವಚ್ಛತೆಯ ಹಾದಿಯಲ್ಲಿ ನಡೆದ ಗೌರವಾರ್ಥವಾಗಿ ಸ್ವಚ್ಛತೆಯೇ ಸೇವೆ ಅಭಿಯಾನವನ್ನು ಹಮ್ಮಿಕೊಳ್ಳಲಾಗಿದೆ ಎಂದು ಪ್ರೇಮಕುಮಾರ್ ಹೇಳಿದರು. “ಸ್ವಭಾವ ಸ್ವಚ್ಛತೆ – ಸಂಸ್ಕಾರ ಸ್ವಚ್ಚತೆ”: ಎಂಬ ಧ್ಯೇಯ ವಾಕ್ಯದೊಂದಿಗೆ ಪ್ರತಿಯೊಬ್ಬರೂ ಭಾರತಾಂಭೆ ಮಾತೆಯ ಅಮ್ಮನ ಹೆಸರಿನಲ್ಲಿ ಒಂದು ಗಿಡ ನೆಡುವ ಮೂಲಕ ಅದನ್ನು ಪೋಷಿಸಿ ಬೆಳೆಸುವ ಮೂಲಕ ಪರಿಸರ ಸಂರಕ್ಷಣೆಯಲ್ಲಿ ತೊಡಗಬೇಕಿದೆ ಎಂದರು. ಈ ವರ್ಷದ ಸ್ವಚ್ಛ ಭಾರತ್ ಮಿಷನ್ (ಎಸ್‌ ಬಿ ಎಮ್) ಧ್ಯೇಯವಾದ ‘ಸ್ವಭಾವ ಸ್ವಚ್ಛತಾ ಸಂಸ್ಕಾರ ಸ್ವಚ್ಛತಾ” 2024 ರ ಅಭಿಯಾನದ ಸಂದರ್ಭದಲ್ಲಿ ಕೇಂದ್ರ ಸರ್ಕಾರವು ಸುಮಾರು ಎರಡು ಲಕ್ಷ ಅತ್ಯಂತ ಕಷ್ಟಕರ ಮತ್ತು ಕೊಳಕು ಸ್ಥಳಗಳನ್ನು ನಿರ್ದಿಷ್ಟ ಮತ್ತು ಸಮಯ-ಮಿತಿಯಲ್ಲಿ ಪರಿವರ್ತಿಸುವ ಗುರಿಯನ್ನು ಹೊಂದಿದೆ. ಈ ನೈರ್ಮಲ್ಯ ಗುರಿಯು ಈ ವರ್ಷದ ಅಭಿಯಾನದ ಪ್ರಮುಖ ಅಂಶಗಳಾಗಿವೆ.
ಪರಿಸರ ಸ್ವಚ್ಛವಾಗಿರುವುದರಿಂದ ಮನಸ್ಸು ಮತ್ತು ಆರೋಗ್ಯ ಶುದ್ಧವಾಗಲಿದೆ. ಸ್ವಚ್ಛತಾ ಕಾರ್ಯವು ಕೇವಲ ಸರಕಾರದಿಂದ ಮಾಡಲು ಸಾಧ್ಯವಿಲ್ಲ, ಇದರ ಯಶಸ್ಸಿಗೆ ಜನಸಾಮಾನ್ಯರ ಸಂಪೂರ್ಣ ಭಾಗವಹಿಸುವಿಕೆಯಿಂದ ಸ್ವಚ್ಛತಾ ಅಭಿಯಾನ ಯಶಸ್ಸು ಕಾಣಲು ಸಾಧ್ಯ ಎಂದು ಪ್ರೇಮಕುಮಾರ್
ಹೇಳಿದರು. ಶಾಲೆಯ ಇಕೋ ಕ್ಲಬ್ ನ ಉಸ್ತುವಾರಿ ಶಿಕ್ಷಕಿ ಬಿ.ಡಿ.ರಮ್ಯ, ಶಿಕ್ಷಕರಾದ ಕೆ.ಗೋಪಾಲಕೃಷ್ಣ, ಎಂ.ಟಿ. ದಯಾನಂದ್ ಪ್ರಕಾಶ್, ಎಸ್.ಎಂ.ಗೀತಾ, ಬಿ.ಎನ್.ಸುಜಾತ, ಅನ್ಸಿಲಾ ರೇಖಾ, ಕೆ.ಟಿ.ಸೌಮ್ಯ, ವಿದ್ಯಾರ್ಥಿಗಳು ಇದ್ದರು. ನಂತರ ನಡೆದ ಪರಿಸರ ಜಾಗೃತಿ ಅಭಿಯಾನದಲ್ಲಿ ವಿದ್ಯಾರ್ಥಿಗಳು ಸ್ವಚ್ಚತೆಯೇ ಸೇವೆ ಕುರಿತು ವಿವಿಧ ಪರಿಸರ, ಆರೋಗ್ಯ ಮತ್ತು ನೈರ್ಮಲ್ಯದ ಕುರಿತು ಪರಿಸರ ಘೋಷಣೆಗಳನ್ನು ಕೂಗಿದರು.

Follow us Follow us
Share. WhatsApp Facebook Twitter Email Telegram Copy Link

Website design development company services in Mangalore

Forex Trading Teacher in India

Related Posts

*ಸೆ.12ರಂದು ಪ್ರೌಢಶಾಲಾ ಮಕ್ಕಳಿಗೆ ಗೌರಮ್ಮ ದತ್ತಿ ಕಥಾ ಸ್ಪರ್ಧೆ*

ಸೆಪ್ಟೆಂಬರ್ 10, 2026

*ಕುಶಾಲನಗರ ಎಲ್‌ಐಸಿ ಕಚೇರಿಯಲ್ಲಿ 70ನೇ ಸಂಸ್ಥಾಪನಾ ದಿನಾಚರಣೆ*

ಸೆಪ್ಟೆಂಬರ್ 10, 2026

*ವಿಕಸಿತ ಭಾರತ ಯಂಗ್ ಲೀಡರ್ಸ್ ಡೈಲಾಗ್ ನೋಂದಣಿ ಆರಂಭ : ಯುವಜನರಿಗೆ ಅವಕಾಶ*

ಸೆಪ್ಟೆಂಬರ್ 10, 2026

*ಕುಶಾಲನಗರ ಎಲ್‌ಐಸಿ ಕಚೇರಿಯಲ್ಲಿ 70ನೇ ಸಂಸ್ಥಾಪನಾ ದಿನಾಚರಣೆ*

ಸೆಪ್ಟೆಂಬರ್ 10, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಕುಶಾಲನಗರ, ಸೆ.10 NEWS DESK : ಕುಶಾಲನಗರದ ಭಾರತೀಯ ಜೀವ ವಿಮಾ ನಿಗಮದ (ಎಲ್‌ಐಸಿ) ಕಚೇರಿಯಲ್ಲಿ ಎಲ್‌ಐಸಿಯ 70ನೇ ಸಂಸ್ಥಾಪನಾ…

*ವಿಕಸಿತ ಭಾರತ ಯಂಗ್ ಲೀಡರ್ಸ್ ಡೈಲಾಗ್ ನೋಂದಣಿ ಆರಂಭ : ಯುವಜನರಿಗೆ ಅವಕಾಶ*

ಸೆಪ್ಟೆಂಬರ್ 10, 2026

*ಮಡಿಕೇರಿಯಲ್ಲಿ ವಿಶ್ವ ಬೆನ್ನುಹುರಿ ಗಾಯ ದಿನಾಚರಣೆ ಹಾಗೂ ನಶಾ ಮುಕ್ತ ಭಾರತ ಕಾರ್ಯಕ್ರಮ : ಯಾವುದೇ ರೀತಿಯ ಗಾಯ, ನೋವಿಗೆ ಆರಂಭದಲ್ಲಿ ಚಿಕಿತ್ಸೆ ಅಗತ್ಯ : ಡಾ.ಲೋಕೇಶ್*

ಸೆಪ್ಟೆಂಬರ್ 10, 2026

*ಪದವೀಧರ ವಿಭಾಗದ ಕೊಡಗು ಜಿಲ್ಲಾಧ್ಯಕ್ಷರಾಗಿ ಅಚ್ಚಾಂಡಿರ ಪವನ್ ಪೆಮ್ಮಯ್ಯ ನೇಮಕ*

ಸೆಪ್ಟೆಂಬರ್ 10, 2026

*ಸೆ.12 ರಂದು ಮಡಿಕೇರಿಯಲ್ಲಿ ಕಾಂಗ್ರೆಸ್ ಪ್ರತಿಭಟನೆ*

ಸೆಪ್ಟೆಂಬರ್ 10, 2026

*ಕಾವೇರಿ ಶಾಲೆಯಲ್ಲಿ ಸಂಭ್ರಮದ ಶಿಕ್ಷಕರ ದಿನಾಚರಣೆ*

ಸೆಪ್ಟೆಂಬರ್ 10, 2026

*ಕಾರ್ಯಪ್ಪ ಕಾಲೇಜಿನಲ್ಲಿ ಬೃಹತ್ ರಕ್ತದಾನ ಶಿಬಿರ; 65 ಯೂನಿಟ್ ರಕ್ತ ಸಂಗ್ರಹ*

ಸೆಪ್ಟೆಂಬರ್ 10, 2026

*ವಿಭಾಗ ಮಟ್ಟದ ಹ್ಯಾಂಡ್ಬಾಲ್ ಪಂದ್ಯಾಟಕ್ಕೆ ಭಾಗಮಂಡಲ ವಸತಿ ಶಾಲೆ ವಿದ್ಯಾರ್ಥಿಗಳ ಆಯ್ಕೆ*

ಸೆಪ್ಟೆಂಬರ್ 10, 2026

*ರೋಟರಿ ವುಡ್ಸ್ ನಿಂದ ಶಿಕ್ಷಕಿಯರಿಗೆ ನೇಷನ್ ಬಿಲ್ಡರ್ ಪ್ರಶಸ್ತಿ ಪ್ರಧಾನ; ಪುಣ್ಯದ ಕೆಲಸವಾದ ಶಿಕ್ಷಕ ವೖತ್ತಿಯಲ್ಲಿರುವವರನ್ನು ಸಮಾಜ ಗೌರವಿಸಬೇಕು – ಬಿ.ಆರ್.ಜೋಯಪ್ಪ* 

ಸೆಪ್ಟೆಂಬರ್ 10, 2026

*ಸೆ.12 ರಂದು ಸುಂಟಿಕೊಪ್ಪದಲ್ಲಿ ಪತ್ರಿಕಾ ವಿತರಕರ ದಿನಾಚರಣೆ ಮತ್ತು ಶೈಕ್ಷಣಿಕ ದತ್ತಿನಿಧಿ ಪ್ರಶಸ್ತಿ ಪ್ರದಾನ ಸಮಾರಂಭ*

ಸೆಪ್ಟೆಂಬರ್ 10, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.