Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಬಾಳೆಯಡ ಕಿಶನ್ ಪೂವಯ್ಯ ಅವರ ‘ರಾಜಕೀಯ ಮತ್ತು ಪ್ರಕೃತಿ’ ಕೃತಿಗೆ ಬಿ.ಎಸ್.ಗೋಪಾಲಕೃಷ್ಣ ದತ್ತಿ ಪ್ರಶಸ್ತಿ*
  • *ಸರ್ಕಾರಿ ನೌಕರಿ ಆಕಾಂಕ್ಷಿಗಳಿಗೆ ಬಂಪರ್ ಆಫರ್: ಸರ್ಕಾರದಿಂದ ಉಚಿತ ಆನ್‌ಲೈನ್ ಕೋಚಿಂಗ್*
  • *ಬೆಂಗಳೂರಿನಲ್ಲಿ ಕೊಡಗು ಗೌಡ ಸಮಾಜದ ಕೈಲ್ ಮುಹೂರ್ತ ಜಂಬರ : ಸಿಎಂ ಡಿ.ಕೆ.ಶಿವಕುಮಾರ್ ಭಾಗಿ*
  • *ಮಡಿಕೇರಿ ಸರಕಾರಿ ಮಹಿಳಾ ಕಾಲೇಜಿನಲ್ಲಿ ರೋಟರೆಕ್ಟ್ ಕ್ಲಬ್ ಪದಗ್ರಹಣ*
  • *ದಸರಾ ಸುವರ್ಣ ಮಹೋತ್ಸವ ಸಂಭ್ರಮ : ಶ್ರೀ ಕೋಟೆ ಮಹಾಗಣಪತಿ ಸಮಿತಿಯಿಂದ ಸ್ವಚ್ಛತಾ ಶ್ರಮದಾನ : ಪೌರ ಕಾರ್ಮಿಕರಿಗೆ ಬಟ್ಟೆ ವಿತರಣೆ*
  • *ಸೂಪರ್ ಎಲ್‌ನಿನೊ ಪರಿಣಾಮ : ನೀರನ್ನು ಮಿತವಾಗಿ ಬಳಸಿ ಸಹಕರಿಸಿ : ಸಚಿವ ಪಿ.ಎಂ. ನರೇಂದ್ರಸ್ವಾಮಿ*
  • *ನಿಯಮಗಳಡಿಯಲ್ಲೇ ಜವಾಬ್ದಾರಿಯಿಂದ ದಸರಾ ಆಚರಿಸಿ : ಸಚಿವ ಪಿ.ಎಂ.ನರೇಂದ್ರಸ್ವಾಮಿ*
  • *ಮಕ್ಕಳ ಸುರಕ್ಷತೆಗಾಗಿ ವಿವಿಧೆಡೆ ಜಾಗೃತಿ ಅಭಿಯಾನ*
  • *ಡಾ. ಕೆ.ಪಿ. ಲಲಿತ ಅವರ ‘ಕೊಡಗಿನ ಜಾನಪದ ಕಥೆಗಳು’ ಕೃತಿಗೆ ಕೊಡಗಿನ ಗೌರಮ್ಮ ದತ್ತಿ ಪ್ರಶಸ್ತಿ*
  • *ಮಕ್ಕಂದೂರು-ಮುಕ್ಕೋಡ್ಲು ಗೌಡ ಸಮಾಜದಿಂದ ಕೈಲ್ ಮುಹೂರ್ತ ಸಂತೋಷಕೂಟ*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*ಕೊಡಗು ಜಿಲ್ಲಾ ಕುಲಾಲ ಕುಂಬಾರರ ಸಂಘದ ಲೋಗೋ ಬಿಡುಗಡೆ : ಸದಸ್ಯತ್ವ ಅಭಿಯಾನ* 
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

*ಕೊಡಗು ಜಿಲ್ಲಾ ಕುಲಾಲ ಕುಂಬಾರರ ಸಂಘದ ಲೋಗೋ ಬಿಡುಗಡೆ : ಸದಸ್ಯತ್ವ ಅಭಿಯಾನ* 

ಅಕ್ಟೋಬರ್ 2, 20242 Mins ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link

ಮಡಿಕೇರಿ ಅ.2 NEWS DESK :  ಚೇರಂಬಾಣೆ ಕುಲಾಲ ಸಂಘ ಆಶ್ರಯದಲ್ಲಿ ಕೊಡಗು ಜಿಲ್ಲಾ ಕುಲಾಲ (ಕುಂಬಾರ)ರ ಸಂಘ ಲೋಗೋ ಬಿಡುಗಡೆ,  ಸದಸ್ಯತ್ವ ಅಭಿಯಾನ ಮತ್ತು ಜನಗಣತಿ ಅಭಿಯಾನ ಕಾರ್ಯಕ್ರಮ ನಡೆಯಿತು. ಕೊಡಗು ಜಿಲ್ಲಾ ಕುಲಾಲ ಕುಂಬಾರ ಸಂಘದ ಸ್ಥಾಪಕ ಅಧ್ಯಕ್ಷರಾದ ಮುತ್ತಮ್ಮ ಕೋಟಿ ಸಂಘದ ನೂತನ ಲೋಗೋವನ್ನು ಬಿಡುಗಡೆಗೊಳಿಸಿ, ಸದಸ್ಯತ್ವವನ್ನು ಪಡೆದುಕೊಳ್ಳುವ ಮೂಲಕ ಸದಸ್ಯತ್ವ ಅಭಿಯಾನ ಚಾಲನೆ ನೀಡಿದರು. ನಂತರ ಮಾತನಾಡಿದ ಅವರು ಕುಲಾಲ ಕುಂಬಾರ ಸಂಘವು ಜಿಲ್ಲೆಯಲ್ಲಿ ಸದೃಢಗೊಳ್ಳುತ್ತಿದ್ದು ಸಮಾಜ ಬಾಂಧವರು ಸಂಘಟನೆಗಾಗಿ ಉತ್ಸುಕರಾಗಿದ್ದಾರೆ. ಈಗಾಗಲೇ ಯುವ ಘಟಕ ಮತ್ತು ಮಹಿಳಾ ಘಟಕವು ರಚನೆಯಾಗಿ ಸಕ್ರಿಯವಾಗಿದ್ದು, ಜಿಲ್ಲೆಯ ಕುಲಾಲ ಕುಂಬಾರ ಸಂಘಕ್ಕೆ ಬಲಬಂದoತಾಗಿದೆ ಮುಂದಿನ ದಿನಗಳಲ್ಲಿ ಜಿಲ್ಲೆಯ ಸಮಾಜ ಬಾಂಧವರು ಹೆಚ್ಚಿನ ಸಂಖ್ಯೆಯಲ್ಲಿ ಸಂಘದ ಸದಸ್ಯತ್ವ ಪಡೆದುಕೊಳ್ಳುವ ಮೂಲಕ ಸಂಘವನ್ನು ಮತ್ತಷ್ಟು ಬಲಪಡಿಸಬೇಕು ಎಂದು ಮನವಿ ಮಾಡಿದರು. ಪ್ರಸ್ತಾವಿಕ ನುಡಿಯನ್ನಾಡಿದ ಕೊಡಗು ಜಿಲ್ಲಾ ಕುಲಾಲ ಕುಂಬಾರ ಸಂಘದ ಕಾರ್ಯದರ್ಶಿ ಅರುಣ್ ಕುಮಾರ್ ಪ್ರಸ್ತಾವಿಕ ಮಾತನಾಡಿ, ಜಿಲ್ಲೆಯಲ್ಲಿ ಕುಲಾಲ ಕುಂಬಾರ ಸಂಘವನ್ನು ಇನ್ನಷ್ಟು ಸದೃಢಗೊಳಿಸಬೇಕಾಗಿದೆ. ಆ ಮೂಲಕ ಇಲ್ಲಿಯ ಸಮಾಜ ಬಾಂಧವರ ಸಮಸ್ಯೆಗಳಿಗೆ ಸಂಘವು ಕಟಿಬದ್ಧವಾಗಿದೆ ಎಂದು ಹೇಳಿದರು. ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿ ಕೊಡಗು ಜಿಲ್ಲಾ ಕುಲಾಲ ಕುಂಬಾರರ ಸಂಘದ ಅಧ್ಯಕ್ಷ ಕೆ.ಕುಶಾಲಪ್ಪ, ಜಿಲ್ಲೆಯ ಕುಲಾಲ ಕುಂಬಾರ ಸಂಘದ ಮುಂದಿನ ಕಾರ್ಯ ಯೋಜನೆಗಳನ್ನು ತಿಳಿಸಿದರು. ವಿದ್ಯಾರ್ಥಿ ವೇತನ, ಅನಾರೋಗ್ಯ ಪೀಡಿತರಿಗೆ ನೆರವು, ವಿದ್ಯಾರ್ಥಿಗಳಿಗೆ ಮುಂದಿನ ವಿದ್ಯಾಭ್ಯಾಸಕ್ಕಾಗಿ ಮಾರ್ಗದರ್ಶನ, ಔದ್ಯೋಗಿಕ ಮಾರ್ಗದರ್ಶನ ಮುಂತಾದ ಹತ್ತು ಹಲವು ಯೋಜನೆಗಳ ಮೂಲಕ ಕುಲಬಾಂಧವರ ಏಳಿಗೆಗಾಗಿ ಶ್ರಮಿಸಲು ಸಂಘವು ಮುನ್ನಡೆಯುತ್ತಿದೆ. ಸಮಾನತೆ, ಸರಳತೆ, ಸಂಘಟನೆ ಸೇವೆಯ ಮೂಲಕ ಕೊಡಗು ಜಿಲ್ಲಾ ಕುಲಾಲ ಕುಂಬಾರ ಸಂಘವನ್ನು ಮತ್ತಷ್ಟು ಬಲಿಷ್ಠವಾಗಿ ಕಟ್ಟೋಣ. ಆ ಮೂಲಕ ನಮ್ಮ ಕುಲಬಾಂಧವರ ಏಳಿಗೆಗಾಗಿ ಶ್ರಮಿಸೋಣ ಎಂದು ಕರೆ ನೀಡಿದರು. ಜಿಲ್ಲೆಯ ಕುಲಬಾಂಧವರು ಸಂಘದ ಸದಸ್ಯತ್ವವನ್ನು ಪಡೆಯಬೇಕು ಮತ್ತು ಜಿಲ್ಲೆಯಲ್ಲಿ ಕುಲಾಲ ಬಾಂಧವರ ಜನಗಣತಿಯು ಆಗಬೇಕಾಗಿದೆ. ಅದಕ್ಕಾಗಿ ಜಿಲ್ಲಾ ಸಂಘದ ವತಿಯಿಂದ ಜನಗಣತಿಯು ಆರಂಭ ಮಾಡಲಾಗಿದೆ. ಕುಲಬಾಂಧವರು ಪೂರ್ಣ ಸಹಕಾರ ನೀಡಬೇಕು ಎಂದು ಮನವಿ ಮಾಡಿದರು. ಸಂಘದ ಮಾಜಿ ಅಧ್ಯಕ್ಷ ಎo.ಡಿ.ನಾಣಯ್ಯ ಮಾತನಾಡಿ, ಸಂಘದ ಬೆಳವಣಿಗೆಯ ಬಗ್ಗೆ ಶ್ಲಾಘನೆ ವ್ಯಕ್ತಪಡಿಸಿದರು. ಕಾರ್ಯಕ್ರಮದಲ್ಲಿ ಚೇರಂಬಾಣೆ ಕುಲಾಲ ಸಂಘದ  ಗೌರವಾಧ್ಯಕ್ಷ ನಾಗರಾಜು, ಅಧ್ಯಕ್ಷ ನಾಣಯ್ಯ, ಜಿಲ್ಲಾ ಸಂಘದ ಖಜಾಂಚಿ ಗಿರೀಶ್ ಮಡಿಕೆಬೀಡು, ಪದಾಧಿಕಾರಿಗಳಾದ  ಸುರೇಶ್ ಕುಲಾಲ್, ಅಪ್ಪಾಜಿ ಕುಶಾಲನಗರ, ವಿಠಲ್ ಮಡಿಕೇಬಿಡು, ಮಂಜು ಮಡಿಕೆಬೀಡು, ಅರುಣ್ ಚೇರಂಬಾಣೆ ಸೇರಿದಂತೆ ಮತ್ತಿತರ ಪದಾಧಿಕಾರಿಗಳು ಹಾಜರಿದ್ದರು.ಲಲಿತಾ ಪ್ರಾರ್ಥಿಸಿದರು. ಪವನ್ ಕಾರ್ಯಕ್ರಮ ನಿರೂಪಿಸಿದರು. ಚಂದ್ರಶೇಖರ್ ಕುಲಾಲ್ ಸ್ವಾಗತಿಸಿದರು.ಸಂಘದ ಲೋಗೋ ಮಾಡಲು ಸಹಕರಿಸಿದ ಹೆಮ್ಮಾಡುವಿನಮನು ದೇವಪ್ಪ ಮತ್ತು ಆಶಾ ದಂಪತಿಗಳ ಪುತ್ರಿ ಮಧುರ ಹಾಗೂ ಸಂಘದ ಏಳಿಗೆಗಾಗಿ ಶ್ರಮಿಸುತ್ತಿರುವ ಬಾಂಧವರನ್ನು ಕಾರ್ಯಕ್ರಮದಲ್ಲಿ ಅಭಿನಂದನೆ ಸಲ್ಲಿಸಲಾಯಿತು.

Follow us Follow us
Share. WhatsApp Facebook Twitter Email Telegram Copy Link

Related Posts

*ಬಾಳೆಯಡ ಕಿಶನ್ ಪೂವಯ್ಯ ಅವರ ‘ರಾಜಕೀಯ ಮತ್ತು ಪ್ರಕೃತಿ’ ಕೃತಿಗೆ ಬಿ.ಎಸ್.ಗೋಪಾಲಕೃಷ್ಣ ದತ್ತಿ ಪ್ರಶಸ್ತಿ*

ಅಕ್ಟೋಬರ್ 4, 2026

*ಸರ್ಕಾರಿ ನೌಕರಿ ಆಕಾಂಕ್ಷಿಗಳಿಗೆ ಬಂಪರ್ ಆಫರ್: ಸರ್ಕಾರದಿಂದ ಉಚಿತ ಆನ್‌ಲೈನ್ ಕೋಚಿಂಗ್*

ಅಕ್ಟೋಬರ್ 4, 2026

*ಬೆಂಗಳೂರಿನಲ್ಲಿ ಕೊಡಗು ಗೌಡ ಸಮಾಜದ ಕೈಲ್ ಮುಹೂರ್ತ ಜಂಬರ : ಸಿಎಂ ಡಿ.ಕೆ.ಶಿವಕುಮಾರ್ ಭಾಗಿ*

ಅಕ್ಟೋಬರ್ 4, 2026

*ಸರ್ಕಾರಿ ನೌಕರಿ ಆಕಾಂಕ್ಷಿಗಳಿಗೆ ಬಂಪರ್ ಆಫರ್: ಸರ್ಕಾರದಿಂದ ಉಚಿತ ಆನ್‌ಲೈನ್ ಕೋಚಿಂಗ್*

ಅಕ್ಟೋಬರ್ 4, 2026 ಇತ್ತೀಚಿನ ಸುದ್ದಿಗಳು ಕರ್ನಾಟಕ

ಸರ್ಕಾರಿ ಉದ್ಯೋಗ ಪಡೆಯುವ ಕನಸು ಕಾಣುತ್ತಿರುವ ಕರ್ನಾಟಕದ ನಿರುದ್ಯೋಗಿ ಯುವಜನರಿಗೆ ರಾಜ್ಯ ಸರ್ಕಾರ ಸಿಹಿಸುದ್ದಿ ನೀಡಿದೆ. ‘ಮುಖ್ಯಮಂತ್ರಿ ವಿದ್ಯಾರ್ಥಿ ಸಹಾಯ…

*ಬೆಂಗಳೂರಿನಲ್ಲಿ ಕೊಡಗು ಗೌಡ ಸಮಾಜದ ಕೈಲ್ ಮುಹೂರ್ತ ಜಂಬರ : ಸಿಎಂ ಡಿ.ಕೆ.ಶಿವಕುಮಾರ್ ಭಾಗಿ*

ಅಕ್ಟೋಬರ್ 4, 2026

*ಮಡಿಕೇರಿ ಸರಕಾರಿ ಮಹಿಳಾ ಕಾಲೇಜಿನಲ್ಲಿ ರೋಟರೆಕ್ಟ್ ಕ್ಲಬ್ ಪದಗ್ರಹಣ*

ಅಕ್ಟೋಬರ್ 4, 2026

*ದಸರಾ ಸುವರ್ಣ ಮಹೋತ್ಸವ ಸಂಭ್ರಮ : ಶ್ರೀ ಕೋಟೆ ಮಹಾಗಣಪತಿ ಸಮಿತಿಯಿಂದ ಸ್ವಚ್ಛತಾ ಶ್ರಮದಾನ : ಪೌರ ಕಾರ್ಮಿಕರಿಗೆ ಬಟ್ಟೆ ವಿತರಣೆ*

ಅಕ್ಟೋಬರ್ 4, 2026

*ಸೂಪರ್ ಎಲ್‌ನಿನೊ ಪರಿಣಾಮ : ನೀರನ್ನು ಮಿತವಾಗಿ ಬಳಸಿ ಸಹಕರಿಸಿ : ಸಚಿವ ಪಿ.ಎಂ. ನರೇಂದ್ರಸ್ವಾಮಿ*

ಅಕ್ಟೋಬರ್ 3, 2026

*ನಿಯಮಗಳಡಿಯಲ್ಲೇ ಜವಾಬ್ದಾರಿಯಿಂದ ದಸರಾ ಆಚರಿಸಿ : ಸಚಿವ ಪಿ.ಎಂ.ನರೇಂದ್ರಸ್ವಾಮಿ*

ಅಕ್ಟೋಬರ್ 3, 2026

*ಮಕ್ಕಳ ಸುರಕ್ಷತೆಗಾಗಿ ವಿವಿಧೆಡೆ ಜಾಗೃತಿ ಅಭಿಯಾನ*

ಅಕ್ಟೋಬರ್ 3, 2026

*ಡಾ. ಕೆ.ಪಿ. ಲಲಿತ ಅವರ ‘ಕೊಡಗಿನ ಜಾನಪದ ಕಥೆಗಳು’ ಕೃತಿಗೆ ಕೊಡಗಿನ ಗೌರಮ್ಮ ದತ್ತಿ ಪ್ರಶಸ್ತಿ*

ಅಕ್ಟೋಬರ್ 3, 2026

*ಮಕ್ಕಂದೂರು-ಮುಕ್ಕೋಡ್ಲು ಗೌಡ ಸಮಾಜದಿಂದ ಕೈಲ್ ಮುಹೂರ್ತ ಸಂತೋಷಕೂಟ*

ಅಕ್ಟೋಬರ್ 3, 2026

*ನಶಾ ಮುಕ್ತ ಭಾರತ ಜಾಗೃತಿ ಕಾರ್ಯಕ್ರಮ*

ಅಕ್ಟೋಬರ್ 3, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.