Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಸುಂಟಿಕೊಪ್ಪ : ಹಿರಿಯ ಪತ್ರಕರ್ತ ಬಿ.ಸಿ.ದಿನೇಶ್ ಅವರಿಗೆ ಸನ್ಮಾನ*
  • *ಮೈಸೂರು ಕಾಫಿ ಸಂಸ್ಕರಣ ಮಾರಾಟ ಮತ್ತು ಉಗ್ರಾಣ ಸಹಕಾರ ಸಂಘದ ಸಭೆ*
  • *ಬೇಡು ಹಬ್ಬ : ಮದ್ಯ ಮಾರಾಟ ನಿಷೇಧ*
  • *ಮೂರ್ನಾಡು : ಮೇ 26 ರಂದು ಸುತ್ತಮುತ್ತಲಿನ ಪ್ರದೇಶದಲ್ಲಿ ವಿದ್ಯುತ್ ವ್ಯತ್ಯಯ*
  • *ಶರಣ ಸಾಹಿತ್ಯ ಸಮ್ಮೇಳನದ ಆಮಂತ್ರಣ ಪತ್ರಿಕೆ ಬಿಡುಗಡೆ*
  • *ಕೊಡಗು ಪತ್ರಕತ೯ರ ಸಂಘದಿಂದ ಪ್ರಶಸ್ತಿಗಳಿಗೆ ಅಜಿ೯ ಆಹ್ವಾನ*
  • *ಕೊಡಗು : ಗ್ಯಾರಂಟಿ ಯೋಜನೆ ಅನುಷ್ಠಾನ ಪ್ರಾಧಿಕಾರ ಸಮಿತಿ ಸಭೆ : ಗ್ಯಾರಂಟಿ ಯೋಜನೆ ಪರಿಣಾಮಕಾರಿ ಅನುಷ್ಠಾನಕ್ಕೆ ಧರ್ಮಜ ಉತ್ತಪ್ಪ ಸಲಹೆ*
  • *ಜಿಸಿಎಲ್ ಕ್ರಿಕೆಟ್ ಪಂದ್ಯಾವಳಿ ಉದ್ಘಾಟನೆ*
  • *ಫೀ.ಮಾ.ಕಾರ್ಯಪ್ಪ ಕಾಲೇಜ್ ನಲ್ಲಿ ಕ್ರೀಡೆ ಮತ್ತು ಪ್ರತಿಭೋತ್ಸವ : ಶಿಕ್ಷಣದೊಂದಿಗೆ ಕ್ರೀಡೆಯಲ್ಲೂ ಕೀರ್ತಿ ಗಳಿಸಿ : ಅಂಕಿತಾ ಬಿ.ಎಸ್ ಕರೆ*
  • *ಮೇ 25 ರಂದು ಮಡಿಕೇರಿಯಲ್ಲಿ ಪ್ರತಿಭಟನೆ*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*ಗಾಂಧಿ ಜಯಂತಿ : ಕುಶಾಲನಗರ ಫಾತಿಮ ಪ್ರೌಢಶಾಲೆಯಲ್ಲಿ  ಸ್ವಚ್ಛತಾ ಶ್ರಮದಾನ*
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

*ಗಾಂಧಿ ಜಯಂತಿ : ಕುಶಾಲನಗರ ಫಾತಿಮ ಪ್ರೌಢಶಾಲೆಯಲ್ಲಿ  ಸ್ವಚ್ಛತಾ ಶ್ರಮದಾನ*

ಅಕ್ಟೋಬರ್ 2, 20242 Mins ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link

ಕುಶಾಲನಗರ, ಅ.2 NEWS DESK :  ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಸಂಸ್ಥೆಯ ಕುಶಾಲನಗರ ಸ್ಥಳೀಯ ಸಂಸ್ಥೆ , ಕುಶಾಲನಗರ ಪುರಸಭೆಯ ಕಾರ್ಯಾಲಯ ಹಾಗೂ ಕುಶಾಲನಗರ ಫಾತಿಮ ಪ್ರೌಢಶಾಲೆಯ ಸಂಯುಕ್ತಾಶ್ರಯದಲ್ಲಿ  ಶಾಲಾ ಶಿಕ್ಷಣ ಇಲಾಖೆಯ ರಾಷ್ಟ್ರೀಯ ಹಸಿರು ಪಡೆಯ ಇಕೋ ಕ್ಲಬ್ ನ ಸಹಯೋಗದೊಂದಿಗೆ  ಕುಶಾಲನಗರ ಫಾತಿಮ ಪ್ರೌಢಶಾಲೆಯಲ್ಲಿ 155ನೇ ವರ್ಷದ ಮಹಾತ್ಮ ಗಾಂಧಿ ಜಯಂತಿ ಹಾಗೂ ಲಾಲ್ ಬಹಾದ್ದೂರ್ ಶಾಸ್ತ್ರಿ ಜಯಂತಿ ಮತ್ತು ಸ್ವಚ್ಚತಾ ಹೀ ಸೇವಾ ಶ್ರಮದಾನ ಕಾರ್ಯಕ್ರಮ ನಡೆಯಿತು. ಫಾತಿಮ ಶಾಲಾವರಣದಲ್ಲಿ ನಡೆದ ಕಾರ್ಯಕ್ರಮದಲ್ಲಿ ಮಹಾತ್ಮ ಗಾಂಧಿ ಹಾಗೂ ಲಾಲ್ ಬಹಾದ್ದೂರ್ ಶಾಸ್ತ್ರಿ ಅವರ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸಿ ಶಾಲಾವರಣದಲ್ಲಿ ಅಮ್ಮನ ಹೆಸರಿನಲ್ಲಿ ಗಿಡನೆಡುವ ಮೂಲಕ ಸ್ವಚ್ಚತಾ ಆಂದೋಲನಕ್ಕೆ ಚಾಲನೆ ನೀಡಲಾಯಿತು. ಸ್ವಚ್ಚತಾ ಶ್ರಮದಾನ ಕಾರ್ಯಕ್ಕೆ ಚಾಲನೆ ನೀಡಿ ಮಾತನಾಡಿದ ಸ್ಕೌಟ್ಸ್, ಗೈಡ್ಸ್ ನ ಸ್ಥಳೀಯ ಸಂಸ್ಥೆಯ ಅಧ್ಯಕ್ಷ ಡಾ.ಪ್ರವೀಣ್ ದೇವರಗುಂಡ ಸೋಮಪ್ಪ ಸ್ಕೌಟ್ಸ್ ಮತ್ತು ಗೈಡ್ಸ್ ವಿದ್ಯಾರ್ಥಿಗಳು ತಮ್ಮನ್ನು ಸದಾಕಾಲ ಸೇವಾ ಚಟುವಟಿಕೆಗಳಲ್ಲಿ ತೊಡಗಿಸಿಕೊಳ್ಳಬೇಕು.  ವಿದ್ಯಾರ್ಥಿಗಳ ಸರ್ವತೋಮುಖ ಬೆಳವಣಿಗೆಗೆ ಸ್ಕೌಟ್ ಮತ್ತು ಗೈಡ್ ಸಹಕಾರಿಯಾಗಲಿದೆ ಎಂದರು. ಪ್ರತಿಯೊಬ್ಬರೂ ತಮ್ಮ ಸುತ್ತಲಿನ ಪರಿಸರವನ್ನು ಶ್ರಮದಾನದ ಮೂಲಕ ಸ್ವಚ್ಚತಾ ಕಾರ್ಯ ಕೈಗೊಂಡು ಪರಿಸರವನ್ನು ಸ್ವಚ್ಛಗೊಳಿಸಬೇಕು ಎಂದು ಡಾ ಪ್ರವೀಣ್ ಹೇಳಿದರು. ಸ್ವಚ್ಛ ಭಾರತ್ ಮಿಷನ್ ಮತ್ತು ಸ್ವಚ್ಚತಾ ಹೀ ಸೇವಾ ಅಭಿಯಾನದ ಮಹತ್ವ ಕುರಿತು ಮಾಹಿತಿ ನೀಡಿ ಸ್ವಚ್ಛತೆಯೇ ಸೇವೆ ಕುರಿತು ಪರಿಸರ ಪ್ರತಿಜ್ಞಾ ವಿಧಿ ಬೋಧಿಸಿದ ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ನ ಕೊಡಗು ಜಿಲ್ಲಾ ಸಂಸ್ಥೆಯ ಜಿಲ್ಲಾ ಸಾರ್ವಜನಿಕ ಸಂಪರ್ಕಾಧಿಕಾರಿ ಟಿ.ಜಿ.ಪ್ರೇಮಕುಮಾರ್, ಪ್ರತಿಯೊಬ್ಬರೂ ತಮ್ಮ ಸುತ್ತಲಿನ ಪರಿಸರವನ್ನು ಸ್ವಚ್ಛಗೊಳಿಸಿ ಸ್ವಚ್ಛ ಭಾರತ ಅಭಿಯಾನದ ಮೂಲಕ ಸುಂದರ ಹಾಗೂ ಹಸಿರು ಪರಿಸರ ನಿರ್ಮಾಣಕ್ಕೆ ಕೈಜೋಡಿಸಬೇಕು. ಈ ದಿಸೆಯಲ್ಲಿ ವಿದ್ಯಾರ್ಥಿಗಳ ಪಾತ್ರ ಮಹತ್ತರವಾದುದು ಎಂದರು. ಪುರಸಭೆಯ ಹಿರಿಯ ಆರೋಗ್ಯ ನಿರೀಕ್ಷಕ ಎಂ.ಸಿ.ಉದಯಕುಮಾರ್ ಮಾತನಾಡಿ, ಪ್ರತಿಯೊಬ್ಬರೂ ನಗರ ಸ್ವಚ್ಚತೆಗೆ ಹೆಚ್ಚಿನ ಆದ್ಯತೆ ನೀಡಬೇಕು ಎಂದು ಮನವಿ ಮಾಡಿದರು. ಫಾತಿಮ ಪ್ರೌಢಶಾಲೆಯ ಮುಖ್ಯ ಶಿಕ್ಷಕ ಜಫ್ರಿ ಡಿ’ಸಿಲ್ವ ಮಾತನಾಡಿ, ವಿದ್ಯಾರ್ಥಿಗಳು ಸ್ವಚ್ಚತೆ ಬಗ್ಗೆ ಜನರಲ್ಲಿ ಜಾಗೃತಿ ಮೂಡಿಸಬೇಕು ಎಂದರು. ಜಿಲ್ಲಾ ಗೈಡ್ಸ್ ಸಂಸ್ಥೆಯ ಸಹಾಯಕ ಆಯುಕ್ತೆ ಸಿ.ಎಂ.ಸುಲೋಚನ, ಸ್ಥಳೀಯ ಸಂಸ್ಥೆಯ ಕಾರ್ಯಾಧ್ಯಕ್ಷ ತಮ್ಮಯ್ಯ, ಕಾರ್ಯದರ್ಶಿ ಎಂ.ಎಸ್.ಗಣೇಶ್, ಕೋಶಾಧಿಕಾರಿ ನರೇಶ್ ಕುಮಾರ್, ಲಯನ್ಸ್ ಕ್ಲಬ್ ನ ವಲಯಾಧಿಕಾರಿ ಸುಮನ್ ಬಾಲಚಂದ್ರ, ಲಯನ್ಸ್ ಸಂಸ್ಥೆಯ ಪ್ರಮುಖರಾದ ಕೊಡಗನ ಹರ್ಷ, ಕಿರಣ್, ಸತೀಶ್, ಮನೋಹರ್, ರವಿ, ರಾಜೇಶ್, ಲಯನ್ಸ್ ಕ್ಲಬ್ ನ ತಾಲ್ಲೂಕು ದೈಹಿಕ ಶಿಕ್ಷಣ ಪರಿವೀಕ್ಷಕಿ ಎಂ.ಎಲ್.ಸುಕುಮಾರಿ, ಶಾಲೆಯ ಇಕೋ ಕ್ಲಬ್ ನ ಉಸ್ತುವಾರಿ ಶಿಕ್ಷಕ ಕಿರಣ್, ಸ್ಕೌಟ್ಸ್ ಮಾಸ್ಟರ್ ಎಂ.ಎಲ್.ಜಾನ್ ಸನ್, ಗೈಡ್ಸ್ ನ ಶಿಕ್ಷಕಿ ಬಿ.ಎಂ.ಶಿಫಾನ, ಪುರಸಭೆಯ ಸಿಬ್ಬಂದಿಗಳಾದ ನಂಜುಂಡ, ಕೀರ್ತಿ, ದ್ರಾಕ್ಷಾಯಿಣಿ, ಸ್ವಚ್ಚತಾ ಮೇಲ್ವಿಚಾರಕ ಎಚ್.ಎನ್.ಮೋಹನ್ ಕುಮಾರ್, ಪೌರ ಕಾರ್ಮಿಕರು, ಸ್ಕೌಟ್ಸ್ ಮತ್ತು ಗೈಡ್ಸ್ ನ ಪದಾಧಿಕಾರಿಗಳು, ಸ್ವಯಂ ಸೇವಕರು, ‌‍ ಶಾಲಾ ವಿದ್ಯಾರ್ಥಿಗಳು ಇದ್ದರು.
ವಿದ್ಯಾರ್ಥಿಗಳಿಂದ ಶ್ರಮದಾನ ಕಾರ್ಯ :  ಫಾತಿಮ ಪ್ರೌಢಶಾಲಾ ಆವರಣ, ಅಂಚೆ ಕಛೇರಿಯ ರಸ್ತೆ ಹಾಗೂ ಕಾವೇರಿ ನದಿಗೆ ತೆರಳುವ ಅಯ್ಯಪ್ಪಸ್ವಾಮಿ ದೇವಸ್ಥಾನ ರಸ್ತೆಯಲ್ಲಿ ಗಾಂಧಿ ಜಯಂತಿ ಹಾಗೂ ಸ್ವಚ್ಛ ಭಾರತ್ ಅಭಿಯಾನದಡಿ ಸ್ವಚ್ಛತಾ ಹೀ ಸೇವಾ ಕಾರ್ಯಕ್ರಮದ ಅಂಗವಾಗಿ ಪುರಸಭೆಯ
ಪೌರ ಕಾರ್ಮಿಕರ ಜತೆಗೂಡಿದ ಶಿಕ್ಷಕರು, ಸ್ಕೌಟ್ಸ್, ಗೈಡ್ಸ್ ನ ಸ್ವಯಂ ಸೇವಕರು, ವಿದ್ಯಾರ್ಥಿಗಳು ಶ್ರಮದಾನ ಕಾರ್ಯದಲ್ಲಿ ಭಾಗಿಯಾಗಿ ಸ್ವಚ್ಚತೆ ಕೈಗೊಂಡರು. ಪೌರ ಕಾರ್ಮಿಕರ ಜತೆಗೂಡಿದ ಸ್ಕೌಟ್ಸ್, ಗೈಡ್ಸ್ ನ ವಿದ್ಯಾರ್ಥಿಗಳು ಅಂಚೆ ಕಛೇರಿ ಬಳಿಯಿಂದ ರಸ್ತೆಯ ಇಕ್ಕೆಡೆಗಳಲ್ಲಿ ಬೆಳೆದಿದ್ದ ಗಿಡ ಗಂಟೆಗಳನ್ನು ತೆರವುಗೊಳಿಸಿದರು. ರಸ್ತೆಯಂಚಿನಲ್ಲಿ ಹರಡಿದ್ದ ಪ್ಲಾಸ್ಟಿಕ್ ತ್ಯಾಜ್ಯ ಸೇರಿದಂತೆ ಕಸ ಕಡ್ಡಿಗಳನ್ನು ಹೆರಕುವ ಮೂಲಕ ಸುತ್ತಲಿನ ಪರಿಸರವನ್ನು ಸ್ವಚ್ಛಗೊಳಿಸುವ ಮೂಲಕ ಜನರಲ್ಲಿ ಪರಿಸರ ಜಾಗೃತಿ ಮೂಡಿಸಿದರು.

Follow us Follow us
Share. WhatsApp Facebook Twitter Email Telegram Copy Link

Website design development company services in Mangalore

Forex Trading Teacher in India

Related Posts

*ಸುಂಟಿಕೊಪ್ಪ : ಹಿರಿಯ ಪತ್ರಕರ್ತ ಬಿ.ಸಿ.ದಿನೇಶ್ ಅವರಿಗೆ ಸನ್ಮಾನ*

ಮೇ 25, 2026

*ಮೈಸೂರು ಕಾಫಿ ಸಂಸ್ಕರಣ ಮಾರಾಟ ಮತ್ತು ಉಗ್ರಾಣ ಸಹಕಾರ ಸಂಘದ ಸಭೆ*

ಮೇ 25, 2026

*ಬೇಡು ಹಬ್ಬ : ಮದ್ಯ ಮಾರಾಟ ನಿಷೇಧ*

ಮೇ 25, 2026

*ಮೈಸೂರು ಕಾಫಿ ಸಂಸ್ಕರಣ ಮಾರಾಟ ಮತ್ತು ಉಗ್ರಾಣ ಸಹಕಾರ ಸಂಘದ ಸಭೆ*

ಮೇ 25, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಮಡಿಕೇರಿ ಮೇ 25 NEWS DESK : ದಿ ಮೈಸೂರು ಕಾಫಿ ಸಂಸ್ಕರಣ ಮಾರಾಟ ಮತ್ತು ಉಗ್ರಾಣ ಸಹಕಾರ ಸಂಘದ…

*ಬೇಡು ಹಬ್ಬ : ಮದ್ಯ ಮಾರಾಟ ನಿಷೇಧ*

ಮೇ 25, 2026

*ಮೂರ್ನಾಡು : ಮೇ 26 ರಂದು ಸುತ್ತಮುತ್ತಲಿನ ಪ್ರದೇಶದಲ್ಲಿ ವಿದ್ಯುತ್ ವ್ಯತ್ಯಯ*

ಮೇ 25, 2026

*ಶರಣ ಸಾಹಿತ್ಯ ಸಮ್ಮೇಳನದ ಆಮಂತ್ರಣ ಪತ್ರಿಕೆ ಬಿಡುಗಡೆ*

ಮೇ 25, 2026

*ಕೊಡಗು ಪತ್ರಕತ೯ರ ಸಂಘದಿಂದ ಪ್ರಶಸ್ತಿಗಳಿಗೆ ಅಜಿ೯ ಆಹ್ವಾನ*

ಮೇ 25, 2026

*ಕೊಡಗು : ಗ್ಯಾರಂಟಿ ಯೋಜನೆ ಅನುಷ್ಠಾನ ಪ್ರಾಧಿಕಾರ ಸಮಿತಿ ಸಭೆ : ಗ್ಯಾರಂಟಿ ಯೋಜನೆ ಪರಿಣಾಮಕಾರಿ ಅನುಷ್ಠಾನಕ್ಕೆ ಧರ್ಮಜ ಉತ್ತಪ್ಪ ಸಲಹೆ*

ಮೇ 25, 2026

*ಜಿಸಿಎಲ್ ಕ್ರಿಕೆಟ್ ಪಂದ್ಯಾವಳಿ ಉದ್ಘಾಟನೆ*

ಮೇ 25, 2026

*ಫೀ.ಮಾ.ಕಾರ್ಯಪ್ಪ ಕಾಲೇಜ್ ನಲ್ಲಿ ಕ್ರೀಡೆ ಮತ್ತು ಪ್ರತಿಭೋತ್ಸವ : ಶಿಕ್ಷಣದೊಂದಿಗೆ ಕ್ರೀಡೆಯಲ್ಲೂ ಕೀರ್ತಿ ಗಳಿಸಿ : ಅಂಕಿತಾ ಬಿ.ಎಸ್ ಕರೆ*

ಮೇ 25, 2026

*ಮೇ 25 ರಂದು ಮಡಿಕೇರಿಯಲ್ಲಿ ಪ್ರತಿಭಟನೆ*

ಮೇ 24, 2026

*ರಾಷ್ಟ್ರೀಯ ನಾಯಕರ ಪ್ರಶಸ್ತಿಗೆ ಭಾಜನರಾದ, ಚಾಮೆರ ದಿನೇಶ್ ಬೆಳ್ಯಪ್ಪ, ಚೋವಂಡ ಚೋಂದಮ್ಮ ಪೂಣಚ್ಚ*

ಮೇ 24, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.

Ad Blocker Enabled!
Ad Blocker Enabled!
Our website is made possible by displaying online advertisements to our visitors. Please support us by disabling your Ad Blocker.