Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಪದವೀಧರ ವಿಭಾಗದ ಕೊಡಗು ಜಿಲ್ಲಾಧ್ಯಕ್ಷರಾಗಿ ಅಚ್ಚಾಂಡಿರ ಪವನ್ ಪೆಮ್ಮಯ್ಯ ನೇಮಕ*
  • *ಸೆ.12 ರಂದು ಮಡಿಕೇರಿಯಲ್ಲಿ ಕಾಂಗ್ರೆಸ್ ಪ್ರತಿಭಟನೆ*
  • *ಕಾವೇರಿ ಶಾಲೆಯಲ್ಲಿ ಸಂಭ್ರಮದ ಶಿಕ್ಷಕರ ದಿನಾಚರಣೆ*
  • *ಕಾರ್ಯಪ್ಪ ಕಾಲೇಜಿನಲ್ಲಿ ಬೃಹತ್ ರಕ್ತದಾನ ಶಿಬಿರ; 65 ಯೂನಿಟ್ ರಕ್ತ ಸಂಗ್ರಹ*
  • *ವಿಭಾಗ ಮಟ್ಟದ ಹ್ಯಾಂಡ್ಬಾಲ್ ಪಂದ್ಯಾಟಕ್ಕೆ ಭಾಗಮಂಡಲ ವಸತಿ ಶಾಲೆ ವಿದ್ಯಾರ್ಥಿಗಳ ಆಯ್ಕೆ*
  • *ರೋಟರಿ ವುಡ್ಸ್ ನಿಂದ ಶಿಕ್ಷಕಿಯರಿಗೆ ನೇಷನ್ ಬಿಲ್ಡರ್ ಪ್ರಶಸ್ತಿ ಪ್ರಧಾನ; ಪುಣ್ಯದ ಕೆಲಸವಾದ ಶಿಕ್ಷಕ ವೖತ್ತಿಯಲ್ಲಿರುವವರನ್ನು ಸಮಾಜ ಗೌರವಿಸಬೇಕು – ಬಿ.ಆರ್.ಜೋಯಪ್ಪ* 
  • *ಸೆ.12 ರಂದು ಸುಂಟಿಕೊಪ್ಪದಲ್ಲಿ ಪತ್ರಿಕಾ ವಿತರಕರ ದಿನಾಚರಣೆ ಮತ್ತು ಶೈಕ್ಷಣಿಕ ದತ್ತಿನಿಧಿ ಪ್ರಶಸ್ತಿ ಪ್ರದಾನ ಸಮಾರಂಭ*
  • *ನ.26 ರಂದು ಸಿಎನ್‌ಸಿಯಿಂದ ಭಾರತೀಯ ಸಂವಿಧಾನ ದಿನ ಮತ್ತು ಕೊಡವ ನ್ಯಾಷನಲ್ ಡೇ ಆಚರಣೆ*
  • **ತುಳುವಿಗೆ ಎರಡನೇ ಅಧಿಕೃತ ಭಾಷೆ ಸ್ಥಾನಮಾನ ಘೋಷಿಸಿ : ವಿಶ್ವ ತುಳುವ ಮಹಾಸಭಾ ಆಗ್ರಹ**
  • *ತುಳುವಿಗೆ ಎರಡನೇ ಅಧಿಕೃತ ಭಾಷೆ ಸ್ಥಾನಮಾನ ಘೋಷಿಸಿ : ವಿಶ್ವ ತುಳುವ ಮಹಾಸಭಾ ಆಗ್ರಹ*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*ಕಂಡಕರೆಯ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಗಾಂಧಿ ಜಯಂತಿ ಆಚರಣೆ : ಸ್ವಚ್ಛತಾ ಶ್ರಮದಾನ*
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

*ಕಂಡಕರೆಯ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಗಾಂಧಿ ಜಯಂತಿ ಆಚರಣೆ : ಸ್ವಚ್ಛತಾ ಶ್ರಮದಾನ*

ಅಕ್ಟೋಬರ್ 3, 20242 Mins ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link

ಮಡಿಕೇರಿ ಅ.3 NEWS DESK : ಇಂದಿನ ಯುವ ಜನಾಂಗ ಮಹಾತ್ಮ ಗಾಂಧೀಜಿಯವರ ಆದರ್ಶಗಳನ್ನು ಮೈಗೂಡಿಸಿಕೊಂಡು ಜೀವನ ನಡೆಸಬೇಕೆಂದು ಸುಂಟ್ಟಿಕೊಪ್ಪ ನಾಡ ಪ್ರೌಢ ಶಾಲೆಯ ವಿದ್ಯಾರ್ಥಿ ಹಾಗೂ ಬಾಲ ವಾಗ್ಮಿ ಶ್ರೀಶಾ ಅಭಿಪ್ರಾಯಪ್ಟರು. ಕಂಡಕರೆಯ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಗಾಂಧಿ ಯುವಕ ಸಂಘದಿಂದ ಗಾಂಧಿ ಜಯಂತಿ ಮತ್ತು ಲಾಲ್ ಬಹುದ್ದೂರ್ ಶಾಸ್ತ್ರಿಯ ಜನ್ಮದಿನ ಹಾಗೂ ಶ್ರಮದಾನ ಕಾರ್ಯಕ್ರಮದ ಮುಖ್ಯ ಅತಿಥಿಯಾಗಿ ಆಗಮಿಸಿ ಮಾತನಾಡಿದರು. ಮಹಾತ್ಮ ಗಾಂಧೀಜಿಯವರು ಪ್ರಸ್ತುತ ಸಮಾಜಕ್ಕೆ ಮಾದರಿ. ನಾವೆಲ್ಲರೂ ಗಾಂಧೀಜಿಯ ಜೀವನ ಶೈಲಿಯನ್ನು ಸರಿಯಾಗಿ ಅರ್ಥೈಸಿಕೊಂಡು ಮುನ್ನಡೆಯಬೇಕು. ಗಾಂಧೀಜಿಯವರ ತ್ಯಾಗ, ಹೋರಾಟದ ಫಲವಾಗಿ ನಾವೆಲ್ಲರೂ ಇಂದು ಒಂದುಗೂಡಿ ಜೀವನ ನಡೆಸುತ್ತಿರುವುದು. ಅದಲ್ಲದೇ ಮುಖ್ಯವಾಗಿ ಇಂದಿನ ಯುವ ಸಮೂಹ ಮತ್ತು ವಿದ್ಯಾರ್ಥಿಗಳು ಗಾಂಧೀಜಿಯವರ ಅಹಿಂಸಾ ಮಾರ್ಗವನ್ನು ಅನುಸರಿಬೇಕಾಗಿದೆ ಎಂದು ಶ್ರೀಶಾ ಕರೆ ನೀಡಿದರು. ಶಾಲೆಯ ಪ್ರಭಾರ ಮುಖ್ಯೋಪಾಧ್ಯಾಯರಾದ ಟಿ.ಎನ್.ರತೀಶ್ ಮಾತನಾಡಿ ಗಾಂಧೀಜಿಯವರು ಸ್ವಚ್ಛತೆಗೆ ಹೆಚ್ಚಿ‌ನ ಆದ್ಯತೆ ನೀಡುತ್ತಿದ್ದರು. ನಾವೆಲ್ಲರೂ ಸೇರಿ ನಮ್ಮ ಗ್ರಾಮ, ಮನೆಯ ಸುತ್ತಮುತ್ತಲಿನ ಪ್ರದೇಶಗಳನ್ನು ಸ್ವಚ್ಛತೆಯಿಂದ ಇಡಬೇಕಾಗಿದೆ. ಮುಖ್ಯವಾಗಿ ಪ್ಲಾಸ್ಟಿಕ್ ಮುಕ್ತ ಸಮಾಜವನ್ನು ನಿರ್ಮಿಸಬೇಕಾಗಿದೆ ಎಂದರು. ಕಳೆದ ಎರಡು ವರ್ಷಗಳಿಂದ ಕಂಡಕರೆಯ ಗಾಂಧಿ ಯುವಕ ಸಂಘವು ಶಾಲೆಯ ಅಭಿವೃದ್ಧಿಗಾಗಿ ಶ್ರಮಿಸುತ್ತಿದ್ದಾರೆ. ವಿದ್ಯಾರ್ಥಿಗಳಿಗೆ ನೋಟ್ ಪುಸ್ತಕ, ಸಮವಸ್ತ್ರ, ಶಾಲೆಗೆ ಬೇಕಾದ ಸವಲತ್ತುಗಳನ್ನು ನೀಡಿದ್ದಾರೆ.
ಅದಲ್ಲದೇ ವಿದ್ಯಾರ್ಥಿಗಳಿಗೆ ಪ್ರೋತ್ಸಾಹ ನೀಡುತ್ತಾ, ವಿವಿಧ ಸ್ಪರ್ಧೆಗಳನ್ನು ಆಯೋಜಿಸಿ ಬಹುಮಾನವನ್ನು ನೀಡುತ್ತಿರುವುದು ಶ್ಲಾಘನೀಯ ವಿಷಯವಾಗಿದೆ ಎಂದು ಶಾಲೆಯ ಪ್ರಭಾರ ಮುಖ್ಯೋಪಾಧ್ಯಾಯ ಟಿ.ಎನ್ ರತೀಶ್ ಅಭಿಪ್ರಾಯಪಟ್ಟರು. ಗಾಂಧಿ‌ ಜಯಂತಿಯ ಪ್ರಯುಕ್ತ ಗಾಂಧಿ ಯುವಕ ಸಂಘದಿಂದ ವಿದ್ಯಾರ್ಥಿಗಳಿಗೆ ಚಿತ್ರಕಲಾ ಸ್ಪರ್ಧೆ ಮತ್ತು ಭಾಷಣ ಸ್ಪರ್ಧೆ ನಡೆಯಿತು. 1 ರಿಂದ 4ನೇ ತರಗತಿಯವರೆಗೆ ಏರ್ಪಡಿಸಲಾಗಿದ್ದ ಚಿತ್ರಕಲಾ ಸ್ಪರ್ಧೆಯಲ್ಲಿ 4ನೇ ತರಗತಿಯ ಸುಬ್ಹಾನ್ ಕೆ.ಎಚ್ ಪ್ರಥಮ,ಶುಹೈಬ್ ದ್ವಿತೀಯ ಹಾಗೂ ನಿಯಾಝ್ ತೃತೀಯ ಸ್ಥಾನ ಪಡೆದುಕೊಂಡರು. 5 ರಿಂದ 7ನೇ ತರಗತಿಯ ಮಕ್ಕಳಿಗೆ ನಡೆದ ಭಾಷಣ ಸ್ಪರ್ಧೆಯಲ್ಲಿ 7ನೇ ತರಗತಿಯ ಇಭಾ ಪ್ರಥಮ,ಆರನೇ ತಗರತಿಯ ಆಶಿಕ್ ದ್ವಿತೀಯ ಹಾಗೂ ಐದನೇ ತರಗತಿಯ ರಿಶಿತಾ ತೃತೀಯ ಸ್ಥಾನ ಪಡೆದುಕೊಂಡರು. ವಿಜೇತರಿಗೆ ಗಾಂಧಿ ಯುವಕ ಸಂಘದಿಂದ ಟ್ರೋಫಿ ನೀಡಿ ಗೌರವಿಸಲಾಯಿತು. 2023-24ನೇ ಸಾಲಿನಲ್ಲಿ 7ನೇ ತರಗತಿಯಲ್ಲಿ ಪ್ರಥಮ ಸ್ಥಾನ ಪಡೆದ ವಿದ್ಯಾರ್ಥಿಗಳಾದ ನಜಾ ಫಾತೀಮಾ,ದ್ವಿತೀಯ ಸ್ಥಾನ ಪಡೆದ ಅಫ್ರೀನಾ,ತೃತೀಯ ಸ್ಥಾನ ಪಡೆದ ಶಮ್ನಾ ಫಾತೀಮಾ ಅವರಿಗೆ ಗಾಂಧಿ ಯುವಕ ಸಂಘದಿಂದ ಬಹುಮಾನ ನೀಡಿ ಗೌರವಿಸಲಾಯಿತು. ಸಭಾ ಕಾರ್ಯಕ್ರಮದ ನಂತರ ಗಾಂಧಿ ಯುವಕ ಸಂಘದಿಂದ ಶಾಲೆಯಲ್ಲಿ ಸ್ವಚ್ಚತಾ ಕಾರ್ಯಕ್ರಮ ನಡೆಯಿತು.  ಗಾಂಧಿ ಯುವಕ ಸಂಘದ ಅಧ್ಯಕ್ಷ ಪತ್ರಕರ್ತ ಇಸ್ಮಾಯಿಲ್ ಕಂಡಕರೆ, ಶಾಲೆಯ ಹಳೆ ವಿದ್ಯಾರ್ಥಿ ಸಂಘದ ಅಧ್ಯಕ್ಷೆ ಪೂಜಾ ಮುರಳಿ, ಎಸ್.ಡಿ.ಎಂ.ಸಿ ಅಧ್ಯಕ್ಷ ಮಜೀದ್ ಕಂಡಕರೆ, ಗಾಂಧಿ ಯುವಕ ಸಂಘದ ಪ್ರಧಾನ ಕಾರ್ಯದರ್ಶಿ ಸವಾದ್ ಉಸ್ಮಾನ್, ಹಿರಿಯ ಪಿ.ಎಂ.ಉಪಾಧ್ಯಕ್ಷ ಷರೀಫ್, ಉಪಾಧ್ಯಕ್ಷ  ಕೆ.ಎಂ.ಇರ್ಷಾದ್ , ಸಂಘಟನಾ ಕಾರ್ಯದರ್ಶಿ ಸಿ.ಎ.ಉಬೈಸ್ ಹಾಗೂ ಗಾಂಧಿ ಯುವಕ ಸಂಘದ ಪದಾಧಿಕಾರಿಗಳು ,ಎಸ್.ಡಿ.ಎಂ.ಸಿ ಸದಸ್ಯರು ಇದ್ದರು. ಶಾಲೆಯ ಶಿಕ್ಷಕಿ ವಿನೋದ ನಿರೂಪಿಸಿ, ಸುಜಿತ್ ಸ್ವಾಗತಿಸಿದರು.

Follow us Follow us
Share. WhatsApp Facebook Twitter Email Telegram Copy Link

Website design development company services in Mangalore

Forex Trading Teacher in India

Related Posts

*ಪದವೀಧರ ವಿಭಾಗದ ಕೊಡಗು ಜಿಲ್ಲಾಧ್ಯಕ್ಷರಾಗಿ ಅಚ್ಚಾಂಡಿರ ಪವನ್ ಪೆಮ್ಮಯ್ಯ ನೇಮಕ*

ಸೆಪ್ಟೆಂಬರ್ 10, 2026

*ಸೆ.12 ರಂದು ಮಡಿಕೇರಿಯಲ್ಲಿ ಕಾಂಗ್ರೆಸ್ ಪ್ರತಿಭಟನೆ*

ಸೆಪ್ಟೆಂಬರ್ 10, 2026

*ಕಾವೇರಿ ಶಾಲೆಯಲ್ಲಿ ಸಂಭ್ರಮದ ಶಿಕ್ಷಕರ ದಿನಾಚರಣೆ*

ಸೆಪ್ಟೆಂಬರ್ 10, 2026

*ಸೆ.12 ರಂದು ಮಡಿಕೇರಿಯಲ್ಲಿ ಕಾಂಗ್ರೆಸ್ ಪ್ರತಿಭಟನೆ*

ಸೆಪ್ಟೆಂಬರ್ 10, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಮಡಿಕೇರಿ, NEWS DESK ಸೆ.10 : ಉತ್ತರಖಂಡ್ ರಾಜ್ಯದ ಹಲದ್ವಾನಿಯಲ್ಲಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಭಾಷಣ ಮಾಡಿದ…

*ಕಾವೇರಿ ಶಾಲೆಯಲ್ಲಿ ಸಂಭ್ರಮದ ಶಿಕ್ಷಕರ ದಿನಾಚರಣೆ*

ಸೆಪ್ಟೆಂಬರ್ 10, 2026

*ಕಾರ್ಯಪ್ಪ ಕಾಲೇಜಿನಲ್ಲಿ ಬೃಹತ್ ರಕ್ತದಾನ ಶಿಬಿರ; 65 ಯೂನಿಟ್ ರಕ್ತ ಸಂಗ್ರಹ*

ಸೆಪ್ಟೆಂಬರ್ 10, 2026

*ವಿಭಾಗ ಮಟ್ಟದ ಹ್ಯಾಂಡ್ಬಾಲ್ ಪಂದ್ಯಾಟಕ್ಕೆ ಭಾಗಮಂಡಲ ವಸತಿ ಶಾಲೆ ವಿದ್ಯಾರ್ಥಿಗಳ ಆಯ್ಕೆ*

ಸೆಪ್ಟೆಂಬರ್ 10, 2026

*ರೋಟರಿ ವುಡ್ಸ್ ನಿಂದ ಶಿಕ್ಷಕಿಯರಿಗೆ ನೇಷನ್ ಬಿಲ್ಡರ್ ಪ್ರಶಸ್ತಿ ಪ್ರಧಾನ; ಪುಣ್ಯದ ಕೆಲಸವಾದ ಶಿಕ್ಷಕ ವೖತ್ತಿಯಲ್ಲಿರುವವರನ್ನು ಸಮಾಜ ಗೌರವಿಸಬೇಕು – ಬಿ.ಆರ್.ಜೋಯಪ್ಪ* 

ಸೆಪ್ಟೆಂಬರ್ 10, 2026

*ಸೆ.12 ರಂದು ಸುಂಟಿಕೊಪ್ಪದಲ್ಲಿ ಪತ್ರಿಕಾ ವಿತರಕರ ದಿನಾಚರಣೆ ಮತ್ತು ಶೈಕ್ಷಣಿಕ ದತ್ತಿನಿಧಿ ಪ್ರಶಸ್ತಿ ಪ್ರದಾನ ಸಮಾರಂಭ*

ಸೆಪ್ಟೆಂಬರ್ 10, 2026

*ನ.26 ರಂದು ಸಿಎನ್‌ಸಿಯಿಂದ ಭಾರತೀಯ ಸಂವಿಧಾನ ದಿನ ಮತ್ತು ಕೊಡವ ನ್ಯಾಷನಲ್ ಡೇ ಆಚರಣೆ*

ಸೆಪ್ಟೆಂಬರ್ 10, 2026

**ತುಳುವಿಗೆ ಎರಡನೇ ಅಧಿಕೃತ ಭಾಷೆ ಸ್ಥಾನಮಾನ ಘೋಷಿಸಿ : ವಿಶ್ವ ತುಳುವ ಮಹಾಸಭಾ ಆಗ್ರಹ**

ಸೆಪ್ಟೆಂಬರ್ 10, 2026

*ತುಳುವಿಗೆ ಎರಡನೇ ಅಧಿಕೃತ ಭಾಷೆ ಸ್ಥಾನಮಾನ ಘೋಷಿಸಿ : ವಿಶ್ವ ತುಳುವ ಮಹಾಸಭಾ ಆಗ್ರಹ*

ಸೆಪ್ಟೆಂಬರ್ 10, 2026

*ಶಿಕ್ಷಕರ ದಿನಾಚರಣೆ: ಗೋಣಿಕೊಪ್ಪ ಕೆಪಿಎಸ್‌ನಲ್ಲಿ ಶಿಕ್ಷಕರಿಗೆ ಗೌರವ ಸನ್ಮಾನ*

ಸೆಪ್ಟೆಂಬರ್ 10, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.